Categories
ಮಲ್ನಾಡ್

ಅಡಿಕೆ ಬೆಲೆ: ಗೃಹ ಸಚಿವ ಆರಗ ಹೋರಾಟಕ್ಕೆ ಫಲ

  • ಅಡಿಕೆಗೆ ಸೂಕ್ತ ಬೆಲೆ ಕೊಡಿಸಲು ದಶಕದ ಹೋರಾಟ
  • ರಾಜ್ಯ, ಕೇಂದ್ರ ಸರಕಾರಗಳಿಗೆ ಹಲವು ನಿಯೋಗ ಭೇಟಿ


    NAMMUR EXPRESS
    ಶಿವಮೊಗ್ಗ: ಮಲೆನಾಡಲ್ಲಿ ಕೆಂಪಡಿಕೆ ದರ 60,000 ರೂ ದಾಟಿದೆ. ಕಳೆದ ಕೆಲವು ವರ್ಷದಲ್ಲೇ ಅತೀ ಹೆಚ್ಚು ದರ ದಾಖಲಾಗಿದೆ. ಈ ದರ ಬರಲು ಹಲವು ಹೋರಾಟಗಳು ಫಲ ನೀಡಿವೆ. ರೈತ ಸಂಘಟನೆಗಳು, ಎಲ್ಲಾ ಪಕ್ಷಗಳು ಹೋರಾಟ ನಡೆಸಿವೆ.
    ಅದರಂತೆ ಗೃಹಸಚಿವ, ತೀರ್ಥಹಳ್ಳಿ ಶಾಸಕ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಆರಗ ಜ್ಞಾನೇಂದ್ರ ಕೂಡ ಹಲವು ಭೇಟಿ ಹಲವು ನಿಯೋಗ ಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಜೊತೆಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುದನ್ನು ವೈಜ್ಞಾನಿಕವಾಗಿ ಸಂಶೋಧನೆ ಕೂಡ ಮಾಡಿಸಿದ್ದರು. ಇದೀಗ ಅಡಿಕೆಗೆ ಉತ್ತಮ ಮಾರುಕಟ್ಟೆ ಹಾಗೂ ಸ್ಥಿರ ಬೆಲೆ ಸಿಕ್ಕಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಕಾರಣಕ್ಕಾಗಿ ನ್ಯಾಯಾಲಯದಲ್ಲಿ ಅಡಿಕೆ ನಿಷೇಧದ ವಿರುದ್ಧ ಹೋರಾಡುತ್ತಿರುವವರಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಜತೆ ಅಡಿಕೆ ಟಾಸ್ಕ್ ಫೋರ್ಸ್ ಪಾಲು ಇದೆ.
    ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.
Categories
ಮಲ್ನಾಡ್

ಕಿಮ್ಮನೆ ಎಂಎಲ್ಎಗೆ…ಆರ್.ಎಂ ಎಂಎಲ್ಸಿಗೆ…?!

  • ಮುನಿಸು ಬಿಟ್ಟು ಒಟ್ಟಾಗಿ ಪಕ್ಷ ಬಲಪಡಿಸ್ತಾರಾ ನಾಯಕರು?
  • ಕಿಮ್ಮನೆ, ಮಂಜುನಾಥ ಗೌಡ ಒಂದೇ ಸಭೆಯಲ್ಲಿ!
  • ಪಕ್ಷ ಕಟ್ಟಲು ಡಿಕೆಶಿ ವಾರ್ನಿಂಗ್.. ಮುಂದೇನು..?

NAMMUR EXPRESS
ತೀರ್ಥಹಳ್ಳಿ: ತೀರ್ಥಹಳ್ಳಿ ರಾಜಕಾರಣ ದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ‌ ಈಗ ಒಗ್ಗಟ್ಟಿನ ಮಂತ್ರ ಶುರುವಾಗಿದೆ.
ಶನಿವಾರ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಸಹಕಾರಿ ನಾಯಕ ಡಾ.ಆರ್ ಎಂ.ಮಂಜುನಾಥ ಗೌಡ ಒಂದೇ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವೇಳೆ ಪಕ್ಷ ಸಂಘಟನೆಯನ್ನು ಮಾಡುವ ಬಗ್ಗೆ ಡಿಕೆಶಿವಕುಮಾರ್ ಇಬ್ಬರಿಗೂ ಕೂಡಾ ಸಲಹೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಏನಿದು ವಿವಾದ?: ಕಿಮ್ಮನೆ ರತ್ನಾಕರ್ ಅವರು ಕಾಂಗ್ರೆಸ್ ಪಕ್ಷದ ಶಾಸಕರಾಗಿ ರಾಜ್ಯ ಸರ್ಕಾರದಲ್ಲಿ ಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಹತ್ತಾರು ವರ್ಷಗಳಿಂದ ಪಕ್ಷ ಕಟ್ಟುವ ಜತೆಗೆ ತಮ್ಮದೇ ಆದ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನೊಂದೆಡೆ ಇದೀಗ ಕೆಲವೇ ತಿಂಗಳಲ್ಲಿ ಸಹಕಾರಿ ನಾಯಕರಾಗಿರುವ ಡಾ.ಆರ್.ಎಂ ಮಂಜುನಾಥ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. ಆದರೆ ಕಿಮ್ಮನೆ ಹಾಗೂ ಅರ್‌ಎಂಎಂ ಒಂದೇ ವೇದಿಕೆಯಲ್ಲಿ ಕಾಣದೇ ಯಾವುದೇ ಸಭೆಯಲ್ಲಿ ಒಟ್ಟಾಗಿ ಕಾಣದೇ ಇಡೀ ಕ್ಷೇತ್ರದಲ್ಲಿ ಗೊಂದಲ ಉಂಟಾಗಿತ್ತು. ಕಾಂಗ್ರೆಸ್ ಪಕ್ಷದಲ್ಲೂ ಕೂಡಾ ಇದು ಇರುಸು ಮುರುಸಿಗೆ ಕಾರಣವಾಗಿತ್ತು. ಈಗಾಗಲೇ ಕಳೆದ ವಾರ ನಡೆದಂತಹ ಎರಡೂ ಪ್ರತಿಭಟನೆಗಳಲ್ಲಿ ಇಬ್ಬರು ನಾಯಕರು ಪ್ರತ್ಯೇಕವಾಗಿ ಪ್ರತಿಭಟನೆಯನ್ನು ನಡೆಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಕಾರಣವಾಗಿತ್ತು.
ಇದೀಗ ರಾಜ್ಯದಲ್ಲಿ ನಡೆದ ಕಾಂಗ್ರೆಸ್ ಸಂಘಟನಾ ಸಭೆಯಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣುವ ಮೂಲಕ ರಾಜಕೀಯವಾಗಿ ಭಾರೀ ಕುತೂಹಲ ಮೂಡಿಸಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಇಬ್ಬರೂ ಒಟ್ಟಾದ್ರೆ ಮಾತ್ರ ಗೆಲುವಿನ ಹೋರಾಟ ಮಾಡಬಹುದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ..!. ಆದರೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಆಗಬಾರದು ಎಂಬ ಚರ್ಚೆ ಪಕ್ಷದ ವಲಯದಲ್ಲೇ ಇದೆ.
ಎಂಎಲ್ಸಿ ಚುನಾವಣೆಗೆ ಮಂಜುನಾಥ ಗೌಡ?!: ಕೆಲವೇ ತಿಂಗಳಲ್ಲಿ ಬರುವ ಜನ ಪ್ರತಿನಿಧಿಗಳಿಂದ ಆಯ್ಕೆಯಾಗುವವಿಧಾನ ಪರಿಷತ್ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಿಂದ ಆರ್‌ಎಂಎಂ ಅವರ ಹೆಸರು ಕೇಳಿಬರುತ್ತಿದ್ದು, ಒಂದು ವೇಳೆ ಮಂಜುನಾಥ ಗೌಡ ಅವರು ಎಂ‌ಎಲ್ಸಿ ಸ್ಥಾನಕ್ಕೆ ಸ್ಪರ್ಧೆ ಮಾಡಿದರೆ ಕಿಮ್ಮನೆ ರತ್ನಾಕರ್ ಅವರು ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿ ಬಂದಿದೆ. ಈ ಬಗ್ಗೆ ಎಲ್ಲಾ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿರ್ಧಾರ ಅಂತಿಮವಾಗಲಿದೆ ಎಂಬ ಚರ್ಚೆ ಕೇಳಿ ಬಂದಿದೆ. ಆದರೆ ಇಬ್ಬರು ನಾಯಕರ ನಡೆ ಯಾವ ರೀತಿ ಮುಂದುವರಿಯಲಿದೆ ಎಂಬುದು ಕುತೂಹಲ ಮೂಡಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆ ಕೂಡ ಈ ದಿಕ್ಕಿನಲ್ಲಿ ಮಹತ್ವ ಪಡೆದಿದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.

Categories
ಬೆಂಗಳೂರು

ಗಣೇಶ ಹಬ್ಬ: ಕೆಲವೇ ಗಂಟೆಗಳಲ್ಲಿ ಹೊಸ ಆದೇಶ!

  • 3 ದಿನದ ಬದಲು 5 ದಿನದವರೆಗೆ ಆಚರಣೆ
  • ನಿಯಮಗಳೇನು..?, ಏನ್ ಮಾಡಬಾರದು..?

NAMMUR EXPRESS
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೊದಲು 3 ದಿನ ಮಾತ್ರ ಅವಕಾಶ ನೀಡಿ ಆದೇಶ ಹೊರಡಿಸಿದ್ದು, ಕೆಲವೇ ಗಂಟೆಗಳಲ್ಲಿ ಪರಿಸ್ಕೃತ ಆದೇಶ ಮಾಡಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ.
ಮೆರವಣಿಗೆ, ಆರ್ಕೆಸ್ಟ್ರಾ, ಡಿಜೆ ಮಾಡುವ ಹಾಗಿಲ್ಲ. ಹಾಗಾದ್ರೆ ಮಾರ್ಗಸೂಚಿ ಏನಿದೆ ನೀವೇ ನೋಡಿ..!

  • ಗಣೇಶ ಮೂರ್ತಿ 4 ಅಡಿಗಿಂತ ಹೆಚ್ಚು ಇರಬಾರದು.
  • ಗಣೇಶ ಮೂರ್ತಿ 5 ದಿನದೊಳಗೆ ವಿಸರ್ಜನೆ
  • ನಗರಗಳಲ್ಲಿ ವಾರ್ಡ್ ಒಂದು ಮಾತ್ರ ಗಣೇಶ ಮೂರ್ತಿ
  • ಗ್ರಾಮಕ್ಕೊಂದು ಸ್ಥಳೀಯ ಆಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು.
  • ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅವಕಾಶ ನೀಡಲಾಗುವುದು.
  • ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ಇಲ್ಲ.
  • ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಕೋವಿಡ್ ಲಸಿಕಾ ಕ್ಯಾಂಪ್ ನಡೆಸಲಾಗುವುದು.
  • 50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ
  • ಗಣೇಶೋತ್ಸವ ಸಮಯದಲ್ಲಿ ಮನರಂಜನೆ, ಡಿಜೆ ಗಳಿಗೆ ಅವಕಾಶವಿಲ್ಲ. ಯಾವುದೇ ಮೆರವಣಿಗೆಗೂ ಅವಕಾಶವಿಲ್ಲ.
  • ಶಾಲಾ ಕಾಲೇಜುಗಳಲ್ಲಿ ಗಣೇಶ ಕೂರಿಸುವಂತಿಲ್ಲ.
  • ಏಕಕಾಲಕ್ಕೆ 20 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ.
    ಕರೋನಾ ನಿಯಮ ಕಡ್ಡಾಯ ಪಾಲನೆ ಆಗಬೇಕು. ಸ್ಥಳೀಯ ಆಡಳಿತ ಈ ಬಗ್ಗೆ ನಿಗಾ ಇಡಬೇಕು ಎಂದು ಸರ್ಕಾರ ಅದೇಶಿಸಿದೆ.
    ಗಣಪತಿ ಉತ್ಸವ ಮತ್ತು ಅದನ್ನು ನಂಬಿಕೊಂಡ ಲಕ್ಷಾಂತರ ಜನರ ಬದುಕಿಗಾಗಿ ಸರ್ಕಾರ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ. ಆದರೆ ಅದನ್ನೇ ಬಂಡವಾಳ ಮಾಡಿಕೊಂಡು ನಿಯಮ ಮೀರಿದರೆ ಕೇಸ್ ಗ್ಯಾರಂಟಿ.
    ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.
Categories
ಬೆಂಗಳೂರು

ಟಣ್.. ಟಣ್.. ಟಣ್.. ಶಾಲೆ ಶುರುವಾಯ್ತು..!

  • 6-8 ತರಗತಿ ಸೆ.6ರಿಂದ ಓಪನ್: ಮಕ್ಕಳಲ್ಲಿ ಖುಷಿ
  • ಕರೋನಾ ನಿಯಮ ಪಾಲನೆ ಕಡ್ಡಾಯ
  • ವಾರದಲ್ಲಿ ಎರಡು ದಿನ ರಜೆ: ಏನು ನಿಯಮ?

NAMMUR EXPRESS
ಬೆಂಗಳೂರು: ರಾಜ್ಯದಲ್ಲಿ 8ರಿಂದ 12, ಡಿಗ್ರಿ ಶಾಲಾ, ಕಾಲೇಜು ಶುರುವಾಗಿದೆ. ಈ ನಡುವೆ ಸೋಮವಾರದಿಂದ 6ರಿಂದ 8ನೇ ತರಗತಿ ಶಾಲೆ ಆರಂಭವಾಗುತ್ತಿದ್ದು, ಶಾಲಾ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಎಲ್ಲಾ ಶಾಲೆಗಳಲ್ಲಿ ಸ್ವಚ್ಛತೆ ಮಾಡಲಾಗಿದೆ. ಕರೋನಾ ನಿಯಮ ಕಟ್ಟು ನಿಟ್ಟಿನಲ್ಲಿ ಪಾಲನೆ ಮಾಡಲು ಶಿಕ್ಷಕರು, ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಸಿಎಂ ನೇತೃತ್ವದಲ್ಲಿ ಶಾಲೆ ಆರಂಭಿಸುವ ಕುರಿತು ಸಭೆ ನಡೆಸಿ ಸಭೆಯಲ್ಲಿ ಶಾಲೆ ಆರಂಭಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ವಾರದಲ್ಲಿ 5 ದಿನ ಮಾತ್ರ ತರಗತಿಗಳು ನಡೆಯಲಿದ್ದು, ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದರೇ ಮಾತ್ರ ಶಾಲೆ ಆರಂಭ ಮಾಡಲಾಗುತ್ತದೆ. ಸೆ.6ರಿಂದ ರಾಜಾದ್ಯಂತ ಶಾಲೆಯ ಘಂಟೆ ಬಾರಿಸಲಿದ್ದು, 6-8ನೆ ತರಗತಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿವೆ. ಮೊದಲ ಹಂತದಲ್ಲಿ 9-12 ನೆ ತರಗತಿಗಳನ್ನ ಪ್ರಾರಂಭ ಮಾಡಿದ್ದ ಸರ್ಕಾರ ಇಗ ಬರೋಬ್ಬರಿ 18 ತಿಂಗಳುಗಳ ಬಳಿಕ ಮಾಧ್ಯಮಿಕ ತರಗತಿಗಳ ಭೌತಿಕ ತರಗತಿ ಆರಂಭ ಮಾಡಲು ಸಿದ್ಧತೆ ನಡೆಸಿದೆ.
ನಿಯಮಗಳೇನು?: ಮಕ್ಕಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮಾಸ್ಕ್ ಧರಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸಿ, ಕೋವಿಡ್ ಸೋಂಕು ದೃಢ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕು/ ವಲಯದಲ್ಲಿ ಮಾತ್ರ ಭೌತಿಕ ತರಗತಿಗಳನ್ನು ಆರಂಭಿಸಬೇಕು ಎಂದಿರುವ ಸರ್ಕಾರ, ಶಾಲಾ ಆವರಣದಲ್ಲಿ ಸ್ಯಾನಿಟೈಜೇಶನ್​ ಸೇರಿದಂತೆ ಶಾಲೆ ಓಪನ್ ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.
ಶನಿವಾರ ಶಾಲೆ ಸ್ವಚ್ಛ ಮಾಡಬೇಕು. ಹೀಗಾಗಿ ಅಂದು ಕೂಡ ರಜೆ. ಭಾನುವಾರ ಮಾಮೂಲಿ ರಜೆ ಇರಲಿದೆ.
ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಆಫ್ ಲೈನ್ ಎರಡು ಮಾದರಿಯಲ್ಲಿ ಹಾಜರಾತಿ ಹಾಕಲಾಗುತ್ತದೆ. ಎರಡರಲ್ಲಿ ಒಂದಕ್ಕೆ ಮಕ್ಕಳು ಹಾಜರಾಗಬೇಕಿದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.

Categories
ಬೆಂಗಳೂರು

ಅಂತೂ ಇಂತೂ ಗಣೇಶ ಹಬ್ಬ ಉಂಟು!

  • ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್
  • 3 ದಿನ ಗಣೇಶ ಇಡಬಹುದು, ಷರತ್ತುಗಳು ಅನ್ವಯ!
  • ಮೆರವಣಿಗೆ, ಕಾರ್ಯಕ್ರಮಕ್ಕೆ ಇಲ್ಲ ಅನುಮತಿ
  • ಕರೋನಾ ಹೆಚ್ಚಿರುವ ಜಿಲ್ಲೆಯಲ್ಲಿ ಅವಕಾಶ ಇಲ್ಲ

NAMMUR EXPRESS
ಬೆಂಗಳೂರು: ಅಂತೂ ಇಂತೂ ಗಣೇಶನ ಹಬ್ಬಕ್ಕೆ ಅನುಮತಿ ಸಿಕ್ಕಿದೆ. ಆದರೆ ಅಬ್ಬರದ ಗಣೇಶ ಹಬ್ಬ ಆಚರಣೆ ಮಾಡುವ ಹಾಗಿಲ್ಲ. ಇನ್ನು ಆರ್ಕೆಸ್ಟ್ರಾ, ಹಾಸ್ಯ, ಕಾರ್ಯಕ್ರಮ ಮಾಡುವಂತಿಲ್ಲ!.
ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಅದರಲ್ಲೂ 3 ದಿನಗಳಿಗೆ ಆಚರಣೆ ಸೀಮಿತಗೊಳಿಸಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ನಡೆದ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ.
ಏಕೆ ಈ ಆಚರಣೆ?: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು. ಆದರೆ ಮೆರವಣಿಗೆ ಮಾಡುವಂತಿಲ್ಲ. ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಹೇಳಲಾಗಿದೆ.
ಕಠಿಣ ಕ್ರಮ?: ಕಳೆದೊಂದು ತಿಂಗಳಿನಿಂದಲೂ ಗಣೇಶೋತ್ಸವ ಆಚರಣೆಯ ಕುರಿತು ಸಾರ್ವಜನಿಕವಾಗಿ ಸಾಷ್ಟು ಚರ್ಚೆಗಳು ನಡೆದಿತ್ತು. ಕೊರೊನಾ ಸಂಕಷ್ಟದ ನಡುವಲ್ಲೇ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಬೇಕೆ, ಇಲ್ಲಾ ಬೇಡವೇ ಅನ್ನೋ ಕುರಿತು ಪರ, ವಿರೋಧದ ಮಾತುಗಳು ಕೇಳಿಬಂದಿತ್ತು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಅಲ್ಲದೇ ಕೇರಳ ಹಾಗೂ ಮಹಾರಾಷ್ಟ್ರ ಗಡಿಭಾಗದ ಜಿಲ್ಲೆಗಳಲ್ಲಿಯೂ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ರಾಜ್ಯ ಸರಕಾರ ನಿಷೇಧ ಹೇರಿದೆ. ಒಂದು ವೇಳೆ ಆಯೋಜಕರು ಕಾನೂನು ಮೀರಿದರೆ ಕಠಿಣ ಕ್ರಮ ತೆಗೆದು ಕೊಳ್ಳುವ ಸಾಧ್ಯತೆ ಇದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.

Categories
ಬೆಂಗಳೂರು

ತೀರ್ಥಹಳ್ಳಿಯ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

  • ರಂಗ ಶಿಕ್ಷಕ ಶ್ರೀಕಾಂತ್ ಅವರಿಗೆ ರಾಜ್ಯ ಪ್ರಶಸ್ತಿ
  • ಯಶೋಧ, ಫೌಜಿಯಾ, ಸುರೇಶ್ ಗೆ ಜಿಲ್ಲಾ ಪ್ರಶಸ್ತಿ
  • ಎಲ್ಲಾ ಶಿಕ್ಷಕರ ಸೇವೆ ಅಪಾರ: ಎಲ್ಲರಿಗೂ ನಮನ

NAMMUR EXPRESS
ತೀರ್ಥಹಳ್ಳಿ: ಆಟದ ಜೊತೆಗೆ ಪಾಠವನ್ನು ಕಲಿಸಿ ಜೀವನದ ಮೌಲ್ಯ ಕಲಿಸಿ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸಿ ಯಾವುದೇ ಸ್ವಾರ್ಥವಿಲ್ಲದೆ ದುಡಿಯುವ ಸಮಾಜದ ನಿರ್ಮಾಪಕ ಸಮನ್ವಯತೆಯ ಸಾಧಕರಾದ ಎಲ್ಲಾ ಶಿಕ್ಷಕರಿಗೆ ಶುಭಾಶಯಗಳು. ಈ ನಡುವೆ ತೀರ್ಥಹಳ್ಳಿ ತಾಲೂಕಿಗೆ ಈ ಬಾರಿ 4 ಪ್ರಶಸ್ತಿಗಳು ಸಂದಿವೆ.
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಖ್ಯಾತ ರಂಗ ಶಿಕ್ಷಕ, ಕೋಣಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಶ್ರೀಕಾಂತ್ ಪಟಗಾರ ಅವರಿಗೆ ಸಂದಿದೆ.
ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತೀರ್ಥಹಳ್ಳಿಯ ಶಿಕ್ಷಕರು ಆಯ್ಕೆಯಾಗಿದ್ದಾರೆ .
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದವರು

  1. ಫಾಜಿಯಾ ಸರಾವತ್
    ಸಹಶಿಕ್ಷಕಿ
    ಸ.ಕಿ.ಪ್ರಾಥಮಿಕ ಶಾಲೆ, ಕಲ್ಲುಗುಡ್ಡ
  2. ಯಶೋದಾ
    ಸಹ ಶಿಕ್ಷಕಿ
    ಸ.ಪ್ರಾ.ಹಿರಿಯ ಶಾಲೆ, ವಾಟಿಗಾರು
  3. ಎನ್.ಡಿ ಸುರೇಶ್
    ಮುಖ್ಯ ಶಿಕ್ಷಕರು
    ವಿಶ್ವತೀರ್ಥ ಪ್ರೌಢಶಾಲೆ,ಕಮ್ಮರಡಿ.
    ತೀರ್ಥಹಳ್ಳಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಶಿಕ್ಷಕ ಶಿಕ್ಷಕಿಯರು ಕೂಡ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರ ಸೇವೆಗೂ ನಮ್ಮ ನಮನಗಳು.
    ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರನ್ನು ತಮ್ಮ ಸೇವಾ ಅವಧಿಯಲ್ಲಿ ಒಂದು ಬಾರಿ ತಾವು ಬಯಸಿದ ಜಿಲ್ಲೆಗೆ ಹಂತ ಹಂತವಾಗಿ ವರ್ಗಾವಣೆ ಮಾಡುವ ಸಲುವಾಗಿ ಶಿಕ್ಷಕರಿಂದ ಅಭಿಮತ ಕ್ರೂಢಿಕರಿಸಿ ಕ್ರಮವಹಿಸುವಂತೆ ಮಾನ್ಯ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.
    ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.
Categories
ಶಿಕ್ಷಣ

ನಾಡಿನ ಸಮಸ್ತ ಶಿಕ್ಷಕಬಂಧುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು..!

ಗುರುಗಳ ಸೇವೆಗೆ ನಮ್ಮ ಸಲಾಂ!

ಪ್ರತಿವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. 1962ರಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ದಿನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕಾರಣಕರ್ತರು. “ಶಿಕ್ಷಕರು ಯಾವುದೇ ದೇಶದ ಅತ್ಯುತ್ತಮ ಮೆದುಳುಗಳಾಗಬೇಕು” ಎಂದು ಅಂದು ಡಾ. ರಾಧಾಕೃಷ್ಣನ್ ಕರೆ ನೀಡಿದ್ದರು. ರಾಧಾಕೃಷ್ಣನ್ ಅವರ ಜನ್ಮದಿನವಾದ ಈ ದಿನವನ್ನು ನಾವು ಅವರ ಆಸೆಯನ್ವಯ ಶಿಕ್ಷಕರ ದಿನವಾಗಿ ಆಚರಿಸುತ್ತಿದ್ದೇವೆ. ದೇಶದ ಭವಿಷ್ಯವಾದ ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ನಾವೆಲ್ಲರೂ ನೀಡೋ ಒಂದು ಸಣ್ಣ ಗೌರವವಾಗಿದೆ.
ಶಿಕ್ಷಕರ ದಿನಾಚರಣೆಯನ್ನು ಆಚರಿಸಲು ಸಹಾ ಒಂದು ಕಾರಣವಿದೆ. ಒಮ್ಮೆ ರಾಧಾಕೃಷ್ಣನ್ ಅವರ ಪ್ರೀತಿಯ ವಿದ್ಯಾರ್ಥಿಗಳು ಬಳಿ ಬಂದು ತಮ್ಮ ಹುಟ್ಟಿದ ಹಬ್ಬವನ್ನು ಬಲು ವಿಜೃಂಭಣೆಯಿಂದ ಆಚರಿಸುವುದಾಗಯೂ, ತಾವು ಖಂಡಿತಾ ಬರಬೇಕು ಎಂದು ಆಹ್ವಾನಿಸಿದರಂತೆ. ಅದಕ್ಕುತ್ತರವಾಗಿ ಶಿಕ್ಷಕರ ಬಗ್ಗೆ ಅಪಾರವಾದ ಗೌರವ ಹೊಂದಿದ್ದ ಡಾ. ರಾಧಾಕೃಷ್ಣನ್ ರವರು‌ ತಮ್ಮ ಹುಟ್ಟಿದ ದಿನವನ್ನು ತನ್ನ ಹುಟ್ಟುಹಬ್ಬವನ್ನಾಗಿ ಆಚರಿಸುವ ಬದಲು ‘ಶಿಕ್ಷಕರ ದಿನ’ವೆಂದೇಕೆ ಆಚರಿಸಬಾರದು? ಇದರಿಂದ ನನಗೆ ಹೆಚ್ಚು ಸಂತೋಷವಾಗುತ್ತದೆ ಎಂದರಂತೆ. ಹಾಗೇ ಅವರ ಇಚ್ಛೆಯನುಗುಣ ಈ ದಿನವನ್ನು ಶಿಕ್ಷಕರಿಗಾಗಿ ಸಮರ್ಪಿಸಿ ಶಿಕ್ಷಕರ ದಿನವನ್ನಾಗಿ ಆಚರಿಸುತ್ತೇವೆ.
ಆಕೃತಿ ರಹಿತ ಕಲ್ಲುಬಂಡೆಯನ್ನು ಶಿಲ್ಪಿಯೊಬ್ಬ ಕೆತ್ತಿ ಸುಂದರವಾದ ಮೂರ್ತಿ ತಯಾರು ಮಾಡುವುದಕ್ಕಿಂತ ಕಷ್ಟ ಸಾಧ್ಯವಾದ ಕೆಲಸ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುವುದು. ಹೌದು ಈಗಷ್ಟೇ ಪ್ರಪಂಚದತ್ತ ದಾಪುಗಾಲಿಡೋ ಮಕ್ಕಳಿಗೆ ವಿದ್ಯಾರ್ಥಿಗಳೆಂಬ ಪಟ್ಟ ಕಟ್ಟಿ, ಆಟ ಪಾಠಗಳ ಮೂಲಕ ಹತೋಟಿಯಲ್ಲಿಟ್ಟುಕೊಂಡು ಚಂಚಲ ಚಿತ್ತದ ವಿದ್ಯಾರ್ಥಿಯ ಬುದ್ಧಿಯನ್ನು ತಿದ್ದಿ ಅವನನ್ನು ಸತ್ಪ್ರಜೆಯಾಗಿಸುವುದು ಪ್ರಯಾಸದ ಕೆಲಸ. ಇಂಥ ಮಹಾ ಕಾರ್ಯವನ್ನು ಶಿಕ್ಷಕರು ಮಾತ್ರ , ಕೇವಲ ಶಿಕ್ಷಕರು ಮಾತ್ರ ಮಾಡಬಲ್ಲರು.
ಹೊರ ಪ್ರಪಂಚದ ಜ್ಞಾನ, ನಡವಳಿಕೆ, ಮಾತುಗಾರಿಕೆ, ಗುರಿ, ದೈರ್ಯ, ಆತ್ಮ ಸ್ಥೈರ್ಯ, ಎದೆಗಾರಿಕೆ, ಸಹಾಯಪ್ರಜ್ಞೆ, ಅನುಕಂಪ‌ ಹತ್ತುಹಲವು ಉತ್ತಮವಾದ ಗುಣಗಳನ್ನು ಏನೂ ತಿಳಿಯದ ಒಂದ ಮುಗ್ಧ ಮಗುವಿಗೆ ತಿಳಿಹೇಳೋ ಕಾರ್ಯ ಶಿಕ್ಷಕರದು.
ತಂದೆ ತಾಯಿ ಪೋಷಕರ ಹೊರತಾಗಿ ನಮ್ಮ ಬಗ್ಗೆ ಅತ್ಯಂತ ಕಾಳಜಿ, ಬದುಕು ರೂಪಿಸಬೇಕೆಂಬ ತುಡಿತ ಇರುವುದು ಶಿಕ್ಷಕನಿಗೆ ಮಾತ್ರ.
ಅ,ಆ ಎಂಬ ವರ್ಣಮಾಲೆಯಿಂದ ಆರಂಭವಾಗಿ ಉನ್ನತ ಶಿಕ್ಷಣ ನೀಡೋವರೆಗೂ ಪ್ರತಿಯೊಬ್ಬ ಶಿಕ್ಷಕನೂ ನಿಜವಾಗಿಯೂ ತನ್ನ ಶಕ್ತಿ ಮೀರಿ ವಿದ್ಯಾರ್ಥಿಗಳ ಬೆಳವಣಿಗೆಗೆ ಶ್ರಮಿಸುತ್ತಾರೆ. ಹಾಗೇ ಶಿಕ್ಷಕರ ಮೇಲೆ ಅಭಿಮಾನವಿರಲಿ, ಗೌರವವಿರಲಿ, ಅವರ ಮುಂದೆ ನಾವೆಷ್ಟೇ ಬೆಳೆದರು ತಲೆಬಾಗೋ ಗುಣವಿರಲಿ.
“ಒಂದು ಪ್ರಜ್ವಲಿಸುವ ದೀಪ ಮಾತ್ರ ಇನ್ನೊಂದು ದೀಪವನ್ನು ಬೆಳಗಿಸಬಲ್ಲುದು”
ಪ್ರತಿಯೊಬ್ಬ ಶಿಕ್ಷಕರಿಗೂ ಶಿಕ್ಷಕರ ದಿನದ ಶುಭಾಶಯಗಳು
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.

Categories
ದಾವಣಗೆರೆ

ರಾಜ್ಯಕ್ಕೆ ಅಮಿತ್ ಶಾ: ಬಿಜೆಪಿಯಲ್ಲಿ ಸಂಚಲನ!

  • ದಾವಣಗೆರೆಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟನೆ
  • ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಪುತ್ರಿ ಮದುವೆ

NAMMUR EXPRESS
ದಾವಣಗೆರೆ/ಹುಬ್ಬಳ್ಳಿ: ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಚಲನ ಮಾಡಿದೆ. ಒಂದು ಕಡೆ ದಾವಣಗೆರೆ ಜಿಲ್ಲೆಯ ಕೊಂಡಜ್ಜಿಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಜಿಎಂಐಟಿ ಕೇಂದ್ರ ಗ್ರಂಥಾಲಯ ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿ ಉದ್ಘಾಟನೆ ಮಾಡಿದ್ದಾರೆ. ಅವರಿಗೆ ರಾಜ್ಯ ಸಿಎಂ ಬೊಮ್ಮಾಯಿ, ಗೃಹ ಮಂತ್ರಿ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ವಿವಾಹ ಕೂಡ ಗಮನ ಸೆಳೆದಿದೆ.
ದಾವಣಗೆರೆಯಲ್ಲಿ ಮಾತನಾಡಿದ ಅಮಿತ್ ಶಾ, ಯಾರಾದರೂ ಹೊಸಬರು ಮುಖ್ಯಮಂತ್ರಿಯಾಗಲಿ ಆಗಲಿ ಎಂದು ಯಡಿಯೂರಪ್ಪ ನಿರ್ಧರಿಸಿದ್ದರು. ಹಾಗಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ. ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದರು. ಅದರಂತೆಯೇ ಬಸವರಾಜ ಬೊಮ್ಮಾಯಿ ಅವರೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಸ್ಪಷ್ಟ ಬಹುಮತಗಳಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.
ಮುಂಬರುವ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದ್ದು, ಇದನ್ನು ತಡೆಯಲು ಕೇಂದ್ರ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಎಲ್ಲರಿಗೂ ಕೊವಿಡ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.ಕೊವಿಡ್ ವಿರುದ್ಧ ಸರ್ಕಾರದ ಜತೆ ಜನರೂ ಹೋರಾಡಿದ್ದಾರೆ. ಇಡೀ ಜಗತ್ತೆ ಈ ಮಹಾಮಾರಿಗೆ ತತ್ತರಿಸಿದೆ. ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಲಸಿಕೆ ನೀಡಿದ ದೇಶ ಭಾರತ. ಒಂದೇ ದಿನ 1.43 ಕೋಟಿ ಜನರಿಗೆ ಲಸಿಕೆ ನೀಡಿದ್ದೇವೆ. ಕರ್ನಾಟಕದಲ್ಲಿ 5 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೇ.90ರಷ್ಟು ಜನರಿಗೆ ಲಸಿಕೆ ವಿತರಿಸುತ್ತೇವೆ ಎಂದು ಅವರು ಘೋಷಿಸಿದರು.
ಗೃಹ ಸಚಿವರ ರೌಂಡ್ಸ್!: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ದಾವಣಗೆರೆ ಜಿಲ್ಲೆಯ ಕೊಂಡಜ್ಜಿಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಜಿಎಂಐಟಿ ಕೇಂದ್ರ ಗ್ರಂಥಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ಇದಕ್ಕೂ ಮುನ್ನ ಅಮಿತ್ ಶಾ ಅವರನ್ನು ಸ್ವಾಗತಿಸಿ ಮಾತುಕತೆ ನಡೆಸಿದರು.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.

Categories
ಬೆಂಗಳೂರು

ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್ಐ ಅರೆಸ್ಟ್!

  • ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದ್ದ ಘಟನೆ
  • ಶಿವಮೊಗ್ಗದಲ್ಲಿ ಬಾಲಕಿ ಆತ್ಮಹತ್ಯೆ: ಕಾರಣ ನಿಗೂಢ
  • ಗ್ಯಾಂಗ್ ರೇಪ್ ಆರೋಪಿಗಳ ಸ್ಥಳ ಮಹಜರು

NAMMUR EXPRESS
ಚಿಕ್ಕಮಗಳೂರು: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ದಲಿತ ಸಮುದಾಯದ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣದಲ್ಲಿ ಪಿಎಸ್ಐ ಅರ್ಜುನ್​ಗೆ ಚಿಕ್ಕಮಗಳೂರಿನ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಜತೆಗೆ ಈ ಪ್ರಕರಣ ಪೊಲೀಸರ ಕರ್ತವ್ಯದ ಹೊಣೆಯನ್ನು ಎತ್ತಿ ಹೇಳಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡುವಿನಲ್ಲಿ ದಲಿತ ಸಮುದಾಯದ ಯುವಕನಿಗೆ ಮೂತ್ರ ಕುಡಿಸಿದ ಆರೋಪಕ್ಕೆ ಸಂಬಂಧಿಸಿ ಪಿಎಸ್ಐ ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಪಿಎಸ್ಐ ಅರ್ಜುನ್ ಅವರನ್ನು ವಶಪಡಿಸಿಕೊಂಡಿದ್ದರು.
ಮಹಿಳೆಗೆ ಕರೆ ಮಾಡಿದ ವಿಚಾರವೊಂದಕ್ಕೆ ಸಂಬಂಧಿಸಿ ಪಿಎಸ್​ಐ ಅರ್ಜುನ್ ನನ್ನ ಪೊಲೀಸ್ ಠಾಣೆಗೆ ದೈಹಿಕ ಹಲ್ಲೆ ನಡೆಸಿದ್ದರು. ಕುಡಿಯಲು ನೀರು ಕೇಳಿದಾಗ ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ ಮೂತ್ರ ಹೊಯ್ಯಿಸಿದ್ದರು. ಮತ್ತು ನೆಲಕ್ಕೆ ಬಿದ್ದಿದ್ದ ಮೂತ್ರವನ್ನು ನೆಕ್ಕಿಸಿದ್ದರು ಎಂದು ದಲಿತ ಸಮುದಾಯದ ಯುವಕ ಆರೋಪಿಸಿದ್ದರು. ಈಕುರಿತು ಪ್ರಕರಣದ ದಾಖಲಾಗುತ್ತಿದ್ದಂತೆ ಪಿಎಸ್​ಐ ಅರ್ಜಿನ್ ತಲೆಮರೆಸಿಕೊಂಡಿದ್ದರು, ಆನಂತರ ಸಿಐಡಿಗೆ ತನಿಖೆಯ ಹೊಣೆ ವಹಿಸಲಾಗಿತ್ತು. ಸಿಐಡಿ ತಂಡ ಪಿಎಸ್​ಐ ಅರ್ಜುನ್​ರನ್ನು ಬಂಧಿಸಿದೆ.


ಸ್ಥಳ ಮಹಜರು!: ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ದು ಪೊಲೀಸರು ಮಹಜರು ಕಾರ್ಯ ನಡೆಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು ಹೊರವಲಯದ ಲಲಿತಾದ್ರಿಯಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಏಳು ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಈಗಾಗಲೇ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುಪೂರ್‌ಗೆ ಕರೆದೊಯ್ದು ಆರೋಪಿಗಳ ಮನೆಯಲ್ಲಿನ ಬಟ್ಟೆ ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಈಗಾಗಲೇ ಹಲವು ಪ್ರಕರಣಗಳಲ್ಲಿ ತೊಡಕೊಂಡಿದ್ದಾರೆ. ಸಂತ್ರಸ್ತೆ ಹಾಗೂ ಸ್ನೇಹಿತನನ್ನು ಬೆದರಿಸಲು ಬಳಸಿದ ಮಾರಕಾಸ್ತ್ರಗಳನ್ನು ಪೊಲೀಸರು ಆರೋಪಿಗಳಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿಗಳ ಮನೆಯವರು ತಮ್ಮ ಮಕ್ಕಳನ್ನು ಎನ್‌ಕೌಂಟರ್‌ ಮಾಡದಂತೆ ಪೊಲೀಸರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
ಆದರೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಏಳನೆ ಆರೋಪಿ ಸೆಲ್ವ ಇನ್ನೂ ಕೂಡ ಪೊಲೀಸರ ಬಲೆಗೆ ಬಿದ್ದಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರ ತಂಡ ತಮಿಳುನಾಡಿನಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದೆ.
ವಿದ್ಯಾರ್ಥಿನಿ ಅತ್ಮಹತ್ಯೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ(13)ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Categories
ಮಲ್ನಾಡ್

ಶಿವಮೊಗ್ಗಕ್ಕೆ ಯುವ ನಾಯಕ ತೇಜಸ್ವಿ ಸೂರ್ಯ

  • ಜಿಲ್ಲಾ ಬಿಜೆಪಿಯಿಂದ ಸ್ವಾಗತ: ಸಂಘಟನೆ ಚರ್ಚೆ

NAMMUR EXPRESS
ಶಿವಮೊಗ್ಗ ನಗರಕ್ಕೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್ ಹಾಗೂ ಯುವಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಎಂಬಿ,ಹರಿಕೃಷ್ಣ ಸ್ವಾಗತಿಸಿದರು. ಜಿಲ್ಲಾ ಯುವಮೋರ್ಚಾ ತಂಡ ಹಾಗೂ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಕ್ಷ ಸಂಘಟನೆ ಮತ್ತು ರಾಜಕೀಯದ ಬಗ್ಗೆ ಮಾತುಕತೆ ನಡೆಸಿದರು.
ತೀರ್ಥಹಳ್ಳಿಗೆ ಭಾನು ಪ್ರಕಾಶ್ ಭೇಟಿ

  • ತೀರ್ಥಹಳ್ಳಿ ಯುವ ಬಿಜೆಪಿ ಅಧ್ಯಕ್ಷರ ಮನೆಗೆ ಭೇಟಿ
    ತೀರ್ಥಹಳ್ಳಿ ತಾಲೂಕು ಬಿಜೆಪಿ ಯುವ ಅಧ್ಯಕ್ಷ ಸಂದೀಪ್ ಭಟ್ ಅವರ ಗುಡ್ಡೆಕೊಪ್ಪ ನಿವಾಸಕ್ಕೆ ಮಾಜಿ ಪರಿಷತ್ ಸದಸ್ಯ, ಬಿಜೆಪಿ ನಾಯಕ ಭಾನು ಪ್ರಕಾಶ್ ಭೇಟಿ ನೀಡಿದ್ದರು.
    ರಾಜ್ಯದ ಮುಂಚೂಣಿ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ಪ್ರೆಸ್. ರಾಜ್ಯದ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.