ಮೀನು ಹಿಡಿಯಲು ಹೋದ ಯುವಕ ನದಿಗೆ ಬಿದ್ದು ಸಾವು!
– ತೀರ್ಥಹಳ್ಳಿ ತುಂಗಾ ನದಿಯಲ್ಲಿ ಘಟನೆ
– ತೀರ್ಥಹಳ್ಳಿಯಲ್ಲಿ ಹೆಚ್ಚಾಯ್ತು ನೀರಿನ ಸಾವು!
NAMMUR EXPRESS NEWS
ತೀರ್ಥಹಳ್ಳಿ : ತುಂಗಾ ನದಿಯ ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ಆಯತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ವಾರ ಪೊಲೀಸರು ಮತ್ತು ಸ್ಥಳೀಯರು ಸೇರಿ ಶವ ಹೊರ ತೆಗೆದಿದ್ದು, ಇದೀಗ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ತೀರ್ಥಹಳ್ಳಿ ಪಟ್ಟಣದ ಸಮೀಪದ ಬದನೆಹಿತ್ತು ಗ್ರಾಮದ ಕಮಲಾಕ್ಷ (33) ಮಧ್ಯಾನ್ಹ ತುಂಗಾ ನದಿಗೆ ಮೀನು ಹಿಡಿಯಲು ಹೋಗಿದ್ದಾನೆ. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು ಈಜಲು ಬರದೇ ಇದ್ದ ಕಾರಣ ಸಾವನ್ನಪ್ಪಿದ್ದಾನೆ.
ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ತೀರ್ಥಹಳ್ಳಿ ತುಂಗಾ ನದಿಯಲ್ಲಿ ಪದೇ ಪದೇ ಇಂತಹ ಘಟನೆ ನಡೆಯುತ್ತಿವೆ. ಈ ಬಗ್ಗೆ ಜನತೆ ಎಚ್ಚರ ವಹಿಸಬೇಕಿದೆ.
