Categories
ಉಡುಪಿ ಕರಾವಳಿ

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರವಿ ಶಂಕರ್ ಗುರೂಜಿ!

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರವಿ ಶಂಕರ್ ಗುರೂಜಿ!
– ಶ್ರೀಮಠದ ಗೌರವವನ್ನು ಸ್ವೀಕರಿಸಿ ಅಭಿನಂದನೆ

NAMMUR EXPRESS NEWS
ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಸುಗುಣೇಂದ್ರ ತೀರ್ಥರ ಶ್ರೀಪಾದರ ಆಹ್ವಾನದ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಆಧ್ಯಾತ್ಮ ಗುರು ಶ್ರೀರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಪಡೆದಿದ್ದಾರೆ ಬಳಿಕ ನಡೆದ ಸಭೆಯಲ್ಲಿ ಶ್ರೀಮಠದ ಗೌರವವನ್ನು ಸ್ವೀಕರಿಸಿ ಶ್ರೀಪಾದರ ಭಗವದ್ಗೀತಾ ಅಭಿಯಾನವನ್ನು ಮುಕ್ತವಾಗಿ ಪ್ರಶಂಸಿಸಿ ವಿಶ್ವ ಕಲ್ಯಾಣವನ್ನು ಹಾರೈಸಿದರು. ಪೂಜ್ಯ ಪರ್ಯಾಯ ಶ್ರೀಪಾದರು ಶ್ರೀ ರವಿಶಂಕರ್ ಗುರೂಜಿಯವರ ಮತ್ತು ತಮ್ಮ ಆತ್ಮೀಯ ಸಂಬಂಧವನ್ನು ಸ್ಮರಿಸುತ್ತ ಅವರಿಂದ ಇನ್ನಷ್ಟು ಶಾಂತಿ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು. ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಿ ಗೀತಾರತಿಯನ್ನು ನೆರವೇರಿಸಿದರು. ಆಹಾರಗಳ ನಿಯಮ, ಅನುಷ್ಠಾನಗಳ ಆಚರಣೆ ಗಳಿಂದ ಯತಿಧರ್ಮದ ಕಠಿಣ ಆಚರಣೆಯನ್ನು ನಡೆಸುತ್ತಾ ಶ್ರೀಕೃಷ್ಣ ಮಂದಿರಗಳನ್ನು ಪ್ರತಿಷ್ಠಾಪಿಸಿ ದ್ದಾರೆ. ಕಳೆದ ನಲವತ್ತು ವರ್ಷಗಳ ಸುದೀರ್ಘವಾದ ಆತ್ಮೀಯತೆ ನಮ್ಮಿಬ್ಬರಲ್ಲಿ ದೃಢವಾಗಿದೆ. ಅವರ ಪರ್ಯಾಯವು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಹಾಗೂ ಕೋಟಿ ಗೀತಾ ಲೇಖನ ಯಜ್ಞದ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ ಎಂದು ಅಂತಾರಾಷ್ಟ್ರೀಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥರಾದ ಪೂಜ್ಯ ಶ್ರೀ ರವಿಶಂಕರ ಗುರೂಜಿ ಅವರು ತಿಳಿಸಿದರು.

ಅವರು ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಆಮಂತ್ರಣದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಶ್ರೀ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದಂಗಳವರು ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳ ವರು ಅತ್ಮೀಯವಾಗಿ ಬರಮಾಡಿಕೊಂಡರು. ಶ್ರೀಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.ದೇವರ ದರ್ಶನವನ್ನು ಮಾಡಿಸಿ ದೇವರ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರ್ಯಾಯ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀಸುಗುಣೇಂದ್ರತೀರ್ಥಶ್ರೀಪಾದರು ಶ್ರೀ ರವಿಶಂಕರ ಗುರೂಜಿ ಅವರಲ್ಲಿ ಶ್ರೀಕೃಷ್ಣನೇ ನಿಂತು ಅಮೋಘವಾದ ಕಾರ್ಯವನ್ನು ನಡೆಸುತ್ತಿದ್ದಾನೆ. ಅಪಾರ ಶಿಷ್ಯರನ್ನು ಹೊಂದಿರುವ ಶ್ರೀ ರವಿಶಂಕರ ಗುರೂಜಿ ಅವರು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ನಮ್ಮ ಉಪಾಸ್ಯನಾದ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಿಸಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಮಾನ್ಯ ಶಾಸಕರಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅನೇಕ ಭಕ್ತರು ಉಪಸ್ಥಿತರಿದ್ದರು

Categories
ತೀರ್ಥಹಳ್ಳಿ

ಶಿವಮೊಗ್ಗದಲ್ಲಿ ನಡೆಯಲಿದೆ ಗ್ಯಾರಂಟಿ ಸಭೆ!

ಶಿವಮೊಗ್ಗದಲ್ಲಿ ನಡೆಯಲಿದೆ ಗ್ಯಾರಂಟಿ ಸಭೆ!
– ಗ್ಯಾರಂಟಿ ಬಗ್ಗೆ ಅಪಹಾಸ್ಯ ಮಾಡಿದ ಬಿಜೆಪಿ ಈಗ ಗ್ಯಾರಂಟಿ ಕೊಡುತ್ತಿದೆ!
– ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಲೇವಡಿ

NAMMUR EXPRESS NEWS
ತೀರ್ಥಹಳ್ಳಿ: ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ದೊಡ್ಡ ಮಟ್ಟದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರವನ್ನು ಫೆ.24ರಂದು ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಗಾಂಧಿ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಪಲಾನುಭವಿಗಳು, ಸಾರ್ವಜನಿಕರು ಈ ಕಾರ್ಯಗಾರದಲ್ಲಿ ಪಾಲ್ಗೊಳ್ಳಬಹುದೆಂದರು. ಬಿಜೆಪಿ ಮೋದಿ ಜಪದಲ್ಲೇ ಲೋಕಸಭಾ ಚುನಾವಣೆ ಗೆದ್ದಹಾಗೇ ವಿಧಾನಸಭಾ ಚುನಾವಣೆಯನ್ನೂ ಗೆಲ್ಲಬಹುದೆಂಬ ಲೆಕ್ಕಾಚಾರ ಉಲ್ಟಾ ಆಗಿರುವುದನ್ನು ಜೀರ್ಣಿಸಿಕೊಳ್ಳಲಾಗುತ್ತಿಲ್ಲ.

ಬಿಜೆಪಿ ಪಕ್ಷದವರು ಸುಳ್ಳು ಕಾರ್ಡು ಕೊಟ್ಟಿದ್ದೀವಿ ಎಂದು ಕೇಸ್ ಹಾಕಿದ್ದರು. ನರೇಂದ್ರ ಮೋದಿ ಅವರು ಕೂಡ ಗ್ಯಾರೆಂಟಿಗಳ ಬಗ್ಗೆ ಅಪಹಾಸ್ಯ ಮಾಡಿದ್ದರು, ಆದರೆ ಈಗ ಮೋದಿ ಕೂಡ ಗ್ಯಾರಂಟಿ ನೀಡಲು ಮುಂದಾಗಿದ್ದಾರೆ. ಗ್ಯಾರೆಂಟಿ ಯೋಜನೆ ಬಡವರ್ಗದವರಿಗೆ ಅನುಕೂಲವಾಗುತ್ತದೆ. ಇದೊಂದು ಯಶಸ್ವಿ ಕಾರ್ಯಕ್ರಮ ಆಗಿದೆ ಎಂದರು. ಪಕ್ಷದ ಪ್ರಮುಖರಾದ ಕೆಸ್ತೂರ್ ಮಂಜುನಾಥ್, ಆದರ್ಶ್ ಹುಂಚಕಟ್ಟೆ, ಮುಡಬ ರಾಘವೇಂದ್ರ, ಅಮರನಾಥ್ ಶೆಟ್ಟಿ, ಡಿ.ಎಸ್.ವಿಶ್ವನಾಥ ಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಗೀತಾ ರಮೇಶ್, ಉಪಾಧ್ಯಕ್ಷರಾದ ರೆಹಮತ್ತುಲ್ಲಾ ಅಸಾದಿ ಹಾಗೂ ಪಕ್ಷದ ಪ್ರಮುಖರು ಇದ್ದರು.

Categories
ತೀರ್ಥಹಳ್ಳಿ ಶಿವಮೊಗ್ಗ

ಶಿಂಗನಬಿದಿರೆ ಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ

ಶಿಂಗನಬಿದಿರೆ ಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ
– ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥಾದೊಂದಿಗೆ ಅದ್ದೂರಿ ಸ್ವಾಗತ
– ಸಂವಿಧಾನದ ಬಗ್ಗೆ ಮಕ್ಕಳಿಗೆ ತಿಳುವಳಿಕೆ

NAMMUR EXPRESS NEWS
ಶಿಂಗನಬಿದಿರೆ ಗ್ರಾಮ ಪಂಚಾಯಿತಿಯಲ್ಲಿ ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷ ನಿಮಿತ್ತ ಸೋಮವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಶಿಂಗನಬಿದಿರೆ ಯಲ್ಲಿ ಜಾಗೃತಿ ಜಾಥಾ ವಾಹನವನ್ನು ಬ್ಯಾಂಡ್ ಸೆಟ್ ಮುಖಾಂತರ ಶಾಲಾ ಮಕ್ಕಳ ವೇಷಭೂಷಣ ಹಾಗೂ ಬಲೂನ್ ಮತ್ತು ರಾಷ್ಟ್ರಧ್ವಜಗಳನ್ನು ಒಳಗೊಂಡಂತೆ ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥಾದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನ ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನವೀನ್ ಆರ್ ಕುಳ್ಳುಂಡೆ ಅವರು ಉದ್ಘಾಟಿಸಿದರು. ಭಾಸ್ಕರ್ ಬಿ. ಎಮ್ ರವರು ಸರ್ವರನ್ನು ಸ್ವಾಗತಿಸಿದರು.

ನಾಗವೇಣಿ ಕೀಗಡಿ ಅವರು ನಿರೂಪಣೆಯನ್ನು ಮಾಡಿದರು. ತಳಲೆ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಕಾಶ್ ಅವರು ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಆಶಾಲತಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಮಕ್ಕಳು ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಿದರು. ಸಂವಿಧಾನದ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನ ನೀಡಲಾಯಿತು ಮತ್ತು ರಂಗೋಲಿ ಸ್ಪರ್ಧೆಯ ವಿಜೇತರಿಗೂ ಬಹುಮಾನವನ್ನು ನೀಡಲಾಯಿತು.

ಶಿಂಗನ ಬಿದರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಜಾತ, ಸದಸ್ಯರು ಸಂದೇಶ್ ಕೆ ಎನ್, ಶ್ರೀಮತಿ ಕುಸುಮ, ಅಭಿವೃದ್ಧಿ ಅಧಿಕಾರಿ ಭಾಸ್ಕರ್ ಬಿ.ಎಮ್, ಮುಖ್ಯ ಅತಿಥಿ ಮುಡುಬ ರಾಘವೇಂದ್ರ, ಕೀಗಡಿ ಕೃಷ್ಣಮೂರ್ತಿ, ಎನ್ ಆರ್ ಎಂ ಎಲ್ ಪ್ರತೀಕ್, ಸಿ ಆರ್. ಪಿ ಸರಸ್ವತಿ,ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತಿಯಲ್ಲಿದ್ದರು.ಗ್ರಾಮ ಪಂಚಾಯತಿ ಅಧ್ಯಕ್ಷರಾದ ನವೀನ್ ಕುಳ್ಳುಂಡೆ ಅವರು ಸಮಾರಂಭಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದಿಸಿದರು

Categories
ಮಲ್ನಾಡ್

ಟಾಪ್ ನ್ಯೂಸ್ ಮಲ್ನಾಡ್

– ಶಿಕಾರಿಪುರ: ಬಸ್‌ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು !
– ಮೂಡಿಗೆರೆ: 30 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು!
– ಶಿವಮೊಗ್ಗ: ಸ್ವಿಫ್ಟ್​ ಕಾರು , ಅಡಕೆಗೆ ಬೆಂಕಿ!
– ಹೊಸನಗರ: ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
– ಭದ್ರಾವತಿ: ಈಜಲು ಹೋಗಿ ಮೃತಪಟ್ಟ ವಿದ್ಯಾರ್ಥಿ
– ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ

NAMMUR EXPRESS NEWS
ಶಿಕಾರಿಪುರ : ಬಸ್‌ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್‌ಎಸ್‌ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ನಡೆದಿದೆ. ಆದಿತ್ಯ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ. ಬಸ್‌ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾನೆ. ಈ ವೇಳೆ ಬಸ್‌ನಲ್ಲಿದ್ದ ಶುಂಠಿ ಚೀಲಕ್ಕೆ ಎಡವಿ ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ವಿಠಲ ನಗರ ಗ್ರಾಮದ ಅಜ್ಜ ನಾಗಪ್ಪನವರ ಮನೆಯಲ್ಲಿದ್ದ ಆದಿತ್ಯ ಶಿಕಾರಿಪುರ ಶಾಲೆಗೆ ಹೋಗುತ್ತಿದ್ದ. ತಂದೆ, ತಾಯಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಆದಿತ್ಯ ಸಾವಿಗೆ ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು ತೀವ್ರ ಸಂತಾಪ ಸೂಚಿಸಿದ್ದಾರೆ.

30 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು!

ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರುವೊಂದು 30 ಅಡಿ ಆಳದ ಕಂದಕಕ್ಕೆ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಸಮೀಪದಲ್ಲಿ ನಡೆದಿದೆ. ಮೇಲಿಂದ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜು- ಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿ ಪ್ರವಾಸಿಗರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದರು. ಈ ವೇಳೆ ತಡೆಗೋಡೆ ಇಲ್ಲದ ಕಾರಣಕ್ಕೆ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ. ಹೀಗಾಗಿ ಏಕಾಏಕಿ ಕಾರು ಕಂದಕ್ಕೆ ಬಿದ್ದಿತ್ತು. ಬಣಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂದಕ್ಕೆ ಬಿದ್ದಿದ್ದ ಕಾರನ್ನು ಮೇಲೆತ್ತುವ ಕೆಲಸವನ್ನು ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಬೆಂಕಿ ಅನಾಹುತ: ಸ್ವಿಫ್ಟ್​ ಕಾರು , ಅಡಕೆಗೆ ಬೆಂಕಿ!

ಹುಂಡೈ ಶೋರೂಂನಲ್ಲಿ ಬೆಂಕಿ ಕಾಣಿಸಿದ ಘಟನೆ ಬೆನ್ನಲ್ಲೆ ಶಿವಮೊಗ್ಗದ ಮತ್ತೂರು ಮತ್ತೊಂದು ಅಗ್ನಿ ಆಕಸ್ಮಿಕದ ಘಟನೆ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಸ್ಥಳೀಯ ಗೋಡೌನ್​ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಲೆ ಬಾಳುವ ವಸ್ತುಗಳು ಸುಟ್ಟುಹೋಗಿವೆ. ಇಲ್ಲಿನ ನಿವಾಸಿ ಬಾಬಯ್ಯ ಎಂಬುವರಿಗೆ ಸೇರಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಅಲ್ಲಿ ನಿಲ್ಲಿಸಿದ್ದ ಸ್ವಿಫ್ಟ್ ಕಾರು, ಅಡಿಕೆ ಚೀಲಗಳು ಮತ್ತು ತೆಂಗಿನ ಕಾಯಿಗಳು ಬೆಂಕಿಗೆ ಆಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೀಗಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಈ ಸಂಬಂಧ ತುಂಗಾನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹೊಸನಗರ ಪಟ್ಟಣದ ಮಾವಿನಕೊಪ್ಪ ನಿವಾಸಿ 45 ರ ಹರೆಯದ ಕಾರ್ಪೆಂಟರ್ ವೃತ್ತಿ ಮಾಡುವ ರಾಘವೇಂದ್ರ ಆಚಾರ್ ಮಧ್ಯಾಹ್ನ ಸಾಗರ ರಸ್ತೆಯ ಕಳೂರು ಗ್ರಾಮದ ಅಕೇಶಿಯ ಪ್ಲಾಂಟೇಶನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ರಾಘವೇಂದ್ರ ಉತ್ತಮ ಮರಗೆಲಸ ಮಾಡುತ್ತಿದ್ದು ವಿವಾಹಿತನಾಗಿದ್ದು ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು ಬಳಗದವರನ್ನು ಹೊಂದಿದ್ದು ಆತನು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ತಾನು ಜೀವನದಲ್ಲಿ ಜಿಗುಪ್ಪೆ ಹೊಂದಿದ್ದು ನನ್ನ ಸಾವಿಗೆ ನಾನೇ ಕಾರಣ ನನ್ನ ದೇಹವನ್ನು ಯಾವು ದಾದರೂ ಆಸ್ಪತ್ರೆಗೆ ದಾನ ಮಾಡಿ ಎಂದು ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ. ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮ ಜರುಗಿಸಿ ಮುಂದಿನ ತನಿಖೆ ಕ್ರಮ ಕೈಗೊಂಡಿದ್ದಾರೆ.

ಭದ್ರಾ ಜಲಾಶಯದಲ್ಲಿ ಮುಳುಗಿ ವಿವಿಯ ವಿದ್ಯಾರ್ಥಿ ಸಾವು

ಶಂಕರಘಟ್ಟ : ಕುವೆಂಪು ವಿವಿಯ ಟೂರಿಸಂ ವಿಭಾಗದಲ್ಲಿ ದ್ವಿತೀಯ ವರ್ಷದಲ್ಲಿ ಓದುತಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಭದ್ರಾವತಿ ಮೂಲದ ವಿದ್ಯಾರ್ಥಿ ರಾಕೇಶ್ (23) ಭಾನುವಾರ ರಜೆ ಇದ್ದದ್ದರಿಂದ ಸ್ನೇಹಿತರೊಂದಿಗೆ ಈಜಲು ತೆರಳಿದ ಸಂದರ್ಭದಲ್ಲಿ ಭದ್ರ ಅಣೆಕಟ್ಟಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆ ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದ್ದು, ಸಂಜೆ 6 ಗಂಟೆಗೆ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಮೇಲಕ್ಕೆತ್ತಲಾಗಿದೆ. ಬಿಆರ್‌ಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆಭದ್ರಾ ನದಿ ಮತ್ತು ನಾಲೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನದಿ ಮತ್ತು ನಾಲೆ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಫೆ.26ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಹಾವೇರಿ ಮತ್ತು ಗದಗ ನಗರದ ಕುಡಿಯುವ ನೀರಿಗಾಗಿ ಫೆ.5ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತದೆ. ಆದರೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರೆ ಮಾಡಿ ನೀರು ತಲುಪಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ತಿಳಿಸಿದ್ದಾರೆ.

ನದಿ ಪಾತ್ರದಲ್ಲಿ 20 ಸಾವಿರಕ್ಕೂ ಹೆಚ್ಚು ಪಂಪ್‌ಸೆಟ್‌ಗಳನ್ನು ಹಾಕಿ ನೀರೆತ್ತಲಾಗುತ್ತಿದೆ. ಕೆಲವು ಕಡೆ ನದಿಗೆ ಅಡ್ಡಲಾಗಿ ಅನಧಿಕೃತವಾಗಿ ಮಣ್ಣಿನ ಏರಿ ನಿರ್ಮಿಸಿ ನೀರೆತ್ತಲಾಗುತ್ತದೆ. ಆದ್ದರಿಂದ ಹೊಳೆಯ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ಭದ್ರಾ ನದಿ ಮತ್ತು ಕಾಲುವೆಯಿಂದ ಅನಧಿಕೃತವಾಗಿ ಪಂಪ್‌ಸೆಟ್ ಬಳಸಿ ಹೊಲಕ್ಕೆ ನೀರು ಹಾಯಿಸುವುದು ನಿಷೇಧಿಸಲಾಗಿದೆ. ನದಿ ಮತ್ತು ಕಾಲುವೆ ಬಳಿ ಐದಕ್ಕಿಂತಲು ಹೆಚ್ಚು ಜನ ಗುಂಪು ಸೇರುವಂತ್ತಿಲ್ಲ. ನಿಷೇಧಾಜ್ಞೆ ವಿಧಿಸಿದ ಪ್ರದೇಶದಲ್ಲಿ ಘೋಷಣೆ ಕೂಗುವುದು, ಮಾರಕಾಸ್ತ್ರ ಹಿಡಿದು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.

Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ 25ನೇ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಸಂಭ್ರಮ

ತೀರ್ಥಹಳ್ಳಿಯಲ್ಲಿ 25ನೇ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಸಂಭ್ರಮ
– ಪ್ರಗತಿ ದಾರಿಯತ್ತ ಜಾಗೃತ ಮಹಿಳೆ ವಿಚಾರ ಸಂಕಿರಣ
– ಸ್ವ ಉದ್ಯೋಗದತ್ತ ಮಹಿಳೆಯರು: ಮೆಚ್ಚುಗೆ

NAMMUR EXPRESS NEWS
ತೀರ್ಥಹಳ್ಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ “ಪ್ರಗತಿ ದಾರಿಯತ್ತ ಜಾಗೃತ ಮಹಿಳೆ ” ವಿಷಯದ ಕುರಿತು ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಅನಿಲ್ ಕುಮಾರ್ಮುಖ್ಯ ನಿರ್ವಹಣಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ರಿ.ಧರ್ಮಸ್ಥಳ ಅವರು ಎಲ್ಲಾ ಮಹಿಳೆಯರಿಗೂ ಇಂದಿನ ಕಾಲದಲ್ಲಿ ಜಾಗೃತ ಗೊಳ್ಳಬೇಕು. ಮಹಿಳೆಯರು ಎಲ್ಲಾ ರಂಗಗಳಲ್ಲಿಯೂ ಇದ್ದು, ಹೇಮಾವತಿ ಅಮ್ಮನವರ ಪ್ರೀತಿಯ ಕಾಳಜಿಯ ಕಾರ್ಯಕ್ರಮ ಜ್ಞಾನ ವಿಕಾಸ ಇದನ್ನು ಶಾಶ್ವತವಾಗಿ ಗಟ್ಟಿಗೊಳಿಸಿ ಎಂದು ಎಲ್ಲಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಿಶೇಷ ಉಪನ್ಯಾಸದೊಂದಿಗೆ ಮಾರ್ಗದರ್ಶನ ನೀಡಿದರು. ಶಾಸಕ ಅರಗ ಜ್ಞಾನೇಂದ್ರ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ಸರಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ, ಇಂತಹ ಕಾರ್ಯಕ್ರಮಗಳಿಗೆ ಭಾಗವಹಿಸಿ.

ಇನ್ನಷ್ಟು ಮಾಹಿತಿ ಪಡೆದು ಸಬಲೀಕರಣ ಹೊಂದಬೇಕು ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ.ಜೀವಂದರ ಜೈನ್, ಮಾತೃಶ್ರೀ ಹೇಮಾವತಿ ಅಮ್ಮನವರ ಪ್ರೀತಿಯ ಕಾರ್ಯಕ್ರಮ ಜ್ಞಾನ ವಿಕಾಸ ಎಲ್ಲಾ ಮಹಿಳೆಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು. ಪ್ರಾದೇಶಿಕ ನಿರ್ದೇಶಕರರಾದ ಗೀತಾ ಮೇಡಂ ಇಂದಿನ ಮಹಿಳೆಯರು ಪ್ರಗತಿ ಹೊಂದಿದ್ದು ಇನ್ನಷ್ಟು ಜಾಗೃತಗೊಳ್ಳಬೇಕು, ಮೋಸ ವಂಚನೆಗೆ ಬಲಿಯಾಗದಿರಿ ಎಂದರು. ಎಂದು ಮಾರ್ಗದರ್ಶನ ನೀಡಿದರು. ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಅವರು ತಾಲೂಕಿನ 25ನೇ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಆಗಿದ್ದು ದಾಖಲಾತಿಯನ್ನೂ ಕೇಂದ್ರದ ಸದಸ್ಯರಿಗೆ ಹಸ್ತಾಂತರಿಸಿದರು.

ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಪದ್ಮಾವತಿ ಹೆಗ್ಗೋಡು ಸ್ವ ಉದ್ಯೋಗ ಮಾಡುತ್ತಿದ್ದು ಲಕ್ಷ್ಮಮ್ಮ ಮನೆ ಮದ್ದು ತಯಾರಿಸುತಿದ್ದು ಆಯ್ದ 2 ಹಿರಿಯ ಸದಸ್ಯರಿಗೆ ಗುರುತಿಸಿ ಮುಖ್ಯ ನಿರ್ವಹಣಾಧಿಕಾರಿಗಳು ಗೌರವಾರ್ಪಣೆ ಮಾಡಿದರು. ಕೇಂದ್ರದ ಸದಸ್ಯರಿಗೆ, ಪುಷ್ಪ ಗುಚ್ಛ ಕರಕುಶಲ ವಸ್ತುಗಳ ಸ್ಪರ್ದೆ ಹಮ್ಮಿಕೊಂಡಿದ್ದು, ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪಿಎಂ ದಿಶಾ ಪ್ರಮಾಣಪತ್ರವನ್ನು ಜ್ಞಾನ ವಿಕಾಸ ಕೇಂದ್ರದ ಓರ್ವ ಸದಸ್ಯರಿಗೆ ವಿತರಿಸಲಾಯಿತು. ವಿಶೇಷ ಮಂಜೂರಾತಿ ಆಗಿರುವ, ಸಂಪೂರ್ಣ ಸುರಕ್ಷಾ ಸಹಾಯಧನ.

ತುರ್ತು ಪರಿಹಾರ ನಿಧಿ. ಸಿಡ್ಬಿ ಸಮೃದ್ಧಿ ಯೋಜನೆಯ ಚೆಕ್ಅನ್ನು ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಅವರು ಹಾಗೂ ವೇದಿಕೆ ಮೇಲಿರುವ ಎಲ್ಲಾ ಗಣ್ಯರು ವಿತರಿಸಿದರು. ಆಪ್ತ ಸಮಾಲೋಚಕರಾದ ವಿನುತ ಮುರಳೀಧರ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸೊಪ್ಪುಗುಡ್ಡೆ ರಾಘವೇಂದ್ರ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಗೀತಾ ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ್, ತಾಲೂಕಿನ ಯೋಜನಾಧಿಕಾರಿ ಮಾಲತಿ ದಿನೇಶ್, ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ರತ್ನ ಮೈಪಾಲ್, ಸಮನ್ವಯಾಧಿಕಾರಿ ಪ್ರಮೀಳಾ ನಿರ್ವಹಿಸಿದ್ದು ಎಲ್ಲಾ ಮೇಲ್ವಿಚಾರಕರು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಸೇವಾ ಪ್ರತಿನಿಧಿಗಳು ಭಾಗವಹಿಸಿದರು. ನೂರಾರು ಮಂದಿ ಮಹಿಳೆಯರು ಭಾಗವಹಿಸಿದ್ದರು.

Categories
ಉಡುಪಿ ಮಂಗಳೂರು

ಕರಾವಳಿ ಟಾಪ್ ನ್ಯೂಸ್

ಕೊಲ್ಲೂರು ದೇಗುಲ ಹೆಸರಲ್ಲಿ ಮೋಸ: ಹಣ ಗೋಲ್ಮಾಲ್!
– ಆನ್ಲೈನ್ ಅಲ್ಲಿ ನಕಲಿ ಪೇಜ್ ರಚಿಸಿ ಹಣ ವಂಚನೆ
– ಹೂಡಿಕೆ ಮಾಡುವ ಹೆಸರಲ್ಲಿ ಲಕ್ಷಾಂತರ ಕನ್ನ!
– ಉಡುಪಿಯಲ್ಲಿ ನಡೆದೆ ಘಟನೆ
– ಅಕ್ರಮ ಗೋಮಾಂಸ ಮಾರಾಟ: ಅರೆಸ್ಟ್
– ಪೊಲೀಸ್ ಮೇಲೆ ಹಲ್ಲೆ: ಗೋಕರ್ಣದಲ್ಲಿ ಘಟನೆ

NAMMUR EXPRESS NEWS
ಮಂಗಳೂರು : ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್ ರಚಿಸಿ ವಂಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್‌ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ. ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ಮನವಿ ಮಾಡಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‌ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ.

ಹೀಗಾಗಿ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಲಕ್ಷಗಟ್ಟಲೆ ದುಡ್ಡು ಈ ಟ್ರಸ್ಟ್‌ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಉಡುಪಿ: ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ರಾತುಲ್‌ ಮುಂತಾಜಿ(29) ಎಂಬವರಿಗೆ ಡಿ.10ರಂದು ವಾಟ್ಸಾಪ್ ಗ್ರೂಪಿನಲ್ಲಿ ಸ್ಟಾಕ್ ಮಾರ್ಕೆಟಿಂಗ್ ಬಗ್ಗೆ ತಿಳಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೆಪಿಸಿದ್ದು, ವೆಬ್‌ಸೈಟ್ ಮೂಲಕ ಐಡಿಯನ್ನು ಕ್ರಿಯೇಟ್ ಮಾಡಿ ಹಣ ಹೂಡಿಕೆ ಮಾಡಲು ತಿಳಿಸಿದಂತೆ ಸಿದ್ರಾತುಲ್ ಜ.10ರಿಂದ ಜ.25ರoವರೆಗೆ ಒಟ್ಟು 15,90,000ರೂ. ಹೂಡಿಕೆ ಮಾಡಿದ್ದರು. ಹೂಡಿಕೆ ಮಾಡಿದ ಹಣದಲ್ಲಿ 1,20,000ರೂ. ಹಣವನ್ನು ವಾಪಾಸ್ಸು ತೆಗೆದು ಕೊಂಡಿದ್ದು, ಬಳಿಕ ಹೂಡಿಕೆ ಮಾಡಿದ 14,30,000ರೂ. ಹಣದ ಲಾಭಾಂಶವನ್ನು ಕೊಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಲಾಗಿದೆ.

ಅಕ್ರಮ ಗೋಮಾಂಸ ಮಾರಾಟ: ಪೊಲೀಸ್ ವಶಕ್ಕೆ

ಮೂಡಬಿದಿರೆ: ಕೋಲ್ಡ್ ಸ್ಟೋರೇಜ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ಧಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ ಕೋಲ್ಡ್ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದಾಗ ಅಲ್ಲಿ 10 ಕೆ.ಜಿ.ಯಷ್ಟು ದನದ ಮಾಂಸ ಪತ್ತೆಯಾಗಿದೆ. ಈ ಹಿಂದೆಯೂ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಇಸ್ಮಾಯಿಲ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ಪೊಲೀಸ್ ಮೇಲೆ ಹಲ್ಲೆ: ಗೋಕರ್ಣದಲ್ಲಿ ನಡೆದ ಘಟನೆ

ಗೋಕರ್ಣ: ಮಾದಕದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರನ್ನು ಬಿಹಾರದಪಲ್ಲವಿ ಪ್ರಿಯಾ (29) ಮತ್ತು ಜಾರ್ಖಂಡ್‌ನ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಗಳಾಗಿರುವ ಇವರು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿ ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾರೆ. ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ ಪೊಲೀಸರು ತಡೆದಾಗ ಮಹಿಳೆಯರು ಕಾನ್‌ಸ್ಟೆಬಲ್‌ಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್‌ಸ್ಟೆಬಲ್‌ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದರು. ಠಾಣೆಯಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿಯೂ ಮಹಿಳೆಯರು ಮತ್ತೆ ದಾಂಧಲೆ ಎಸಗಿದ್ದಾರೆ. ನಂತರ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪುಣ್ಯಕ್ಷೇತ್ರವಾದ ಗೋಕರ್ಣದಲ್ಲಿ ಡ್ರಗ್ಸ್ ಸೇವನೆ ಹಾಗೂ ಅಕ್ರಮ ಪಾರ್ಟಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಗೋಕರ್ಣದಲ್ಲಿ ಮಾದಕ ವಸ್ತು ಸೇವನೆ ಮತ್ತು ಗಲಾಟೆ ಸೃಷ್ಟಿಸಿದ ಮಹಿಳೆಯರನ್ನು ಬಂಧಿಸಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Categories
ತೀರ್ಥಹಳ್ಳಿ

ಹಾದಿಗಲ್ಲು ಗ್ರಾಮ ಪಂಚಾಯತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ

ಹಾದಿಗಲ್ಲು ಗ್ರಾಮ ಪಂಚಾಯತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ
– ಶಾಲಾ ಮಕ್ಕಳ ವೇಷಭೂಷಣ: ಸಂಭ್ರಮದ ಸ್ವಾಗತ
-ಅಂಬೇಡ್ಕರ್, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ

NAMMUR EXPRESS NEWS
ಹಾದಿಗಲ್ಲು ಗ್ರಾಮ ಪಂಚಾಯಿತಿಯಲ್ಲಿ ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷ ನಿಮಿತ್ತ ಶುಕ್ರವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಹಾದಿಗಲ್ಲು ಜಾಗೃತಿ ಜಾಥಾ ವಾಹನಗಳ ಮುಖಾಂತರ ಶಾಲಾ ಮಕ್ಕಳ ವೇಷಭೂಷಣ ಹಾಗೂ ಬಲೂನ್ ಮತ್ತು ರಾಷ್ಟ್ರಧ್ವಜಗಳನ್ನು ಒಳಗೊಂಡಂತೆ ಗ್ರಾಮ ಪಂಚಾಯಿತಿ ಆವರಣದವರೆಗೆ ಜಾಥಾದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಗಾಂಧೀ ಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಸಂತಿ ಶ್ರೀನಿವಾಸ್ ಅವರು ಉದ್ಘಾಟಿಸಿದರು.ಪಿ ಡಿ ಓ ಉಲ್ಲಾಸ್ ರವರು ಕಾರ್ಯಕ್ರಮವನ್ನು ಸ್ವಾಗತಿಸಿದರು.

ಉಪಾಧ್ಯಕ್ಷರು ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಿದರು. ಮತ್ತು ಸಮಾರಂಭದಲ್ಲಿದ್ದ ಗಣ್ಯರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ, ಚಿತ್ರಕಲೆ, ವೇಷಭೂಷಣ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಅಭಿನಂದನಾ ಪತ್ರ ಮತ್ತು ಬಹುಮಾನವನ್ನು ವಿತರಿಸಲಾಯಿತು .ರಮೇಶ್ ಮುಖ್ಯೋಪಾಧ್ಯಾಯರು ಹಿರಿಯ ಪ್ರಾಥಮಿಕ ಶಾಲೆ ಹಾದಿಗಲ್ಲು ಇವರು ವಂದನಾರ್ಪಣೆಯನ್ನ ಮಾಡಿದ್ದರು.

ಉಪಾಧ್ಯಕ್ಷರಾದ ರವಿಕುಮಾರ್ ಹೆಚ್. ಡಿ , ಸದಸ್ಯರಾದ ಶ್ರೀಧರ್, ನವೀನ್ ಕುಮಾರ್ ಮತ್ತು ಕಮಲಾಕ್ಷಮ್ಮ, ಶ್ವೇತಾ ಕಾರ್ಯನಿರ್ವಾಹಣಾ ಅಧಿಕಾರಿ ತಾಲೂಕು ಪಂಚಾಯತ್ ತೀರ್ಥಹಳ್ಳಿ ಶೈಲಾ ಏನ್,ಪಿ.ಡಿ. ಓ ಉಲ್ಲಾಸ್ ಕೆ.ಎಸ್ ಮುಖ್ಯೋಪಾಧ್ಯಾಯರು,ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರು, ಶಾಲಾ ಸಿಬ್ಬಂದಿ , ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷರು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು ಮತ್ತು ಎ ನ್.ಆರ್. ಎಲ್.ಎಮ್ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ಗಳು ಉಪಸ್ಥಿತಿಯಲ್ಲಿದ್ದರು.

Categories
ಬೆಂಗಳೂರು ರಾಜ್ಯ

ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧ ಲಭ್ಯ!

ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧ ಲಭ್ಯ!
– ಹಳ್ಳಿ ಆಸ್ಪತ್ರೆಯಲ್ಲಿ ಸಿಗಲಿದೆ ತುರ್ತು ಚಿಕಿತ್ಸೆ ಸೌಲಭ್ಯ
– ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ: ಜನರ ಒತ್ತಾಯ

NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧಿ ಲಭ್ಯವಿರುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರ ಗಳಲ್ಲಿ ತುರ್ತು ಅಗತ್ಯ ಔಷಧಿಗಳ ಕೊರತೆ ಇದ್ದಲ್ಲಿ ರಾಷ್ಟ್ರೀಯ ಉಚಿತ ಔಷಧಿ ಸೇವೆಗಳ ಕಾರ್ಯಕ್ರಮದ ಅನುದಾದಡಿ, ಎಬಿಎಆರ್ ಕೆ ಅನುದಾನ, ಎಆರ್ ಎಸ್‌ ಅನುದಾನ ಹಾಗೂ ಇತರ ಅನುದಾನಗಳಲ್ಲಿ ಖರೀದಿಸಿ ಫಲಾನುಭವಿಗಳಿಗೆ ನೀಡಲು ಸೂಚಿಸಲಾಗಿದೆ ಎಂದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಎಲ್ಲಾ ಔಷಧಿಗಳೂ ಲಭ್ಯವಾಗುವಂತೆ ಈಗಾಗಲೇ ಸೂಚನೆ ನೀಡಲಾಗಿದ್ದು, ಶೀಘ್ರ ಎಲ್ಲ ಔಷಧಗಳು ಸಿಗಲಿವೆ ಎಂದು ತಿಳಿಸಿದ್ದಾರೆ.

Categories
ಉದ್ಯೋಗ ಸುದ್ದಿ ಮಾಹಿತಿ ರಾಜ್ಯ

ಶಾಲೆಗಳಲ್ಲಿ ಮತ್ತಷ್ಟು ಉದ್ಯೋಗ ಅವಕಾಶ!?

ಶಾಲೆಗಳಲ್ಲಿ ಮತ್ತಷ್ಟು ಉದ್ಯೋಗ ಅವಕಾಶ!?
– ಸರಕಾರಿ, ಖಾಸಗಿ ಅನುದಾನಿತ ಶಾಲೆಗಳ ಖಾಲಿ ಹುದ್ದೆ ಶೀಘ್ರ ಭರ್ತಿ
– ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಒಂದೇ ಮಾನದಂಡ: ಮಧು ಬಂಗಾರಪ್ಪ

NAMMUR EXPRESS NEWS
ಸರಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ ಖಾಲಿ ಹುದ್ದೆ ಭರ್ತಿ ಕುರಿತು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತದೆ. ಹುದ್ದೆ ಭರ್ತಿ ವಿಚಾರದಲ್ಲಿ ಸರಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಾನದಂಡ ಅನುದಾನಿತ ಒಂದೇ ಅನುಸರಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನೇಮಕಾತಿ ಪ್ರಕ್ರಿಯೆ ಸ್ಪೀಡಪ್ ಮಾಡಲು ನಾನು ಬದ್ಧನಿದ್ದೇನೆ. ಶೀಘ್ರವೇ ಭರ್ತಿ ಮಾಡುವ ಕೆಲಸ ಆಗಲಿದೆ. ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸಕ್ಕೆ ಬದ್ಧವಾಗಿದ್ದೇವೆ. ಕೋರ್ಟ್ ಆದೇಶದ ಮೂಲಕವೇ ನೇಮಕ ಆಗಬೇಕು. ಅದಕ್ಕೆ ನಾವು ಮಧ್ಯಪ್ರವೇಶ ಮಾಡೋದಿಲ್ಲ.

ವೇತನದಲ್ಲಿ ಕಡಿತ ಮಾಡಿ ಇನ್ಶೂರೆನ್ಸ್‌ ಮಾಡುವ ಪ್ರಕ್ರಿಯೆ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಪ್ರಶೋತ್ತರ ಅವಧಿಯಲ್ಲಿ ಸದಸ್ಯ ಮರಿತಿಬ್ಬೇಗೌಡ ಮತ್ತು ಎಸ್.ವಿ.ಸಂಕನೂರ ಪ್ರಶ್ನೆಗಳಿಗೆ ಉತ್ತರಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಾಗ ಸರಕಾರಿ ಶಾಲೆಗಳ ಜತೆಗೆ ಅನುದಾನಿತ ಶಾಲೆಗಳನ್ನೂ ಪರಿಗಣಿಸುತ್ತೇವೆ. ಹಣಕಾಸು ಇಲಾಖೆ ಅನುಮತಿ ಪಡೆದು ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಸರಕಾರಿ ಹಾಗೂ ಅನುದಾನಿತ ಶಾಲೆ ಎರಡಕ್ಕೂ ಒಂದೇ ಮಾನದಂಡ ಇರಲಿದೆ. ಈ ಬಗ್ಗೆ ಎಂಟು ತಿಂಗಳಿಂದ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಶೀಘ್ರವೇ ನೇಮಕಾತಿ ಮಾಡುತ್ತೇವೆ. ನ್ಯಾಯಾಲಯದಲ್ಲಿರುವ ಪ್ರಕರಣದ ಬಗ್ಗೆಯೂ ಹೆಚ್ಚು ಗಮನ ಕೊಡುತ್ತೇವೆ ಎಂದರು.

Categories
ಶಿವಮೊಗ್ಗ

ಫೆ.22ಕ್ಕೆ ಗಡ್ಕರಿ ಶಿವಮೊಗ್ಗಕ್ಕೆ!

ಫೆ.22ಕ್ಕೆ ಗಡ್ಕರಿ ಶಿವಮೊಗ್ಗಕ್ಕೆ!
– ಹೈವೇ, ಬ್ರಿಡ್ಜ್ ಸೇರಿ ಹತ್ತಾರು ಕಾಮಗಾರಿ ಚಾಲನೆ
– 6168.41 ಕೋಟಿ ವೆಚ್ಚದ ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ

NAMMUR EXPRESS NEWS
ಶಿವಮೊಗ್ಗ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಫೆ.22ರಂದು ಶಿವಮೊಗ್ಗಕ್ಕೆ ಬರಲಿದ್ದು, ಏಳು ಜಿಲ್ಲೆಗಳ ವ್ಯಾಪ್ತಿಯ ₹6168.41 ಕೋಟಿ ವೆಚ್ಚದ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ‘ನೆಹರೂ ಕ್ರೀಡಾಂಗಣದಲ್ಲಿ ಅಂದು ಮಧ್ಯಾಹ್ನ 2ಕ್ಕೆ ಕಾರ್ಯಕ್ರಮ ನಡೆಯಲಿದೆ.

ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದಂತೆ 296.92 ಕಿ.ಮೀ. ಉದ್ದದ 18 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆ ನಿತಿನ್‌ ಗಡ್ಕರಿ ನೆರವೇರಿಸಲಿದ್ದಾರೆ’ ಎಂದರು. ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ₹139.41 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡ 4 ಕಾಮಗಾರಿಗಳನ್ನು ಲೋಕಾರ್ಪಣೆ ಮಾಡುವ ಜೊತೆಗೆ ಈಗಾಗಲೇ ಟೆಂಡರ್ ಮುಗಿಸಿ, ಕಾಮಗಾರಿ ಆರಂಭಿಸುವ ಹಂತದಲ್ಲಿ ರುವ ₹ 2138.30 ಕೋಟಿ ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ಕುವೆಂಪು ಸಾಹಿತ್ಯ ವಿವಾದ: ರಾಘವೇಂದ್ರ ಹೇಳಿದ್ದೇನು?

‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ರಾಷ್ಟ್ರಕವಿ ಕುವೆಂಪು ಅವರ ಸಾಲುಗಳು. ಅದನ್ನು ತಿರುಚುವ ಕೆಲಸ ಆಗಿದೆ. ಇದು ಸರ್ಕಾರದ ಸಣ್ಣತನದ ಪರಮಾವಧಿ. ಇದು ಒಳ್ಳೆಯದಲ್ಲ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ‘ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ ಎಂದು ಬದಲಾವಣೆ ಮಾಡಲಾಗಿದೆ. ಮಕ್ಕಳಿಗೆ ವಿನಯ ಕಲಿಸಲು ರಾಷ್ಟ್ರಕವಿ ಕುವೆಂಪು ಅವರು ನೀಡಿದ ಘೋಷವಾಕ್ಯವಿದು. ದೇವಸ್ಥಾನ ಬೇರೆ ಅಲ್ಲ, ಶಾಲೆ ಬೇರೆಯಲ್ಲ. ಇಲ್ಲಿ ಧೈರ್ಯವಾಗಿ ಪ್ರಶ್ನಿಸು ಎಂಬ ಮಾತು ಸರಿ ಅಲ್ಲ’ ಎಂದರು.