Categories
ರಾಷ್ಟ್ರೀಯ ವಾರ್ತೆ

ದೇಶದ ಹಿರಿಯ ನಾಗರಿಕರಿಗೆ ಭರ್ಜರಿ ಗುಡ್‌ ನ್ಯೂಸ್‌..!

ದೇಶದ ಹಿರಿಯ ನಾಗರಿಕರಿಗೆ ಭರ್ಜರಿ ಗುಡ್‌ ನ್ಯೂಸ್‌..!

– ಆಯುಷ್ಮಾನ್‌ ಯೋಜನೆ ಯಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

NAMMUR EXPRESS NEWS
ನವದೆಹಲಿ : 18 ನೇ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಹಿರಿಯರಿಗೆ ಸಿಹಿಸುದ್ದಿ ನೀಡಿದ್ದು, 70 ವರ್ಷ ದಾಟಿದ ಎಲ್ಲಾ ವೃದ್ಧರಿಗೆ ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಾರತೀಯ ಜನತಾ ಪಕ್ಷವು ಈ ಭರವಸೆ ನೀಡಿತ್ತು. ಜೂನ್ 24ರಿಂದ ಲೋಕಸಭಾ ಅಧಿವೇಶನ ಆರಂಭವಾಗಲಿದೆ. ಹೊಸ ಸರ್ಕಾರದಲ್ಲಿ, ನಾವು 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಆಯುಷ್ಮಾನ್ ಪ್ರಯೋಜನವನ್ನು ನೀಡುತ್ತಿದ್ದೇವೆ ಎಂದು ರಾಷ್ಟ್ರಪತಿ ಮುರ್ಮು ಗುರುವಾರ ಸಂಸತ್ ಭವನದಲ್ಲಿ ಹೇಳಿದರು. ಅಷ್ಟೇ ಅಲ್ಲ, ಸರ್ಕಾರವು ರೈತರ ಬಗ್ಗೆ ನಿರಂತರವಾಗಿ ಕೆಲಸ ಮಾಡಿದೆ. 20,000 ಕೋಟಿ ರೂ.ಗಳನ್ನು ರೈತರಿಗೆ ವರ್ಗಾಯಿಸಲಾಗಿದೆ. ಇದರೊಂದಿಗೆ, ನಾವು ರೈತರನ್ನು ಹೆಚ್ಚು ಸ್ವಾವಲಂಬಿಗಳನ್ನಾಗಿ ಮಾಡಿದ್ದೇವೆ.

ಪ್ರಣಾಳಿಕೆಯನ್ನು ಬಿಡುಗಡೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು 70 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯರನ್ನು ಉಲ್ಲೇಖಿಸಿದ್ದರು. ನಾವು ಆಯುಷ್ಮಾನ್ ಭಾರತ್ ಯೋಜನೆಯನ್ನು ವೃದ್ಧರನ್ನು ಒಳಗೊಳ್ಳಲು ಮತ್ತು ಅವರಿಗೆ ಉಚಿತ ಮತ್ತು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ವಿಸ್ತರಿಸುತ್ತೇವೆ. ಈ ಯೋಜನೆಯನ್ನು ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು 2019 ರ ಹಣಕಾಸು ವರ್ಷದ ಬಜೆಟ್ನಲ್ಲಿ ಪ್ರಾರಂಭಿಸಿದರು. ಇದನ್ನು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಎಂದೂ ಕರೆಯಲಾಗುತ್ತದೆ, ಇದರ ಅಡಿಯಲ್ಲಿ ಪ್ರಸ್ತುತ 5 ಲಕ್ಷ ರೂ.ಗಳ ರಕ್ಷಣೆ ಲಭ್ಯವಿದೆ.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಮೈ ಭಾರತ್ ಬಗ್ಗೆಯೂ ಪ್ರಸ್ತಾಪಿಸಿದರು. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರ ‘ಮೇರಾ ಯುವ ಭಾರತ್- ಮೈ ಭಾರತ್’ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು. ಈವರೆಗೆ 1.5 ಕೋಟಿಗೂ ಹೆಚ್ಚು ಯುವಕರು ಇದರಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಡಿಜಿಟಲ್ ವಿಶ್ವವಿದ್ಯಾಲಯವನ್ನು ರಚಿಸುವ ನಿಟ್ಟಿನಲ್ಲಿ ಸರ್ಕಾರವೂ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

Categories
ಶಿವಮೊಗ್ಗ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ: ಕೊನೆ ಹಂತದ ಕಸರತ್ತು!

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ: ಕೊನೆ ಹಂತದ ಕಸರತ್ತು!

– ಅಂತಿಮ ಕಣದಲ್ಲಿ 27 ಅಭ್ಯರ್ಥಿಗಳು: ಭಾರೀ ಕುತೂಹಲ
– ಜೂ. 28ಕ್ಕೆ ಮತದಾನ: ಬೇಳೂರು, ಆರ್. ಎಂ.ವಿಜಯ್ ದೇವ್ ಸೇರಿ ಅನೇಕ ಘಟಾನುಘಟಿಗಳ ಸ್ಪರ್ಧೆ

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಮತದಾನ ನಡೆಯಲಿದೆ.
2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಒಟ್ಟು 27 ಅಭ್ಯರ್ಥಿಗಳು ಉಳಿದಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರ ದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ,ಜೆ, ಪ್ರಾಥಮಿಕ ಕೃಷಿ ‘ಪತ್ತಿನ ಸಹಕಾರ ಸಂಘ ನಿ, ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ‘ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ. ಪ. ಸ ಸಂಘ ನಿ. ಸಾಗರ ತಾಲ್ಲೂಕು ಕ್ಷೇತ್ರದಿಂದ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು, ಪ್ರಾ ಕೃ ಪ ಸ ಸಂಘ ನಿ ಶಿಕಾರಿಪುರ ತಾಲ್ಲೂಕು ಕ್ಷೇತ್ರದಿಂದ ಅಗಡಿ ಆಶೋಕ, ಎಸ್.ಪಿ ಚಂದ್ರಶೇಖರಗೌಡ, ಪ್ರಾ ಕೃ ಪ ಸ ಸಂಘ ನಿ ಸೊರಬ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ. ರುದ್ರಗೌಡ, ಶಿವಮೂರ್ತಿಗೌಡ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಡೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಶಿವಮೊಗ್ಗ ಉಪ ವಿಭಾಗದಿಂದ ಡಾ.ಆ‌ರ್.ಎಂ. ಮಂಜುನಾಥಗೌಡ, ವಿರೂಪಾಕ್ಷಪ್ಪ ಜಿ.ಈ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಸಾಗರ ಉಪ ವಿಭಾಗದಿಂದ ಬಿ.ಡಿ ಭೂಕಾಂತ್, ಜಿ.ಎಸ್.ಸುಧೀರ್, ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಎಸ್.ಪಿ.ದಿನೇಶ, ಮರಿಯಪ್ಪ ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಎಸ್.ಕೆ. ಬಸವರಾಜ್ ಡಿ.ಎಲ್, ರವೀಂದ್ರ ಹೆಚ್.ಎಸ್, ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಆನಂದ ಡಿ, ಕೆ.ಎಲ್.ಜಗದೀಶ್ವರ್, ಹೆಚ್.ಬಿ ದಿನೇಶ್, ವಜಿಹಾಲಿಂಗಯ್ಯ ಶಾಸ್ತ್ರಿ ಎಸ್.ಎನ್, ಜೆ.ಪಿ ಯೋಗೇಶ್, ಟಿ.ಶಿವಶಂಕರಪ್ಪ, ಹರೀಶ್ ಎನ್.ಡಿ ಇವರುಗಳು ಅಂತಿಮ ಕಣದಲ್ಲಿ ದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಿಟರ್ನಿಂಗ್ ಅಧಿಕಾರಿ ಹಾಗೂ ಶಿವಮೊಗ್ಗ ಉಪವಿಭಾಗಾಧಿಕಾರಿಗಳಾದ ಸತ್ಯನಾರಾಯಣ ಬಿ.ಹೆಚ್, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories
ಕರಾವಳಿ ರಾಜ್ಯ

ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ ಮಳೆಗೆ 6 ಮಂದಿ ಬಲಿ

ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ ಮಳೆಗೆ 6 ಮಂದಿ ಬಲಿ!

– ಮಂಗಳೂರಿನಲ್ಲಿ ಮಳೆ ಅನಾಹುತಕ್ಕೆ ಮತ್ತಿಬ್ಬರು ಸಾವು
– ರೊಸಾರಿಯೋ ಶಾಲೆ ಬಳಿ ವಿದ್ಯುತ್‌ ಶಾಕ್‌ ಹೊಡೆದು ದಾರುಣ ಸಾವು

NAMMUR EXPRESS NEWS
ಮಂಗಳೂರು: ಮಂಗಳೂರಿನಲ್ಲಿ ಮಳೆ ಅನಾಹುತಕ್ಕೆ ಮತ್ತೆರಡು ಅಮಾಯಕ ಜೀವಗಳು ಬಲಿಯಾಗಿದ್ದು, ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ.
ಮಂಗಳೂರು ನಗರದ ರೊಸಾರಿಯೋ ಶಾಲೆಯ ಹಿಂಭಾಗದಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಅದನ್ನು ಸ್ಪರ್ಶಿಸಿದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಗೊಬ್ಬೆ ಹೊಡೆಯುತ್ತಿರುವುದನ್ನು ಕೇಳಿ ರಕ್ಷಿಸುವುದಕ್ಕೆ ಓಡಿ ಬಂದ ಮತ್ತೊಬ್ಬರು ಕೂಡ ವಿದ್ಯುತ್‌ ಶಾಕ್‌ಗೆ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ಹಾಸನ ಜಿಲ್ಲೆಯ ಪಾಳ್ಯ ಹೋಬಳಿಯ ರಾಜು(50) ಹಾಗೂ ಪುತ್ತೂರು ತಾಲೂಕಿನ ರಾಮಕುಂಜದ ದೇವರಾಜ್‌(46) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆ ಬುಧವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಎಲ್ಲರೂ ಕೂಡ ಮುಂಜಾನೆ ವಿದ್ಯುತ್‌ ತಂತಿ ಸ್ಪರ್ಶಿಸಿ ಮೃತಪಟ್ಟಿರಬಹುದೆಂದು ಶಂಕಿಸಿದ್ದರು. ಆದರೆ, ಸಿಸಿಟಿವಿ ಪರಿಶೀಲನೆ ಮಾಡಿದ ವೇಳೆ ರಾತ್ರಿ ಈ ದುರ್ಘಟನೆ ಆಗಿದ್ದು, ಬೆಳಗ್ಗಿನ ತನಕ ಜೋರು ಮಳೆಯಿಂದಾಗಿ ಯಾರ ಗಮನಕ್ಕೂ ಬಂದಿರಲಿಲ್ಲ. ಪೊಲೀಸರು ರಾಜು ಅವರ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Categories
ರಾಜ್ಯ

ರಾಜ್ಯದಲ್ಲಿ ಇಂದು ವರುಣನ ಆರ್ಭಟ!

ರಾಜ್ಯದಲ್ಲಿ ಇಂದು ವರುಣನ ಆರ್ಭಟ!

– ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಮಳೆ
– ಹಲವೆಡೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ!
– ಮಲೆನಾಡಲ್ಲಿ ಭಾರೀ ಮಳೆ: ಎಚ್ಚರಿಕೆ

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್‌ 27) ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಸಂಭವಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

– ದ.ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು(ಜೂ.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ‌ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

– ಕೊಡಗಿನ 2 ತಾಲೂಕುಗಳಲ್ಲಿ ರಜೆ

ಕೊಡಗು: ಜಿಲ್ಲೆಯಲ್ಲಿ ಹಲವೆಡೆ ವರುಣಾರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಿಸಲಾಗಿದೆ. ಇನ್ನು ಜೂನ್ 28ರಂದು ಕೂಡ ಕರಾವಳಿ ಜಿಲ್ಲೆಗಳ ಪ್ರತ್ಯೇಕ ಕಡೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು. ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಆಗುವ ಸಾಧ್ಯತೆಯಿದೆ. ಜೂನ್‌ 30ರವರೆಗೆ ಇದೇ ರೀತಿಯ ಸ್ಥಿತಿ ಕರಾವಳಿ ಜಿಲ್ಲೆಗಳಲ್ಲಿ ಇರಲಿದೆ.

Categories
ರಾಷ್ಟ್ರೀಯ ವಾರ್ತೆ

ಮಾಜಿ ಉಪ ಪ್ರಧಾನಿ ಆಡ್ವಾಣಿ ಅಸ್ವಸ್ಥ

ಮಾಜಿ ಉಪ ಪ್ರಧಾನಿ ಆಡ್ವಾಣಿ ಅಸ್ವಸ್ಥ

– ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲು
– ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ

NAMMUR EXPRESS NEWS
ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ , ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ ಆಡ್ವಾಣಿ ಅವರು ಅಸ್ವಸ್ಥಗೊಂಡಿದ್ದು, ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ AIIMS ಗೆ ದಾಖಲಿಸಲಾಗಿದೆ. ಇದನ್ನು ಆಸ್ಪತ್ರೆಯ ಹೇಳಿಕೆ ದೃಢಪಡಿಸಿದೆ. “ಎಲ್‌.ಕೆ ಅಡ್ವಾಣಿ ಅವರು ನವದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಸ್ಥಿರವಾಗಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ” ಎಂದು ಏಮ್ಸ್ ಹೇಳಿಕೆ ನೀಡಿದೆ. ಹಿರಿಯ ನಾಯಕನ ದೈಹಿಕ ಸ್ಥಿತಿಗತಿಯ ಬಗ್ಗೆ ಆಸ್ಪತ್ರೆಯು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಆಡ್ವಾಣಿ ಅವರಿಗೆ ಈಗ 96 ವರ್ಷ. ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸುವಾಗ ಅವರು ಪ್ರಜ್ಞಾವಸ್ಥೆಯಲ್ಲಿದ್ದರು ಹಾಗೂ ಮಾತನಾಡುತ್ತಿದ್ದರು. ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಆಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದನಾದ ಆಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ. ಆಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಎಲ್‌ಕೆ ಆಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿ ಅಧ್ಯಕ್ಷರಾಗಿದ್ದರು.

Categories
ತೀರ್ಥಹಳ್ಳಿ

ತೀರ್ಥಹಳ್ಳಿ ಬಳಿ ಕಾರು ಆಕ್ಸಿಡೆಂಟ್: ಓರ್ವ ಯುವಕನ ಸಾವು

ತೀರ್ಥಹಳ್ಳಿ ಬಳಿ ಕಾರು ಆಕ್ಸಿಡೆಂಟ್: ಓರ್ವ ಯುವಕನ ಸಾವು

– ತೀರ್ಥಹಳ್ಳಿ ತಾಲೂಕಿನ ಶಂಕರಮನೆ ಬಳಿ ಘಟನೆ
– ಮೀನು ಹಿಡಿಯಲು ಹೋದವರ ಕಾರು ಅಪಘಾತ

NAMMUR EXPRESS NEWS
ತೀರ್ಥಹಳ್ಳಿ: ಮೀನು ಹಿಡಿಯಲು ಹೋಗಿದ್ದ ಐದು ಮಂದಿಯಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿದ್ದು ಇಬ್ಬರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದ್ದು ಈ ಪೈಕಿ ಓರ್ವ ಯುವಕ ಮೃತಪಟ್ಟಿದ್ದಾನೆ.
ತೀರ್ಥಹಳ್ಳಿ ತಾಲೂಕಿನ ಶಂಕರಮನೆ ಬಳಿ ಮೀನು ಹಿಡಿಯಲು ಹೋದವರ ಕಾರು ಲೈಟ್ ಕಂಬ ಹಲಸಿನ ಮರಕ್ಕೆ ಗುದ್ದಿ ಇಬ್ಬರು ಗಂಭೀರ ಹಾಗೂ ಮೂವರು ಗಾಯಗೊಂಡಿದ್ದರು.
ಅತಿಶಯ (23) ವರ್ಷ ಮೃತಪಟ್ಟ ಯುವಕ. ಚಿಕಿತ್ಸೆ ಫಲಕಾರಿ ಆಗದೇ ಓರ್ವ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ತೀರ್ಥಹಳ್ಳಿ ಕೌರಿಬೈಲು ಮೂಲದ ಐವರು ಸ್ನೇಹಿತರು ಮರ ಗೆಲಸ ಮಾಡಿಕೊಂಡಿದ್ದರು. ಮತ್ತಗ ಹಿನ್ನೀರಲ್ಲಿ ಮೀನು ಹಿಡಿಯಲು ಹೋಗಿದ್ದರು ಎಂದು ತಿಳಿದು ಬಂದಿದೆ. ಮೀನು ಹಿಡಿದು ವಾಪಾಸ್ ಬರುವಾಗ ಅತೀ ವೇಗದ ಚಾಲನೆಯಿಂದ ಕಾರು ವಿದ್ಯುತ್ ಕಂಬ ಹಾಗೂ ಮರಕ್ಕೆ ಡಿಕ್ಕಿ ಹೊಡೆದಿತ್ತು. ಆಗುಂಬೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?

– ಯಾವ ರಾಶಿಯವರಿಗೆ ಶುಭ? ಯಾವ ರಾಶಿಯವರಿಗೆ ಅಶುಭ?

NAMMUR EXPRESS NEWS
2024 ಜೂನ್ 27ರ ಗುರುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.?

** ಮೇಷ ರಾಶಿ :
ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಕೈಗೊಂಡ ವ್ಯವಹಾರಗಳಲ್ಲಿ ತೊಂದರೆಗಳು ಉಂಟಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಮನೆಯ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಖರ್ಚು ಹೆಚ್ಚಾಗಲಿದೆ. ವೃತ್ತಿಪರ ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ.

** ವೃಷಭ ರಾಶಿ :
ಹಣಕಾಸಿನ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ. ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ. ಪ್ರಮುಖ ಕೆಲಸಗಳಲ್ಲಿ ನೀವು ಹೆಚ್ಚು ಶ್ರಮ ಪಟ್ಟರೂ ಕೆಲಸಗಳು ಮುಂದಕ್ಕೆ ಸಾಗುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗರುತ್ತವೆ. ಉದ್ಯೋಗಗಳಲ್ಲಿ ನಿಮ್ಮ ಮೌಲ್ಯವು ಹೆಚ್ಚಾಗುತ್ತದೆ.

** ಮಿಥುನ ರಾಶಿ :
ಆತ್ಮೀಯರಿಂದ ಶುಭಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಆಕಸ್ಮಿಕ ಧನ ಲಾಭ ಪಡೆಯುತ್ತೀರಿ. ಮನೆಯ ಹೊರಗೆ ನಿಮ್ಮ ಉತ್ತಮ ಮಾತಿನಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಕೆಲಸಗಳು ಹೊಸ ಉತ್ಸಾಹದಿಂದ ಪೂರ್ಣಗೊಳ್ಳುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ.

** ಕಟಕ ರಾಶಿ :
ಪ್ರಮುಕ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ವಿಸ್ತಾರಗೊಳ್ಳುತ್ತವೆ. ಹೊಸ ವಾಹನ ಯೋಗವಿದೆ. ಕೆಲವು ವ್ಯವಹಾರಗಳಲ್ಲಿ ನಿರ್ಧಾರಗಳು ಇದ್ದಕ್ಕಿದ್ದಂತೆ ಬದಲಾಗುತ್ತವೆ. ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಹೊಸ ಕಾರ್ಯಕ್ರಮಗಳನ್ನು ಆರಂಭಿಸುತ್ತೀರಿ.ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿಮ್ಮ ಭವಿಷ್ಯವಾಣಿಗಳು ನಿಜವಾಗುತ್ತವೆ.

** ಸಿಂಹ ರಾಶಿ :
ಖರ್ಚುವೆಚ್ಚಗಳ ವಿಷಯದಲ್ಲಿ ಮರುಪರಿಶೀಲನೆ ಮಾಡುವುದು ಒಳ್ಳೆಯದು. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮನೆಯ ವಾತಾವರಣ ಸಮಸ್ಯಾತ್ಮಕವಾಗಿರುತ್ತದೆ . ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಕಿರಿಕಿರಿಗಳು ಹೆಚ್ಚಾಗುತ್ತವೆ.

** ಕನ್ಯಾ ರಾಶಿ :
ಆರ್ಥಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಕಠಿಣ ಪರಿಶ್ರಮವು ಫಲ ನೀಡುವುದಿಲ್ಲ. ಮನೆಯಲ್ಲಿ ಕೆಲವು ಜನರ ವರ್ತನೆಯು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಬಂಧುಮಿತ್ರರೊಡನೆ ವಿವಾದ ಉಂಟಾಗುತ್ತದೆ. ದೂರ ಪ್ರಯಾಣಗಳು ಮುಂದೂಡಲ್ಪಡುತ್ತವೆ. ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

** ತುಲಾ ರಾಶಿ :
ಹಣಕಾಸಿನ ತೊಂದರೆಗಳು ನಿವಾರಣೆಯಾಗುತ್ತವೆ. ಒಂದು ವ್ಯವಹಾರದಲ್ಲಿ ಎಲ್ಲರನ್ನೂ ಒಂದು ಮಾತಿನಲ್ಲಿ ನಿಲ್ಲುವಂತೆ ಮಾಡುತ್ತೀರಿ. ಹೊಸ ವಾಹನ ಖರೀದಿ ಯೋಗವಿದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳು ಸ್ವಲ್ಪಮಟ್ಟಿಗೆ ಸಾಮಾನ್ಯವಾಗಿ ಸಾಗುತ್ತವೆ, ಉದ್ಯೋಗಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ.

** ವೃಶ್ಚಿಕ ರಾಶಿ :
ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಗೊಂದಲ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಇವರ ಪರವಾಗಿ ಕಷ್ಟಗಳು ಅನಿವಾರ್ಯ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುವುದು ಉತ್ತಮ. ವ್ಯಾಪಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಅಧಿಕವಾಗಿರುತ್ತದೆ.

** ಧನುಸ್ಸು ರಾಶಿ :
ನಿರುದ್ಯೋಗಿಗಳ ಶ್ರಮಕ್ಕೆ ಫಲವಾಗಿ ಹೊಸ ಅವಕಾಶಗಳು ದೊರೆಯುತ್ತವೆ. ಸ್ಥಿರಾಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ಹೊಸ ಸ್ನೇಹಿತರು ಪರಿಚಯಗಳು ಹೆಚ್ಚಾಗುತ್ತವೆ. ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ.

** ಮಕರ ರಾಶಿ :
ಹಣದ ವಿಚಾರದಲ್ಲಿ ಏರುಪೇರು ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ ಮತ್ತು ವೃತ್ತಿಪರ ಉದ್ಯೋಗಗಳು ಹೆಚ್ಚುವರಿ ಕೆಲಸದ ಹೊರೆಯನ್ನು ಹೊಂದಿರುತ್ತವೆ.

** ಕುಂಭ ರಾಶಿ :
ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ ಮತ್ತು ವ್ಯವಹಾರಗಳು ನಿರೀಕ್ಷಿತ ಲಾಭವನ್ನು ಪಡೆಯುತ್ತವೆ. ಉದ್ಯಮಿಗಳಿಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತದೆ. ಅಧಿಕಾರಿಗಳ ಸಹಾಯದಿಂದ ಉದ್ಯೋಗದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತೀರಿ.

** ಮೀನ ರಾಶಿ :
ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಭೇಟಿ ಸಂತೋಷವನ್ನು ತರುತ್ತದೆ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ವಿವಾದಗಳು ಬಗೆಹರಿಯುತ್ತವೆ. ಕೈಗೆತ್ತಿಕೊಂಡ ಕೆಲಸ ವಿಳಂಬವಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಉದ್ಯೋಗಗಳು ಮೊದಲಿಗಿಂತ ಉತ್ತಮ ವಾತಾವರಣವನ್ನು ಹೊಂದಿರುತ್ತವೆ.

Categories
ಮಲ್ನಾಡ್

ಮಲೆನಾಡು- ಕರಾವಳಿ ಸಂಪರ್ಕ ಕಲ್ಪಿಸುವ ಹೆದ್ದಾರಿಗೆ ಮರುಜೀವ?!

ಮಲೆನಾಡು- ಕರಾವಳಿ ಸಂಪರ್ಕ ಕಲ್ಪಿಸುವ ಹೆದ್ದಾರಿಗೆ ಮರುಜೀವ?!

– ತನಿಕೋಡು ಚೆಕ್ ಪೋಸ್ಟ್ – ಮಾಳ ಘಾಟ್ ಹೆದ್ದಾರಿ ಅಭಿವೃದ್ಧಿಗೆ ಪ್ಲಾನ್
– ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿ ಮಾಡಿದ ಕೋಟಾ

NAMMUR EXPRESS NEWS
ಶೃಂಗೇರಿ/ಕಾರ್ಕಳ: ಮಲೆನಾಡು- ಕರಾವಳಿ ಸಂಪರ್ಕ ಕಲ್ಪಿಸುವ ತನಿಕೋಡು ಚೆಕ್ ಪೋಸ್ಟ್ – ಮಾಳ ಘಾಟ್ ಹೆದ್ದಾರಿ ಅಭಿವೃದ್ಧಿಗೆ ಪ್ಲಾನ್ ಈಗ ಮರು ಜೀವ ಪಡೆದಿದೆ.
ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿ ಮಾಡಿದ ಕೋಟಾ ಶ್ರೀನಿವಾಸ್ ಪೂಜಾರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಕೇಂದ್ರ ಭೂ ಸಾರಿಗೆ ಸಚಿವರನ್ನ ಭೇಟಿ ಮಾಡಿ ಮರು ಜೀವ ತುಂಬಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ತಕ್ಷಣ ಹೆದ್ದಾರಿ ಅಭಿವೃದ್ಧಿ ಅನುದಾನ, ಯೋಜನೆ ಶುರು ಮಾಡಲು ಮನವಿ ಮಾಡಿದ್ದಾರೆ.

ಏಪ್ರಿಲ್ 08, 2024 ರಂದು ಶೃಂಗೇರಿಯಲ್ಲಿ ನಡೆದ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಜೀವರಾಜ್ ಅವರು ತನಿಕೋಡು ಚೆಕ್ ಪೋಸ್ಟ್ – ಮಾಳ ಘಾಟ್ ಹೆದ್ದಾರಿಯನ್ನ ಅಭಿವೃದ್ಧಿ ಪಡಿಸುವಂತೆ ಬಿಜೆಪಿ ಅಭ್ಯರ್ಥಿಯಾಗಿದ್ದ ಕೋಟಾ ಅವರ ಬಳಿ ಬೇಡಿಕೆಯಿಟ್ಟಿದ್ದರು. ಪ್ರಮಾಣವಚನ ಸ್ವೀಕರಿಸಿದ ಎರೆಡು ದಿನದಲ್ಲೇ ನಮ್ಮ ಸಂಸದರು ಹೆದ್ದಾರಿ ಅಭಿವೃದ್ಧಿಗೆ ಮರು ಜೀವ ತುಂಬಿದ್ದಾರೆ. ನೂತನ ಸಂಸದರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಹಾಗೂ ಸಂಸದರ ಕಾರ್ಯವೈಖರಿಗೆ ಎಲ್ಲರಿಗೂ ಶಹಬ್ಬಾಸ್ ತಿಳಿಸಿದ್ದಾರೆ.

Categories
ಉಡುಪಿ

ಉಡುಪಿಯಲ್ಲಿ ಬಿಜೆಪಿ ಹೋರಾಟ!

ಉಡುಪಿಯಲ್ಲಿ ಬಿಜೆಪಿ ಹೋರಾಟ!

– ವಾಲ್ಮೀಕಿ ನಿಗಮ ಹಗರಣ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಉಡುಪಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
– ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಮುತ್ತಿಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು
– ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ಸಂಘರ್ಷ

NAMMUR EXPRESS NEWS
ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿರುವ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟಿನ ಎದುರು ನೆರೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಳನುಗ್ಗಲು ಪ್ರಯತ್ನಿಸಿದರು. ಆದರೆ ಪೊಲೀಸರು ಗೇಟು ಹಾಕಿ ಪ್ರತಿಭಟನಕಾರರು ಒಳ ಪ್ರವೇಶಿಸಿದಂತೆ ತಡೆದರು. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿ ಗೇಟ್ ಅನ್ನು ತಳ್ಳಿಕೊಂಡು ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಹಿಡಿದರು.
ಈ ವೇಳೆ ಕೆಲಕಾಲ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಅಡೆಯಿತು.. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Categories
ಚಿತ್ರದುರ್ಗ

ವಿದ್ಯಾರ್ಥಿಗಳೇ..ಮಾದಕ ವ್ಯಸನ ಎಚ್ಚರ..!

ವಿದ್ಯಾರ್ಥಿಗಳೇ..ಮಾದಕ ವ್ಯಸನ ಎಚ್ಚರ..!

– ವಿದ್ಯಾರ್ಥಿಗಳೇ ಮಾದಕ ವ್ಯಸನಕ್ಕೆ ತುತ್ತಾಗುತ್ತಿರುವುದು ದುರಂತ
– ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಣ್ಣ ಅಸಮಾಧಾನ
– ಮಾದಕ ವ್ಯಸನ ಒಂದು ದೊಡ್ಡ ಪಿಡುಗು: ಸದ್ಗುರು ಪ್ರದೀಪ್

NAMMUR EXPRESS NEWS
ಹೊಸದುರ್ಗ: ವಿದ್ಯಾರ್ಥಿಗಳು ತನ್ನ ಜೀವನದ ಅಮೂಲ್ಯ ಸಮಯದಲ್ಲಿ ತನ್ನ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವುದರ ಬದಲು ಮಾದಕ ವ್ಯಸನಕ್ಕೆ ತುತ್ತಾಗುತ್ತಿರುವುದು ದುರಂತವಾಗಿದೆ. ಮಾದಕ ವ್ಯಸನ ಮಾಡುವುದರಿಂದ ಕುಟುಂಬದ ನೆಮ್ಮದಿ ಹಾಳಾಗುತ್ತಿದೆ. ಸಮಾಜಘಾತಕ ಕೆಲಸದಲ್ಲಿ ವಿದ್ಯಾವಂತ ಯುವಕರು ಕೊಡಗುತ್ತಿರುವುದು ದುರಂತ ಎಂದು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಎನ್ ತಿಮ್ಮಣ್ಣ ಕಳವಳ ವ್ಯಕ್ತಪಡಿಸಿದರು.
ಹೊಸದುರ್ಗ ನಗರದ ದುರ್ಗಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಚಿತ್ರದುರ್ಗ ಹಾಗೂ ಹೊಸದುರ್ಗ ಪೊಲೀಸ್ ಇಲಾಖೆ ವತಿಯಿಂದ ನಡೆದ ಮಾದಕ ವಸ್ತು ನಿರ್ಮೂಲನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಮಾದಕ ವಸ್ತು ಬಳಕೆ ಮಾಡಿದವನಲ್ಲಿ ನಿರಂತರ ಒಂಟಿತನ ಕಾಡುತ್ತದೆ. ಮಾದಕ ವಸ್ತು ಸೇವನೆಯಿಂದ ಅನೈತಿಕ ಚಟುವಟಿಕೆ ಮಾಡುವಂತೆ ಪ್ರೇರೇಪಿಸುತ್ತದೆ. ಒಮ್ಮೆ ಮಾದಕದಷ್ಟು ಸೇವನೆ ಮಾಡಿದವರು ಅದರಿಂದ ಹೊರಬರಲು ಸಾಧ್ಯವಿಲ್ಲ.

ಕಾನೂನು ಉಲ್ಲಂಘನೆಗೆ ಏನೇನು ಶಿಕ್ಷೆ..?
ಗಾಂಜಾ ಅಫೀಮು ಸೇವಿಸಿದ ವ್ಯಕ್ತಿಗಳು ತನ್ನ ಮನಸ್ಸಿನ ನಿಯಂತ್ರಣವನ್ನು ಕಳೆದುಕೊಂಡು ಕಳ್ಳತನ ,ದರೋಡೆಯಂತಹ ಹೀನ ಕೃತ್ಯದಲ್ಲಿ ಭಾಗಿಯಾಗುತ್ತಾನೆ. ಮನೆಯಲ್ಲಿರುವ ಹಣ ಬಂಗಾರವನ್ನು ಕದಿಯುವ ಕೆಲಸಕ್ಕೆ ಮುಂದಾಗುತ್ತಾನೆ. ಮಾದಕ ವಸ್ತುಗಳನ್ನು ಬೆಳೆಸುವುದು ,ಸಾಗಾಣಿಕೆ ಮಾಡುವುದು ಮತ್ತು ಸೇವಿಸುವುದು ಅಕ್ಷಮ್ಯ ಅಪರಾಧವಾಗಿದ್ದು ಮಾದಕ ವ್ಯಸನ ಮಾಡಿ ಪೊಲೀಸ್ರಿಗೆ ಸಿಕ್ಕಿಬಿದ್ದರೆ 20 ವರ್ಷ ಜೈಲು ಮತ್ತು ಎರಡು ಲಕ್ಷ ಜುಲ್ಮಾನೆ ವಿದಿಸಲಾಗುವುದು.
ಅಪ್ರಾಪ್ತ ವಯಸ್ಕರೊಂದಿಗೆ ವಿವಾಹ ಅಕ್ಷ್ಯಮ್ಯ ಅಪರಾಧವಾಗಿದ್ದು ಪೋಕ್ಸೋ ಮೊಕದ್ದಮೆ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಲಾಗುವುದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು ಒಮ್ಮೆ ಅಪಘಾತವಾದಾಗ ತಲೆಗೆ ಹೆಚ್ಚಿನ ಪೆಟ್ಟು ಬಿದ್ದು ಜೀವ ಹಾನಿಯಾಗುವ ಸಂಭವವಿರುತ್ತದೆ. ಹೆಸರನ್ನು ಮುಕ್ತ ಬದುಕು ಸುಖೀ ಕುಟುಂಬ ನೆಮ್ಮದಿ ಸಮಾಜಕ್ಕೆ ದಾರಿ ಮಾಡಿಕೊಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಡಿ ಎಸ್ ಪ್ರದೀಪ್, ದುರ್ಗಾ ಐಟಿಐ ಪ್ರಾಚಾರ್ಯ ಪುನೀತ್, ಕಚೇರಿ ಅಧೀಕ್ಷಕ ಎಲ್ ಕೆ ಮನೋಹರ್, ಉಪನ್ಯಾಸಕ ಡಿ ಎಂ ಕುಮಾರ್, ರಾಜು, ಧನಂಜಯ ನಟರಾಜ್, ವೈ ಕುಮಾರ್, ರಮೇಶ್, ಹರೀಶ್ ,ಮಹೇಶ್, ಪದ್ಮಾವತಿ ,ಬಸವರಾಜ್, ಮುನಿಸ್ವಾಮಿ, ಗಿರಿಶ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾದಕ ವ್ಯಸನ ಒಂದು ದೊಡ್ಡ ಪಿಡುಗು: ಸದ್ಗುರು ಪ್ರದೀಪ್

ಮಾದಕ ವ್ಯಸನ ಎಂಬುದು ಯುವಕರಿಗೆ ಒಂದು ದೊಡ್ಡ ಪಿಡುಗಾಗಿದೆ. ಸಂವಿಧಾನದಲ್ಲಿ ಕಠಿಣ ಶಿಕ್ಷೆ ಇದ್ದರೂ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು ಅದು ಕಾಲೇಜು ಹಂತದ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿರುವುದು ದುರಂತ. ಮಾದಕ ವ್ಯಸನ ಮಾಡುವವರು ಮತ್ತು ಸೇವಿಸುವವರು ತಮ್ಮ ಗಮನಕ್ಕೆ ಬಂದರೆ ತಕ್ಷಣ ಹೊಸದುರ್ಗ ಪೊಲೀಸ್ ಠಾಣೆಯ ಅಧಿಕಾರಿಗಳ ಗಮನಕ್ಕೆ ತರುವುದು ಒಳಿತು. ಒಂದು ಕುಟುಂಬದಲ್ಲಿ ಒಬ್ಬ ವ್ಯಸನಿ ಇದ್ದರೆ ಅವನ ಕುಟುಂಬ ಸರ್ವನಾಶವಾಗುವವರೆಗೆ ಆ ವ್ಯಸನಬೆಂಬುದು ಅವನನ್ನ ಬಿಡುವುದಿಲ್ಲ. ವಿದ್ಯಾರ್ಥಿಗಳು ತಂದೆ ತಾಯಿಯಂದಿರ ಹೆಸರು ಉಳಿಸಬೇಕೆಂದರೆ ಮಾದಕ ವ್ಯಸನ ಮುಕ್ತ ಬದುಕು ನಡೆಸಬೇಕು.

ಸದ್ಗುರು ಪ್ರದೀಪ್ ,ಯುವ ಉದ್ಯಮಿ