ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕಮಾಲ್..!
– ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಗೆಲುವು
– ಬಾಗಲಕೋಟೆಯಲ್ಲಿ ಮೇಟಿ ಮಗನ ವಿಜಯ ಯಾತ್ರೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ದಾವಣಗೆರೆ/ ಬಾಗಲಕೋಟೆ: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ ಎರಡು ಸ್ಥಾನವನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರು 5708 ಮತಗಳ ಅಂತರದಿಂದ ಗೆದ್ದಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಅಚ್ಚರಿ ಎಂದರೆ ಅತೀ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಉತ್ತಮ ಮತ ಗಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಮೇಟಿ ಮಗನ ವಿಜಯ ಯಾತ್ರೆ!
ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಮತ್ತೆ ತನ್ನ ಹಿಡಿತವನ್ನು ಬಲಪಡಿಸಿಕೊಂಡಿದೆ. ಆರಂಭದಲ್ಲಿ ಕೆಲವು ಅಸಮಾಧಾನಗಳು, ವಿರೋಧಗಳ ನಡುವೆಯೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 21,866 ಮತಗಳ ಅಂತರದಿಂದ ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 97,941 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76,075 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಎರಡು ಸ್ಥಾನವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ.








