Categories
ಚಿಕ್ಕಮಗಳೂರು

ಉಡುಪಿ – ಚಿಕ್ಕಮಗಳೂರು: ಹಲವೆಡೆ ಗೊಂದಲ!

ಉಡುಪಿ – ಚಿಕ್ಕಮಗಳೂರು: ಹಲವೆಡೆ ಗೊಂದಲ!
– ಬಿರುಸಿನ ಮತದಾನ: ಮತ ಹಾಕಿದ ಶ್ರೀಗಳು
– ಆರಂಭದಲ್ಲೇ ಕೈಕೊಟ್ಟ ಇವಿಎಂ, ಮತದಾನ ಸ್ಥಗಿತ
– ರಂಭಾಪುರಿ, ಹರಿಹರಪುರ ಶ್ರೀಗಳಿಂದ ಮತದಾನ

NAMMUR EXPRESS NEWS
ಚಿಕ್ಕಮಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುರು. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಮತದಾನ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಇನ್ನು ರಾಜ್ಯದ ಹಲವೆಡೆ ಮತಯಂತ್ರವು ಆರಂಭದಲ್ಲೇ ಕೈಕೊಟ್ಟಿದ್ದು, ಕೆಲಕಡೆ ವೋಟಿಂಗ್‌ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ:

ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದಗಿ ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಮತದಾನ ಸ್ಥಗಿತಗೊಂಡಿತ್ತು. ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತ ದೃಶ್ಯಗಳು ಕಂಡುಬಂದವು.

ರಂಭಾಪುರಿ, ಹರಿಹರಪುರ ಶ್ರೀಗಳಿಂದ ಮತದಾನ

ಬಾಳೆಹೊನ್ನೂರು ರಂಭಾಪುರಿ ಮಠದ ಶ್ರೀಗಳು ಎಲ್ಲರಿಗಿಂತ ಮೊದಲು ಮತದಾನ ಮಾಡಿ ಮಾದರಿಯಾಗಿದ್ದಾರೆ. ಈ ವೇಳೆ ಮತದಾನ ಸಂವಿಧಾನ ಕೊಟ್ಟ ಅಧಿಕಾರ ಎಂಬುದು ಮರೆಯಬೇಡಿ. ಸಧೃಢ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಪ್ರತಿ ಚುನಾವಣೆಯಲ್ಲೂ ರಂಭಾಪುರಿ ಮಠದ ಬೂತ್ ನ ಜನ ಶ್ರೀಗಳು ಮತದಾನ ಮಾಡುವವರೆಗೂ ಕಾಯುತ್ತಾರೆ. ಬಳಿಕವಷ್ಟೇ ಉಳಿದವರು ಮಾಡುತ್ತಾರೆ. ಇನ್ನು ಕೊಪ್ಪದ ಹರಿಹರಪುರದಲ್ಲಿ ಹರಿಹರಪುರ ಶ್ರೀಗಳು ಮತದಾನ ಮಾಡಿದ್ದಾರೆ.

Categories
ಜಾತಕ

ನಿಮ್ಮ ರಾಶಿ ಭವಿಷ್ಯ ಹೇಗಿದೆ?

ನಿಮ್ಮ ರಾಶಿ ಭವಿಷ್ಯ ಹೇಗಿದೆ?
– ಯಾವ ರಾಶಿಗೆ ಲಾಭ? ಯಾವ ರಾಶಿಗೆ ನಷ್ಟ?

NAMMUR EXPRESS NEWS
2024 ಏಪ್ರಿಲ್ 26ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಅಶುಭ…?

** ಮೇಷ ರಾಶಿ :
ನೀವು ಮನೆಯಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ದೇವರ ದಯೆಯಿಂದ ಮುನ್ನಡೆಯುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಭವಿಷ್ಯದ ಯೋಜನೆಗಳನ್ನು ರೂಪಿಸಲಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಅನುಕೂಲಕರವಾಗಿರುತ್ತದೆ.

** ವೃಷಭ ರಾಶಿ :
ಶಾರೀರಿಕ ಮತ್ತು ಮಾನಸಿಕ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಇತರರ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬದಲಾಯಿಸುವುದು ಒಳ್ಳೆಯದು. ನಿರೀಕ್ಷಿತ ಸಮಯದಲ್ಲಿ ಕೆಲಸಗಳು ಪೂರ್ಣಗೊಳ್ಳದೆ ಸಂಕಷ್ಟಕ್ಕೆ ಸಿಲುಕಲಿದ್ದೀರಿ. ವೃತ್ತಿಪರ ಉದ್ಯೋಗಗಳಲ್ಲಿ, ಅಧಿಕಾರಿಗಳ ಕೋಪಕ್ಕೆ ಒಳಗಾಗುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಜಾಗರೂಕರಾಗಿರಿ.

** ಮಿಥುನ ರಾಶಿ :
ಹೊಸ ವಸ್ತು ಮತ್ತು ವಾಹನ ಅನುಕೂಲತೆ ಉಂಟಾಗುತ್ತದೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ಬಂಧುಮಿತ್ರರ ಭೇಟಿ ಸಂತಸ ತರುತ್ತದೆ. ಕುಟುಂಬ ಸದಸ್ಯರೊಂದಿಗೆ ಸಾಮರಸ್ಯ ಇರುತ್ತದೆ. ಉದ್ಯೋಗಿಗಳಿಗೆ ಅನುಕೂಲತೆ ಹೆಚ್ಚಾಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ.

** ಕರ್ಕಟ ರಾಶಿ :
ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ. ಸಮಾಜದಲ್ಲಿ ವಿಶೇಷ ಗೌರವ ಹೆಚ್ಚಾಗುತ್ತದೆ. ನಿರುದ್ಯೋಗ, ಪ್ರಯತ್ನಗಳುಅನುಕೂಲಕರವಾಗಿರುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ . ಬಂಧು ಮಿತ್ರರಿಂದ ಶುಭ ಸುದ್ದಿ ದೊರೆಯುತ್ತದೆ.

** ಸಿಂಹ ರಾಶಿ :
ಇತರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ವ್ಯಾಪಾರಗಳಲ್ಲಿ ಆಲೋಚನೆಗಳ ಸ್ಥಿರತೆಯ ಕೊರತೆ ಉಂಟಾಗುತ್ತದೆ. ಶಾರೀರಿಕ ಆರೋಗ್ಯ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ನೋವುಂಟು ಮಾಡುತ್ತವೆ. ಬೆಲೆಬಾಳುವ ವಸ್ತುಗಳ ಬಗ್ಗೆ ಜಾಗರೂಕರಾಗಿರಿ. ಮಕ್ಕಳ ಉದ್ಯೋಗದ ಪ್ರಯತ್ನಗಳು ನಿಧಾನವಾಗುತ್ತವೆ.

** ಕನ್ಯಾ ರಾಶಿ :
ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಹಳೆಯ ಸ್ನೇಹಿತರೊಂದಿಗೆ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ವಹಿವಾಟು ನಿಧಾನವಾಗಿ ಸಾಗುತ್ತದೆ. ಉದ್ಯೋಗಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ.

** ತುಲಾ ರಾಶಿ :
ಹೊಸವಸ್ತು, ಆಭರಣ ಖರೀದಿಸುತ್ತೀರಿ. ಎಲ್ಲ ಕಡೆಯಿಂದಲೂ ಒಳ್ಳೆಯದೇ ಆಗುತ್ತದೆ. ಕೆಲವು ವ್ಯವಹಾರಗಳಲ್ಲಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡು ಆತ್ಮ ವಿಶ್ವಾಸದಿಂದ ಮುನ್ನಡೆಯುತ್ತೀರಿ. ಯೋಜಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಆರ್ಥಿಕ ಅನುಕೂಲತೆ ಉಂಟಾಗುತ್ತವೆ. ವ್ಯಾಪಾರಗಳಿಗೆ ಲಾಭ ದೊರೆಯುತ್ತದೆ.

** ವೃಶ್ಚಿಕ ರಾಶಿ :
ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಸೌಲಭ್ಯಗಳ ಕೊರತೆಯಿಲ್ಲದಿದ್ದರೂ ಇತರರಿಂದ ತೊಂದರೆಗಳು ಉಂಟಾಗುತ್ತವೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ವಿವಾದಗಳು ಉಂಟಾಗುತ್ತವೆ. ನೇತ್ರಸಂಬಂಧಿ ಕಾಯಿಲೆಗಳಿದ್ದಲ್ಲಿ ಎಚ್ಚರಿಕೆ ವಹಿಸಬೇಕು. ವೃತ್ತಿಪರ ಉದ್ಯೋಗಗಳಲ್ಲಿನ ಸಮಸ್ಯೆಗಳು ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ.

** ಧನುಸ್ಸು ರಾಶಿ :
ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತವೆ. ಮನೆಯ ಹೊರಗೆ ವಾತಾವರಣ ಅನುಕೂಲಕರವಾಗಿರುತ್ತದೆ. ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸುತ್ತೀರಿ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ಉದ್ಯೋಗದ ವಿಷಯದಲ್ಲಿ ನಿಮ್ಮ ಪ್ರತಿಭೆಗೆ ತಕ್ಕ ಮನ್ನಣೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅನುಕೂಲಕರ ಸಮಯ.

** ಮಕರ ರಾಶಿ :
ಉದ್ಯೋಗದಲ್ಲಿ ಖರ್ಚು ಮತ್ತು ಶ್ರಮ ಅಧಿಕವಾಗಿರುತ್ತದೆ. ಬಂಧುಗಳಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಮೂಡುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಏರಿಳಿತಗಳಿರುತ್ತವೆ. ಉದ್ಯೋಗದಲ್ಲಿ ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ನಿರುದ್ಯೋಗ ಪ್ರಯತ್ನಗಳಿಗೆ ಹತಾಶೆ ಉಂಟಾಗುತ್ತದೆ.

** ಕುಂಭ ರಾಶಿ :
ಬಂಧುಗಳಿಂದ ಅಮೂಲ್ಯ ಮಾಹಿತಿ ದೊರೆಯಯುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳನ್ನು ನಿವಾರಿಸಿಕೊಂಡು ಮುನ್ನಡೆಯುತ್ತೀರಿ. ವ್ಯಾಪಾರಗಳು ಸುಗಮವಾಗಿಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಉನ್ನತ ಸ್ಥಾನವನ್ನು ಪಡೆಯುತ್ತೀರಿ. ಬೆಲೆಬಾಳುವ ವಸ್ತುಗಳು ಉಡುಗೊರೆಯಾಗಿ ದೊರೆಯುತ್ತವೆ.

** ಮೀನ ರಾಶಿ :
ಇತರರೊಂದಿಗೆ ವಿವಾದಗಳು ಉಂಟಾದರೂ ಯಶಸ್ಸನ್ನು ಪಡೆಯುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಬೆಂಬಲ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಆತ್ಮವಿಶ್ವಾಸದಿಂದ ದೃಢ ನಿರ್ಧಾರಗಳನ್ನು ಕಾರ್ಯಗತಗೊಳಿಸಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತೀರಿ. ನಿರುದ್ಯೋಗಿಗಳು ಅವಕಾಶಗಳನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಬೇಕು. ಸಮುದಾಯದಲ್ಲಿ ಗೌರವ ಹೆಚ್ಚಾಗುವುದು.

Categories
ಬೆಂಗಳೂರು ರಾಜ್ಯ

ಕರ್ನಾಟಕದಲ್ಲಿ ಮತದಾನ ಶುರುವಾಗಿದೆ!

ಕರ್ನಾಟಕದಲ್ಲಿ ಮತದಾನ ಶುರುವಾಗಿದೆ!
– ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಮತದಾನ
– ರಾಜ್ಯದ 14 ಲೋಕ ಸಭಾ ಕ್ಷೇತ್ರದಲ್ಲಿ ಮತದಾನ ಬಿರುಸು
– ಸಣ್ಣ ಪುಟ್ಟ ಗಲಾಟೆ, ಎಲ್ಲೆಲ್ಲಿ ಏನಾಗಿದೆ..?
– 247 ಅಭ್ಯರ್ಥಿಗಳ ಹಣೆಬರಹ ನಿರ್ಧಾರ ಮಾಡ್ತಾರೆ ಜನ

NAMMUR EXPRESS NEWS
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ 14 ಕ್ಷೇತ್ರದಲ್ಲಿ ಮೊದಲ ಹಂತದ ಲೋಕ ಸಭಾ ಚುನಾವಣೆ ಬೆಳಿಗ್ಗೆಯಿಂದಲೇ ಶುರುವಾಗಿದೆ. ಮೊದಲ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಮತದಾರರು ಮುಂಜಾನೆಯಿಂದಲೇ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಚುನಾವಣೆ ನಡೆಯುತ್ತಿದೆ.

ಸಣ್ಣಪುಟ್ಟ ಗಲಾಟೆ

ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ಮಾಡಲು ಯತ್ನಿಸಿ ಅರೆಸ್ಟ್ ಆಗಿದ್ದಾನೆ.
ರಾಜ್ಯದ ಹಲವೆಡೆ ಇವಿಎಂ ಮತ ಯಂತ್ರಗಳು ಕೈಕೊಟ್ಟ ಘಟನೆಗಳು ವರದಿಯಾಗಿವೆ.

Categories
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಕೌಂಟ್ ಡೌನ್!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಕೌಂಟ್ ಡೌನ್!
– ಎಲ್ಲಾ ಮತಗಟ್ಟೆಗಳಿಗೂ ಅಧಿಕಾರಿಗಳ ನೇಮಕ
– ಎಲ್ಲೆಡೆ ಅಲರ್ಟ್: ಚುನಾವಣೆಗೆ ಕ್ಷಣಗಣನೆ
– ಬೆಳಿಗ್ಗೆ 7ರಿಂದ ಮತದಾನ: ನಿಷೇಧಾಜ್ಞೆ

NAMMUR EXPRESS NEWS
ಮಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ 17-ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.
ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಮಸ್ಟರಿಂಗ್ ಕಾರ್ಯ ಜರುಗುವ ಶಾಲಾ-ಕಾಲೇಜುಗಳ ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ ಗಾಗಿ ನಿಯೋಜಿತಗೊಂಡಿರುವ ಪೊಲೀಸರು, ಸಿಆರ್ಪಿಎಫ್ ಯೋಧರು, ಗೃಹರಕ್ಷಕದಳದವರು ಕೂಡ ಆಗಮಿಸಿದ್ದರು.

ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ, ಪೊಲೀಸರು, ಯೋಧರನ್ನು ಕರೆದುಕೊಂಡು ಹೋಗಲು ಬಸ್ ಗಳು ಹಾಗೂ ವಿವಿಧ ವಾಹನಗಳು ಶಾಲಾ ಕಾಲೇಜುಗಳ ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಆಯಾ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ, ಬಸ್ ಗಳು ಹಾಗೂ ವಾಹನಗಳನ್ನು ನಿಯೋಜಿಸಲಾಗಿತ್ತು. ಶಾಲಾ ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ಗಳ ವಿವರವನ್ನು ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು.

ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್ವಾರು ಕೌಂಟರ್ಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು. ಮಸ್ಟರಿಂಗ್ ಕಾರ್ಯಕ್ಕೆ ಆಗಮಿಸಿದ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಲ್ಲಿ, ತ್ವರಿತ ಸ್ಪಂದನೆಗಾಗಿ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿತ್ತು.

ಮತದಾನ ಕಾರ್ಯ

ಏ. 26 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಡೆಯಲಿದ್ದು, ಸುಗಮ ಮತದಾನಕ್ಕೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಕೈಗೊಂಡಿದೆ. ಮತದಾರರು ತಪ್ಪದೆ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಲಿ ಎಂಬುದು ಜಿಲ್ಲಾಡಳಿತದ ಆಶಯವಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬೆಳ್ತಂಗಡಿ, ಮೂಡಬಿದ್ರೆ ಹಾಗೂ ಮಂಗಳೂರಿನ ಕೆನರಾ ಪ್ರೌಢಶಾಲೆಯ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ, ಚುನಾವಣಾ ಸಿಬ್ಬಂದಿಗಳಿಗೆ ಆತ್ಮವಿಶ್ವಾಸ ತುಂಬಿದರು.

Categories
ಉಡುಪಿ

ಉಡುಪಿ ಜಿಲ್ಲೆಯಲ್ಲಿ ಮತ ಸಮರಕ್ಕೆ ಕ್ಷಣಗಣನೆ ಶುರು

ಉಡುಪಿ ಜಿಲ್ಲೆಯಲ್ಲಿ ಮತ ಸಮರಕ್ಕೆ ಕ್ಷಣಗಣನೆ ಶುರು
– 1842 ಮತದಾನ ಕೇಂದ್ರ: ಮತಯಂತ್ರದೊಂದಿಗೆ ಪ್ರತಿ ಮತಗಟ್ಟೆ ಕೇಂದ್ರ ತಲುಪಿದ ಸಿಬ್ಭಂದಿ
– ಮತ ಚಲಾಯಿಸುವುದೊಂದೇ ಬಾಕಿ.!

NAMMUR EXPRESS NEWS
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರತಿಯೊಂದು ಮತಗಟ್ಟೆ ಕೇಂದ್ರಕ್ಕೂ ಮತಯಂತ್ರದೊಂದಿಗೆ ಸುರಕ್ಷಿತವಾಗಿ ತಲುಪಿದ್ದಾರೆ. ಇನ್ನೇನಿದ್ದರೂ ಮತದಾರರು ಮತಚಲಾಯಿಸುವುದೊಂದೇ ಬಾಕಿ.! ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ 1842 ಮತದಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಸ್ಟರಿಂಗ್ ಸೆಂಟರ್‌ನಿಂದ ಮತಯಂತ್ರಗಳು, ಚುನಾವಣೆಗೆ ಅಗತ್ಯವಿರುವ ಪರಿಕರಗಳನ್ನು ಪಡೆದು ಗುರುವಾರ ಸಂಜೆ 6.50 ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಮತದಾನ ಕೇಂದ್ರಗಳನ್ನು ಸುರಕ್ಷಿವಾಗಿ ತಲುಪಿದ್ದಾರೆ.

ಶುಕ್ರವಾರ ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ ಮಾಡಲು ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ ಚುನಾವಣೆ ಕುರಿತ ಮಾಹಿತಿ ಸಂಗ್ರಹಣೆಗೆ ಸ್ಥಾಪಿಸಿರುವ ವಾರ್ ರೂಮ್ ನಲ್ಲಿ ಮಾಹಿತಿಗಳನ್ನು ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರತಿಯೊಂದು ಮತದಾನ ಕೇಂದ್ರದಲ್ಲಿ ಪ್ರತಿಕ್ಷಣದ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಸಂಜೆ ಎಲ್ಲಾ ಮತದಾನ ಕೇಂದ್ರಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಯಂತ್ರ ಹಾಗೂ ಮತ್ತಿತರ ಪರಿಕರಗಳನ್ನು ಸುರಕ್ಷಿತವಾಗಿ ತಲುಪಿಸಿದ್ದಾರೆ ಉಡುಪಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ 866 ಮತ ಕೇಂದ್ರಗಳಿಗೆ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಯಂತ್ರಗಳನ್ನು ಕೊಂಡೊಯ್ಯಲು 252 ಜಿ.ಪಿ.ಎಸ್ ಅಳವಡಿಸಿದ ಬಸ್ ಹಾಗೂ ಇತರೆ ಲಘು ವಾಹನಗಳನ್ನು ಬಳಸಲಾಗಿತ್ತು. ಈ ವಾಹನಗಳ ಜಿ.ಪಿ.ಎಸ್ ಟ್ರಾö್ಯಕಿಂಗ್ ಅನ್ನು ವಾರ್‌ರೂಮಿನಲ್ಲಿ ಮಾಹಿತಿ ಪಡೆಯಲಾಗಿದೆ ಎಂದರು.

ಪ್ರತೀ ಮತದಾನ ಕೇಂದ್ರದಿಂದ ಎರಡು ಗಂಟೆಗಳಿಗೊಮ್ಮೆ ಶೇಕಡವಾರು ಮತದಾನ ಆಗಿರುವ ಬಗ್ಗೆ ಮಾಹಿತಿಯನ್ನು ಪಡೆಯಲಾಗುವುದು ಎಂದ ಅವರು ಪ್ರತೀ ಎರಡು ಗಂಟೆಗಳಿಗೊಮ್ಮೆ ಶೇಕಡವಾರು ಮತದಾನ ವಿವರವನ್ನು ಮಾಧ್ಯಮ ಪ್ರತಿನಿಧಿಗಳಿಗೆ ನೀಡಲು ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 866 ಮತದಾನ ಕೇಂದ್ರಗಳಿದ್ದು, ಅವುಗಳಲ್ಲಿ 791 ಮತಗಟ್ಟೆ ಕೇಂದ್ರಗಳಿಗೆ ವೆಬ್‌ಕಾಸ್ಟಿಂಗ್ ಅಳವಡಿಸಿದ್ದು, ಈ ಮತಗಟ್ಟೆಗಳಲ್ಲಿ ನಡೆಯುವ ಪ್ರತಿಯೊಂದು ಕ್ಷಣವನ್ನು ನೇರವಾಗಿ ವಾರ್‌ರೂಮಿನಿಂದ ವೀಕ್ಷಿಸಲಾಗುವುದು ಎಂದರು.

Categories
ಚಿಕ್ಕಮಗಳೂರು

ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ!

ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ!
– ಇಂದಿರಾ ಗಾಂಧಿಗೆ ರಾಜಕೀಯ ಪುರ್ನಜನ್ಮ ನೀಡಿದ್ದ ಕ್ಷೇತ್ರ
– ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೊನೆ ಗಳಿಗೆ ಕಾತುರ
– ಜಯಪ್ರಕಾಶ್ ಹೆಗ್ಡೆನಾ..? ಕೋಟಾ ಶ್ರೀನಿವಾಸ್ ಪೂಜಾರಿನಾ?

NAMMUR EXPRESS NEWS
ಚಿಕ್ಕಮಗಳೂರು: ಕಾಫಿನಾಡು ಪ್ರಾಕೃತಿಕವಾಗಿ ವೈಶಿಷ್ಟ್ಯ ಹೊಂದಿರುವಂತೆ ರಾಜಕೀಯವಾಗಿಯೂ ಇಡೀ ದೇಶದಲ್ಲಿ ಛಾಪು ಮೂಡಿಸಿದೆ. ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ನೆಲ ಇದಾಗಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಇತಿಹಾಸ ಮತ್ತೆ ಮರುಕಳಿಸುವುದೇ ಎಂಬ ಕುತೂಹಲ ಕೆರಳಿಸಿದೆ. ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಏ.26ರಂದು ನಡೆಯಲಿದ್ದು, ಇನ್ನೇನು ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ್‌ ಪೂಜಾರಿ ಕಣದಲ್ಲಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ್‌ ಹೆಗ್ಡೆ ಸ್ಪರ್ಧೆಯಲ್ಲಿದ್ದಾರೆ. ರಾಜಕೀಯವಾಗಿ ಚಿಕ್ಕಮಗಳೂರು ಜಿಲ್ಲೆಯನ್ನು ನೋಡಿದಾಗ ಅನೇಕ ಏಳುಬೀಳುಗಳಿಗೆ ಕಾರಣವಾಗಿದೆ.

ಕಾಫಿನಾಡು ಕಾಂಗ್ರೆಸ್‌ ಭದ್ರಕೋಟೆಯಾಗಿ ಮಾರ್ಪಟ್ಟಿತ್ತು. ಆದರೆ ಕಾಲ ಸರಿದಂತೆ ಬಿಜೆಪಿ ಪ್ರಾಬಲ್ಯ ಬೆಳೆಸಿಕೊಂಡಿತು. ಕೈ ಕಳಚಿದರೆ, ಕಮಲ ಅರಳಿತು. ಕಾಂಗ್ರೆಸ್‌ ತನ್ನ ಪ್ರಾಬಲ್ಯ ಕಳೆದುಕೊಳ್ಳಲು ಅನೇಕ ಕಾರಣಗಳಿವೆ. ಉತ್ತುಂಗದಲ್ಲಿದ್ದಾಗ ಪ್ರಧಾನಿ ದಿ.ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಬಳಿಕ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನಮ್ಮನ್ನು ಮಣಿಸುವವರು ಯಾರಿಲ್ಲ ಎಂಬ ಭಾವನೆ ಬೆಳೆಯಿತು. ಸಂದರ್ಭವನ್ನು ಬಳಸಿಕೊಂಡ ಬಿಜೆಪಿ ತನ್ನ ಪ್ರಾಬಲ್ಯ ಬೆಳೆಸಿಕೊಳ್ಳಲು ಸಾಧ್ಯವಾಯಿತು. ಕಾಲ ಸರಿದಂತೆ ಬಿಜೆಪಿ ಪ್ರಾಬಲ್ಯ ಬೆಳೆಸಿಕೊಂಡಿತು. ಬಿಜೆಪಿ ಭದ್ರಕೋಟೆಯಾಗಿ ಮಾರ್ಪಟ್ಟಿತು. ಕಾಂಗ್ರೆಸ್‌ ಕಳೆಗುಂದಿ ಪ್ರತಿ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವ ಪಡೆದರೆ, ಪ್ರತೀ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿತು. ಆದರೆ, 2023ರ ವಿಧಾನಸಭೆ ಚುನಾವಣೆ ಜಿಲ್ಲೆಯಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿತು. ಕಮಲ ಸಂಪೂರ್ಣವಾಗಿ ಸೋಲುಣ್ಣಬೇಕಾಯಿತು. ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಮೂಲಕ ಕೈ ಬಲಪಡಿಸಿಕೊಂಡಿತು.

ಈ ಹಿನ್ನೆಲೆಯಲ್ಲಿ 2024ರ ಲೋಕಸಭಾ ಚುನಾವಣೆ ಕುತೂಹಲ ಹೆಚ್ಚಿಸಿದೆ. ಕಳೆದ ಎರಡು ಬಾರಿಯೂ ಬಿಜೆಪಿ ಜಯಭೇರಿ ಬಾರಿಸಿದೆ. ಶೋಭಾ ಕರಂದ್ಲಾಜೆ ಎರಡು ಬಾರಿ ಸಂಸದರಾಗಿ ಜಿಲ್ಲೆಯನ್ನು ಪ್ರತಿನಿಧಿಸಿದ್ದಾರೆ. ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಿಸಿದ್ದು, ಕರಾವಳಿಯ ಕೋಟಾ ಶ್ರೀನಿವಾಸ್‌ ಪೂಜಾರಿ ಸ್ಪರ್ಧಿಸಿದ್ದಾರೆ. ಎರಡು ಬಾರಿಯೂ ಸೋಲುಂಡಿರುವ ಕಾಂಗ್ರೆಸ್‌ ಎದುರಾಳಿಯಾಗಿ ಕೆ.ಜಯಪ್ರಕಾಶ್‌ ಹೆಗ್ಡೆ ಅವರನ್ನು ನಿಲ್ಲಿಸಿದೆ. ಇಬ್ಬರ ನಡುವೆ ಭಾರೀ ಪೈಪೋಟಿ ಎದುರಾಗಿದ್ದು ಮತ್ತೊ ಮ್ಮೆ ಕಾಂಗ್ರೆಸ್‌ ಇತಿಹಾಸ ಸೃಷ್ಟಿಸಲಿದೆಯೇ ಅಥವಾ ಕಮಲ ಮತ್ತೂಮ್ಮೆ ತನ್ನ ಪ್ರಾಬಲ್ಯ ತೋರ್ಪಡಿಸುವುದೇ ಎಂಬ ಕೌತುಕ ಮೂಡಿಸಿದೆ.

ಇಂದಿರಾ ಗಾಂಧಿಗೆ ರಾಜಕೀಯ ಪುರ್ನಜನ್ಮ ನೀಡಿದ್ದ ಕ್ಷೇತ್ರ!

ಇಂದಿರಾ ಗಾಂಧಿ ಆಯ್ಕೆ ವಿರುದ್ಧ ಮೊಕದ್ದಮೆಯಲ್ಲಿ ಬಂದ ತೀರ್ಪು ವಿಪಕ್ಷಗಳಿಗೆ ಪ್ರತಿಭಟಿಸುವ ಅವಕಾಶ ಮಾಡಿಕೊಟ್ಟಿತು. 1975 ಜೂ.25 ರಂದು ಮಧ್ಯರಾತ್ರಿ ದಿಢೀರ್‌ ತುರ್ತು ಪರಿಸ್ಥಿತಿ ಘೋಷಿಸಲಾಯಿತು. 1977ರಲ್ಲಿ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಸೋಲು ಅನುಭವಿಸಬೇಕಾಯಿತು. ಈ ಸೋಲಿನಿಂದ ಕಾಂಗ್ರೆಸ್‌ನಲ್ಲಿ ಮಂಕು ಆವರಿಸಿದ್ದು, ಇಂದಿರಾ ಗಾಂಧಿ  ಅವರು ಮತ್ತೆ ಸ್ಪರ್ಧಿಸಬೇಕೆಂಬ ಕೂಗು ಮೊಳಗಿತು. ಅಂದು ಲೋಕಸಭಾ ಸದಸ್ಯರಾಗಿದ್ದ ಡಿ.ಬಿ.ಚಂದ್ರೇಗೌಡರು ತಮ್ಮ ಸ್ಥಾನ ತೆರವು ಮಾಡಲು ಮುಂದಾದರು.

ಇದು ಜಿಲ್ಲೆಯ ರಾಜಕೀಯದಲ್ಲಿ ಹೊಸ ತಿರುವು ನೀಡಿತು. ಡಿ.ಬಿ.ಚಂದ್ರೇಗೌಡರ ರಾಜೀನಾಮೆ ಬಳಿಕ 30-9-1978ರಲ್ಲಿ ಕೊಪ್ಪದಲ್ಲಿ ಐತಿಹಾಸಿಕ ಕಾಂಗ್ರೆಸ್‌ ಸಮ್ಮೇಳನ ಜರುಗಿತು. ಇಂದಿರಾ ಗಾಂಧಿ  ಅವರು ಇಲ್ಲಿಂದ ಸ್ಪರ್ಧಿಸುವ ನಿರ್ಣಯ ಕೈಗೊಳ್ಳಲಾಯಿತು. 6-10-1978ರಲ್ಲಿ ಇಂದಿರಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದರು. ಚಿಕ್ಕಮಗಳೂರು ಜಿಲ್ಲೆ ಇಡೀ ದೇಶದ ಗಮನ ಸೆಳೆದಿತ್ತು. ಇಂದಿರಾ ಗಾಂಧಿ ಅವರ ವಿರುದ್ಧ ಜನತಾ ಪಕ್ಷದ ವೀರೇಂದ್ರ ಪಾಟೀಲ್‌ ಅವರನ್ನು ಪ್ರತಿಸ್ಪರ್ಧಿಯಾಗಿ ನಿಲ್ಲಿಸಲಾಗಿತ್ತು. ಜತೆಗೆ 26ಕ್ಕೂ ಹೆಚ್ಚು ಪಕ್ಷೇತರರ ಅಭ್ಯರ್ಥಿಗಳು ಕಣದಲ್ಲಿದ್ದು ಇದು ಕೂಡ ದಾಖಲೆಯಾಗಿತ್ತು. ಫಲಿತಾಂಶ ಹೊರ ಬಂದ ದಿನ ಇಂದಿರಾ ಗಾಂಧಿ ಅವರು 77,333 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಮೂಲಕ ಇಂದಿರಾ ಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಹೆಗ್ಗಳಿಕೆ ಕಾಫಿನಾಡಿನದ್ದಾಯಿತು.

Categories
ಬೆಂಗಳೂರು ರಾಜ್ಯ

ಯುವತಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ!

ಯುವತಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ!
– ರಾಜಧಾನಿಯಲ್ಲಿ ನಡೆದ ಪೈಶಾಚಿಕ ಕೃತ್ಯ
– ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ
– ಒಂಟಿ ಮಹಿಳೆಯ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿ!
– ಬೆಂಗಳೂರು: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ!

NAMMUR EXPRESS NEWS
ಬೆಂಗಳೂರು: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. 23 ವರ್ಷದ ಯುವತಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಂದೆಡೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆದಿದೆ.

ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ!

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. 25 ವರ್ಷದ ಆಸುಪಾಸಿನ ಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.
25 ವರ್ಷದ ಆಸುಪಾಸಿನಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ರೈಲ್ವೆ ಎಎಸ್​ಪಿ ಡಾ. ಸೌಮ್ಯಲತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಿನ್ನೆ ರಾತ್ರಿ ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು. ಲೋಕೇಶ್ ಕ್ಯಾಬ್ ಡ್ರೈವರ್. ಶಶಿಕುಮಾರ್ ಪಿಜಿಯಲ್ಲಿ ವಾಸವಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ಮಾಹಿತಿ ನೀಡಿದರು.

ಒಂಟಿ ಮಹಿಳೆಯ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿ!

ಬೆಂಗಳೂರು: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಗಳೂರಿನ ವಿಜಯ ನಗರದ 7th c ಮುಖ್ಯರಸ್ತೆ ಹಂಪಿನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ವಾಕಿಂಗ್ ಹೋಗುವ ಸಮಯದಲ್ಲಿ ಇಬ್ಬರು ಬೈಕ್​ನಲ್ಲಿ ಬಂದ ಖದೀಮರು ಆಕೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಗಳ್ಳತನದ ಕೃತ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದ್ದು, ಈ ಬಗ್ಗೆ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ!

ಬೆಂಗಳೂರು: ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ. ಘಟನೆಯ ಬಳಿಕ ದೂರುದಾರರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ನಲವತ್ತು ಲಕ್ಷ ಹಣ ಮನೆಯಲ್ಲಿ ಯಾಕೆ ಇಟ್ಟಿದ್ದರೂ ಎನ್ನುವ ಪ್ರಶ್ನೆ? ಮೂಡಿದೆ. ಸದ್ಯ ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ.

Categories
ಬೆಂಗಳೂರು ರಾಜ್ಯ

ಚುನಾವಣೆಗೆ ಡಬ್ ಡಬ್ ಶುರು!

ಚುನಾವಣೆಗೆ ಡಬ್ ಡಬ್ ಶುರು!
– ಬೆಂಗಳೂರು ಸೇರಿ 14 ಕ್ಷೇತ್ರದಲ್ಲಿ ಅಲರ್ಟ್
– ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

NAMMUR EXPRESS NEWS
ಬೆಂಗಳೂರು: ಲೋಕಸಭೆ ಚುನಾವಣೆ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ನಡೆಯಲಿದೆ. ಮೊದಲ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಚುನಾವಣಾ ಆಯೋಗವು 2,100 ಕೆಎಸ್ ಆರ್ ಟಿಸಿ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಚುನಾವಣೆ?

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಮೊದಲ ಹಂತಕ್ಕೆ ಮತದಾನ ಏ.26ರಂದು ನಡೆಯಲಿದೆ. ಚುನಾವಣೆ ಕರ್ತವ್ಯಕ್ಕೆ ಸರ್ಕಾರಿ ಬಸ್ ನಿಯೋಜನೆ ಮಾಡಿರುವ ಕಾರಣ ರಾಜ್ಯದಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.

14 ಕ್ಷೇತ್ರಗಳಲ್ಲಿ ಸಂಪೂರ್ಣ ಸಿದ್ಧತೆ.!

ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏ.26) ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಸಂಪೂರ್ಣ ಸಿದ್ಧತೆಯಾಗಿದೆ. ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 1.40 ಲಕ್ಷ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 2,88,19,342 ಕೋಟಿ ಮತದಾರರು ಹಕ್ಕು ಚಲಾವಣೆಗೆ ಕಾತುರರಾಗಿದ್ದಾರೆ., ಮತದಾನ ಮುಕ್ತಾಯವಾಗುವ 48 ತಾಸಿಗೂ ಮುನ್ನ ಶೂನ್ಯ ಅವಧಿ ಘೋಷಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು, ಬುಧವಾರ ಸಂಜೆಯಿಂದಲೇ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮತದಾನಕ್ಕೆ ಬಿಸಿಲು ಅಡ್ಡಿ!

ಬಿಸಿಲ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿ ಮತಗಟ್ಟೆಯಲ್ಲೂ ವೈದ್ಯಕೀಯ ಸಲಕರಣೆಗಳ ಕಿಟ್‌ನ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜತೆಗೆ, ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿ ಅಥವಾ ಮತದಾರರಿಗೆ ಬಿಸಿಲಾಘಾತವಾದರೆ ತಕ್ಷಣವೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಕ್ಲಸ್ಟರ್‌ಗಳಲ್ಲಿ ಆಂಬ್ಯುಲೆನ್ಸ್‌, ನೀರು ಆಸನ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

Categories
ಕರಾವಳಿ ಶಿಕ್ಷಣ

ಜೆ.ಇ.ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಕಾಲೇಜು ಸಾಧನೆ

ಜೆ.ಇ.ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಕಾಲೇಜು ಸಾಧನೆ
– ರಾಜ್ಯ ಮಟ್ಟದಲ್ಲಿ ಕ್ರಿಯೇಟಿವ್ ಕಾಲೇಜಿನ ಹೆಜ್ಜೆ ಗುರುತು
– ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಅಭಿನಂದನೆ

NAMMUR EXPRESS NEWS
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್ 98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣ ಎಮ್ ಎಸ್ 98.0229479, ಪಾರ್ಥ ಎ ಬಿ 98.0229479 ಪರ್ಸಂಟೈಲ್ ಗಳಿಸಿರುತ್ತಾರೆ. ಈ ಮೂಲಕ ಪರೀಕ್ಷೆ ಬರೆದ 441 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಮುಂಬರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ.

ಈ ಎಲ್ಲಾ ವಿದ್ಯಾರ್ಥಿಗಳು ಎನ್.ಐ.ಟಿ ಅಂತಹ ಸಂಸ್ಥೆಗಳಲ್ಲಿ ಬಿ.ಇ ಪದವಿಗೆ ಪ್ರವೇಶ ಪಡೆಯುವ ಅವಕಾಶದ ಜೊತೆಗೆ ಐ.ಐ.ಟಿ ಸಂಸ್ಥೆ ಸೇರಲು ಮಾನದಂಡವಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿರುತ್ತಾರೆ. ಜೆ.ಇ.ಇ (ಮೈನ್) ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಜೆ.ಇ.ಇ ಸಂಯೋಜಕರಾದ ನಂದೀಶ್ ಹೆಚ್. ಬಿ ಅವರು ಶ್ಲಾಘಿಸಿದ್ದಾರೆ.

Categories
ಅಡಿಕೆ-ದರ

ಅಡಿಕೆ ದರ 25-04-2024

ಅಡಿಕೆ ದರ
25-04-2024
ಸರಕು 53330 84410
ಬೆಟ್ಟೆ 44274 56669
ರಾಶಿ 33069 53599
ಗೊರಬಲು 20009 40869
Nammur Express