Categories
ಬೆಂಗಳೂರು ಮೈಸೂರು

ದಸರಾ ಸಂಭ್ರಮಕ್ಕೂ ಬರದ ಕರಿ ನೆರಳು!

ದಸರಾ ಸಂಭ್ರಮಕ್ಕೂ ಬರದ ಕರಿ ನೆರಳು!
– ವಿಶ್ವ ವಿಖ್ಯಾತ ದಸರಾ ಈ ಸಲ ಸರಳ ಆಚರಣೆ
– ಅ.15ರಿಂದ 24 ರವರೆಗೆ ನಡೆಯಲಿರುವ ನಾಡ ಹಬ್ಬ

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸರಕಾರ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ನಿರ್ಧಾರ ಮಾಡಿದ್ದು, ಈ ಸಲ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದೆ.
ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರ ಈ ಬಾರಿ ಸರಳ ದಸರಾವನ್ನು ಆಚರಿಸಲು ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಮಳೆಯ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಹೀಗಾಗಿ ಈ ಬಾರಿ ಸರಳ ಮತ್ತು ಅರ್ಥಪೂರ್ಣದಸರಾವನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ದಸರಾ ಆಚರಣೆಗೆಂದೇ 30 ಕೋಟಿ ರೂ. ನೀಡಲು ಸಚಿವ ಡಾ.ಎಚ್.ಸಿ.ಮಹದೇವಪ್ಪ ಕೋರಿದ್ದರು. ಈಗ ಅಷ್ಟೊಂದು ಮೊತ್ತವನ್ನು ಪಡೆಯದೆ ಕಡಿಮೆ ವೆಚ್ಚದಲ್ಲಿ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮದ ನಂತರ ಮೈಸೂರು ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬಹುದು. ಜಂಬೂ ಸವಾರಿಗೂ ಅವಕಾಶ ಮಾಡಿಕೊಡಬಹುದು ಎನ್ನಲಾಗುತ್ತಿದೆ. ಮೈಸೂರು ದಸರಾ ಅಕ್ಟೋಬರ್ 15ರಿಂದ 24ರವರೆಗೆ ನಿಗದಿಯಾಗಿದೆ. ಅಕ್ಟೋಬರ್ 15ರಂದು ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಕೆಯೊಂದಿಗೆ ದಸರಾಗೆ ಚಾಲನೆ, ಅಕ್ಟೋಬರ್ 24ರಂದು ಜಂಬೂ ಸವಾರಿ ನಡೆಯಲಿದೆ.

Categories
ಕರಾವಳಿ ಮಂಗಳೂರು

ಪಾರ್ಟ್ ಟೈಮ್ ಜಾಬ್’ ಆಮಿಷ: 6.32 ಲಕ್ಷರೂ. ವಂಚನೆ!

ಪಾರ್ಟ್ ಟೈಮ್ ಜಾಬ್’ ಆಮಿಷ: 6.32 ಲಕ್ಷರೂ. ವಂಚನೆ!
– ಮಂಗಳೂರಲ್ಲಿ ಆನ್ಲೈನ್ ಮೋಸಕ್ಕೆ ಮತ್ತೊಬ್ಬರ ಹಣ ಹೋಯ್ತು
– ಉಡುಪಿ: ಮಲ್ಪೆ ಬೀಚ್‌ನಲ್ಲಿ ಅಪರಿಚಿತ ಶವ ಪತ್ತೆ
– ಮಂಗಳೂರು: ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

NAMMUR EXPRESS NEWS
ಮಂಗಳೂರು: ಇನ್ಸ್ಟಾಗ್ರಾಂ ಖಾತೆಗೆ ಪಾರ್ಟ್‌ಟೈಮ್ ಜಾಬ್ ಬಗ್ಗೆ ಸಂದೇಶ ಕಳುಹಿಸಿ ಅನಂತರ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 9ರಂದು ಅಪರಿಚಿತ ಕಂಪೆನಿಯ ಹೆಸರಿನಲ್ಲಿ ಒಂದು ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್ ಅನ್ನು ಒತ್ತಿದಾಗ ಪ್ರತೀದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ ಸೂಚಿಸಲಾಗಿತ್ತು. ಇದನ್ನು ನಂಬಿದ ದೂರುದಾರರು ಹಂತ ಹಂತವಾಗಿ 1,66,348 ರೂ. ವರ್ಗಾಯಿಸಿದ್ದರು. ಸೆ. 10ರಂದು 1,000 ರೂ. ವರ್ಗಾಯಿಸಿದ್ದರು. ಬಳಿಕ ಹಂತ-ಹಂತವಾಗಿ ಸೆ. 18ರ ವರೆಗೆ ಒಟ್ಟು 6,32,218 ರೂ. ವರ್ಗಾಯಿಸಿದ್ದಾರೆ.

ಮಲ್ಪೆ ಬೀಚ್‌ನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆಯ ಬಡಾನಿಡಿಯೂರು ಆಸರೆ ಬೀಚ್ ಬಳಿಯ ಕಡಲ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೂದು ಬಣ್ಣದ ಬರ್ಮುಡ ಹಾಕಿಕೊಂಡಿದ್ದರು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ: ಇಬ್ಬರ ಬಂಧನ

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31) ಮತ್ತು ಸುರತ್ಕಲ್ ನ ಅಕ್ಷಿತ್ ಕುಮಾರ್(26) ಬಂಧಿತರು.

ಬಂಧಿತರಿಂದ ಒಟ್ಟು 35 ಗ್ರಾಂ ತೂಕದ ರೂ. 1,75,000 ಮೌಲ್ಯದ ಎಂಡಿಎಂಎ ಮಾದಕ ವಸ್ತು ಮೊಬೈಲ್ ಫೋನ್ ಗಳು-2, ನಗದು ರೂ. 600 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ಆಗಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

Categories
ಕರಾವಳಿ

ಚೈತ್ರಾ ಪ್ರಕರಣ: ಕುಂದಾಪುರ ಹೆಸರು ಬಳಸಬಾರದು ಎಂದು ಕೋರ್ಟ್ ಕಟಕಟೆಗೆ!

ಚೈತ್ರಾ ಪ್ರಕರಣ: ಕುಂದಾಪುರ ಹೆಸರು ಬಳಸಬಾರದು ಎಂದು ಕೋರ್ಟ್ ಕಟಕಟೆಗೆ!
– ಕುಂದಾಪುರ ಹೆಸರಿಗೆ ಕಳಂಕ: ಭವಿಷ್ಯಕ್ಕೆ ಪೆಟ್ಟು
– ಇನ್ನು ಮುಂದೆ ಚೈತ್ರಾ ಮುಂದೆ ಕುಂದಾಪುರ ಬಳಸಂಗಿಲ್ಲ?!

NAMMUR EXPRESS NEWS
ಕುಂದಾಪುರ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಎಂಎಲ್ಎ ಟಿಕೆಟ್ ಹಣ ವಂಚನೆ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ. ಈ ಕುರಿತಂತೆ ಬಾರ್ ಅಂಡ್ ಬೆಂಚ್ ವೆಬ್ ಸೈಟ್ ವರದಿ ಮಾಡಿದ್ದು, ವರದಿ ಪ್ರಕಾರ ಬೆಂಗಳೂರಿನ ಬಸವನಗುಡಿಯಲ್ಲಿ ಕಾಫಿ ಶಾಪ್ ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ದಾವೆ ಹೂಡಿದ್ದಾರೆ. ದಾವೆಯು ಇನ್ನಷ್ಟೇ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.

ಮಾಧ್ಯಮಗಳು ತಮ್ಮ ಟಿಆರ್‌ಪಿ, ಲೈಕ್ಸ್ ಮತ್ತು ವ್ಯೂಸ್ ಹೆಚ್ಚಿಸುವ ಉದ್ದೇಶದಿಂದ ಕುಂದಾಪುರ ಹೆಸರು ಬಳಸುತ್ತಿವೆ. ದೂರುದಾರರು ಕುಂದಾಪುರ ಮೂಲದವರಾಗಿದ್ದು, ಹೋಟೆಲ್ ನಡೆಸುತ್ತಿದ್ದು, ಹೋಟೆಲ್ ಗೆ ಬರುವ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ದಾವೆಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
ಚೈತ್ರಾ ಬಗ್ಗೆ ಸುದ್ದಿ ಪ್ರಸಾರ ಮಾಡುವಾಗ ಕುಂದಾಪುರ ಎಂದು ಉಲ್ಲೇಖಿಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ದಾವೆದಾರ ಕೋರಿದ್ದಾರೆ. ದಾವೆದಾರ ಪರ ವಕೀಲ ಎಚ್ ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ

Categories
ತೀರ್ಥಹಳ್ಳಿ

ಕಿಮ್ಮನೆ ಸರಳತೆ: ಊಟ ಬಡಿಸಿದ ಸಿಂಪಲ್ ನಾಯಕ!

ಕಿಮ್ಮನೆ ಸರಳತೆ: ಊಟ ಬಡಿಸಿದ ಸಿಂಪಲ್ ನಾಯಕ!
– ಮೇಗರವಳ್ಳಿಯಲ್ಲಿ ನಡೆದ ಸಣ್ಣ ಕಾರ್ಯಕ್ರಮದಲ್ಲಿ ಕಿಮ್ಮನೆ ಬಡಿಸಿದ ಫೋಟೋ ವೈರಲ್

NAMMUR EXPRESS NEWS
ತೀರ್ಥಹಳ್ಳಿ: ರಾಜ್ಯದ ಅಪರೂಪದ ರಾಜಕಾರಣಿ, ತಮ್ಮ ಪ್ರಾಮಾಣಿಕತೆಯ ಮೂಲಕವೇ ಗುರುತಿಸಿಕೊಂಡಿರುವ ಮಾಜಿ ಸಚಿವ, ತೀರ್ಥಹಳ್ಳಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಮತ್ತೊಮ್ಮೆ ತಮ್ಮ ಸಿಂಪಲ್ ನಡೆ ಮೂಲಕ ಗಮನ ಸೆಳೆದಿದ್ದಾರೆ.
ತೀರ್ಥಹಳ್ಳಿಯ ಮೇಗರವಳ್ಳಿಯಲ್ಲಿ ನಡೆದ ಸುರೇಂದ್ರ ಹೆಗಡೆಯವರ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಜನರಿಗೆ ಊಟ ಬಡಿಸುವ ಮೂಲಕ ಈಗ ಗಮನ ಸೆಳೆದಿದ್ದಾರೆ. ಒಂದು ಸಣ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅತ್ಯಂತ ಸಾಮಾನ್ಯರಂತೆ ಎಲ್ಲರೊಂದಿಗೆ ಬೆರೆತು ಸೇರಿಕೊಂಡು ಪ್ರತಿಯೊಂದು ಕೆಲಸಗಳಲ್ಲೂ ತೊಡಿಸಿಕೊಂಡಿರುವುದು ಈಗ ಅವರ ಅಭಿಮಾನಿಗಳಿಗೆ ಮತ್ತಷ್ಟು ಸಂತಸ ತಂದಿದೆ. ಅನೇಕ ಸರಳತೆ ಕಾರ್ಯಕ್ರಮ, ವ್ಯಕ್ತಿತ್ವ ಮೂಲಕ ಕಿಮ್ಮನೆ ಆಗಾಗ ಗಮನ ಸೆಳೆಯುತ್ತಾರೆ.

Categories
ತೀರ್ಥಹಳ್ಳಿ

ಡಿಜೆ ಆಫ್: ರಸ್ತೆಯಲ್ಲಿ ಕುಳಿತು ದೇವಂಗಿ ಗ್ರಾಮಸ್ತರ ಹೋರಾಟ!

ಡಿಜೆ ಆಫ್: ರಸ್ತೆಯಲ್ಲಿ ಕುಳಿತು ದೇವಂಗಿ ಗ್ರಾಮಸ್ತರ ಹೋರಾಟ!
– ಶಾಸಕರು ಸ್ಥಳಕ್ಕೆ ಬರುವಂತೆ ಪಟ್ಟು: ಕೊನೆಗೆ ಪೊಲೀಸರ ಮನವೊಲಿಕೆ

NAMMUR EXPRESS NEWS
ತೀರ್ಥಹಳ್ಳಿ: ಗಣೇಶ ವಿಸರ್ಜನೆ ವೇಳೆ ಡಿಜೆ ಬಂದ್ ಮಾಡಿಸಿದ್ದಕ್ಕೆ ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ ದೇವಂಗಿ ಗ್ರಾಮಸ್ತರು ಕೆಲ ಹೊತ್ತು ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡಿದ ಘಟನೆ ಶುಕ್ರವಾರ ನಡೆದಿದೆ. 97ನೇ ವರ್ಷದ ವಿಜೃಂಭಣೆಯ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು ಸುಮಾರು 11ಗಂಟೆ ವೇಳೆಗೆ ಡಿಜೆ ಬಂದ್ ಮಾಡಿಸಿದ್ದಕ್ಕೆ ನೂರಾರು ಯುವಕರು ಪೊಲೀಸರ ವಿರುದ್ಧ ಘೋಷಣೆ ಕೂಗಿ ನ್ಯಾಯಕ್ಕಾಗಿ ಅಗ್ರಹಿಸಿದರು.
ದೇವಂಗಿ ಸರ್ಕಲ್ ನಲ್ಲಿ ದೇವಂಗಿ ಹಾಗೂ ಹಿಲಿಕೆರೆ ಗಣಪತಿಗಳ ಸಮಾಗಮದ ವೇಳೆ ಸಾವಿರಾರು ಜನರು ಸೇರಿದ್ದರು. ಈ ವೇಳೆ ಪಟಾಕಿ ಹಾಗೂ ಡಿಜೆ ಶಬ್ದಗಳು ದುಪ್ಪಟ್ಟಾಗಿವೆ. ಜೊತೆಗೆ 3000ಕ್ಕೂ ಹೆಚ್ಚು ಜನರು ಸೇರಿದ್ದರಿಂದ ಮುಂಜಾಗೃತಾ ಕ್ರಮವಾಗಿ ಪೊಲೀಸರು ಡಿಜೆ ಬಂದ್ ಮಾಡಿಸಿದ್ದರು.

ತೀರ್ಥಹಳ್ಳಿ ಶಾಸಕರಿಗೂ ಕರೆ ಮಾಡಿದ್ದು, ಶಾಸಕ ಆರಗ ಜ್ಞಾನೇಂದ್ರ ಅನಾರೋಗ್ಯ ಕಾರಣ ಬರಲಿಲ್ಲ. ಇದರಿಂದ ಸಿಟ್ಟಾದ ಗ್ರಾಮಸ್ತರು ಆರಗ ಅವರಿಗೂ ದಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಪರಿಸ್ಥಿತಿಯನ್ನು ಶಾಂತಿಗೊಳಿಸಿ ನಂತರ ಗಣಪತಿ ವಿಸರ್ಜನೆ ಮಾಡಲಾಗಿದೆ.

ಅತೀ ಹೆಚ್ಚು ಯುವಕರ ಸಮಾಗಮ!

ದೇವಂಗಿ ಸರ್ಕಲ್ ಅಲ್ಲಿ ಇದೆ ಮೊದಲ ಬಾರಿಗೆ ಅತೀ ಹೆಚ್ಚು ಯುವಕರು ಸೇರಿದ್ದರು. ಸುತ್ತಮುತ್ತಲಿನ ಭಾಗದ ಯುವಕರು ಡಾನ್ಸ್ ಮಾಡಿದರು. ಡಿವೈಎಸ್ಪಿ ಗಜಾನನ ವಾಮನ ಸುತಾರಾ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Categories
ಬೆಂಗಳೂರು ಮಾಹಿತಿ

ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ!

ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ!
– ಸೆಪ್ಟೆಂಬರ್ 30ನೇ ತಾರೀಕು ಕೊನೆ ದಿನ
– ಯಾವ ಯಾವ ಯೋಜನೆಗೆ ಕಡ್ಡಾಯ… ಇಲ್ಲಿದೆ ಡೀಟೇಲ್ಸ್

NAMMUR EXPRESS NEWS
ಬೆಂಗಳೂರು: ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶನದಂತೆ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನು ಖಜಾನೆ-2 ತಂತ್ರಾಂಶದ ಮೂಲಕ ಆಧಾರ್‌ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿಯಲ್ಲಿ ಫಲಾನುಭವಿಗಳ ಬ್ಯಾಂಕ್ ಅಥವಾ ಅಂಚೆ ಉಳಿತಾಯ ಖಾತೆಗೆ ನೇರವಾಗಿ ಜಮ ಮಾಡುವ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಗಿದ್ದು, ಈ ಯೋಜನೆಯಡಿ ಎಲ್ಲಾ ಪಿಂಚಣಿದಾರರು ಪಿಂಚಣಿ ಪಡೆಯುತ್ತಿರುವ ಪಿಂಚಣಿ ಪಾವತಿ, ಖಾತೆಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ನಿರ್ದೇಶಿಸಿರುತ್ತಾರೆ. ಎನ್.ಪಿ.ಸಿ.ಐ ಮ್ಯಾಪಿಂಗ್ ಎಂದರೆ ಬ್ಯಾಂಕ್ ಅಥವಾ ಅಂಚೆ ಉಳಿತಾಯ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಾಗಿದೆ.

ನಿರ್ದಿಷ್ಟ ಬ್ಯಾಂಕ್ ಅಥವಾ ಅಂಚೆ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿದ ಆಯಾ ಬ್ಯಾಂಕ್ (ಅಂಚೆ ಖಾತೆಗೆ ನೇರ ಲಾಭ ವರ್ಗಾವಣೆಗೆ ಗ್ರಾಹಕರು ಒಪ್ಪಿಗೆ ನೀಡಿ ನೇರ ಪ್ರಯೋಜನಗಳನ್ನು ಪಡೆಯುವುದಾಗಿದೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಈವರೆಗೆ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳದಿದ್ದಲ್ಲಿ ಸೆಪ್ಟೆಂಬರ್ 30 ರ ಒಳಗಾಗಿ ಪಿಂಚಣಿ ಪಡೆಯಲು ಬ್ಯಾಂಕ್/ಅಂಚೆ ಖಾತೆ ಹೊಂದಿರುವ ಬ್ಯಾಂಕ್/ ಅಂಚೆ ಕಚೇರಿಗೆ ಸಂಪರ್ಕಿಸಿ ತಕ್ಷಣವೇ ಇ-ಕೆವೈಸಿ [ಆಧಾರ್ ಜೋಡಣೆ] ಪ್ರಕ್ರಿಯೆಯ ಜೊತೆಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಕೊಳ್ಳಬೇಕು.

ಈಗಾಗಲೇ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆಯಾಗಿದ್ದು, ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಬ್ಯಾಂಕ್/ಅಂಚೆ ಕಛೇರಿಗೆ ಭೇಟಿ ನೀಡಿ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ/ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡದಿದ್ದಲ್ಲಿ ಪ್ರಸಕ್ತ ಸಾಲಿನ ಅಕ್ಟೋಬರ್ ಮಾಹೆಯಿಂದ ಪಿಂಚಣಿ ಪಾವತಿ ಸ್ಥಗಿತಗೊಳ್ಳುವುದು. ಆದ್ದರಿಂದ ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆಯನ್ನು ಕಡ್ಡಾಯವಾಗಿ ಮಾಡುವಂತೆ ಪ್ರಕಟಣೆ ತಿಳಿಸಿದೆ.

Categories
ತೀರ್ಥಹಳ್ಳಿ

ಶ್ರೀ ಕಲ್ಪವೃಕ್ಷ ಸೊಸೈಟಿ ಸರ್ವ ಸದಸ್ಯರ ಸಭೆ

ಶ್ರೀ ಕಲ್ಪವೃಕ್ಷ ಸೊಸೈಟಿ ಸರ್ವ ಸದಸ್ಯರ ಸಭೆ
– ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
– 13 ಲಕ್ಷಕ್ಕೂ ಹೆಚ್ಚು ಲಾಭ ಗಳಿಸಿದ ಸಂಘ
– ಶ್ರೀಧರಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆ

NAMMUR EXPRESS NEWS
ತೀರ್ಥಹಳ್ಳಿ : ಶ್ರೀ ಕಲ್ಪವೃಕ್ಷ ಪತ್ತಿನ ಸಹಕಾರ ಸಂಘದ 2022- 23ನೇ ಸಾಲಿನ ಸರ್ವ ಸದಸ್ಯರ ಸಭೆಯು ಶುಕ್ರವಾರ ತೀರ್ಥಹಳ್ಳಿಯ ಬಂಟರ ಭವನದಲ್ಲಿ ಸಂಘದ ಅಧ್ಯಕ್ಷರಾದ ಇ ಎಸ್ ಶ್ರೀಧರಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಅತಿಥಿಗಳಾಗಿ ಲಯನ್ ಪಾಂಡುರಂಗಪ್ಪ, ಡಿಸಿಸಿ ಬ್ಯಾಂಕ್ ಮ್ಯಾನೇಜರ್ ರಾಮಚಂದ್ರ ಆಗಮಿಸಿದ್ದರು. ಕಾರ್ಯಕ್ರಮವನ್ನು ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕರು ಹಾಗೂ ಮುಖ್ಯ ಅತಿಥಿಗಳ ನಡುವೆ ಉದ್ಘಾಟನೆ ಮಾಡಲಾಯಿತು. ತದನಂತರ ಸಂಘದ ಆಗುಹೋಗುಗಳ ಬಗ್ಗೆ ಸಾಲ ಹಾಗೂ ಮರುಪಾವತಿ ಖರ್ಚು ವೆಚ್ಚದ ಬಗ್ಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸದಸ್ಯರೊಂದಿಗೆ ಚರ್ಚಿಸಿ ಸಲಹೆ ಸಹಕಾರ ಕೇಳಿ ಪಡೆದರು.

ಈ ವರ್ಷದಲ್ಲೇ ಸ್ವಂತ ಕಟ್ಟಡ ಹೊಂದಲು ಜಾಗ ಖರೀದಿ ವ್ಯವಸ್ಥೆ ಮಾಡಲಾಗುವುದು ಎಂದು ಸಂಘದ ಹಿರಿಯ ನಿರ್ದೇಶಕರಾದ ಮುಂಡಗಿಮನೆ ಲಕ್ಷ್ಮಣ್ ಹೇಳಿದರು. ಸಂಘದಲ್ಲಿ ಏಳು ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘಕ್ಕೆ ಈ ಬಾರಿ 13 ಲಕ್ಷಕ್ಕೂ ಹೆಚ್ಚು ಲಾಭ ದೊರೆತಿದ್ದು ಸಂಘದಲ್ಲಿ 971 ಸದಸ್ಯರಿದ್ದು, 1 ಕೋಟಿ 61 ಲಕ್ಷಕ್ಕೂ ಹೆಚ್ಚು ಸಾಲ ವಿತರಿಸಲಾಗಿದೆ. ಈ ವರ್ಷ ಸರ್ವ ಸದಸ್ಯರ ಸಭೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಪಾಲ್ಗೊಂಡು ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಇ.ಎಸ್ ಶ್ರೀಧರಮೂರ್ತಿ, ಉಪಾಧ್ಯಕ್ಷರಾದ ಸಿ.ಆರ್ ಮಂಜುನಾಥ್, ಲಯನ್ ಪಾಂಡುರಂಗಪ್ಪ, ಡಿಸಿಸಿ ಬ್ಯಾಂಕ್ ಮ್ಯಾನೇಜರ್ ರಾಮಚಂದ್ರ, ನಿರ್ದೇಶಕರುಗಳಾದ ಕೆ ಈಶ್ವರ್ ನಾಯ್ಕ್, ವಿಶಾಲ್ ಕುಮಾರ್, ಡಿ ಲಕ್ಷ್ಮಣ್, ಕೆಎಸ್ ಎನ್ ಮೂರ್ತಿ, ಬಿ.ಎಸ್ ಸುಬ್ರಹ್ಮಣ್ಯ, ಎಂ.ದಿನೇಶ್, ಜಿ ಶ್ರೀನಿವಾಸ್, ಕೆ ಎಲ್ ಪುಟ್ಟಸ್ವಾಮಿ, ರೂಪ ಉಮೇಶ್, ಅನಿತಾ ಕಾಂತಪ್ಪ, ಕಾರ್ಯದರ್ಶಿ ಕು. ಸೌಖ್ಯ ಎಚ್ ವೈ, ಸಹಾಯಕಿ ಅನನ್ಯ ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Categories
ಶಿವಮೊಗ್ಗ

ಗಮನ ಸೆಳೆದ ರಿಪ್ಪಿನಪೇಟೆ ಹಿಂದೂ ಮಹಾಸಭಾ ಗಣಪತಿ!

ಗಮನ ಸೆಳೆದ ರಿಪ್ಪಿನಪೇಟೆ ಹಿಂದೂ ಮಹಾಸಭಾ ಗಣಪತಿ!
– ಹೊಸನಗರದ ಪ್ರಮುಖ ಗಣಪತಿ ಉತ್ಸವದಲ್ಲಿ ಒಂದು
– ಹರತಾಳು ಹಾಲಪ್ಪ ಮತ್ತು ಮೂಲೆಗದ್ದೆ ಶ್ರೀಗಳ ಪೂಜೆ

NAMMUR EXPRESS NEWS
ರಿಪ್ಪನ್‌ಪೇಟೆ: ಹೊಸನಗರ ತಾಲೂಕು ರಿಪ್ಪಿನಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 56ನೇ ಗಣೇಶೋತ್ಸವ ತಾಲೂಕಿನಲ್ಲೇ ಗಮನ ಸೆಳೆದಿದೆ. ಅತ್ಯುತ್ತಮ ಆಯೋಜನೆ ಮತ್ತು ಕಾರ್ಯಕ್ರಮದ ಮೂಲಕ ಗಮನ ಸೆಳೆದಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.

ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 56ನೇ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನಾಗರಾಜ ಪವಾರ್, ಎಂ.ಬಿ.ಮಂಜುನಾಥ, ಎಂ.ಸುರೇಶ್‌ಸಿಂಗ್, ಪಿ.ರಮೇಶ್, ವೈ.ಜೆ.ಕೃಷ್ಣ, ಈಶ್ವರಪ್ಪಗೌಡ ಗವಟೂರು, ಮೆಣಸೆ ಆನಂದ, ಸುಂದರೇಶ್, ಜಿ.ಡಿ.ಮಲ್ಲಿಕಾರ್ಜುನ, ಕೆ.ವಿ.ಲಿಂಗಪ್ಪ, ಗ್ರಾ.ಪಂ.ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಮಳಕೊಪ್ಪ ಈಶ್ವರ, ಮೀನಾಕ್ಷಮ್ಮ ಶಿವಾನಂದಪ್ಪಗೌಡ, ಅಖಿಲ ಭಾರತ ವೀರಶೈವ ಸಮಾಜದ ಮಹಿಳಾ ಘಟಕದ ತಾಲ್ಲೂಕು ಆಧ್ಯಕ್ಷೆ ಯಶೋಧ ಈಶ್ವರಪ್ಪಗೌಡ, ವೈ.ಜೆ.ಭಾಸ್ಕರ್, ಸೂರ್ಯಗೌಡ, ನವೀನ್, ನಾಗರಾಜ, ಯೋಗೀಶ್, ಎಸ್.ದಾನಪ್ಪ, ಲಕ್ಷ್ಮಣ ಬಳ್ಳಾರಿ ಇನ್ನಿತರರು ಹಾಜರಿದ್ದರು.

Categories
ರಾಜಕೀಯ ರಾಜ್ಯ ರಾಷ್ಟ್ರೀಯ ವಾರ್ತೆ

ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ

ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ
– ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ. ನಡ್ದಾ ಘೋಷಣೆ
– ಕುಮಾರಸ್ವಾಮಿ, ದೇವೇಗೌಡರಿಂದ ನಾಯಕರ ಭೇಟಿ

NAMMUR EXPRESS NEWS
ನವದೆಹಲಿ: ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ. ನಡ್ದಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಘೋಷಣೆ ಆಗಿದೆ. ದೆಹಲಿಯಲ್ಲಿ ನಡ್ದಾ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಈ ನಾಯಕರ ಜತೆ ಕುಮಾರಸ್ವಾಮಿ, ದೇವೇಗೌಡರು ಮಾತುಕತೆ ನಡೆಸಿದ ಬಳಿಕ ಈ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮಣಿಸಲು ಬಿಜೆಪಿ ಜೆಡಿಎಸ್ ಒಂದಾಗಿ ಹೋರಾಟಕ್ಕೆ ವೇದಿಕೆ ಸಿದ್ಧಮಾಡಿಕೊಂಡಿವೆ. ಮಂಡ್ಯ, ಹಾಸನ, ಮೈಸೂರು ಭಾಗದ ಮೇಲೆ ಜೆಡಿಎಸ್ ಕಣ್ಣಿಟ್ಟಿದ್ದು ರಾಜ್ಯದ ಮತ್ತೆಲ್ಲಾ ಕಡೆ ಜೆಡಿಎಸ್ ಈ ಬಾರಿ ಬಿಜೆಪಿಗೆ ಬೆಂಬಲ ನೀಡಲಿದೆ.

Categories
ಹವಾಮಾನ ಸುದ್ದಿ

ನಾಲ್ಕು ವಾರ ಮಳೆ ಅಲರ್ಟ್!

ನಾಲ್ಕು ವಾರ ಮಳೆ ಅಲರ್ಟ್!
– ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
– ಮಲೆನಾಡು, ಕರಾವಳಿ ಸೇರಿ ಎಲ್ಲಾ ಕಡೆ ಮಳೆ

NAMMUR EXPRESS NEWS
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಇನ್ನು ಸೆಪ್ಟೆಂಬರ್ ತಿಂಗಳು ಆರಂಭದಿಂದ ಇಲ್ಲಿಯವರೆಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಆಗಾಗ ಮಳೆ ಸುರಿಯುತ್ತಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇನ್ನು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಕರ್ನಾಟಕದ ಮುಂದಿನ ನಾಲ್ಕು ವಾರಗಳ ಹವಾಮಾನ ವರದಿ ನೀಡಿದ್ದು, ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.

ಮುಂದಿನ ನಾಲ್ಕು ವಾರಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗ್ನೇಯ ಭಾರತದಿಂದ ನೈಋತ್ಯ ಮಾನ್ಸೂನ್ ಮುಂದಿನ ವಾರದಿಂದ ಚಲಿಸಲಿದೆ. ಅಕ್ಟೋಬರ್ 2 ರಿಂದ ಮಧ್ಯಭಾರತದಿಂದ ಸಾಗಲಿದೆ. ಅಕ್ಟೋಬರ್ ಕೊನೆಯ ವಾರದವರೆಗೆ ರಾಜ್ಯದಲ್ಲಿ ಮಳೆ ಇರಲಿದ್ದು, ನಂತರ ಮುಂಗಾರು ಮುಕ್ತಾಯವಾಗಲಿದೆ ಎಂದು ಹೇಳಿದೆ. ಅಕ್ಟೋಬರ್ ತಿಂಗಳ ಮೊದಲ ಮೂರು ವಾರಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾದರೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

3 ದಿನ ಭಾರೀ ಮಳೆ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರಕ್ಕೂ ಮಳೆ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪಶ್ಚಿಮ ಭಾಗದಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.