Categories
Uncategorized ಬೆಂಗಳೂರು

ಸೂರ್ಯಗ್ರಹಣ: ರಾಜ್ಯದ ಪ್ರಮುಖ ದೇಗುಲಗಳು ಬಂದ್!

  • ಕುಕ್ಕೆ ಪೂಜೆ ಇಲ್ಲ, ಧರ್ಮಸ್ಥಳದಲ್ಲಿ ಏನು..?
  • ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಏನೇನಿದೆ?

NAMMUR EXPRESS NEWS
ಬೆಂಗಳೂರು: ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನ ಮತ್ತು ವಿವಿಧ ಸೇವೆ ಅಲಭ್ಯವಾಗಲಿದೆ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕೆಲ ದೇವಸ್ಥಾನಗಳು ಇಡೀ ದಿನ ಬಂದ್ ಆಗಲಿವೆ.
ದೀಪಾವಳಿ ರಜೆ ಹಿನ್ನೆಲೆ ಧಾರ್ಮಿಕ ಪ್ರವಾಸಕ್ಕೆ, ಹಬ್ಬದ ವಿಶೇಷ ದರ್ಶನಕ್ಕೆಂದು ದೇವಸ್ಥಾನಕ್ಕೆ ಹೆಚ್ಚಿನ ಮಂದಿ ತೆರಳುವ ಸಾಧ್ಯತೆಗಳಿರುವುದರಿಂದ ಗ್ರಹಣದಿಂದಾಗಿ ಸೇವೆಗಳ ವ್ಯತ್ಯಾಯದ ಬಗ್ಗೆ ದೇವಸ್ಥಾನಗಳ ಆಡಳಿತ ಮಂಡಳಿಗಳು ವೆಬ್ ಸೈಟ್ ಪ್ರಕಟಣೆ ಮೂಲಕ ಮಾಹಿತಿ ನೀಡಿವೆ.
ಧರ್ಮಸ್ಥಳ ದರ್ಶನ ಬಂದ್ : ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಮಧ್ಯಾಹ್ನ 2:30 ರಿಂದ ರಾತ್ರಿ 7.30 ವರೆಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅನ್ನ ಸಂರ್ಪಣೆ ಛತ್ರದಲ್ಲಿ ಮಧ್ಯಾಹ್ನ 2:30 ರವರೆಗೆ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಸಂಪೂರ್ಣ ಬಂದ್ ಇರಲಿದೆ . ಯಾವುದೇ ಸೇವೆಗಳು ಮತ್ತು ಪ್ರಸಾದದ ವ್ಯವಸ್ಥೆ ಇರುವುದಿಲ್ಲ ಬುಧವಾರದಿಂದ ಬೆಳಿಗ್ಗೆ 9 ಗಂಟೆಗೆ ಎಲ್ಲಾ ಸೇವೆಗಳು ಆರಂಭಗೊಳ್ಳುತ್ತದೆ.
ಹೊರನಾಡಿನಲ್ಲಿ ಹೊರಗಿನಿಂದ ದರ್ಶನ : ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ ಮತ್ತು ಮಂತ್ರಾಲಯದಲ್ಲಿ ಮಂಗಳವಾರ ಯಾವುದೇ ಸೇವೆ ಹಾಗೂ ಪ್ರಸಾದ ವ್ಯವಸ್ಥೆ ಇರುವುದಿಲ್ಲ, ಹೊರಗಡೆಯಿಂದ ದರ್ಶನ ಫಲಹಾರ ನೀಡಲಾಗುತ್ತದೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎಂದಿನಂತೆ ಅನ್ನಪ್ರಸಾದವಿರುತ್ತದೆ. ಗ್ರಹಣ ಆರಂಭಗೊಳ್ಳುವ ಅವಧಿಯಿಂದ ಮೋಕ್ಷದ ಅವಧಿಯಲ್ಲಿ ಭಕ್ತರಿಗೆ ದೇವಸ್ಥಾನಕ್ಕೆ ಪ್ರವೇಶವಿದ್ದು, ದೇವಸ್ಥಾನದಲ್ಲಿ ಜಪ ಮಾಡಬಹುದು ಆದರೆ ಈ ಅವಧಿಯಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ. ಉಡುಪಿಯ ಕೃಷ್ಣಮಠದಲ್ಲಿ ಮಧ್ಯಾಹ್ನದ ಅನ್ನ ಸಂರ್ಪಣೆ ಇರುವುದಿಲ್ಲ. ಆದರೆ ಸಾರ್ವಜನಿಕರಿಗೆ ಕೃಷ್ಣದರ್ಶನಕ್ಕೆ ಅವಕಾಶ ಇರುತ್ತದೆ. ಕುದ್ರಳ್ಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಗ್ರಹಣ ಸಂದರ್ಭದಲ್ಲಿ ದರ್ಶನ ಇರುವುದಿಲ್ಲ. ದೊಡ್ಡಬಳ್ಳಾಪುರ ಸಮೀಪದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 10.30 ರವರೆಗೆ ಮಾತ್ರ ದೇವರ ದರ್ಶನ ಇರುತ್ತದೆ. ನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.
ಭಕ್ತರಿಗೆ ಪ್ರವೇಶವಿಲ್ಲ : ಹಾಸನಾಂಬ ದೇವಸ್ಥಾನ, ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ, ಬೇಲೂರಿನ ಚೆನ್ನಕೇಶವ ದೇವಸ್ಥಾನ, ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನ, ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲ, ಸಿಗಂದೂರೇಶ್ವರಿ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ಇರುವುದಿಲ್ಲ, ಆಯಾ ದೇವಸ್ಥಾನ ಆಡಳಿತ ಮಂಡಳಿಗಳಿಂದ ಅಭಿಷೇಕ ವಿಶೇಷ ಪೂಜೆ ನಡೆಯಲಿದೆ.

Categories
ರಾಜ್ಯ

ರಾಜ್ಯದಲ್ಲಿ ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ..!

ರಾಜ್ಯದಲ್ಲಿ ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ..!

  • ಮೈಸೂರಲ್ಲಿ ಜಿಟಿಡಿ ನೇತೃತ್ವದಲ್ಲಿ ಚುನಾವಣೆ
  • 2023ಕ್ಕೆ ಮಿಷನ್​ 123 ಪ್ಲಾನ್ ಮಾಡಿದ ದೇವೇಗೌಡ
  • ನಿಖಿಲ್ ಕುಮಾರ್ ಸ್ವಾಮಿ, ಹರೀಶ್ ಗೌಡ ಅವರಿಗೂ ಟಿಕೆಟ್!

NAMMUR EXPRESS NEWS
ಮೈಸೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ 6  ತಿಂಗಳು ಬಾಕಿ ಇರುವಾಗಲೇ  ಜೆಡಿಎಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡಿದೆ.
ಬಿಜೆಪಿ, ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ನಡುವೆ ಜೆಡಿಎಸ್​ ನಾಯಕರು ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
2023ಕ್ಕೆ ಮಿಷನ್​ 123: 2023ಕ್ಕೆ ಮಿಷನ್​ 123 ಶುರು ಮಾಡಿರುವ ಕುಮಾರಸ್ವಾಮಿ ಈಗ 126 ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ. ಇದರಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ಜಿಟಿ ದೇವೇಗೌಡ ಪುತ್ರ ಹರೀಶ್​​ಗೂ ಟಿಕೆಟ್​ ಖಚಿತವಾಗಿದೆ.ಈ ಬಾರಿ ಜೆಡಿಎಸ್​ಗೆ 30ರಿಂದ 40 ಸ್ಥಾನ ಬಂದರೆ ಅಧಿಕಾರದಿಂದ ದೂರ ಇರುತ್ತೇನೆ. 30ರಿಂದ 40 ಸ್ಥಾನ ಬಂದರೂ ನಾನು ಸಿಎಂ ಆಗುತ್ತೇನೆ ಎಂದು ನಮ್ಮ ಪಕ್ಷದ ಶಾಸಕರು ಅಂದುಕೊಳ್ಳುವುದು ಬೇಡ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜಿಟಿಡಿ ನಿವಾಸಕ್ಕೆ ಭೇಟಿ ನೀಡಿದ ಹೆಚ್​​ಡಿಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಜಿಲ್ಲಾ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ

  • ಚಾಮುಂಡೇಶ್ವರಿ – ಜಿ.ಟಿ.ದೇವೇಗೌಡ
  • ಹುಣಸೂರು – ಜಿ.ಟಿ.ಹರೀಶ್ ಗೌಡ
  • ಕೆ. ಆರ್. ನಗರ – ಸಾ. ರಾ. ಮಹೇಶ್
  • ಪಿರಿಯಾಪಟ್ಟಣ – ಕೆ. ಮಹದೇವ್
  • ಟಿ. ನರಸೀಪುರ – ಅಶ್ವಿನ್
  • ಎಚ್. ಡಿ. ಕೋಟೆ – ಜಯಪ್ರಕಾಶ್

NAMMUR EXPRESS NEWS
ಮೈಸೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ 6  ತಿಂಗಳು ಬಾಕಿ ಇರುವಾಗಲೇ  ಜೆಡಿಎಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡಿದೆ.
ಬಿಜೆಪಿ, ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ನಡುವೆ ಜೆಡಿಎಸ್​ ನಾಯಕರು ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
2023ಕ್ಕೆ ಮಿಷನ್​ 123: 2023ಕ್ಕೆ ಮಿಷನ್​ 123 ಶುರು ಮಾಡಿರುವ ಕುಮಾರಸ್ವಾಮಿ ಈಗ 126 ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ. ಇದರಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ಜಿಟಿ ದೇವೇಗೌಡ ಪುತ್ರ ಹರೀಶ್​​ಗೂ ಟಿಕೆಟ್​ ಖಚಿತವಾಗಿದೆ.ಈ ಬಾರಿ ಜೆಡಿಎಸ್​ಗೆ 30ರಿಂದ 40 ಸ್ಥಾನ ಬಂದರೆ ಅಧಿಕಾರದಿಂದ ದೂರ ಇರುತ್ತೇನೆ. 30ರಿಂದ 40 ಸ್ಥಾನ ಬಂದರೂ ನಾನು ಸಿಎಂ ಆಗುತ್ತೇನೆ ಎಂದು ನಮ್ಮ ಪಕ್ಷದ ಶಾಸಕರು ಅಂದುಕೊಳ್ಳುವುದು ಬೇಡ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜಿಟಿಡಿ ನಿವಾಸಕ್ಕೆ ಭೇಟಿ ನೀಡಿದ ಹೆಚ್​​ಡಿಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಜಿಲ್ಲಾ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ

  • ಚಾಮುಂಡೇಶ್ವರಿ – ಜಿ.ಟಿ.ದೇವೇಗೌಡ
  • ಹುಣಸೂರು – ಜಿ.ಟಿ.ಹರೀಶ್ ಗೌಡ
  • ಕೆ. ಆರ್. ನಗರ – ಸಾ. ರಾ. ಮಹೇಶ್
  • ಪಿರಿಯಾಪಟ್ಟಣ – ಕೆ. ಮಹದೇವ್
  • ಟಿ. ನರಸೀಪುರ – ಅಶ್ವಿನ್
  • ಎಚ್. ಡಿ. ಕೋಟೆ – ಜಯಪ್ರಕಾಶ್
Categories
ಬೆಂಗಳೂರು

ಸಾವಿರ ಉದ್ಯೋಗಿಗಳ ವಜಾಗೊಳಿಸಿದ ಮೈಕ್ರೋಸಾಫ್ಟ್!

  • ಜಾಗತಿಕ ಆರ್ಥಿಕ ಹಿನ್ನೆಡೆ ಎಫೆಕ್ಟ್
  • ಶುರುವಾಗಿದೆಯಾ ಉದ್ಯೋಗ ಕಸಿತ ಪರ್ವ?

NAMMUR EXPRESS NEWS
ಬೆಂಗಳೂರು : ಜಾಗತಿಕ ಆರ್ಥಿಕ ಹಿನ್ನೆಡೆಯಿಂದ ಅನೇಕ ಕಂಪನಿಗಳು ಸಂಕಷ್ಟಕ್ಕೆ ಸಿಲುಕಿವೆ. ಖ್ಯಾತ ಟೆಕ್ ಕಂಪನಿ ಮೈಕ್ರೋಸಾಫ್ಟ್ ಒಂದು ಸಾವಿರ ಮಂದಿ ಉದ್ಯೋಗಿಗಳನ್ನು ವಜಾ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಯಕ್ಸಿಯೋಸ್ ತಾಣ ವರದಿ ಮಾಡಿದೆ.
ಎಕ್ಸ್ ಬಾಕ್ಸ್, ಎಡ್ಜ್ ಸೇರಿದಂತೆ ಅನೇಕ ತಂಡಗಳಿಂದ, ಜಗತ್ತಿನ ವಿವಿದೆಡೆ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ಇದರೊಂದಿಗೆ ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡ 1 ರಷ್ಟು ಮಂದಿಯನ್ನು ವಜಾ ಮಾಡಿದಂತಾಗಿದೆ ಎಂದು ವರದಿ ಉಲ್ಲೇಖಿಸಿದೆ. ಈ ಹಿಂದಿನ ವರದಿಗಳ ಪ್ರಕಾರ, 2,21,000 ಉದ್ಯೋಗಿಗಳು ಮೈಕ್ರೋಸಾಫ್ಟ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ ಎನ್ನಲಾಗಿತ್ತು. ಅಮೇರಿಕಾದ ಹಲವು ಟೆಕ್ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುವ ಮತ್ತು ನೇಮಕಾತಿ ವಿಳಂಬದ ಮೊರೆ ಹೋಗಿವೆ. ಇದೀಗ ಮೈಕ್ರೋಸಾಫ್ಟ್ ಸಹ ಉಳಿದ ಕಂಪನಿಗಳ ಸಾಲಿಗೆ ಸೇರಿದೆ. ಜಾಗತಿಕ ಆರ್ಥಿಕ ಹಿಂಜರಿತದ ಪರಿಣಾಮವಾಗಿ ಮೆಟಾ ಪ್ಲಾಟ್ ಫಾರ್ಮ್ ಇಂಕ್, ಟ್ವಿಟರ್ ಇಂಕ್, ಸ್ನ್ಯಾಪ್ ಇಂಕ್ ಗಳು ಉದ್ಯೋಗ ಕಡಿತ ಮಾಡಿವೆಯಲ್ಲದೆ, ನೇಮಕಾತಿ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿವೆ. ಕೆಲವೇ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮೈಕ್ರೋಸಾಫ್ಟ್ ಜುಲೈ ತಿಂಗಳಲ್ಲಿ ಹೇಳಿತ್ತು. ನಾವು ಕಡಿಮೆ ಸಂಖ್ಯೆಯ ಉದ್ಯೋಗಿಗಳನ್ನಷ್ಟೇ ವಜಗೊಳಿಸಿದ್ದೇವೆ. ಇತರ ಕಂಪನಿಗಳಂತೆ ನಾವು ಸಹ ನಮ್ಮ ವ್ಯಾಪಾರದ ಆದ್ಯತೆಗಳನ್ನು ಸದಾ ಮೌಲ್ಯಮಾನ ಮಾಡುತ್ತಿರುತ್ತೇವೆ. ಅದರಂತೆ ರಚನಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಕಂಪನಿ ಹೇಳಿತ್ತು.

Categories
ಬೆಂಗಳೂರು

ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ

  • ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ
  • ದೇಸೀಯ ಗೋವು ತಳಿಗಳನ್ನು ಸಂರಕ್ಷಣೆಗೆ ಚಿತ್ತ

NAMMUR EXPRESS NEWS
ಬೆಂಗಳೂರು: ದೀಪಾವಳಿಯ ಬಲಿ ಪಾಡ್ಯಮಿ ಹಬ್ಬದ ದಿನದಂದು ದೇವಸ್ಥಾನಗಳಲ್ಲಿ ಹೊಸ ಸಂಪ್ರದಾಯಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಮುಜರಾಯಿ, ಹಜ್ ಮತ್ತು ವಕ್ಸ್ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಹಿಂದಿನ ಕಾಲದಿಂದಲೂ ಹಿಂದೂ ಧರ್ಮದವರು ಗೋಮಾತೆಯನ್ನು ಕಾಲಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ. ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ವಿಶೇಷ ಅಲಂಕಾರದ ಮೂಲಕ ಅಕ್ಕಿ, ಬೆಲ್ಲ, ಸಿಹಿ ತಿನಿಸುಗಳನ್ನು ನೀಡಿ ಪೂಜಿಸಲಾಗುತ್ತದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಪೂಜೆಯನ್ನು ಬಲಿಪಾಡ್ಯಮಿಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಪಟ್ಟಣ ಮತ್ತು ಮಹಾನಗರಗಳಲ್ಲಿ ಈ ಪದ್ಧತಿ ಮರೆತು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆ ಎಂದು ತಿಳಿದು ಪೂಜಿಸುವ ಸಂಪ್ರದಾಯವನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಕಳೆದ ವರ್ಷದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. ಇದರಿಂದಾಗಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಗೋಪೂಜೆಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ, ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ಕಳೆದ ವರ್ಷ ಆಚರಿಸಿರುವಂತೆ, ಪ್ರಸಕ್ತ ಸಾಲಿನಲ್ಲಿಯೂ 2022ನೇ ಅ. 26ರಂದು ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಸೂಚನೆ ನೀಡಲಾಗಿದೆ. ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಲಾಗುತ್ತದೆ. ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆಯನ್ನು ಮಾಡುವ ಮೂಲಕ ಅಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮವನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ದೇಸೀಯ ಗೋವು ತಳಿಗಳನ್ನು ಸಂರಕ್ಷಣೆ ಮಾಡುವ ದೃಷ್ಟಿಯಿಂದ ಹಾಗೂ ಹಿಂದೂ ಪರಂಪರೆಯ ಸಂಪ್ರದಾಯವನ್ನು ಮುಂದಿನ ಪೀಳಿಗೆಗೂ ಪರಿಚಯ ಮಾಡಿಸುವ ಉದ್ದೇಶದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿಯಂದು ರಾಜ್ಯಾದ್ಯಂತ ವಿಶೇಷವಾಗಿ ಗೋಪೂಜೆಯನ್ನು ನಡೆಸಲಾಗುವುದು. ಈ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆಯ ಸಹಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

Categories
ಜಿಲ್ಲಾ ವಾರ್ತೆ

ಈ ಗ್ರಾಮದಲ್ಲಿ ಮಂಗಗಳ ಹೆಸರಲ್ಲಿದೆ 32 ಎಕ್ರೆ ಜಮೀನು!

NAMMUR EXPRESS NEWS
ಮುಂಬಯಿ: ಜಮೀನಿಗಾಗಿ ಅಣ್ಣ ತಮ್ಮಂದಿರೇ ಜಗಳವಾಡಿ ಕೊಳ್ಳುವ ಈ ಕಾಲದಲ್ಲಿ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ಮಂಗಗಳ ಹೆಸರಿಗೇ 32 ಎಕ್ರೆ ಜಮೀನು ಬಿಟ್ಟುಕೊಡಲಾಗಿದೆ! ಒಸ್ಮಾನಾಬಾದ್ ಜಿಲ್ಲೆಯ ಉಪ್ಲಾ ಗ್ರಾಮದಲ್ಲಿ ಈ ರೀತಿ ಮಂಗಗಳ ಹೆಸರಿಗೆ ಜಮೀನಿದೆ. ಈ ಗ್ರಾಮದಲ್ಲಿ ಮಂಗಗಳಿಗೆ ವಿಶೇಷವಾದ ಮರ್ಯಾದೆ ಇದೆಯಂತೆ. ಪೂರ್ವಜರ ದಿಂದಲೂ ಮಂಗಗಳು ಮನೆ ಬಾಗಿಲಿಗೆ ಬಂದರೆ ಅವುಗಳಿಗೆ ಊಟ ಕೊಡುವ ಪದ್ಧತಿಯಿದೆ. ಹಾಗೆಯೇ ಊರಲ್ಲಿ ಯಾರದ್ದೇ ಮದುವೆಯಾದರೂ ಅಲ್ಲಿಮೊದಲನೇ ಉಡುಗೊರೆ ಯನ್ನು ಮಂಗಕ್ಕೆ ಕೊಡಲಾಗುತ್ತದೆಯಂತೆ.
ಈ ಊರಿನಲ್ಲಿರುವ 32 ಎಕ್ರೆ ಜಮೀನು ಊರಿನ ಮಂಗಗಳ ಹೆಸರಿನಲ್ಲಿ ನೋಂದಣಿಯಾಗಿದೆ. ಆದರೆ ಅದನ್ನು ಯಾವ ಕಾಲದಲ್ಲಿ ಯಾರು ನೋಂದಣಿ ಮಾಡಿಸಿದರು ಎನ್ನುವ ಬಗ್ಗೆ ನಮಗೂ ಮಾಹಿತಿಯಿಲ್ಲ ಎನ್ನುತ್ತಾರೆ ಗ್ರಾಮ ಪಂಚಾಯತ್ ಅಧ್ಯಕ್ಷರು. ಊರಿನಲ್ಲಿ ಒಟ್ಟು ಸರಿ ಸುಮಾರು 100 ಮಂಗಗಳು ಇವೆ. ಸದ್ಯ ಮಂಗಗಳ ಹೆಸರಿನಲ್ಲಿರುವ ಜಾಗವನ್ನು ಸರಕಾರ ಪ್ಲಾಂಟೇಶನ್ ಮಾಡಿದೆ.

Categories
Uncategorized

ಸೂರ್ಯಗ್ರಹಣ ಕಾರಣ: ಅ. 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳಿಲ್ಲ

  • ಭೋಜನ ಪ್ರಸಾದ ವ್ಯವಸ್ಥೆ ಇಲ್ಲ

NAMMUR EXPRESS NEWS
ಸುಬ್ರಹ್ಮಣ್ಯ: ಅಕ್ಟೋಬರ್ 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೂರ್ಯಗ್ರಹಣ ಇರುವುದರಿಂದ ಆ ದಿನದಂದು ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ಇನ್ನು ಗ್ರಹಣದ ಹಿನ್ನೆಲೆಯಲ್ಲಿ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.

Categories
ಬೆಂಗಳೂರು

ಮೂರು ದಿನಗಳಲ್ಲಿ ಚಂಡಮಾರುತ ಸೃಷ್ಟಿ?!

  • ಕರುನಾಡಲ್ಲಿ ಮಂಕು ಕವಿದ ವಾತಾವರಣ
  • ಅನಾರೋಗ್ಯ ಹೆಚ್ಚಳ: ಆಸ್ಪತ್ರೆಗಳು ರಶ್

NAMMUR EXPRESS NEWS
ಬೆಂಗಳೂರು: ಹವಾಮಾನದಲ್ಲಿ ಬದಲಾವಣೆಗಳು ಉಂಟಾಗಿದ್ದು, ಮುಂದಿನ ಎರಡು ಮೂರು ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಳಿಗಾಳಿ ಚಂಡಮಾರುತವಾಗಲು ಸಾಕಷ್ಟು ಬದಲಾವಣೆಗಳು ಆಗಬೇಕಿದೆ. ಸುಳಿಗಾಳಿಯು ಹೆಚ್ಚಿನ ವೇಗ ಪಡೆದುಕೊಂಡು ಬಲಗೊಳ್ಳಬೇಕು, ನಂತರ ಅದು ವಾಯುಭಾರ ಕುಸಿತವಾಗಿ ರೂಪಗೊಳ್ಳುತ್ತದೆ. ಆ ವಾಯುಭಾರ ಕುಸಿತದಿಂದ ಗಾಳಿಯ ಒತ್ತಡ ಒಂದೆಡೆ ಅತ್ಯಧಿಕ ಪ್ರಮಾಣದಲ್ಲಿ ಉಲ್ಬಣಗೊಳ್ಳಬೇಕು. ಇಷ್ಟು ಹಂತಗಳನ್ನು ದಾಟಿ ಮೇಲೆ ಈ ಗಾಳಿ ಚಂಡಮಾರುತವಾಗಿ ಬದಲಾಗುತ್ತದೆ. ಇಷ್ಟು ಹಂತ ದಾಟಲು ಸುಮಾರು ಎರಡರಿಂದ ಮೂರು ದಿನ ಹಿಡಿಯಬಹುದು ಎಂದು ಅಂದಾಜಿಸಲಾಗಿದೆ.
ಚಂಡ ಮಾರುತ ಕಾರಣ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಶಿವಮೊಗ್ಗಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ಮಳೆ, ಗಾಳಿ ಕಾರಣ ಅನಾರೋಗ್ಯ ಹೆಚ್ಚುತ್ತಿದೆ. ಆಸ್ಪತ್ರೆಗಳ ಮುಂದೆ ಜನ ಹೆಚ್ಚು ಕಾಣುತ್ತಿದ್ದಾರೆ.

Categories
ಬೆಂಗಳೂರು

ರಾಜ್ಯದಲ್ಲಿ 4 ದಿನ ಭಾರೀ ಮಳೆ!

  • ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್
  • ಬೆಂಗಳೂರಲ್ಲಿ ಈ ವರ್ಷ ಮಳೆ ಹೊಸ ದಾಖಲೆ
  • ತೀರ್ಥಹಳ್ಳಿಯಲ್ಲಿ ಮಹಿಳೆಗೆ ಸಿಡಿಲು ಬಡಿದು ಗಾಯ

NAMMUR EXPRESS NEWS
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರ್ನಾಟಕದ 5 ಜಿಲ್ಲೆಗಳಲ್ಲಿ ಅ.22ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಇನ್ನೆರಡು ದಿನ ಭಾರೀ ಮಳೆ ಸುರಿಯಲಿದೆ.
ಅ.20ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷ ದಾಖಲೆಯ ಪ್ರಮಾಣದ ಮಳೆಯಾಗಿದ್ದು, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.
ಬೆಂಗಳೂರಿನಲ್ಲಿ ಈ ವರ್ಷ 1706 ಮಿಮೀ ಮಳೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. 2017ರಲ್ಲಿ ಬೆಂಗಳೂರಿನಲ್ಲಿ 1696 ಮಿಮೀ ಮಳೆಯಾಗಿತ್ತು. ಆ ದಾಖಲೆಯನ್ನು ಈ ವರ್ಷದ ಮಳೆ ಮುರಿದಿದೆ. ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ.
ಸಿಡಿಲು ಬಡಿದು ಆಸ್ಪತ್ರೆಗೆ!: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ದೇಮ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾನುಕೊಪ್ಪ ಸರಸ್ವತಿ ಶ್ರೀಧರ ಅವರಿಗೆ ಸಿಡಿಲು ಬಡಿದು ತೀರ್ಥಹಳ್ಳಿ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲೆನಾಡಿನಲ್ಲಿ ಅಡಿಕೆ ಕೊಯ್ಲು ನಡುವೆ ಇಂತಹ ಮಳೆ ಜನರಲ್ಲಿ ಆತಂಕ ಮೂಡಿಸಿದೆ.

Categories
ಜಿಲ್ಲಾ ವಾರ್ತೆ

ಕಡೂರು ಬಿಇಓ ಲೋಕಾಯುಕ್ತ ಬಲೆಗೆ ಬಿದ್ದ..!

  • ಶಿಕ್ಷಕರಿಂದ ಲಂಚ ಪಡೆಯುವಾಗ ದಾಳಿ
  • ಬೇರೆ ಶಾಲೆಗೆ ನಿಯೋಜನೆ ಮಾಡಲು ಲಂಚ

NAMMUR EXPRESS NEWS
ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್ ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರುಗಳಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಡೂರು ತಾಲ್ಲೂಕಿನ ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಣದ ಬೇಡಿಕೆ ಇಟ್ಟಿದ್ದು, ಮಂಗಳವಾರ ಈ ಸಂಬಂಧ ಶಿಕ್ಷಕ ರಾಜಪ್ಪ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ. ತಿಮ್ಮಾಪುರ ಗೇಟ್‌ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ಲೋಕಾಯುಕ್ತ ಈಗ ಎಲ್ಲಾ ಕಡೆ ಕಣ್ಣಿಟ್ಟಿದ್ದು ಲಂಚ, ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಿದೆ.

Categories
ಬೆಂಗಳೂರು

2,500 ಉದ್ಯೋಗಿಗಳಿಗೆ ಬೈಜುಸ್ ಕಂಪನಿ ಗೇಟ್ ಪಾಸ್!- 10,000 ಶಿಕ್ಷಕರ ನೇಮಕಕ್ಕೆ ಪ್ಲಾನ್- ಕರೋನಾ ಬಳಿಕ ಭಾರೀ ನಷ್ಟ ಅನುಭವಿಸಿದ ಕಂಪನಿ

NAMMUR EXPRESS NEWS
ಬೆಂಗಳೂರು: ವಿಶ್ವದ ಅತ್ಯಂತ ಮೌಲ್ಯಯುತವಾದ ಸ್ಟಾರ್ಟ್‌ಅಪ್ ಕಂಪನಿ ಬೈಜೂಸ್ ಸುಮಾರು 2,500 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿದೆ.
ಮುಂದಿನ 6 ತಿಂಗಳಲ್ಲಿ 2500 ನೌಕರರನ್ನು ವಜಾ ಮಾಡಲಿದೆ ಎಂದು ಕಂಪನಿಯ ಸಹ ಸಂಸ್ಥಾಪಕಿ ದಿವ್ಯಾ
ಗೋಕುಲ್‌ನಾಥ್ ಹೇಳಿದ್ದಾರೆ. ಕಾರ್ಯನಿರ್ವಹಣಾ ವೆಚ್ಚವನ್ನು ತಗ್ಗಿಸಲು ಬೈಜೂಸ್ ಶೇ.5ರಷ್ಟು ನೌಕರರು ಎಂದರೆ 2500 ಜನರನ್ನು ವಜಾ ಮಾಡಲು ನಿರ್ಧರಿಸಿದೆ.
ಕಂಪನಿಯನ್ನು ಲಾಭದಾಯಕ ಮಾಡಿಕೊಳ್ಳಲು 10 ಸಾವಿರ ಶಿಕ್ಷಕಕರನ್ನು ನೇಮಿಸಲಾಗುವುದು. ಈ ಪ್ರಕ್ರಿಯೆ ಮುಂದಿನ 6 ತಿಂಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಜೂನ್‌ನಲ್ಲಿಯೂ ನೂರಾರು ಉದ್ಯೋಗಿಗಳನ್ನು ಬೈಜೂಸ್ ವಜಾಗೊಳಿಸಿತ್ತು.
ಕೋವಿಡ್ ಬಳಿಕ ಭಾರೀ ನಷ್ಟವನ್ನು ಬೈಜೂಸ್ ಅನುಭವಿಸುತ್ತಿದೆ. 2020ರ ಹಣಕಾಸು ವರ್ಷದಲ್ಲಿ 262 ಕೋಟಿ ರೂ. ನಷ್ಟ ಅನುಭವಿಸಿದ್ದರೆ 2021ರ ಆರ್ಥಿಕ ವರ್ಷದಲ್ಲಿ 4,588 ಕೋಟಿ ನಷ್ಟ ಅನುಭವಿಸಿದೆ.
ಒಟ್ಟು 22 ಶತಕೋಟಿ ಡಾಲರ್ ಮೌಲ್ಯ ಹೊಂದಿರುವ ಬೈಜೂಸ್ ಭಾರತದ ಅತ್ಯಂತ ಮೌಲ್ಯಯುತ ಸ್ಟಾರ್ಟಪ್ ಕಂಪನಿ ಎಂದು ಹೆಸರು ಪಡೆದಿದೆ.