Categories
ಅಡಿಕೆ-ದರ

ಅಡಿಕೆ ದರ ಎಷ್ಟಿದೆ… ? 04-09-2023

ಅಡಿಕೆ ದರ ಎಷ್ಟಿದೆ…?
04-09-2023

ಸರಕು : 60009-80009
ಬೆಟ್ಟೆ : 49009-51199
ರಾಶಿ ಇಡಿ : 45569-49099
ಗೊರಬಲು :34009-37049

ಮಾಹಿತಿ :  ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘ ನಿ., ತೀರ್ಥಹಳ್ಳಿ

Categories
ಉಡುಪಿ

ವಿದ್ಯಾಭಾರತಿ ಕರ್ನಾಟಕದಿಂದ ಕ್ರೀಡಾಕೂಟ

ವಿದ್ಯಾಭಾರತಿ ಕರ್ನಾಟಕದಿಂದ ಕ್ರೀಡಾಕೂಟ
– ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು ಹೆಬ್ರಿಯಲ್ಲಿ ಆಯೋಜನೆ
– ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡ ಕ್ರೀಡಾಪಟುಗಳು

NAMMUR EXPRESS NEWS
ಉಡುಪಿ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟ 2023 ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು ಹೆಬ್ರಿ ಇಲ್ಲಿನ ಅಮೃತ ಭಾರತಿ ಕ್ರೀಡಾಂಗಣದಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷರು ಶ್ರೀ ಪಾಂಡುರಂಗ ಪೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ನಿವೃತ್ತ ಪ್ರಾಂಶುಪಾಲರು ವೈ ಎಂ ಸಿ ಎ ದೈಹಿಕ ಶಿಕ್ಷಣ ಕಾಲೇಜು ಬೆಂಗಳೂರು ಶ್ರೀ ವಾಸುದೇವ ಭಟ್ ಇವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಕ್ರೀಡಾಕೂಟದ ಧ್ವಜಾರೋಹಣವನ್ನು ಅಮೃತ ಭಾರತಿ ಟ್ರಸ್ಟಿನ ಸದಸ್ಯರು ಬಾಲಕೃಷ್ಣ ಮಲ್ಯ ಅವರು ಧ್ವಜಾರೋಹಣವನ್ನು ಮಾಡಿದರು.

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳಲ್ಲಿ 10 ಶಾಲೆಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಎಲ್ಲಾ ಶಾಲೆಗಳು ಪಥಸಂಚಲನದಲ್ಲಿ ಭಾಗವಹಿಸಿದವು. ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾಭಾರತಿ ಕರ್ನಾಟಕ ಜಿಲ್ಲೆಯ ಅಧ್ಯಕ್ಷರು ಶ್ರೀಯುತ ಪಾಂಡುರಂಗ ಪೈ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಅಮೃತ ಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಶ್ರೀಯುತ ಗುರುದಾಸ ಶೆಣೈ, ಅಮೃತ ಭಾರತಿ ವಸತಿ ನಿಲಯದ ಅಧ್ಯಕ್ಷರು ಶ್ರೀಯುತ ಯೋಗೀಶ್ ಭಟ್, ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷರು ಶ್ರೀಯುತ ಶೈಲೇಶ್ ಕಿಣಿ , ಅಮೃತ ಭಾರತಿ ಟ್ರಸ್ಟಿನ ಸದಸ್ಯರು ಸುಧೀರ್ ನಾಯಕ್, ಶ್ರೀ ಭಾಸ್ಕರ ಜೋಯಿಸ್ ಉಪಸ್ಥಿತರಿದ್ದರು .

ಮುಖ್ಯೋಪಾಧ್ಯಾಯಿನಿ ಅಪರ್ಣ ಆಚಾರ್ , ಶ್ರೀಮತಿ ಶಕುಂತಲ, ಅನಿತಾ ಶೆಟ್ಟಿ ವಿದ್ಯಾ ಕೇಂದ್ರದ ಪ್ರಾಂಶುಪಾಲರು ಅರುಣ್ ಸಿ,ವೈ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಅಮರೇಶ್ ಹೆಗಡೆ, ಕರ್ನಾಟಕ ಉಡುಪಿ ಜಿಲ್ಲೆಯ ಕ್ರೀಡಾಕೂಟ ಪ್ರಮುಖ್ ಉಷಾ ಶೆಟ್ಟಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ , ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ಒಟ್ಟು 347ವಿದ್ಯಾರ್ಥಿಗಳು , ಶಿಕ್ಷಕರು 82 ಮತ್ತು ಸಂಸ್ಥೆಯ ಬೋಧಕೇತರ ವರ್ಗದವರು ಭಾಗವಹಿಸಿದರು. ಜಿಲ್ಲಾಮಟ್ಟದಲ್ಲಿ ಪ್ರಥಮ ದ್ವಿತೀಯ ಬಹುಮಾನವನ್ನು ಪಡೆದವರು ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ನವಂಬರ್ 14, 15 ಮಾಧವ ವಿದ್ಯಾಲಯ ಮಂಡ್ಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸುವರು.

ಕಾರ್ಯಕ್ರಮದ ನಿರೂಪಣೆಯನ್ನು ವಿಮಲಾ ಮಾತಾಜಿ ಮತ್ತು ಜಿಲ್ಲಾ ಶಾರೀರಿಕ ಪ್ರಮುಖವಿಜಯಕುಮಾರ್ ಶೆಟ್ಟಿ, ಧನ್ಯವಾದ ದೈಹಿಕ ಶಿಕ್ಷಣ ಶಿಕ್ಷಕರು ನಿಶಾನ್ , ಸ್ವಾಗತ ಅಮೃತ ಭಾರತಿ ವಿದ್ಯಾ ಕೇಂದ್ರ ದೈಹಿಕ ಶಿಕ್ಷಣ ಶಿಕ್ಷಕರು ಶ್ರೀ ರವೀಂದ್ರ ಶೆಟ್ಟಿ ಮಾಡಿದರು.

Categories
ರಾಜ್ಯ

ರಾಜ್ಯದ ಜನತೆಗೆ ಕರೆಂಟ್ ಶಾಕ್’.!

ರಾಜ್ಯದ ಜನತೆಗೆ ಕರೆಂಟ್ ಶಾಕ್’.!
– ತೀವ್ರ ವಿದ್ಯುತ್ ಕೊರತೆಯಿಂದ ಅಘೋಷಿತ ಲೋಡ್ ಶೆಡ್ಡಿಂಗ್!

NAMMUR EXPRESS NEWS
ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿದ್ಯುತ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ಇಂಧನ ಇಲಾಖೆಯು ರಾಜ್ಯಾದ್ಯಂತ ಅನಧಿಕೃತ ಲೋಡ್ ಶೆಡ್ಡಿಂಗ್ ಮುಂದುವರೆಸಿದೆ. ರಾಜ್ಯದ ನಿತ್ಯದ ವಿದ್ಯುತ್ ಬೇಡಿಕೆ 17 ಸಾವಿರ ಮೆಗಾ ವ್ಯಾಟ್ ಗೆ ತಲುಪಿದ ಪರಿಣಾಮ ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಬೇಡಿಕೆ ಹೆಚ್ಚಳ ಹಾಗೂ ಉತ್ಪಾದನೆ ಕೊರತೆಯಿಂದಾಗಿ ಪ್ರತಿನಿತ್ಯ ಗ್ರಿಡ್ ನಿಂದ ನಾಲ್ಕು ಸಾವಿರದಿಂದ 6 ಸಾವಿರ ಮೆಗಾ ವ್ಯಾಟ್ ನಷ್ಟು ಕಡಿಮೆ ವಿದ್ಯುತ್ ಪಡೆಯುವಂತೆ ಕೆಪಿಟಿಸಿಎಲ್ ಎಸ್ಕಾಂಗಳಿಗೆ ಸೂಚನೆ ನೀಡಿದೆ.

ರಾಜ್ಯದ ರೈತ ಸಮುದಾಯಕ್ಕೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 7 ಗಂಟೆ ಪೂರೈಕೆಯಾಗಬೇಕಿದ್ದ ವಿದ್ಯುತ್ 3 ಗಂಟೆಯೂ ಪೂರೈಕೆ ಆಗುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಸಂಜೆ 6 ಗಂಟೆಯಿಂದ 8 ಗಂಟೆವರೆಗೆ ನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Categories
ತೀರ್ಥಹಳ್ಳಿ

ಕೋಣಂದೂರು ಬಳಿ ಕೋಳಿ ಅಂಕದ ಮೇಲೆ ದಾಳಿ!

ಕೋಣಂದೂರು ಬಳಿ ಕೋಳಿ ಅಂಕದ ಮೇಲೆ ದಾಳಿ!
– 30ಕ್ಕೂ ಹೆಚ್ಚು ಕೋಳಿ ವಶ: ಮೂವರು ಅರೆಸ್ಟ್
– ಜೂಜು ಆಡಿಸುತ್ತಿದ್ದವರು ಪಾರಾಗಿದ್ದು ಹೇಗೆ..?
– ಸ್ಥಳೀಯರ ಆಕ್ರೋಶ: ಅವರನ್ನು ಬಂಧಿಸಲಾಗುತ್ತಾ?

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಕಟ್ಟೆಗದ್ದೆಯಲ್ಲಿ ಕೋಳಿ ಅಂಕದ ಅಡ್ಡೆ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ.
ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ಪೊಲೀಸರ ಮಿಂಚಿನ ಕಾರ್ಯಚರಣೆ ನಡೆಸಿ ಕೋಳಿ ಅಂಕದ ಮೇಲೆ ದಾಳಿ ಮಾಡಿ 30ಕ್ಕೂ ಹೆಚ್ಚು ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ. ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರಾಮಚಂದ್ರ, ವಿಜಯ್, ರಮೇಶ್ ಎಂಬುವರನ್ನು ಅರೆಸ್ಟ್ ಮಾಡಲಾಗಿದೆ.

ಮುಖ್ಯ ಆರೋಪಿಗಳು ಪಾರಾದ್ರಾ?

ಪ್ರಕರಣದಲ್ಲಿ ಮುಖ್ಯ ಆರೋಪಿಗಳನ್ನು ಬಚಾವ್ ಮಾಡಲಾಗಿದೆಯಾ ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೋಳಿ ಅಡ್ಡೆ ಜಾಗ ಕೊಟ್ಟವರು ಹಾಗೂ ಆಟ ಆಡಿಸುತ್ತಿದ್ದವರ ಹೆಸರು ಎಲ್ಲೂ ಕಾಣುತ್ತಿಲ್ಲ ಎಂಬ ಆರೋಪ ಮಾಡಲಾಗಿದೆ. ಮುಖ್ಯ ಆರೋಪಿಗಳನ್ನು ಬಂಧಿಸದಿದ್ರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ಆರೋಪಿಗಳು ಬೀಟೆ ನಾಟ ಸೇರಿದಂತೆ ಹಲವು ಪ್ರಕರಣದಲ್ಲಿ ಇದ್ದರು ಎಂದು ಹೇಳಲಾಗಿದೆ.

ಕಾಲೇಜು ಹುಡುಗರು, ಯುವಕರೇ ಟಾರ್ಗೆಟ್

ಕೋಳಿ ಅಂಕಕ್ಕೆ ಯುವಕರು, ಕಾಲೇಜು ಹುಡುಗರು ದುಡ್ಡು ಸುರಿಯುವುದಲ್ಲದೆ ತಮ್ಮ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Categories
ಶಿವಮೊಗ್ಗ

ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ.

ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ.
– ಕಾರ್ಖಾನೆಯ ಕುರಿತು ಸೆ. 6 ರಂದು ಬೆಂಗಳೂರಿನಲ್ಲಿ ಸಭೆ
-ಸ್ಥಗಿತಗೊಂಡಿದ್ದ ವಿಐಎಸ್ಎಲ್ ಕಾರ್ಖಾನೆಗೆ ಮರುಜೀವ ಸಿಕ್ಕಿದೆ.

ಭದ್ರಾವತಿ : ಭದ್ರಾವತಿ ಪಟ್ಟಣದ ಎರಡು ಕಣ್ಣುಗಳೆಂದೇ ಕರೆಯಲಾಗುತ್ತಿದ್ದ, ಆರ್ಥಿಕತೆಯ ಜೀವನಾಡಿಗಳಾದ, ರಾಜ್ಯದ ಪ್ರಮುಖ ಕೈಗಾರಿಕೆಗಳಾದ ಕೇಂದ್ರ ಸರ್ಕಾರಿ ಸ್ವಾಮ್ಯದ ವಿಐಎಸ್ಎಲ್ (ವಿಶ್ವೇಶ್ವರಯ್ಯ ಕಬ್ಬಿಣ ಉಕ್ಕಿನ ಕಾರ್ಖಾನೆ) ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಎಂಪಿಎಂ (ಮೈಸೂರು ಕಾಗದ ಕಾರ್ಖಾನೆ) ಮತ್ತೇ ಗತ ವೈಭವದತ್ತ ಮರಳುವ ಲಕ್ಷಣಗಳು ಗೋಚರವಾಗುತ್ತಿವೆ.

ಸ್ಥಗಿತಗೊಂಡಿದ್ದ ವಿಐಎಸ್ಎಲ್ ಕಾರ್ಖಾನೆಗೆ ಇತ್ತೀಚೆಗಷ್ಟೆ ಮರುಜೀವ ಸಿಕ್ಕಿದೆ. ಎನ್.ಆರ್.ಎಂ ಘಟಕದಲ್ಲಿ ಉಕ್ಕು ಉತ್ಪಾದನೆಗೆ ಚಾಲನೆ ದೊರೆತಿದೆ. ಇದರ ಬೆನ್ನಲ್ಲೇ, ಇದೀಗ ಕಳೆದ 8 ವರ್ಷಗಳಿಂದ ಸ್ಥಗಿತಗೊಂಡಿರುವ ಎಂಪಿಎಂ ಕಾರ್ಖಾನೆ ಪುನಾರಾರಂಭದ ನಿರೀಕ್ಷೆಗಳು ಗರಿಗೆದರಲಾರಂಭಿಸಿವೆ. ಇದಕ್ಕೆ ಪೂರಕವೆಂಬಂತೆ ರಾಜ್ಯ ಸರ್ಕಾರವು ಕಾರ್ಖಾನೆ ಆರಂಭಕ್ಕೆ ಉತ್ಸುಕತೆ ತೋರಲಾರಂಭಿಸಿದೆ. ಸೆ. 6 ರಂದು ಬೆಳಿಗ್ಗೆ 11.30 ಕ್ಕೆ ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ, ಕಾರ್ಖಾನೆಯ ಸ್ಥಿತಿಗತಿಯ ಕುರಿತಂತೆ ಚರ್ಚಿಸಲು ಸಭೆ ಕರೆಯಲಾಗಿದೆ. ಇದು ಸಹಜವಾಗಿಯೇ ಕಾರ್ಮಿಕರ ವಲಯದಲ್ಲಿ ಹೊಸ ನಿರೀಕ್ಷೆಗಳು ಹುಟ್ಟು ಹಾಕುವಂತೆ ಮಾಡಿದೆ. ನಷ್ಟದ ಕಾರಣದಿಂದ ಎಂಪಿಎಂ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ರೂಪಿಸಿ ಸ್ವಯಂ ನಿವೃತ್ತಿ ನೀಡಲಾಗಿತ್ತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ವಿಐಎಸ್ಎಲ್, ಎಂಪಿಎಂ ಕಾರ್ಖಾನೆಗಳ ಪುನಾರಾರಂಭಕ್ಕೆ ಕ್ರಮಕೈಗೊಳ್ಳುವ ಭರವಸೆಯನ್ನು ಆ ಪಕ್ಷದ ಮುಖಂಡರು ನೀಡಿದ್ದರು.

Categories
ಬೆಂಗಳೂರು

ಬೇಳೂರು ಶಾಸಕರ ಕೊಠಡಿ ನಂಬರ್ 111

ಬೇಳೂರು ಶಾಸಕರ ಕೊಠಡಿ ನಂಬರ್ 111
– ಬೆಂಗಳೂರಿನಲ್ಲಿ ಶಾಸಕರ ಕೊಠಡಿ ಉದ್ಘಾಟನೆ
– ಪತ್ನಿ,ಪುತ್ರಿ ಸೇರಿದಂತೆ ಸಿಬ್ಬಂದಿ ಹಾಜರ್
– ಮಗಳ ಮದುವೆ ಬಳಿಕ ಮತ್ತೊಂದು ಕಾರ್ಯಕ್ರಮ

NAMMUR EXPRESS NEWS
ಬೆಂಗಳೂರು: ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಬೆಂಗಳೂರಿನ ಶಾಸಕರ ಭವನದಲ್ಲಿ ತಮ್ಮ ಕಛೇರಿ ಕೊಠಡಿ ಸಂಖ್ಯೆ 111 ರ ಪೂಜೆಯನ್ನು ಕುಟುಂಬ ಸಮೇತರಾಗಿ ನೆರವೇರಿಸಿದರು. ಈ ವೇಳೆ ಸಿಬ್ಬಂದಿ ಇದ್ದರು.
ಸಾಗರ ಕ್ಷೇತ್ರದ ಅನೇಕರು ತೆರಳಿದ್ದರು. ಕಳೆದ ತಿಂಗಳಷ್ಟೇ ಮಗಳ ಮದುವೆಯನ್ನು ಸಂಭ್ರಮದಿಂದ ಗೋಪಾಲ ಕೃಷ್ಣ ಅವರು ನೆರವೇರಿಸಿದ್ದರು.

Categories
ಬೆಂಗಳೂರು

ಮಾಜಿ ಸಿಎಂ ಹೆಚ್ ಡಿಕೆ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ

ಮಾಜಿ ಸಿಎಂ ಹೆಚ್ ಡಿಕೆ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ
– ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್
– ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ

NAMMUR EXPRESS NEWS
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅನಾರೋಗ್ಯ, ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಬೆಳಗ್ಗೆ ಅಥವಾ ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಿ ನಂತರ ವೈದ್ಯರು ವಾರ್ಡ್ ಗೆ ಶಿಫ್ಟ್ ಮಾಡಿದ್ದರು. ಭಾನುವಾರ ಹೆಚ್ ಡಿ ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಮನೆಗೆ ಹೋದ ಬಳಿಕ ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಪ್ರವಾಸ ಮಾಡಬಾರದು, ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Categories
ಮಂಗಳೂರು

SDPI ಹೆಸರಿನಲ್ಲಿ ನಕಲಿ ಫೇಸ್ಬುಕ್ ಪೇಜ್ ಅಡ್ಮಿನ್ ಮೇಲೆ ಜಿಲ್ಲಾಧ್ಯಕ್ಷರಿಂದ ದೂರು

SDPI ಹೆಸರಿನಲ್ಲಿ ನಕಲಿ ಫೇಸ್ಬುಕ್ ಪೇಜ್ ಅಡ್ಮಿನ್ ಮೇಲೆ ಜಿಲ್ಲಾಧ್ಯಕ್ಷರಿಂದ ದೂರು
– ilsupport ಪೇಸ್ ಬುಕ್ ಪೇಜ್ ಮೇಲೆ ಪೊಲೀಸ್ ದೂರು

NAMMUR EXPRESS NEWS – ಮಂಗಳೂರು : SDPIನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅದ ಅನ್ವ ಸಾದತ್ ಬಜತ್ತೂರು ಅವರು ಪಾಂಡೇಶ್ವರ ಠಾಣೆಯಲ್ಲಿ “ilsupport “ಹೆಸರಿನಲ್ಲಿ ನಕಲಿ ಫೇಸ್ಬುಕ್ ಪೇಜ್ ಖಾತೆ ತೆರೆದ ಅಡ್ಮಿನ್ ಮೇಲೆ ದೂರು ನೀಡಿದ್ದರೆ ಕಿಡಿಗೇಡಿಗಳು ಪಕ್ಷದ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಪೇಜ್ ಒಂದನ್ನು ರಚಿಸಿ ಅದರಲ್ಲಿ ಪಕ್ಷದ ಕೆಲವು ಕಾರ್ಯಚಟುವಟಿಕೆಗಳ ವೀಡಿಯೋಗಳನ್ನು ಅಪ್ಲೋಡ್ ಮಾಡುವುದರೊಂದಿಗೆ ಅಶ್ಲೀಲ ವೀಡಿಯೋಗಳನ್ನು ನಿರಂತರವಾಗಿ ಅಪ್ಲೋಡ್ ಮಾಡುವ ಮೂಲಕ ಸಮಾಜದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆಯುಂಟು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದೆ.

ಈಗಾಗಲೇ ಪಾಂಡೇಶ್ವರ ಠಾಣೆಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದಾರೆ. ಆ ಬಳಿಕ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರನ್ನು ಜಿಲ್ಲಾವಿಯೊಳಗವು ಚೀಟಿಯಾಗಿ ಈ ವಿಚಾರದಲ್ಲಿ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಆಯುಕ್ತರು ಹಾಗೂ ಪಾಂಡೇಶ್ವರ ಠಾಣೆಯ ಸಬ್ ಇನ್ಸೆಕ್ಟರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

Categories
ಉದ್ಯೋಗ ಸುದ್ದಿ

NITM ಬೆಳಗಾವಿಯಲ್ಲಿ ಉದ್ಯೋಗವಕಾಶ.!

NITM ಬೆಳಗಾವಿಯಲ್ಲಿ ಉದ್ಯೋಗವಕಾಶ.!
– ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ!
– ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ

NAMMUR EXPRESS NEWS
ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM)
ವೇತನ ಶ್ರೇಣಿ: 18,000 ರಿಂದ 56,900 ರೂ.
ಉದ್ಯೋಗ ಸ್ಥಳ: ಬೆಳಗಾವಿ
ಶೈಕ್ಷಣಿಕ ಅರ್ಹತೆ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ITI ಪೂರ್ಣಗೊಳಿಸಿರಬೇಕು.
ವಯೋಮಿತಿ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

ಎಸ್ ಸಿ /ಎಸ್ ಟಿ /ಪಿಡಬ್ಲ್ಯೂ ಡಿ /ಮಹಿಳೆ/ಮಾಜಿ ಸೈನಿಕ ಅಭ್ಯರ್ಥಿಗಳು: ಶುಲ್ಕ ಇಲ್ಲ, ಇತರೆ ಎಲ್ಲಾ ಅಭ್ಯರ್ಥಿಗಳಿ: 300 ರೂ., ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ- ದೃಢೀಕರಿಸಿದ ದಾಖಲೆಗಳೊಂದಿಗೆ ಡೈರೆಕ್ಟರ್ , ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರಡಿಷನಲ್ ಮೆಡಿಸಿನ್ , ನೆಹರು ನಗರ್ , ಬೆಳಗಾವಿ – 590010 ಇವರಿಗೆ 20-09-2023 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-09- 2023
ಅಧಿಕೃತ ವೆಬ್ ಸೈಟ್: icmrnitm.res.in

Categories
ಬೆಂಗಳೂರು

ಇನ್ಮುಂದೆ ಯಾವುದೇ ಇಲಾಖೆಯ ವರ್ಗಾವಣೆ, ಪೋಸ್ಟಿಂಗ್ ಗೆ ಸಿಎಂ ಅನುಮತಿ ಕಡ್ಡಾಯ

ಇನ್ಮುಂದೆ ಯಾವುದೇ ಇಲಾಖೆಯ ವರ್ಗಾವಣೆ, ಪೋಸ್ಟಿಂಗ್ ಗೆ ಸಿಎಂ ಅನುಮತಿ ಕಡ್ಡಾಯ
– ರಾಜ್ಯ ಸರ್ಕಾರ ಖಡಕ್ ಆದೇಶ
– ಸರ್ಕಾರದ ಆದೇಶವನ್ನು ಚಾಚೂತಪ್ಪದೆ ಪಾಲಿಸುವಂತೆ ಸೂಚನೆ

NAMMUR EXPRESS NEWS
ಬೆಂಗಳೂರು : ಇನ್ಮುಂದೆ ಯಾವುದೇ ಇಲಾಖೆಯ ವರ್ಗಾವಣೆ, ಪೋಸ್ಟಿಂಗ್ ಗೆ ಸಿಎಂ ಅನುಮತಿ ಪಡೆಯುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಹೌದು, ರಾಜ್ಯ ಸರ್ಕಾರದ ಆದೇಶದ ಪ್ರಕಾರ,ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಯವರು ಯಾವುದೇ ಪುಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ ಎಂದು ತಿಳಿಸಿದೆ.

ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯತಕ್ಕದ್ದು ಎಂದು ಈ ಮೂಲಕ ಸೂಚಿಸಿದೆ. ಒಂದು ವೇಳ ಪೂರ್ವಾನುಮೋದನೆಯನ್ನು ಪಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಾ, ಸರ್ಕಾರದ ಸೂಚನೆಯನ್ನು ಚಾಚೂತಪ್ಪದೆ ಪಾಲಿಸತಕ್ಕದ್ದೆಂದು ಸ್ಪಷ್ಟಪಡಿಸಿದೆ.

2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ:01.06.2023 ರಿಂದ 03,07,2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶ ಹೊರಡಿಸಲಾಗಿದೆ.