Categories
ರಾಜ್ಯ

ಕರ್ನಾಟಕ ಟಾಪ್ 10 ನ್ಯೂಸ್..!

– ಬೆಂಗಳೂರು: ಕೆಲಸ ಮಾಡ್ತಿದ್ದ ಸಂಸ್ಥೆಗೆ ಬಾಂಬ್ ಬೆದರಿಕೆ: ನೌಕರ ಅರೆಸ್ಟ್!
– ಉಡುಪಿ: ಅಧಿಕ ಹಣದಾಸೆಗೆ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ!
– ಸಾಗರ: ಕಲರ್ ಜೆರಾಕ್ಸ್ ನೋಟ್ ನೀಡಿದ ವಂಚಕ ಅರೆಸ್ಟ್
– ಬೆಂಗಳೂರು: ಕಾನೂನು ಬಾಹಿರವಾಗಿ ಆಟೋ ಜಪ್ತಿ: ಇಬ್ಬರು ಸೆರೆ!
– ಬೆಂಗಳೂರು: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ!
– ಯಾದಗಿರಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
– ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅಕ್ರಮ: ರಾಜ್ಯದ 9 ವಿದ್ಯಾರ್ಥಿಗಳು ಡಿಬಾ‌ರ್
– ಬೆಂಗಳೂರು: ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿ ರೌಡಿ ಹತ್ಯೆ!
– ಲಂಚಕ್ಕೆ ಬೇಡಿಕೆ: ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ವಶಕ್ಕೆ!
– ಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ!

NAMMUR EXPRESS NEWS
ಬೆಂಗಳೂರು : ಸಂಬಳ ಕೊಟ್ಟಿಲ್ಲ ಎಂದು ರೆಸ್ಟೋರೆಂಟ್ ಗೆ ಹುಸಿ ಬಾಂಬ್ ಕರೆದ ಮಾಡಿದ ನೌಕರ ಪೊಲೀಸರ ಅತಿಥಿಯಾಗಿದ್ದಾರೆ. ವೇಲು ಎಂಬಾತ ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದನು. ಸಂಬಳ ಕೊಟ್ಟಿಲ್ಲ ಎಂದು ರೆಸ್ಟೋರೆಂಟ್ ಗೆ ಹುಸಿ ಬಾಂಬ್ ಕರೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.
ಸ್ಯಾಲರಿ ಕೊಟ್ಟಿಲ್ಲ ಎಂದು ಕುಡಿದು ರೆಸ್ಟೋರೆಂಟ್ ಮಾಲೀಕರಿಗೆ ಕೆಲಸಗಾರನೇ ಬಾಂಬ್ ಇಟ್ಟಿರೋದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದ್ದ ವ್ಯಕ್ತಿ ಶೀಘ್ರವೇ ಬಾಂಬ್ ಬ್ಲಾಸ್ಟ್ ಆಗುತ್ತೆ ಎಂದು ಹೇಳಿ ಫೋನ್ ಕಟ್ ಮಾಡಿದ್ದನು. ನಂತರ ಸುದ್ದಿ ತಿಳಿದ ಪೊಲೀಸರು ರೆಸ್ಟೋರೆಂಟ್ ಗೆ ಬಂದು ತಪಾಸಣೆ ನಡೆಸಿದ್ದಾರೆ. ರೆಸ್ಟೋರೆಂಟ್ ಪರಿಶೀಲನೆ ನಡೆಸಿ ಕೊನೆಗೆ ಹುಸಿ ಬೆದರಿಕೆ ಕರೆ ಎಂದು ಖಚಿತಪಡಿಸಿಕೊಂಡಿದ್ದರು. ನಂತರ ವಿಚಾರಣೆ ನಡೆಸಿ ವೇಲು ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ, ತನಿಖೆ ಬಳಿಕ ಅಸಲಿ ಸತ್ಯ ಬಯಲಾಗಿದೆ.

ಅಧಿಕ ಹಣದಾಸೆಗೆ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ:

ಉಡುಪಿ: ಅನಾಮಧೇಯ ಆಯಪ್ ಮೂಲಕ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಗಳು ಕಳುಹಿಸಿದ ವಾಟ್ಸಾಪ್ ಅಪ್ಲಿಕೇಶನ್ ಲಿಂಕ್‌ವೊಂದನ್ನು ಉಡುಪಿಯ ಜಗದೀಶ್ ಡೌನ್‌ಲೋಡ್ ಮಾಡಿದ್ದರು. ಆ ಬಳಿಕ ಅದರಲ್ಲಿ ಟ್ರೆಡಿಂಗ್ ಬಗ್ಗೆ ಮಾಹಿತಿ ನೀಡಿ ಟ್ರೆಡಿಂಗ್‌ನಿಂದ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಲಾಗಿತ್ತು. ಇದನ್ನು ನಂಬಿದ ಅವರು ಆಯಪ್ ಮೂಲಕ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಫೆ.25ರಿಂದ ಮಾ. 14ರ ವರೆಗೆ ಹಂತ ಹಂತವಾಗಿ 32,40,000 ರೂ. ಪಾವತಿಸಿದ್ದು, ಆದರೆ ಈ ತನಕ ಹೂಡಿಕೆ ಮಾಡಿದ ಹಣವನ್ನಾಗಿ ಅಥವಾ ಲಾಭಾಂಶವನ್ನು ನೀಡದೆ ವಂಚಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಸಲಿ ನೋಟಿನ ಜತೆ ಕಲರ್ ಜೆರಾಕ್ಸ್ ನೋಟ್ ನೀಡಿದ ವಂಚಕ ಅರೆಸ್ಟ್:

ಶಿವಮೊಗ್ಗ: ಪಡೆದುಕೊಂಡ ಸಾಲ ವಾಪಸ್‌ ಕೊಡುವಾಗ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ನೋಟುಗಳನ್ನು ನೀಡಿ ವಂಚಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಸಾಗರ ಸಮೀಪದ ಚಿಪ್ಪಿ ಗ್ರಾಮದ ಪಾನಿಪುರಿ ಮಾರಾಟಗಾರ ಸಂತೋಷ್ ಬಂಧಿತ ವ್ಯಕ್ತಿ. ಸಾಗರದ ಶಿವಪ್ಪನಾಯಕ ಬಡಾವಣೆಯ ಮನೋಜ್ ಅವರಿಂದ 30,000 ರೂ.ಸಾಲ ಪಡೆದುಕೊಂಡಿದ್ದ ಸಂತೋಷ್ ಸಾಲ ಮರುಪಾವತಿಸುವ ಸಂದರ್ಭದಲ್ಲಿ ಅಸಲಿ ನೋಟುಗಳೊಂದಿಗೆ ಕಲರ್ ಜೆರಾಕ್ಸ್ ಮಾಡಿದ 500 ರೂಪಾಯಿ ಮುಖಬೆಲೆಯ ಕೆಲವು ನೋಟುಗಳನ್ನು ಸೇರಿಸಿ ಕೊಟ್ಟಿದ್ದಾರೆ.
ಮನೋಜ್ ಮನೆಗೆ ತೆರಳಿ ಹಣ ಪರಿಶೀಲಿಸಿದಾಗ ನಕಲಿ ನೋಟುಗಳು ಪತ್ತೆಯಾಗಿದೆ. ಮನೋಜ್ ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಂತೋಷ್ ನನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ಕಾನೂನು ಬಾಹಿರವಾಗಿ ಆಟೋ ಜಪ್ತಿ ಮಾಡಿದ ಆರೋಪ: ಇಬ್ಬರು ಸೆರೆ:

ಬೆಂಗಳೂರು: ರಿಕವರಿ ಏಜೆಂಟ್ ಎಂದು ಹೇಳಿ ಆಟೋ ಚಾಲಕನಿಗೆ ಧಮ್ಕಿ ಹಾಕಿ ಕಾನೂನು ಬಾಹಿರವಾಗಿ ಆಟೋ ಜಪ್ತಿ ಮಾಡಿದ ಆರೋಪದಡಿ ಇಬ್ಬರನ್ನು ಇಲ್ಲಿನ ತಿಲಕ್‌ನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಿಟಿಎಂ ನಿವಾಸಿಯಾಗಿರುವ ಆಟೋ ಚಾಲಕ ಜಗನ್ನಾಥ ಎಂಬುವರು ನೀಡಿದ ದೂರಿನ ಮೇರೆಗೆ ಸಲ್ಮಾನ್‌ ಹಾಗೂ ಪಠಾಣ್ ಎಂಬುವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಂ.ಜಿ. ರಸ್ತೆಯಲ್ಲಿರುವ ವರ್ಧಮಾನ್ ಫೈನಾನ್ಸ್ ಕಂಪೆನಿಯಲ್ಲಿ ಆಟೋ ಚಾಲಕ 2 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಮಧ್ಯವರ್ತಿ ಹಾಗೂ ಡೀಲರ್ ಆಗಿದ್ದ ರಂಗಸ್ವಾಮಿ ಇದಕ್ಕೆ ನಾಮಿನಿ ಆಗಿದ್ದರು. ಮೊದಲ ಎರಡು ತಿಂಗಳು ಸಾಲದ ಕಂತನ್ನು ಜಗನ್ನಾಥ ಪಾವತಿಸಿದ್ದರು. ಮಾರ್ಚ್ ನಲ್ಲಿ ಕಂತನ್ನು ಕಟ್ಟಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಂಗಸ್ವಾಮಿ ಆರೋಪಿತರನ್ನು ಸಂಪರ್ಕಿಸಿ ಆಟೋ ಜಪ್ತಿ ಮಾಡುವಂತೆ ಹೇಳಿದ್ದ. ಅದರಂತೆ ಮಾ.25ರ ಸೋಮವಾರ ರಾತ್ರಿ ಪ್ಯಾಸೆಂಜರ್ ಹತ್ತಿಸಿಕೊಂಡು ಬಿಟಿಎಂ ಲೇಔಟ್ ಕಡೆ ಹೋಗುವಾಗ ಆರು ಮಂದಿ ಯುವಕರು ಜಗನ್ನಾಥ ಅವರ ಆಟೋಗೆ ಅಡ್ಡ ಹಾಕಿ ಕರ್ನಾಟಕ ರಿಕವರಿ ಏಜೆನ್ಸಿ ಎಂದು ಹೇಳಿ ಗಾಡಿ ಜಪ್ತಿ ಮಾಡಿದ್ದಾರೆ.

ಜಪ್ತಿ ಮಾಡದಂತೆ ಮನವಿ ಮಾಡಿದರೂ ಸೊಪ್ಪು ಹಾಕದೆ ಡೀಲರ್ ಆಗಿರುವ ರಂಗಸ್ವಾಮಿ ಎಂಬಾತ ಕಾನೂನು ಗಾಳಿಗೆ ತೂರಿ ಅವರ ಸೂಚನೆಯಂತೆ ಆರೋಪಿತರಿಂದ ಬಲವಂತವಾಗಿ ಆಟೋ ಕೀಯನ್ನು ಕಸಿದುಕೊಂಡು ಜಪ್ತಿ ಮಾಡಿದ್ದಾರೆ ಎಂದು ಜಗನ್ನಾಥ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಡೀಲರ್ ಆಗಿರುವ ರಂಗಸ್ವಾಮಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಕರೆಯಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ:

ಬೆಂಗಳೂರು: ಸುಪಾರಿ ಹಂತಕ ಹಾಗೂ ರೌಡಿಶೀಟರ್ ದಿನೇಶ್‌ನನ್ನು ಮಾರಕಾಸ್ತ್ರಗಳಿಂದ ಆತನ ಸ್ನೇಹಿತರೇ ಭೀಕರವಾಗಿ ಹತ್ಯೆಗೈದಿರುವ ಘಟನೆ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ದಿನೇಶ್ (37) ಕೊಲೆಯಾದ ರೌಡಿಶೀಟರ್. ಕೃತ್ಯ ಎಸಗಿದ ಆತನ ಸ್ನೇಹಿತರ ಪೈಕಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.

ರೌಡಿಶೀಟ‌ರ್ ದಿನೇಶ್ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ಕೊಲೆಗೆ ಸುಪಾರಿ ಪಡೆದ ಆರೋಪದಡಿ ಪ್ರಕರಣಗಳು ದಾಖಲಾಗಿವೆ. ಬುಧವಾರ ಮಧ್ಯಾಹ್ನ ತನ್ನ 7 ಮಂದಿ ಸ್ನೇಹಿತರ ಜತೆ ಕಮ್ಮನಹಳ್ಳಿಯ ಓಯೋ ಹೋಟೆಲ್‌ಗೆ ರೂಮ್ ಬಾಡಿಗೆ ಪಡೆಯಲು ಬಂದಿದ್ದಾನೆ. ಈ ವೇಳೆ ಹೋಟೆಲ್‌ನ ಸ್ವಾಗತಕಾರರ ಜತೆ ದಿನೇಶ್‌ನ ಇಬ್ಬರು ಸ್ನೇಹಿತರು ಹಣ ಪಾವತಿ ಬಗ್ಗೆ ಚರ್ಚಿಸುತ್ತಿದ್ದರು. ಆಗ ನಗದು ಇಲ್ಲ. ಕಾರ್ಡ್ ಕೊಡುವುದಾಗಿ ಹೇಳಿದ್ದಾರೆ. ಆಗ ಸ್ವಾಗತಕಾರರು ನಗದು ರೂಪದಲ್ಲೇ ಕೊಡಬೇಕು. ಕಾರ್ಡ್ ಬಳಕೆ ಮಾಡುವುದಿಲ್ಲ ಎಂದಿದ್ದಾರೆ. ಹೀಗಾಗಿ ಇಬ್ಬರು ಆರೋಪಿಗಳು ಹಣ ತರಲು ಹೊರಗಡೆ ಹೋಗಿದ್ದಾರೆ.

ಈ ವೇಳೆ ಸೋಫಾ ಮೇಲೆ ದಿನೇಶ್ ಜತೆ ಕೂತಿದ್ದ ಐವರು ಏಕಾಏಕಿ ದಿನೇಶ್ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಅದೇ ವೇಳೆ ಹೊರಗಡೆಯಿಂದ ಮತ್ತೆ ಐದು ಮಂದಿ ಆರೋಪಿಗಳು ಮಾರಕಾಸ್ತ್ರಗಳನ್ನು ತಂದು ದಿನೇಶ್ ಮೇಲೆ ಸಾಮೂಹಿಕ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಸೋಫಾ ಮೇಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ಹೇಳಿದರು. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ, ಪೂರ್ವವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಯಾದಗಿರಿ: ಕುಡಿಯುವ ನೀರಿಗಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಜರುಗಿದೆ. ನೀರಿನ ವಿಚಾರವಾಗಿ ಅಜ್ಜಿ ಜೊತೆ ಆರೋಪಿತರು ಜಗಳ ತೆಗೆದಿದ್ದಾರೆ. ಅಜ್ಜಿ ಜೊತೆ ಜಗಳ ಮಾಡಿದಕ್ಕೆ ಮೊಮ್ಮಗ ಮದ್ಯ ಪ್ರವೇಶ ಮಾಡಿ ನೀವು ಯಾಕೆ ಜಗಳ ಮಾಡಿದ್ದಿರಿ ಎಂದು ಪ್ರಶ್ನೆ ಮಾಡಿದ್ದಾನೆ. ಪಶ್ನೆ ಮಾಡಿದಕ್ಕೆ ಸಂಬಂಧಿಕರಿಂದಲೇ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಹಣಮಂತ ಹಾಗೂ ಹಣಮವ್ವ ಸೇರಿ ಚಾಕು ಇರಿದು ಕೊಲೆ ಮಾಡಲಾಗಿದೆ.

ನಂದಕುಮಾರ ಕಟ್ಟಿಮನಿ ( 21)ಕೊಲೆಯಾದ ಯುವಕ ಎನ್ನಲಾಗಿದೆ. ಕೊಲೆಯಾದ ನಂದಕುಮಾರ ತಮ್ಮ ಅಜ್ಜಿ ಜೊತೆ ಜಗಳ ಮಾಡಿದಕ್ಕೆ ಆರೋಪಿತರಿಗೆ ಪ್ರಶ್ನೆ ಮಾಡಿದ್ದ. ಈ ವೇಳೆ ನಂದಕುಮಾರ ತಾಯಿಗು ಹಲ್ಲೆ ನಡೆಸಲಾಗಿದೆ. ಹುಣಸಗಿ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ: ಅಕ್ರಮದಲ್ಲಿ ತೊಡಗಿದ್ದ ರಾಜ್ಯದ 9 ವಿದ್ಯಾರ್ಥಿಗಳು ಡಿಬಾ‌ರ್

ಬೆಂಗಳೂರು : ರಾಜ್ಯಾದ್ಯಂತ ಬುಧವಾರ ನಡೆದ SSLC ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಅಕ್ರಮದಲ್ಲಿ ತೊಡಗಿದ್ದ 9 ವಿದ್ಯಾರ್ಥಿಗಳನ್ನು ಡಿಬಾ‌ರ್ ಮಾಡಲಾಗಿದೆ. ಸಮಾಜ ವಿಜ್ಞಾನ ಪರೀಕ್ಷೆಗೆ 8.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅಕ್ರಮದಲ್ಲಿ ತೊಡ ಗಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ಸಮಾಜ ವಿಜ್ಞಾನ ಪರೀಕ್ಷೆಗೆ 8.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅಕ್ರಮದಲ್ಲಿ ತೊಡ ಗಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುತ್ತಿದ್ದ ರಾಯಚೂರಿನ 3, ಧಾರವಾಡದ 4, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ತಲಾ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. 8,41,120 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು. ಈ ಪೈಕಿ 8,27,773 (ಶೇ.98.4) ವಿದ್ಯಾರ್ಥಿಗಳು ಹಾಜರಾಗಿದ್ದರುಮಾ.28 ಮತ್ತು 29 ರಂದು ಯಾವುದೇ ಪರೀಕ್ಷೆ ಇರುವುದಿಲ್ಲ.

ಬೆಂಗಳೂರು: ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿ ರೌಡಿ ಹತ್ಯೆ:

ಬೆಂಗಳೂರು: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ದಿನೇಶ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ರೌಡಿ ದಿನೇಶ್‌, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕಮ್ಮನಹಳ್ಳಿ ಬಳಿಯ ಸರ್ವೀಸ್ ಅಪಾರ್ಟ್‌ಮೆಂಟ್‌ವೊಂದಕ್ಕೆ ಸಹಚರರ ಜೊತೆ ಬುಧವಾರ ಬಂದಿದ್ದ. ಇದೇ ಸಂದರ್ಭದಲ್ಲಿ ದುಷ್ಕರ್ಮಿಗಳ ತಂಡ, ದಾಳಿ ಮಾಡಿ ಕೊಂದಿದೆ’ ಎಂದು ಪೊಲೀಸರು ಹೇಳಿದರು. ತೀವ್ರ ಗಾಯಗೊಂಡಿದ್ದ ದಿನೇಶ್, ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿಯೇ ಮೃತಪಟ್ಟಿದ್ದಾನೆ. ಸೋಫಾ ಮೇಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದರು.

ಬೆಂಗಳೂರು: ಲಂಚಕ್ಕೆ ಬೇಡಿಕೆ ಆರೋಪ : ಇಬ್ಬರು ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ವಶಕ್ಕೆ:

ಬೆಂಗಳೂರು: ಗ್ಯಾಸ್ ಸಿಲಿಂಡರ್ ಗಳ ವಿತರಣೆಗೆ ಅನುಮತಿ ಕೊಡಿಸಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪೀಣ್ಯ ಉಪವಿಭಾಗದ ಎಸಿಪಿಯವರ ವಾಹನ ಚಾಲಕ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ ಗಂಗಹನುಮಯ್ಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ:

ಬೆಂಗಳೂರು: ಯಾವುದೇ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಲಸೂರು ಗೇಟ್ ಪೊಲೀಸ್‌ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ 2 ಬ್ಯಾಗ್ಗಳಲ್ಲಿ 25 ಲಕ್ಷ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಚುನಾವಣಾಧಿಕಾರಿಗಳಿಗೆ ಲಭಿಸಿದೆ. ತಕ್ಷಣ ಸಿಸಿಬಿ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಅದರಲ್ಲಿ 25 ಲಕ್ಷ ರೂ. ಹಣ ಇರುವುದು ಕಂಡುಬಂದಿದೆ. ದ್ವಿಚಕ್ರ ವಾಹನ ಸವಾರ ಈ ಹಣಕ್ಕೆ ಯಾವುದೇ ದಾಖಲೆ ನೀಡದ ಕಾರಣ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Categories
ಬೆಂಗಳೂರು ರಾಜ್ಯ

ರಾಜ್ಯದಲ್ಲಿ ಮಳೆ ಆಗಮನ ಆಗುತ್ತಾ?

ಬಾ ಮಳೆಯೇ ಬಾ…!
– ರಾಜ್ಯದಲ್ಲಿ ಮಳೆ ಆಗಮನ ಆಗುತ್ತಾ?
– ಮೋಡ ಕವಿದ ವಾತಾವರಣ
– ಬಿಸಿಲ ಬೇಗೆ ತಣಿಸುವ ಹಣ್ಣುಗಳ ದರ ಏರಿಕೆ

NAMMUR EXPRESS NEWS
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಬಿಸಿಲಿನ ಝಳ ಹೆಚ್ಚಾಗಿದ್ದು ಈ ಮಧ್ಯೆ ಮಾರ್ಚ್​ 31ರಿಂದ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆ ಮೋಡ ಕವಿದ ವಾತಾವರಣ, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬಿಸಿಲ ಬೇಗೆ ತಣಿಸುವ ಹಣ್ಣುಗಳ ದರ ಏರಿಕೆ

ಬೇಸಿಗೆ ಬಿಸಿ ತಾಪಕ್ಕೆ ನಗರವಾಸಿಗಳು ತತ್ತರಿಸುತ್ತಿದ್ದರೆ, ಇನ್ನೊಂದೆಡೆ ಮಾವಿನ ಹಣ್ಣು, ನಿಂಬೆ ಹಣ್ಣು ಸೇರಿದಂತೆ ಹಣ್ಣುಗಳ ಬೆಲೆ ಏರಿಕೆಯಾಗುವ ಮೂಲಕ ಗ್ರಾಹಕರ ಕಂಗಾಲಾಗಿದ್ದಾರೆ. ಗರಿಷ್ಠ ತಾಪಮಾನ ಹಿನ್ನೆಲೆ ಮಾವಿನ ಇಳುವರಿಯಲ್ಲಿ ಶೇ.60ರಷ್ಟು ಕುಸಿತ ಕಂಡಿದೆ ಹಾಗಾಗಿ ಬೇಡಿಕೆಗೆ ತಕ್ಕಂತೆ ಮಾವಿನ ಹಣ್ಣುಗಳು ಮಾರುಕಟ್ಟೆಗಳಿಗೆ ಬರುತ್ತಿಲ್ಲ. ಆದರಿಂದ ಬೆಲೆ ಏರಿಕೆ ಕಂಡಿದೆ. ಮಾವಿನ ಹಣ್ಣಿನ ಸಮಯ ವಾಗಿರುವುದರಿಂದ ವಿವಿಧ ತಳಿಯ ರಸಪೂರಿ ಮಾವಿನ ಹಣ್ಣುಗಳು ಮಾರುಕಟ್ಟೆಗಳಿಗೆ ಬಂದಿದೆ. ಹಾಗೇ ಮಾವಿನ ಹಣ್ಣನ್ನು ಖರೀದಿ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ಹಣ್ಣುಗಳು ಲಭ್ಯವಾಗದಿರುವುದರಿಂದ ಬೆಲೆ ಏರಿಕೆಯಾಗಿದೆ. ಅವರಲ್ಲೂ ಮಾವಿನ ಹಣ್ಣುಗಳ ಬೆಲೆಯಲ್ಲಿ ಈ ಬಾರಿ ಶೇ.30-40ರಷ್ಟು ಏರಿಕೆಯಾಗಿದೆ.

– ಮಣ್ಣಿನ ಪಾತ್ರೆಗಳಿಗೆ ಡಿಮ್ಯಾಂಡ್

ಬಿಸಿಲಿನ ಬೆಗೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಹೀಗಿರುವಾಗ ನಗರವಾಸಿಗಳು ಮಣ್ಣಿನ ಪಾತ್ರೆಯನ್ನು ಖರೀದಿಸುವವರ ಸಂಖ್ಯೆ ಅಧಿಕವಾಗಿದೆ. ಪರಿಸರ ಸ್ನೇಹಿ ಹಾಗೂ ಫ್ರಿಡ್ಜ್ ನಲ್ಲಿಟ್ಟ ನೀರಿಗಿಂತ ಮಡಿಕೆ ನೀರು ಆರೋಗ್ಯ ಕರವಾಗಿರುವಂತಹದ್ದು, ಹಾಗಾಗಿ ಹೆಚ್ಚಿನವರು ಮಡಿಕೆ ನೀರನ್ನು ಬಳಕೆ ಮಾಡುತ್ತಾರೆ.

– ಹಣ್ಣಿನ ಜ್ಯೂಸ್ ಬೇಡಿಕೆ ಹೆಚ್ಚಳ

ಕಲ್ಲಂಗಡಿ, ಮಾವಿನ ಹಣ್ಣು, ಹಲಸಿನ ಹಣ್ಣು, ಅನನಾಸ್, ದ್ರಾಕ್ಷಿ ಮುಂತಾದ ಹಣ್ಣುಗಳನ್ನು ಹೆಚ್ಚು ಸವಿಯುತ್ತಿದ್ದಾರೆ. ಇದರೊಂದಿಗೆ ಕಬ್ಬು, ಚಿಕ್ಕು ಮುಂತಾದ ಹಣ್ಣಿನ ಜ್ಯೂಸ್ ಗಳಿಗೂ ಬೇಡಿಕೆ ಬಂದಿದೆ.

Categories
ರಾಷ್ಟ್ರೀಯ ವಾರ್ತೆ

500 ರು. ನೋಟಿನ ಹಾಸಿಗೆ ಮೇಲೆ ಮಲಗಿದ ರಾಜಕಾರಣಿ…!

500 ರು. ನೋಟಿನ ಹಾಸಿಗೆ ಮೇಲೆ ಮಲಗಿದ ರಾಜಕಾರಣಿ…!
– ಲಂಚಗುಳಿತನ ಕಾರಣಕ್ಕೆ ಈತ ಪಕ್ಷದಿಂದ ವಜಾ
– ವಾಷಿಂಗ್ ಮಷಿನ್‌ನಲ್ಲಿ ₹2.54 ಕೋಟಿ!

NAMMUR EXPRESS NEWS
ಗುವಾಹಟಿ: ಸುಖದ ಸುಪ್ಪತ್ತಿಗೆಯಲ್ಲಿ ಮಲಗುವುದು ಎಲ್ಲರ ಕನಸಾಗಿರುತ್ತದೆ. ಹಾಗೆಯೇ ಇಲ್ಲೊಬ್ಬ ಭ್ರಷ್ಟ ರಾಜಕಾರಣಿ ಕಾಂಚಾಣದಿಂದ ಆವೃತವಾಗಿರುವ ಹಾಸಿಗೆಯಲ್ಲಿ ಮಲಗಿರುವ ದೃಶ್ಯ ವೈರಲ್ ಆಗಿದೆ. ಅಸ್ಸಾಂನ ಉಡಾಲ್‌ಗುರಿ ಜಿಲ್ಲೆಯ ಭೈರಾಗೂರಿ ಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷನಾಗಿದ್ದ ಬೋಡೋಲ್ಯಾಂಡ್ ಪಕ್ಷದ ನಾಯಕ ಬೆಂಜಮಿನ್ ಬಸುಮಾತಾರಿ ಈ ರೀತಿ 500 ರು. ನೋಟಿನ ಮೇಲೆ ಮಲಗಿದ್ದಾನೆ. ಆತನ ಪೋಟೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡಿದೆ. ಈತ ಗ್ರಾಮದಲ್ಲಿ ಹಲವು ಸರ್ಕಾರಿ ಯೋಜನೆಗೆ ಫಲಾನುಭವಿಗಳಿಂದ ಲಂಚ ಪಡೆಯುತ್ತಿರುವ ಕುರಿತು ಆರೋಪವಿದೆ.

ಪಕ್ಷದಿಂದ ವಜಾ: ವಿಡಿಯೋ ವೈರಲ್ ಬೆನ್ನಲ್ಲೇ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬೋಡೋ ಲ್ಯಾಂಡ್ ಪಕ್ಷ, ಕಳೆದ ಜ.10ರಂದೇ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತು ಹಾಕಿರುವುದಾಗಿ ತಿಳಿಸಿದೆ.

– ವಾಷಿಂಗ್ ಮಷಿನ್‌ನಲ್ಲಿ ₹2.54 ಕೋಟಿ!

ನವದೆಹಲಿ: ಭ್ರಷ್ಟರು ಹಣವನ್ನು ಪೈಪ್‌ಗಳಲ್ಲಿ, ,ಹಾಸಿಗೆಗಳ ಕೆಳಗೆ ಬಚ್ಚಿಟ್ಟದ್ದನ್ನು ನೋಡಿದ್ದೇವೆ. ಆದರೆ ವಿದೇಶಿ ನೇರ ನಗದು ವರ್ಗಾವಣೆಯಲ್ಲಿ ಅಕ್ರಮ ನಡೆಸಿರುವ ಕಂಪನಿಯೊಂದರ ಮೇಲೆ ದಾಳಿ ಮಾಡುವ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳಿಗೆ ವಾಷಿಂಗ್ ಮಷಿನ್‌ನಲ್ಲಿ ಅಡಗಿಸಿಟ್ಟಿದ್ದ 2.54 ಕೋಟಿ ರು. ಹಣ ಸಿಕ್ಕಿದೆ. ವಿಜಯ್ ಕುಮಾರ್ ಶುಕ್ಲಾ ಮತ್ತು ಸಂಜಯ್ ಗೋಸ್ವಾಮಿ ಅವರಿಗೆ ಸೇರಿದ ಲಾಜಿಸ್ಟಿಕ್ಸ್ ಕಂಪನಿ ಯೊಂದು 1800 ಕೋಟಿ ರು. . ಮೌಲ್ಯದ ಹಣವನ್ನು ವಿದೇಶಿ ನೇರ ನಗದು ವರ್ಗಾವಣೆ ನಿಯಮ ಉಲ್ಲಂಘಿಸಿ ರವಾನೆ ಮಾಡಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಹಲವು ಊರುಗಳಲ್ಲಿ ದಾಳಿ ಇ.ಡಿ. ಮಂಗಳವಾರ ದಾಳಿ ಮಾಡಿದೆ ಹಾಗೂ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಈ ವೇಳೆ ವಾಷಿಂಗ್ ಮಷಿನ್‌ನಲ್ಲಿ 2.54 ಕೋಟಿ ರು.ಗಳನ್ನು ಅಡಗಿಸಿ ಇಟ್ಟಿದ್ದು ಅಚ್ಚರಿ ಮೂಡಿಸಿದೆ.

Categories
ಬೆಂಗಳೂರು ರಾಜ್ಯ

ಇನ್ನು ಟೋಲ್ ಅಲ್ಲಿ ನಿಲ್ಲೋದು ಇರಲ್ಲ!

ಇನ್ನು ಟೋಲ್ ಅಲ್ಲಿ ನಿಲ್ಲೋದು ಇರಲ್ಲ!
ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಲ್‌ ನಿಂದ ಮುಕ್ತಿ
– ಉಪಗ್ರಹದಿಂದ ಟೋಲ್ ತೆರಿಗೆ ಸಂಗ್ರಹ ವ್ಯವಸ್ಥೆ?

NAMMUR EXPRESS NEWS
ಬೆಂಗಳೂರು: ಶಿಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆಯಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಟೋಲ್ ತೆರಿಗೆ ಕುರಿತು ಮಾಹಿತಿ ನೀಡಿದ ಅವರು,ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆಯಾಗಲಿದೆ. ಈ ಕಾರ್ಯವಿಧಾನವು ಜನರ ಬ್ಯಾಂಕ್ ಖಾತೆಗಳಿಂದ ಹಣವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾದ ಮೊತ್ತವನ್ನು ಪ್ರಯಾಣಿಸುವವರು ಬಳಸುವ ರಸ್ತೆ ಆಧಾರದ ಮೇಲೆ ಲೆಕ್ಕ ಹಾಕಲಾಗುವುದು. ಇದರರ್ಥ ಶುಲ್ಕ ಅಥವಾ ಕಡಿತಗೊಳಿಸಲಾದ ಮೊತ್ತವು ಹೆದ್ದಾರಿಗಳಲ್ಲಿ ಕ್ರಮಿಸಿದ, ಪ್ರಯಾಣಿಸಿದ ದೂರವನ್ನು ಆಧರಿಸಿರುತ್ತದೆ ಎಂದು ಭರವಸೆ ನೀಡಿದ್ದಾರೆ.

ಇದರ ಜೊತೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ(ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ) ತಂತ್ರಜ್ಞಾನದ ಕಲ್ಪನೆಯನ್ನು ಸರ್ಕಾರವು ಹುಟ್ಟುಹಾಕಿದೆ. ಇದು ಟೋಲ್ ಸಂಗ್ರಹ ಪ್ರಕ್ರಿಯೆಯನ್ನು ಸುಲಭ ಮತ್ತು ತ್ವರಿತಗೊಳಿಸುತ್ತದೆ. ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಹೆದ್ದಾರಿಗಳಲ್ಲಿ ಪ್ರಯಾಣಿಸುವ ದೂರಕ್ಕೆ ವಾಹನ ಚಾಲಕರಿಗೆ ಶುಲ್ಕ ವಿಧಿಸುವಪ್ರಕ್ರಿಯೆಯನ್ನು ಜಗಳ ಮುಕ್ತಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ.

ಟ್ರಕ್ಕರ್ ಗಳು ಮತ್ತು ಲಾರಿ ಮಾಲೀಕರ ಸಂಘಗಳ ಕೆಲವು ಮುಖ್ಯಸ್ಥರು ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿರುವ ವ್ಯವಸ್ಥೆಯಿಂದ ದುಬಾರಿಯಾಗಿದೆ ಎಂದು ಸಾಬೀತುಪಡಿಸುತ್ತದೆ ಮತ್ತು ಹೊರೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಏಕೆಂದರೆ ಪ್ರಸ್ತುತ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ದಾಟಿದಾಗ ಮಾತ್ರ ವಾಹನಕ್ಕೆ ಶುಲ್ಕ ವಿಧಿಸಲಾಗುತ್ತದೆ. ಆದಾಗ್ಯೂ, GPS-ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯ ಅಡಿಯಲ್ಲಿ, ಎನ್ ಹೆಚ್ ವಿಸ್ತರಣೆಯನ್ನು ಪ್ರವೇಶಿಸುವ ಯಾವುದೇ ವಾಹನವು ಟೋಲ್ ಶುಲ್ಕವನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ. ಮೊತ್ತವನ್ನು ಖಾತೆಗಳಿಂದ ಕಡಿತಗೊಳಿಸಲಾಗುತ್ತದೆ.

Categories
ಬೆಂಗಳೂರು ರಾಜಕೀಯ ರಾಜ್ಯ

ವಿಧಾನ ಸಭೆ ಸೋತವರಿಗೆ ಎಂಪಿ ಟೆಕೆಟ್ ಕೊಟ್ಟ ಬಿಜೆಪಿ!

ವಿಧಾನ ಸಭೆ ಸೋತವರಿಗೆ ಎಂಪಿ ಟೆಕೆಟ್ ಕೊಟ್ಟ ಬಿಜೆಪಿ!
– ಸೋತವರಿಗೆ ಸಿಗುತ್ತಾ ರಾಜಕೀಯ ಪುನರ್ಜನ್ಮ?
– ಬಿಜೆಪಿಯ ಹೊಸ ಪ್ಲಾನ್ ವರ್ಕ್ ಆಗುತ್ತಾ…?
– ಶೆಟ್ಟರ್, ಕಾಗೇರಿ, ಸುಧಾಕರ್, ರಾಮುಲು, ಸೋಮಣ್ಣಗೆ ಟಿಕೆಟ್

NAMMUR EXPRESS NEWS
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಕರ್ನಾಟಕದ ಲೋಕ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಅಚ್ಚರಿ ಎಂಬಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಪ್ರಮುಖ ನಾಯಕರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಪಕ್ಷ ನಿಷ್ಠರನ್ನು ಎಂದೂ ಕೈಬಿಡುವುದಿಲ್ಲ ಎಂಬ ಸಂದೇಶವನ್ನು ಮತ್ತೆ ಸಾರಿದೆ. ಲೋಕ ಸಭಾ ಚುನಾವಣೆಗೆ ಐವರು ಮಾಜಿ ಶಾಸಕರಿಗೆ ಬಿಜೆಪಿ ಎಂಪಿ ಟಿಕೆಟ್‌ ನೀಡಿದ್ದು, ಅವರ ರಾಜಕೀಯ ಜೀವನಕ್ಕೆ ಪುನರ್ಜನ್ಮ ನೀಡುವ ಪ್ರಯತ್ನವನ್ನು ಮಾಡಿದೆ. ಇತ್ತೀಚಿಗೆ ಘೋಷಣೆಯಾದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಪೈಕಿ ಮೂವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರು. ಇಬ್ಬರು ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರೆ, ಒಬ್ಬರು ಬಿಜೆಪಿಯಿಂದ ಟಿಕೆಟ್‌ ಸಿಗದೇ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಉಳಿದಂತೆ ಮೊದಲ ಪಟ್ಟಿಯಲ್ಲಿ ಇಬ್ಬರು ಸೋತ ನಾಯಕರಿಗೆ ಬಿಜೆಪಿ ಟಿಕೆಟ್‌ ನೀಡಿತ್ತು.

– ಬೆಳಗಾವಿ – ಜಗದೀಶ್ ಶೆಟ್ಟರ್ (ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ನಲ್ಲಿ ಸೋಲು)

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಕಾಂಗ್ರೆಸ್ ಸೇರಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಮಹೇಶ್‌ ಟೆಂಗಿನಕಾಯಿ ವಿರುದ್ಧ ಸೋಲು ಅನುಭವಿಸಿದ್ದರು. ನಂತರ ಕಾಂಗ್ರೆಸ್‌ನಿಂದಲೇ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದರೆ, ಈಗ ಮತ್ತೆ ಬಿಜೆಪಿಗೆ ಮರಳಿದ್ದು, ಬಿಜೆಪಿ ಬೆಳಗಾವಿ ಲೋಕಸಭಾ ಟಿಕೆಟ್‌ ಅನ್ನು ನೀಡಿದೆ. ಬೆಳಗಾವಿಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಿಜೆಪಿ ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ.

– ಉತ್ತರಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ (ಶಿರಸಿಯಲ್ಲಿ ಸೋಲು)

63 ವರ್ಷದ ಕಾಗೇರಿ ಎಬಿವಿಪಿ ಪೂರ್ಣಾವಧಿ ಕಾರ್ಯಕರ್ತರಾಗಿ ನಂತರ ಬಿಜೆಪಿಗೆ ಬಂದವರು. 1994ರಲ್ಲಿ ಮೊದಲ ಬಾರಿಗೆ ಅಂಕೋಲಾ ಕ್ಷೇತ್ರದಿಂದ ಆಯ್ಕೆಯಾದರು. ಬಿ.ಕಾಂ ಹಾಗೂ ಎಲ್.ಎಲ್‌ಬಿ ವ್ಯಾಸಂಗ ಮಾಡಿದ್ದು, ಅಂಕೋಲ ಮತ್ತು ಶಿರಸಿ ಕ್ಷೇತ್ರದಿಂದ ತಲಾ ಮೂರು ಸಲ ಆಯ್ಕೆ. ಶಿಕ್ಷಣ ಸಚಿವರಾಗಿ, ಸ್ಪೀಕ‌ರ್ ಆಗಿ ಕಾರ್ಯನಿರ್ವಹಿಸಿದರು. ಸಂವಿಧಾನದ ಬಗ್ಗೆ ದೇಶದಲ್ಲಿ ಮೊದಲ ಬಾರಿಗೆ ಅಧಿವೇಶನದಲ್ಲಿ ಚರ್ಚೆ ನಡೆಸಿದ ಸ್ಪೀಕರ್ ಎಂಬ ಹೆಸರು ಪಡೆದಿದ್ದಾರೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಶಿರಸಿಯಲ್ಲಿ ಸೋಲು ಅನುಭವಿಸಿದ್ದರು. ಈಗ ಹಾಲಿ ಸಂಸದ ಅನಂತ ಕುಮಾರ ಹೆಗಡೆ ಬದಲಾಗಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆದುಕೊಂಡಿದ್ದಾರೆ.

– ಚಿಕ್ಕಬಳ್ಳಾಪುರ – ಡಾ ಕೆ ಸುಧಾಕರ್ (ಚಿಕ್ಕಬಳ್ಳಾಪುರದಲ್ಲಿ ಸೋಲು)

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 2 ಬಾರಿ ಕಾಂಗ್ರೆಸಿನಿಂದ ಶಾಸಕರಾಗಿದ್ದರು. ನಂತರ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಲ್ಲಿ ಪ್ರಮುಖರು. 2019ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಿಜೆಪಿ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಸೋಲು ಅನುಭವಿಸಿದ್ದರು. ಅದಾದ ಬಳಿಕ ಬಿಜೆಪಿಗೆ ಸರಿಯಾದ ನೆಲೆಗಟ್ಟು ಇಲ್ಲದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಈಗ ಚಿಕ್ಕಬಳ್ಳಾಪುರ ಟಿಕೆಟ್‌ ಅನ್ನು ಬಿಜೆಪಿ ನೀಡಿದೆ.

– ತುಮಕೂರು – ವಿ ಸೋಮಣ್ಣ (ವರುಣಾ ಮತ್ತು ಚಾಮರಾಜನಗರದಲ್ಲಿ ಸೋಲು)

2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ವಿ ಸೋಮಣ್ಣ ಎರಡು ಕ್ಷೇತ್ರಗಳಲ್ಲಿ ಸೋಲು ಅನುಭವಿಸಿದ್ದರು. ಅದಾದ ಬಳಿಕ ಬಿಜೆಪಿ ನಾಯಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದರು. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಪಡೆಯಲು ಬಹಳ ಪ್ರಯತ್ನ ನಡೆಸಿದ್ದರು. ಸ್ಥಳೀಯರ ವಿರೋಧದ ನಡುವೆಯೂ ಈಗ ವಿ ಸೋಮಣ್ಣಗೆ ಬಿಜೆಪಿ ನಾಯಕರು ಮಣೆ ಹಾಕಿದ್ದಾರೆ.

– ಬಳ್ಳಾರಿ – ಬಿ ಶ್ರೀರಾಮುಲು (ಬಳ್ಳಾರಿ ಗ್ರಾಮೀಣದಲ್ಲಿ ಸೋಲು)

ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿ ಶ್ರೀರಾಮುಲು ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಇವರು ಕೂಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಗೇಂದ್ರ ವಿರುದ್ಧ ಸೋಲು ಅನುಭವಿಸಿದ್ದರು. ಈ ಮೂಲಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಐವರು ನಾಯಕರಿಗೆ ಬಿಜೆಪಿ ಟಿಕೆಟ್‌ ನೀಡಿದ್ದು, ಚಿತ್ರದುರ್ಗದಿಂದ ಗೋವಿಂದ ಕಾರಜೋಳ ಸ್ಪರ್ಧಿಸುವ ಸಾಧ್ಯತೆ ಇದೆ. ಅವರಿಗೆ ಟಿಕೆಟ್‌ ಅಧಿಕೃತವಾದರೆ ಒಟ್ಟು 6 ಜನ ಸೋತ ನಾಯಕರಿಗೆ ಬಿಜೆಪಿ ಟಿಕೆಟ್‌ ನೀಡಿದಂತಾಗುತ್ತದೆ.

Categories
ಮಲ್ನಾಡ್ ಶಿವಮೊಗ್ಗ

ಬೋರ್ ಕೊರೆಸಲು ಡಿಮ್ಯಾಂಡ್: ರೈತರ ಸುಲಿಗೆ ಮಾಡಿದ್ರೆ ಹುಷಾರ್!

ಬೋರ್ ಕೊರೆಸಲು ಡಿಮ್ಯಾಂಡ್: ರೈತರ ಸುಲಿಗೆ ಮಾಡಿದ್ರೆ ಹುಷಾರ್!
– ಬೋರ್ ವಾಹನ ಮಾಲೀಕರಿಗೆ ಡಿಸಿ ಎಚ್ಚರಿಕೆ
– ಹೆಚ್ಚಿಗೆ ಹಣ ಪಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ

NAMMUR EXPRESS NEWS
ಶಿವಮೊಗ್ಗ: ಬರ ಹೆಚ್ಚಾಗುತ್ತಿದೆ. ಎಲ್ಲೆಡೆ ಬೋರ್ ಕೊರೆಸಲು ಡಿಮ್ಯಾಂಡ್ ಸೃಷ್ಟಿಯಾಗಿದೆ. ಆದರೆ ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಮನ ಬಂದಂತೆ ದರ ನಿಗದಿಪಡಿಸಿದ್ದಾರೆ. ಆದ್ದರಿಂದ ಕೊಳವೆ ಬಾವಿ ಕೊರೆಯಲು ಹೆಚ್ಚಿಗೆ ಹಣ ಪಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ.
ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ ಖಾಸಗಿ ರೈತರ ಜಮೀನುಗಳಲ್ಲಿ ಕೊಳವೆ ಬಾವಿಗಳ ಕೊರೆಯುವ ಕುರಿತು ಜಿಲ್ಲೆಯ ರಿಂಗ್ ವಾಹನ ಮಾಲೀಕರು ಹಾಗೂ ಏಜೆನ್ಸಿಯವರೊಂದಿಗೆ ಸಭೆಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಡಿ ವಿಶೇಷವಾಗಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯಡಿ ವಿವಿಧ ಯೊಜನೆಗಳಡಿಯಲ್ಲಿ ಕೊರೆಯುವ ಕೊಳವೆ ಬಾವಿಗಳ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ರಿಂಗ್/ ಕೊಳವೆಬಾವಿ ಮಾಲೀಕರು ಕರಾರು ಮಾಡಿಕೊಂಡಿದ್ದು, ಸೂಕ್ತ ಸಮಯದಲ್ಲಿ ಡ್ರಿಲ್ಲಿಂಗ್ ಗಳನ್ನು ಮಾಡದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.

ಪ್ರಸಕ್ತ ಸಾಲಿನಲ್ಲಿ ಬರ ಪರಿಸ್ಥಿತಿ ಇರುವುದರಿಂದ ಬೇಸಿಗೆ ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವುದು ಅತ್ಯಂತ ಆದ್ಯತೆಯ ಹಾಗೂ ತುರ್ತು ಕೆಲಸವಾಗಿರುವ ಹಿನ್ನೆಲೆಯಲ್ಲಿ ಬಾಕಿ ಇರುವ ಎಲ್ಲಾ ಕೊಳವೆ ಬಾವಿಗಳನ್ನು ಇನ್ನೆರಡು ದಿನಗಳಲ್ಲಿ ಕೊರೆದು ಪೂರ್ಣಗೊಳಿಸಬೇಕು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯತನ ತೋರಿದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಹಾಗೂ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಳ್ಳಲಾಗುವುದೆಂದು ಸೂಚಿಸಿದರು.

ಇದಲ್ಲದೇ, ಪ್ರಸಕ್ತ ಸಾಲಿನಲ್ಲಿ ಬರಗಾಲ ಇರುವುದರಿಂದ ರೈತರಿಗೆ ಮಾನವೀಯತೆ ದೃಷಿಯಿಂದ ಅನುಮೋದಿತ ದರ ಪಟ್ಟಿಗಳನ್ವಯ ಕೊಳವೆ ಬಾವಿಗಳನ್ನು ಕೊರೆಯಬೇಕು. ರೈತರಿಂದ ಹೆಚ್ಚಿನ ದರ ಪಡೆದಿರುವ ಕುರಿತು ಹಲವು ದೂರುಗಳು ಬಂದಿದ್ದು, ಪುನಃ ಹೆಚ್ಚಿನ ದರಗಳನ್ನು ರೈತರಿಂದ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ರಿಗ್ ಮಾಲೀಕರು/ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ವಹಿಸಲಾಗುವುದು. ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನಿಯಮಾನುಸಾರ ರಿಗ್ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುದು ಎಂದರು. ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಮಧ್ಯವರ್ತಿಗಳ ಸಲಹೆ ಪಡೆಯದೇ ಹಾಗೂ ಮಧ್ಯವರ್ತಿಗಳ ಮುಖಾಂತರ ವ್ಯವಹರಿಸದೇ, ನೇರವಾಗಿ ರಿಗ್ ಮಾಲೀಕರ ಜೊತೆ ವ್ಯವಹರಿಸಿದಲ್ಲಿ ಅನುಮೋದಿತ ಬೆಲೆಯನ್ವಯ ತಮ್ಮ ಕೆಲಸವನ್ನು ಮಾಡಿಕೊಳ್ಳಬಹುದು ಎಂದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ತೀವ್ರತೆಯನ್ನು ಅರಿತುಕೊಂಡು ಕುಡಿಯುವ ನೀರು ಹಾಗೂ ರೈತರ ಜಮೀನಿನಲ್ಲಿ ಕೊಳವೆ ಬಾವಿ ಅಳವಡಿಸುವ ಬಗ್ಗೆ ಹೆಚ್ಚಿನ ಜವಾಬ್ದಾರಿ ಹಾಗೂ ಮಾನವೀಯತೆಯಿಂದ ಹಾಗೂ ಇಲಾಖಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕೊಳವೆಬಾವಿ ಮಾಲೀಕರು/ಏಜೆನ್ಸಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ತಾಲ್ಲೂಕು ಮಟ್ಟದಲ್ಲಿ ಬರಪರಿಸ್ಥಿತಿಯನ್ನು ನಿರ್ವಹಿಸಲು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ರಿಗ್ ಮಾಲೀಕರು /ಏಜೆನ್ಸಿಗಳು ಕೊಳವೆ ಬಾವಿ ಕೊರೆಯಲು ಅಸಮಂಜಸ ದರಗಳನ್ನು ರೈತರಿಗೆ ಬೇಡಿಕೆ ಇಟ್ಟಲ್ಲಿ ಹಾಗೂ ರೈತರಿಗೆ ಕಿರುಕುಳ ನೀಡಿದಲ್ಲಿ, ಅಂಥಹ ರೈತರು/ಬಾಧಿತರು ದೂರುಗಳನ್ನು ಈ ಸಮಿತಿಗೆ ಸಲ್ಲಿಸಲು ಅವಕಾಶ ಇರುತ್ತದೆ. ಸಮಿತಿಯು ಇಂತಹ ದೂರುಗಳನ್ನು ಪರಿಶೀಲಿಸಿ 3 ದಿನಗಳಲ್ಲಿ ಇತ್ಯರ್ಥಪಡಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಕೊಳವೆಬಾವಿ ಮಾಲೀಕರು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ರನ್ವಯ ಫಾರ್ಮ್ -6 ರಲ್ಲಿ ರಿಗ್ ಯಂತ್ರಗಳ/ಘಟಕಗಳ ನೋಂದಣಿ ಮಾಡಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಿ ಫಾರ್ಮ್-7ಎ ರಲ್ಲಿ ಏಜೆನ್ಸಿಯ ನೋಂದಣಿಯನ್ನು ಕಡ್ಡಾಯವಾಗಿ ಪಡೆದು ನಂತರ ಕಾರ್ಯ ನಿರ್ವಹಿಸುವಂತೆ ಸೂಚಿಸಿದ ಅವರು ಈ ಕುರಿತು ನಮೂನೆಗಳನ್ನು ಹಿರಿಯ ಭೂ ವಿಜ್ಞಾನಿಗಳು, ಜಿಲ್ಲಾ ಅಂತರ್ಜಲ ಕಛೇರಿ, ಶಿವಮೊಗ್ಗರವರ ಕಚೇರಿಯನ್ನು ಸಂಪರ್ಕಿಸಬಹುದೆಂದರು.ರಿಗ್ ಮಾಲೀಕರು ತಾವು ಅನುಸ್ಟಾನಗೊಳಿಸುತ್ತಿರುವ ಕೊಳವೆ ಬಾವಿಗಳ ವಿವರಗಳನ್ನು ಪ್ರತಿ ಮಾಹೆ ನಿಗದಿತ ನಮೂನೆಗಳಲ್ಲಿ ಹಿರಿಯ ಭೂ ವಿಜ್ಞಾನಿಗಳು, ಜಿಲ್ಲಾ ಅಂತರ್ಜಲ ಕಚೇರಿ, ಶಿವಮೊಗ್ಗ ಇವರಿಗೆ ಸಲ್ಲಿಸಲು ಸೂಚಿಸಿದರು.ವಿಫಲವಾದ ಕೊಳವೆ ಬಾವಿಗಳ ಕೇಸಿಂಗ್ ಪೈಪ್ ತೆಗೆದ ನಂತರ ಅದೇ ಸಮಯದಲ್ಲಿ ಸಂಪೂರ್ಣವಾಗಿ ಕೊಳವೆ ಬಾವಿಯನ್ನು ಕಡ್ಡಾಯವಾಗಿ ಸೂಕ್ತ ಕ್ರಮವಹಿಸಿ ಮುಚ್ಚಲು ಸೂಚಿಸಿದರು.

Categories
ಬೆಂಗಳೂರು ಮಂಡ್ಯ ರಾಜಕೀಯ ರಾಜ್ಯ

ಕರ್ನಾಟಕದಲ್ಲಿ ಮತ ಸಮರ ಶುರು!

ಕರ್ನಾಟಕದಲ್ಲಿ ಮತ ಸಮರ ಶುರು!
– ಮೊದಲ ಹಂತದ ಚುನಾವಣೆಗೆ ಮಾ.28ರಂದು ‘ನಾಮಪತ್ರ’ ಸಲ್ಲಿಕೆ
– 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26ಕ್ಕೆ ಮತದಾನ
– ಜೆಡಿಎಸ್ ಮೂರು ಸ್ಥಾನಗಳಿಗೆ ಟಿಕೆಟ್ ಫೈನಲ್

NAMMUR EXPRESS NEWS
ಬೆಂಗಳೂರು: ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಗುರುವಾರದಿಂದ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್ 28ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹೇಗೆ?

ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ
– ಹಾಸನಕ್ಕೆ ಪ್ರಜ್ವಲ್ ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್

ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಟ್ಟಿಯ ಕುತೂಹಲಕ್ಕೆ ತೆರೆ ಬಿದ್ದಿದೆ. ಪಕ್ಷದ ನಾಯಕರು, ಕಾರ್ಯಕರ್ತರ ಒತ್ತಡಕ್ಕೆ ಮಣಿದ ಮಾಜಿ ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಕಣಕ್ಕಿಳಿಯಲು ಒಪ್ಪಿದರೆ, ಹಾಸನದಿಂದ ಪ್ರಜ್ವಲ್ ರೇವಣ್ಣ, ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್ ನೀಡುವ ವಿಚಾರವನ್ನು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಿಸಿದರು.

Categories
ತೀರ್ಥಹಳ್ಳಿ ಬೆಂಗಳೂರು ಮಲ್ನಾಡ್ ರಾಜ್ಯ

ತೀರ್ಥಹಳ್ಳಿಯಲ್ಲಿ ಉಗ್ರರ ನಂಟಿನ ಶೋಧ!

ತೀರ್ಥಹಳ್ಳಿಯಲ್ಲಿ ಉಗ್ರರ ನಂಟಿನ ಶೋಧ!
– 5ಕ್ಕೂ ಹೆಚ್ಚು ಕಡೆ ಮಧ್ಯಾಹ್ನದವರೆಗೆ ತಪಾಸಣೆ
– ತೀರ್ಥಹಳ್ಳಿಯಲ್ಲಿ ಎನ್. ಐ. ಎ ದಾಳಿ
– ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯ ಶಂಕಿತರು?!
– ಮನೆಯವರು, ಸ್ನೇಹಿತರು, ಪರಿಚಯಸ್ಥರಿಗೆ ನೋಟೀಸ್

NAMMUR EXPRESS NEWS
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳು ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ದಾಳಿ ನಡೆಸಿದ್ದು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಬುಧವಾರ ಬೆಳಿಗ್ಗೆಯೇ ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು, ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಮಾರ್ಕೆಟ್‌ನಲ್ಲಿರುವ ಒಂದು ಮನೆ, ಹಾಗೂ ಇನ್ನು 2 ಮನೆ, ಒಂದು ಮಳಿಗೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಂದಿರುವ ಅಧಿಕಾರಿಗಳು ತೀರ್ಥಹಳ್ಳಿ ಪೊಲೀಸ್ ಮೂಲಗಳನ್ನು ಬಳಸಿಕೊಂಡು ಈ ದಾಳಿ ನಡೆಸಿದ್ದಾರೆ. ಅಲ್ಲದೆ ರಾಮೇಶ್ವರಂ ಕಥೆ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ

ಶಿವಮೊಗ್ಗ ಜಿಲ್ಲೆ ಪೊಲೀಸರು ಇತ್ತೀಚೆಗೆ ಗಾಂಜಾ ಕೇಸ್‌ನಲ್ಲಿ ಓರ್ವ ಆರೋಪಿಯನ್ನ ಬಂಧಿಸಿದ್ದರು. ಆತ ರಾಮೇಶ್ವರಂ ಕಫೆ ಸ್ಪೋಟದ ಆರೋಪಿಯ ಗುರುತು ಪತ್ತೆ ಮಾಡಿದ್ದ. ಆತನ ಸಹೋದರನೇ ಆರೋಪಿಯಾಗಿದ್ದು, ಪೊಲೀಸರ ಬಳಿ ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಖಾತರಿಗೊಳಿಸಿದ್ದ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ಪಡೆದುಕೊಂಡಿದ್ದು ಎನ್‌ಐಎ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಐಸಿಸ್ ಮ್ಯಾಡುಲ್ ಮೇಲೆ ಎನ್‌ಐಎ ಅಧಿಕಾರಿಗಳ ಕಣ್ಣು ನೆಟ್ಟಿದ್ದು, ಮಹತ್ವದ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಸ್ಟೇಷನ್‌ ಪೊಲೀಸರು ಈ ಹಿಂದೆ ಅರೆಸ್ಟ್ ಮಾಡಿದ್ದ ಆರೋಪಿಗಳು ಜಬೀ, ಯಾಸಿನ್, ಮಾಜ್ ಸೇರಿದಂತೆ ಹಲವರು ಕೇರಳ ಐಸಿಸ್ ಮ್ಯಾಡುಲ್ ಜೊತೆಗೆ ಸಂಪರ್ಕದಲ್ಲಿದ್ದರ ಬಗ್ಗೆ ಮಾಹಿತಿ ಸ್ಪಷ್ಟವಾಗಿದೆ.

ಇವರೆಲ್ಲರೂ ಐಸಿಸ್ ಸಂಘಟನೆ ಸೇರುವ ಸಲುವಾಗಿ ದುಷ್ಕೃತ್ಯಗಳನ್ನು ಎಸೆಗುತ್ತಿದ್ದರು. ಈ ಮೂಲಕ ತಮ್ಮ ಸಾಮರ್ಥ್ಯ ತೋರಿ ಸಂಘಟನೆಗೆ ಸೇರಲು ಮುಂದಾಗಿದ್ದರು ಎನ್ನಲಾಗಿದೆ. ಐಸಿಸ್ ಸಂಘಟನೆಗೆ ರಿಕ್ಯೂಟ್ ಮಾಡುತ್ತಿರುವ ಆರೋಪಿಗಳಲ್ಲಿ ಅಪ್ಸರ್ ಫಾಷಾ, ಅರಾಫತ್ ಅಲಿ ಹಾಗೂ ಶಾರೀಖ್ ಮುಖ್ಯ ವ್ಯಕ್ತಿಗಳಾಗಿದ್ದಾರೆ. ದೇಶದ ಭದ್ರತಾ ಸಂಸ್ಥೆ ಇಂತಹ ವ್ಯಕ್ತಿಗಳ ಮೇಲೆ ಹಾಗೂ ಸಂಘಟನೆ ಮೇಲೆ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶಂಕಿತರು ತಮ್ಮ ಕಾರ್ಯತಂತ್ರವನ್ನು ಸಹ ಬದಲಾಯಿಸಿದ್ದರು ಎಂಬ ಮಾಹಿತಿ ಇದೆ. ಆರೋಪಿಗಳು ಯಾವುದೋ ಒಂದು ಶಂಕಿತ ಚಟುವಟಿಕೆ ನಡೆಸಿ ಎನ್‌ಐಎ ಅಧಿಕಾರಿಗಳ ಟಾರ್ಗೆಟ್ ಆದ ಬಳಿಕವಷ್ಟೆ ಅವರನ್ನ ಆತಂಕವಾದಿ ಸಂಘಟನೆಗಳು ತಮ್ಮ ಸಂಘಟನೆಗೆ ಸೇರಿಸಿಕೊಳ್ಳುತ್ತಿವೆ.

ಈ ಕಾರಣಕ್ಕೆ ಮೊದಲು ಯಾಸೀನ್, ಮಾಜ್, ನಂತರ ಶಾರೀಖ್, ಇದೀಗ ಮುಸಾವೀ‌ರ್ ಅಲಿಯಾಸ್ ಶಾಜೀಬ್ ದುಷ್ಕೃತ್ಯಗಳನ್ನು ಎಸೆಗಿದ್ದಾರೆ ಎನ್ನಲಾಗಿದೆ. ಶಾಜಿಬ್ ಹಾಗೂ ಮತೀನ್ ಬೆಂಗಳೂರಿನಲ್ಲಿ ನಡೆದ ಸ್ಫೋಟದ ಕೃತ್ಯದಲ್ಲಿ ಪಾಲ್ಗೊಂಡಿದ್ದು, ಅವರ ಕೈವಾಡ ಶಿವಮೊಗ್ಗ ತುಂಗಾ ನದಿ ತೀರದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿಯು ಇರುವುದು ಎನ್‌ಐಎ ಅಧಿಕಾರಿಗಳಿಗೆ ತಿಳಿದಿದೆ. ಇಷ್ಟೆ ಅಲ್ಲದೆ ತೀರ್ಥಹಳ್ಳಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಮಿಸ್ಸಿಂಗ್ ಇದ್ದು, ಅವರ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಶಿವಮೊಗ್ಗ ಪೊಲೀಸ್‌ ಇಲಾಖೆಯು ಹೆಚ್ಚಿನ ಗಮನ ಹರಿಸುತ್ತಿದೆ. ಇದರ ನಡುವೆ ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸಿದೆ.

ತೀರ್ಥಹಳ್ಳಿ ಶಾಸಕರ ಬೇಸರ

ಎನ್‌ಐಎ ಬೆಂಗಳೂರು ಅಧಿಕಾರಿಗಳು ರಾಮೇಶ್ವರ ಕೆಫೆ ಬ್ಲಾಸ್ಟ್ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದು ಇವರು ತೀರ್ಥಹಳ್ಳಿಯವರಾಗಿರುವುದು ಬೇಸರ ಹಾಗೂ ನೋವಿನ ಸಂಗತಿ ಎಂದು ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮನೆಯವರು, ಸ್ನೇಹಿತರು, ಪರಿಚಯಸ್ಥರಿಗೆ ನೋಟೀಸ್

ಬೆಂಗಳೂರಿಂದ ಮುಂಜಾನೆ ಬಂದ ಅಧಿಕಾರಿಗಳು ಮಧ್ಯಾಹ್ನದವರೆಗೆ ತನಿಖೆ ಹಾಗೂ ವಿಚಾರಣೆ ನಡೆಸಿದ್ದಾರೆ. ಅನೇಕ ಮನೆಗಳು, ಕೆಲ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ಶಂಕಿತರ ಮನೆಯವರು, ಸ್ನೇಹಿತರು, ಪರಿಚಯಸ್ಥರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Categories
ಶಿವಮೊಗ್ಗ

ಟ್ರಕ್ ಅಲ್ಲಿ ಕೋಟಿ ಕೋಟಿ ಚಿನ್ನ ಸಾಗಣೆ!

ಟ್ರಕ್ ಅಲ್ಲಿ ಕೋಟಿ ಕೋಟಿ ಚಿನ್ನ ಸಾಗಣೆ!
– ತರೀಕೆರೆ: 4 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ವಶ!
– ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ದಾಳಿ
– ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ: ವಶ!

NAMMUR EXPRESS NEWS
ತರೀಕೆರೆ: ಎಲ್ಲೆಡೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮವಾಗಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಕೋಟ್ಯಂತರ ಮೌಲ್ಯದ ಚಿನ್ನ, ಡೈಮಂಡ್ಸ್ ಹಾಗೂ ಬೆಳ್ಳಿ ವಸ್ತುಗಳನ್ನು ಟ್ರಕ್ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚುನಾವಣಾಧಿಕಾರಿಗಳು, ಪೊಲೀಸರು ಟ್ರಕ್ ತಡೆದು ಪರಿಶೀಲನೆ ನಡೆಸಿದಾಗ ಚಿನ್ನಾಭರಣಗಳು ಪತ್ತೆಯಾಗಿದೆ. 6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ 873.731 ಗ್ರಾಂ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ದಾಳಿ!

ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೀಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ ಸಾಧ್ಯತೆ ಇದೆ.

ಶಿವಮೊಗ್ಗದಲ್ಲಿಲೋಕಾಯುಕ್ತ ದಾಳಿ: ಚಿನ್ನ ವಶ?!

ಶಿವಮೊಗ್ಗ: ಬಜಾರ್ ಕರಿದೇವರ ಕೇರಿಯಲ್ಲಿರುವ ಮನೆಯೊಂದರಲ್ಲ ತಪಾಸಣೆ ನಡೆಸಿರುವ ಬೆಂಗಳೂರು ಲೋಕಾಯುಕ್ತರು ಎರಡು ಬೊಲೆರೋದಲ್ಲಿ 8 ಅಧಿಕಾರಿಗಳು ರಂಗನಾಥ ನಿಲಯದಲ್ಲಿ ಐದನೇ ಅಂತಸ್ಥಿನ ಮನೆಯೊಂದರಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಬಿಬಿಎಂಪಿ ಇಂಜಿನಿಯರ್ ಅವರಿಗೆ ಸಂಬಂಧಿಸಿದ ಕಟ್ಟಡವಾದ ಕಾರಣ ತಪಾಸಣೆ ನಡೆಸಿರುವ ಲೋಕಾಯುಕ್ತರು ಇಂಜಿನಿಯರ್ ಅವರ ಹೆಸರು ಹೇಳಲು ನಿರಾಕರಿಸಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ ನ ಮನೆಯ ಮೇಲೆ ನಡೆದ ದಾಳಿಯ ವೇಳೆ ಬೀಗ ಒಡೆಯುವ ಹಾಗೂ ಚಿನ್ನಾಭರಣ ತೂಕ ಮಾಡುವ ಖಾಸಗಿ ವ್ಯಕ್ತಿಗಳನ್ನ ಕರೆತರಲಾಗಿದೆ.

Categories
ಮಾಹಿತಿ ರಾಜ್ಯ ರಾಷ್ಟ್ರೀಯ ವಾರ್ತೆ

ಎಲ್‌ಐಸಿ ವಿಶ್ವದ ಅತ್ಯಂತ ಬಲಿಷ್ಠ ವಿಮಾ ಬ್ರಾಂಡ್!

ಎಲ್‌ಐಸಿ ವಿಶ್ವದ ಅತ್ಯಂತ ಬಲಿಷ್ಠ ವಿಮಾ ಬ್ರಾಂಡ್!
– ಫೈನಾನ್ಸ್ ಇನ್ಸೂರೆನ್ಸ್ ವರದಿ: ಏನಿದು ವರದಿ..?

NAMMUR EXPRESS NEWS
ನವದೆಹಲಿ: ಭಾರತದ ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ವಿಶ್ವದಲ್ಲೇ ಅತ್ಯಂತ ಬಲಿಷ್ಠ ವಿಮಾ ಬ್ರಾಂಡ್ ಎಂಬ ಹೆಗ್ಗಳಿಕೆಗೆ ಪಾತ್ರ ವಾಗಿದೆ. ‘ಬ್ರಾಂಡ್ ಫೈನಾನ್ಸ್ ಇನ್ಸೂರೆನ್ಸ್ 100’ ಬಿಡುಗಡೆ ಮಾಡಿರುವ 2024ನೇ ಸಾಲಿನ ವರದಿಯಲ್ಲಿ ಈ ಅಂಶವಿದೆ. ಎಲ್‌ಐಸಿಯ ಬ್ರಾಂಡ್ ಮೌಲ್ಯ 9.8 ಶತಕೋಟಿ ಡಾಲರ್‌ನಲ್ಲೇ ಸ್ಥಿರವಾಗಿ ಮುಂದುವರೆದಿದೆ. ಬ್ಯಾಂಡ್ ಸ್ಟೆಂಥ್‌ ಇಂಡೆಕ್ಸ್‌ನಲ್ಲಿ ಎಲ್ ಐ ಸಿ ಶೇ.88.3ರಷ್ಟು ಅಂಕ ಹೊಂದಿದೆ ಮತ್ತು ಬ್ರಾಂಡ್ ಸ್ಟೆಂಥ್ ರೇಟಿಂಗ್‌ನಲ್ಲಿ ಎಎಎ ಸ್ತರ ಹೊಂದಿದೆ ಎಂದು ವರದಿ ಹೇಳಿದೆ. ಎಲ್‌ಐಸಿ ನಂತರದ ಸ್ಥಾನವನ್ನು ಕ್ಯಾಥೆ ಲೈಫ್‌ ಇನ್ಸೂರೆನ್ಸ್, ಎನ್‌ಆರ್‌ಎಂಎ ಇನ್ಸೂರೆನ್ಸ್ ಹೊಂದಿವೆ. ಇನ್ನು ಬ್ಯಾಂಡ್ ಮೌಲ್ಯದಲ್ಲಿ ಚೀನಾದ ಪಿಂಗ್ ಆ್ಯನ್, ಚೀನಾ ಲೈಫ್ ಇನ್ಸೂರೆನ್ಸ್ ಮತ್ತು ಸಿಪಿಐಸಿ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.