Categories
ಬೆಂಗಳೂರು

ಇನ್ಮೇಲೆ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್‌ ಸಂಪರ್ಕ ಕಟ್!

ಇನ್ಮೇಲೆ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್‌ ಸಂಪರ್ಕ ಕಟ್!
* ಸೆ.1 ರಿಂದ ಕಟ್ಟುನಿಟ್ಟಾಗಿ ನಿಯಮ ಪಾಲನೆ: 15 ದಿನ ಬಡ್ಡಿಯಿಲ್ಲದೆ ಕಾಲಾವಕಾಶ
– ಬೆಸ್ಕಾಂ ಅಲ್ಲಿ ಮೊದಲ ಪ್ರಯೋಗ: ಬಳಿಕ ಎಲ್ಲಾ ಕಡೆ ಜಾರಿ?

NAMMUR EXPFESS NEWS
ಬೆಂಗಳೂರು: ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುತ್ತದೆ.
ಸೆ.1 ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸಿ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.
ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ ಬಿಲ್‌ ಬಕಿ ಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜೊತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.
ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದ ವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
ಗ್ರಾಹಕರಿಗೆ ವಿಶೇಷ ಸೂಚನೆ:ಆನ್‌ಲೈನ್ ಮೂಲಕ ವಿದ್ಯುತ್‌ ಬಿಲ್‌ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‌ವೇರ್‌ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ. ಇಂಥ ಸಂದರ್ಭದಲ್ಲಿ ವಿದ್ಯುತ್‌ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್‌ ರಶೀದಿ ತೋರಿಸುವುದರಿಂದ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ. ಇಲ್ಲಿ ಯಶಸ್ವಿಯಾದರೆ ಮುಂದೆ ರಾಜ್ಯದಲ್ಲಿ ಈ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ.

Categories
ಬೆಂಗಳೂರು

ಪುನೀತ್ ಪತ್ನಿ ಅಶ್ವಿನಿ ಬಗ್ಗೆ ಕೆಟ್ಟ ಪೋಸ್ಟ್: ಅಭಿಮಾನಿಗಳ ಕಿಚ್ಚು!

ಪುನೀತ್ ಪತ್ನಿ ಅಶ್ವಿನಿ ಬಗ್ಗೆ ಕೆಟ್ಟ ಪೋಸ್ಟ್: ಅಭಿಮಾನಿಗಳ ಕಿಚ್ಚು!
* ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನಕಲಿ ಫೋಟೋ ಬಳಕೆ
* ಮದುವೆ ಯಾಗ್ತೇನೆ ಎಂದು ಪೋಸ್ಟ್ ಹಾಕಿದ ಅವಿವೇಕಿ

NAMMUR EXPRESS NEWS
ಬೆಂಗಳೂರು: ಕರ್ನಾಟಕ ರತ್ನ, ಪವರ್‌ಸ್ಟಾ‌ರ್ ಡಾ. ಪುನೀತ್ ರಾಜ್‌ಕುಮಾ‌ರ್ ಅವರ ಪತ್ನಿ ಅಶ್ವಿನಿ ಅವರ ಡೀಪ್‌ಫೇಕ್ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕಿಡಿಗೇಡಿಯೋರ್ವ ಅತಿರೇಕ ಪ್ರದರ್ಶಿಸಿದ್ದಾನೆ.
ಯೋಗೇಂದ್ರ ಪ್ರಸಾದ್ ಎಂಬ ಟ್ವಿಟರ್ ಖಾತೆಯಲ್ಲಿ ಡೀಪ್ ಫೇಕ್ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅಶ್ವಿನಿ ಪುನೀತ್ ರಾಜ್‌ಕುಮಾರ್‌ಗೆ ಬಾಳು ಕೊಡಲು ನಿರ್ಧರಿಸಿದ್ದೇನೆ.ಆ. 29 2024 ರಂದು ನಾನು ವಿವಾಹ ವಾಗಲಿದ್ದೇನೆ ದಯವಿಟ್ಟು ಅಪ್ಪು ಬಾಸ್ ಅಭಿಮಾನಿಗಳು, ರಾಜವಂಶದ ಅಭಿಮಾನಿಗಳು ಎಲ್ಲರೂ ಬಂದು ಆಶೀರ್ವಾದ ಮಾಡಬೇಕು ಎಂದು ನಮ್ಮ ಸವಿನಯ ಆಮಂತ್ರಣ. ಸ್ಥಳ : ಶ್ರೀ ಕಂಠೀರವನಗರ ಸ್ಟುಡಿಯೋಸ್, ನಾರ್ತ್ ವೆಸ್ಟ್ ಬೆಂಗಳೂರು ಎಂದು ಬರೆಯಲಾಗಿದೆ.
್ವಿಟರ್‌ನ್ಲಿ ಕೇವಲ 100 ಫಾಲೋವರ್ಸ್‌ ಅನ್ನು ಹೊಂದಿರುವ ಯೋಗೇಂದ್ರ ಎಂಬ ಹೆಸರಿನ ಈ ವ್ಯಕ್ತಿಯೂ ರಾಜವಂಶದ ಅಭಿಮಾನಿ ಮತ್ತು ಚಿತ್ರನಟ ಹಾಗೂ ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಳ ಬಿನ್ನಿಪೇಟೆ ಅಧ್ಯಕ್ಷ ಎಂದು ತನ್ನ ಬಯೋನಲ್ಲಿ ಹಾಕಿಕೊಂಡಿದ್ದಾನೆ. ತನ್ನ ಟ್ವಿಟರ್ ಪೋಸ್ಟ್‌ಗಳಲ್ಲಿ ಪ್ರತಿಯೊಬ್ಬರ ಕಾಲೆಳೆಯುವ ವಿಚಾರಗಳನ್ನು ಹಾಕಿಕೊಂಡಿದ್ದು, ಈತ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಡೀಪ್‌ಫೇಕ್ ವಿಡಿಯೋ ನೋಡಿ ಕಿಡಿಕಾರಿರುವ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ನಗರ ಪೊಲೀಸರನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಿಡಿಗೇಡಿಯೋರ್ವ ಈ ರೀತಿಯ ಡೀಪ್‌ಫೇಕ್ ವಿಡಿಯೋ ಹರಿಬಿಟ್ಟಿದ್ದು, ಈ ವಿಡಿಯೋ ಅಶ್ವಿನಿ ಪುನೀತ್‌ ರಾಜ್‌ಕುಮಾ‌ರ್ ಅವರನ್ನು ತಲುಪುವ ಮುನ್ನವೇ ಕ್ರಮ ತೆಗೆದುಕೊಳ್ಳಬೇಕು ಎಂದು ಅನೇಕರು ಬೆಂಗಳೂರು ಪೊಲೀಸ್‌, ಸೈಬ‌ರ್ ಕ್ರೈಂಗೆ ಟ್ಯಾಗ್ ಮಾಡಿ ಆಗ್ರಹಿಸಿದ್ದಾರೆ.

Categories
ಬೆಂಗಳೂರು

ಅಕ್ರಮ ಸಕ್ರಮ ಪೋಡಿ ಮಾಡಲು ಅಭಿಯಾನ

ಅಕ್ರಮ ಸಕ್ರಮ ಪೋಡಿ ಮಾಡಲು ಅಭಿಯಾನ
* ಲಕ್ಷಾಂತರ ರೈತರ ಅನೇಕ ವರ್ಷಗಳಿಂದ ಪ್ರಯತ್ನ
* ರೈತರ ಸಮಸ್ಯೆಗೆ ಶಾಶ್ವತ ಪರಿಹಾರ”ಸೂಚನೆ
* ಪೋಡಿ ದುರಸ್ಥಿಗೆ ಡಿಜಿಟಲ್‌ ಆ್ಯಪ್ ಸಿದ್ಧ!

NAMMUR EXPRESS NEWS
ಬೆಂಗಳೂರು: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಆ.30ರಂದು ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದ್ದಾರೆ.
“ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಸೂಚಿಸಿದ್ದಾರೆ.
ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದ್ದು,ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ.ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೆಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ” ಎಂದು ಮಾಹಿತಿ ನೀಡಿದ್ದಾರೆ.
“ಈ ಹಿಂದೆ ಪೋಡಿ ದುರಸ್ಥಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ತಯಾರಿಸಲು ಪ್ರಯತ್ನಿಸಲಾಗಿತ್ತು. ಆದರೆ, ಆ ಕೆಲಸವೂ ಸಮರ್ಪಕವಾಗಿ ಆಗಿರುವುದಿಲ್ಲ. ಆದ ಕೆಲವು ಕಡತಗಳು ಕಾಣೆಯಾಗಿವೆ ಅಥವಾ ಕೈಗೆ ಸಿಗುವುದಿಲ್ಲ. ಇದರಿಂದ ಕಡತಗಳು ಇದ್ದರೂ ಅನೇಕರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ಕಂದಾಯ ಇಲಾಖೆ ಪೋಡಿ ದುರಸ್ಥಿ 1-5 ಕಡತಗಳನ್ನು ಕಂಪ್ಯೂಟರ್ಗಳನ್ನು ಬಳಸಿ ಗಣಕೀಕರಿಸಿದ (ಡಿಜಿಟಲ್‌) 1-5 ಕಡತಗಳನ್ನು ತಯಾರಿಸಲು ಆರಂಭಿಸಿದೆ.
ಡಿಜಿಟಲ್‌ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.
“ಈ ಅಭಿಯಾನವನ್ನು ಸೆಪ್ಟೆಂಬರ್‌ 02 ರಿಂದ ರಾಜ್ಯಾದ್ಯಂತ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲೆಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳ ದುರಸ್ಥಿಯಾಗದೆ ಬಾಕಿ ಉಳಿದಿದೆ ಅಂತಹ ಪ್ರತಿಯೊಂದು ಕಡೆಯಲ್ಲೂ ಡಿಜಿಟಲಾಗಿ 1-5(ನಮೂನೆ)ಕಡತ ಸೆಪ್ಟೆಂಬರ್‌ 02 ರಿಂದ ತಯಾರಿ ಮಾಡಲಾಗುವುದು. 1-5(ನಮೂನೆ)ಕಡತ ಎಲ್ಲಾ ಸರ್ಕಾರಿ ಜಮೀನಿಗೆ (ರೈತರಿಗೆ ಮಂಜೂರಾಗಿರುವ), ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ ಎಂದು ಸೂಚಿಸಿದ್ದಾರೆ.
1-5ನಮೂನೆ ಪ್ರಕಾರ ತಯಾರಾದ ಕಡತಗಳನ್ನು ಮುಂದೆ 6-10 ಮಾಡಿ ಅವರಿಗೆ ಸರ್ವೆಯೊಂದಿಗೆ ದುರಸ್ಥಿ ಮಾಡಿದ ನಂತರ ಹೊಸ ಸರ್ವೆ ನಂಬರ್ ಪಹಣಿಯೊಂದಿಗೆ ಸಂಪೂರ್ಣ ದಾಖಲೆ ಮಾಡಿಕೊಡಲಾಗುವುದು. ಇದನ್ನು ಅಭಿಯಾನ ಮಾದರಿಯಲ್ಲಿ ಅನುಷ್ಟಾನ ಮಾಡಲಾಗುವುದು. ಇದೊಂದು ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ರೈತರಿಗೆ ನೆಮ್ಮದಿಯನ್ನು ನೀಡುವ ಅಭಿಯಾನವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳೂ ಈ ಯೋಜನೆ ಯಶಸ್ವಿಯಾಗಲು ಸಹಕರಿಸಬೇಕಿದೆ. ಆ ಮೂಲಕ ರೈತರ ದೀರ್ಘ ಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮ್ಮಿಂದಾದ ಸಹಕಾರ ನೀಡಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.

* ಹಾಸನದಲ್ಲಿ ಯಶಸ್ವಿಯಾದ ಪೈಲಟ್‌ ಯೋಜನೆ

ಡಿಜಿಟಲಾಗಿ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ರಾಜ್ಯಾದ್ಯಂತ ವಿಸ್ತರಿಸುವ ಮುನ್ನ ಈ ಯೋಜನೆಯನ್ನು ಹಾಸನದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗಿದೆ. ಈ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆ್ಯಪ್ ಮೂಲಕ ಯಾವ ಫೈಲು ಯಾವ ಅಧಿಕಾರಿಯ ಬಳಿ ಎಷ್ಟು ದಿನದಿಂದ ಬಾಕಿ ಇದೆ ಎಂಬ ಮಾಹಿತಿಯನ್ನೂ ಪತ್ತೆಹಚ್ಚಬಹುದು. ಹೀಗಾಗಿ ಅಧಿಕಾರಿಗಳು ಎಚ್ಚಕೆಯಿಂದ ಕೆಲಸ ಮಾಡಲು ಸಾಧ್ಯ. ತಾಲೂಕಿನಲ್ಲಿ ದರ್ಖಾಸ್ತು ಪೋಡಿ ಆಗಬೇಕಿರುವ ಸರ್ವೇ ನಂಬರ್ ಎಷ್ಟಿದೆ ಎಂದು ಮೊದಲು ಪಟ್ಟಿ ಮಾಡಿ, ಮುಖ್ಯವಾಗಿ ಜಿಲ್ಲಾಧಿಕಾರಿಗಳು ಪ್ರತಿ ವಾರ ಗ್ರಾಮ ಆಡಳಿತ ಅಧಿಕಾರಿಯಿಂದ ತಹಶೀಲ್ದಾರ್‌ ವರೆಗೆ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡಬೇಕು, ಈ ಬಗ್ಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು ಹಾಗೂ ಪೋಡಿ ದುರಸ್ಥಿ ಕೆಲಸದ ಬಗ್ಗೆ ನಿರಂತರ ಮೇಲುಸ್ತುವಾರಿ ನಡೆಸಬೇಕು” ಎಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

Categories
ಜ್ಯೋತಿಷ್ಯ

ಕೊನೆಯ ಶ್ರಾವಣ ಶನಿವಾರ: ನಿಮ್ಮ ದಿನ ರಾಶಿ ಭವಿಷ್ಯ ಹೇಗಿದೆ?

ಕೊನೆಯ ಶ್ರಾವಣ ಶನಿವಾರ: ನಿಮ್ಮ ದಿನ ರಾಶಿ ಭವಿಷ್ಯ ಹೇಗಿದೆ?
– ಯಾವ ರಾಶಿಯವರಿಗೆ ಲಾಭ ? ಯಾವ ರಾಶಿಯವರಿಗೆ ನಷ್ಟ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಇಂದು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಿ. ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕುಟುಂಬ ಜೀವನದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವಿರೋಧಿಗಳು ಸಕ್ರಿಯವಾಗಿ ಉಳಿಯುತ್ತಾರೆ. ಕೆಲಸದ ನಿಮಿತ್ತ ಹೆಚ್ಚು ಪ್ರಯಾಣ ಮಾಡಬೇಕಾಗುವುದು. ಕೆಲವರಿಗೆ ಆಸ್ತಿ ನಷ್ಟವಾಗಬಹುದು. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಇಂದು ಒಳ್ಳೆಯ ಸುದ್ದಿ ಸಿಗಬಹುದು.

** ವೃಷಭ ರಾಶಿ :
ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಮೃದ್ಧಿ ಇರುತ್ತದೆ. ನಿಮ್ಮ ಗುರಿಗಳನ್ನು ಸಾಧಿಸಲು ನೀವು ಪ್ರೇರಿತರಾಗಿ ಕಾಣಿಸಿಕೊಳ್ಳುತ್ತೀರಿ. ್ರೀ ಕೃಷ್ಣನನ್ನು ಆರಾಧಿಸಿ. ಗುಂಪು ಅಧ್ಯಯನವು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಇಂದು ನೀವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸುವರ್ಣಾವಕಾಶವನ್ನು ಪಡೆಯುತ್ತೀರಿ.

** ಮಿಥುನ ರಾಶಿ
ಇಂದು ಮಾನಸಿಕ ಒತ್ತಡದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳು ದೊರೆಯಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶವಿರುತ್ತದೆ. ಕೆಲವರಿಗೆ ಆಸ್ತಿ ವಿವಾದಗಳಿಂದ ಮುಕ್ತಿ ಸಿಗಲಿದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.

** ಕರ್ಕಾಟಕ ರಾಶಿ :
ಇಂದು ಕುಟುಂಬ ಸದಸ್ಯರೊಂದಿಗೆ ಮೋಜಿನ ಕ್ಷಣಗಳನ್ನು ಆನಂದಿಸುವಿರಿ. ರಿಯಲ್ ಎಸ್ಟೇಟ್‌ನಲ್ಲಿ ಚಿಂತನಶೀಲವಾಗಿ ಹೂಡಿಕೆ ಮಾಡುವುದು ಲಾಭದಾಯಕವಾಗಿರುತ್ತದೆ. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಹಣವನ್ನು ಉಳಿಸುವತ್ತ ಗಮನ ಹರಿಸಿ. ಅನುಪಯುಕ್ತ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಿ.

** ಸಿಂಹ ರಾಶಿ :
ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಹಣದ ಒಳಹರಿವು ಹೆಚ್ಚಾಗುತ್ತದೆ. ಸಂಪತ್ತು ಮತ್ತು ಆಸ್ತಿಯಲ್ಲಿ ಹೆಚ್ಚಳದ ಸಾಧ್ಯತೆಗಳಿವೆ. ಅಜ್ಞಾತ ಭಯದಿಂದ ಕೆಲವರು ತೊಂದರೆಗೊಳಗಾಗುತ್ತಾರೆ. ಸಂದರ್ಭಗಳು ಪ್ರತಿಕೂಲವಾಗಿರುತ್ತವೆ. ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ. ವಿದ್ಯಾರ್ಥಿಗಳು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.

** ಕನ್ಯಾ ರಾಶಿ :
ಇಂದು ನಿಮಗೆ ಸಂದರ್ಭಗಳು ಅನುಕೂಲಕರವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಇಂದು ಕುಟುಂಬ ಸದಸ್ಯರೊಂದಿಗೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಹಿಂಜರಿಯಬೇಡಿ. ಕೆಲವು ಜನರು ವ್ಯಾಪಾರ ಸಂಬಂಧವಾಗಿ ಪ್ರಯಾಣ ಮಾಡಬೇಕಾಗಬಹುದು. ಶೈಕ್ಷಣಿಕ ಕೆಲಸದಲ್ಲಿ ನಿಮ್ಮ ಗುರಿಗಳ ಮೇಲೆ ಕೇಂದ್ರೀಕರಿಸಿ. ಇಂದು ಕಚೇರಿಯಲ್ಲಿ ನಿಮ್ಮ ಪ್ರತಿಭ ತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ಸಿದ್ಧರಾಗಿರಿ.

** ತುಲಾ ರಾಶಿ :
ಇಂದು ಹಣ ಮತ್ತು ಆಸ್ತಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸ್ವಲ್ಪ ಎಚ್ಚರದಿಂದಿರಿ. ಇಂದು ನೀವು ಸ್ನೇಹಿತರೊಂದಿಗೆ ಎಲ್ಲೋ ಪ್ರಯಾಣಿಸಲು ಯೋಚಿಸಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಅಪಾರ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಿರಂತರವಾಗಿ ಪ್ರಯತ್ನಿಸುತ್ತಿರಿ.

** ವೃಶ್ಚಿಕ ರಾಶಿ :
ಇಂದು ನಿಮ್ಮ ಆರೋಗ್ಯ ಸುಧಾರಿಸಲಿದೆ. ದೀರ್ಘಕಾಲದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಕುಟುಂಬದ ಬೆಂಬಲದೊಂದಿಗೆ, ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳಿವೆ. ಕೆಲಸದ ನಿಮಿತ್ತ ಪ್ರಯಾಣ ಮಾಡುವಿರಿ. ಆಸ್ತಿ ವಿತರಕರು ವ್ಯವಹಾರದಲ್ಲಿ ಲಾಭವನ್ನು ಪಡೆಯುತ್ತಾರೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.

** ಧನಸ್ಸು ರಾಶಿ :
ಇತರ ದಿನಗಳಿಗಿಂತ ಇಂದು ನಿಮಗೆ ಉತ್ತಮವಾಗಿರುತ್ತದೆ. ಖರ್ಚುಗಳು ಹೆಚ್ಚಾಗುತ್ತವೆ, ಆದರೆ ಉತ್ತಮ ಆದಾಯದಿಂದಾಗಿ ಒತ್ತಡದಿಂದ ಮುಕ್ತರಾಗುತ್ತೀರಿ ಮತ್ತು ಮನೆಯಲ್ಲಿ ಹಿರಿಯ ಸದಸ್ಯರೊಂದಿಗೆ ಯಾವುದೇ ಶುಭ ಕಾರ್ಯಕ್ರದ ಬಗ್ಗೆ ಚರ್ಚಿಸಬಹುದು. ಒಡಹುಟ್ಟಿದವರೊಂದಿಗಿನ ಸಂಬಂಧಗಳಲ್ಲಿ ನಡೆಯುತ್ತಿರುವ ಬಿರುಕುಗಳು ಪರಿಹರಿಸಲ್ಪಡುತ್ತವೆ.

** ಮಕರ ರಾಶಿ :
ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ನೀವು ಕುಟುಂಬದೊಂದಿಗೆ ಪ್ರವಾಸವನ್ನು ಯೋಜಿಸಬಹುದು. ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬಹುದು. ಇಂದು, ವೃತ್ತಿ ಸಂಬಂಧಿತ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಆರ್ಥಿಕ ನಷ್ಟದ ಲಕ್ಷಣಗಳಿವೆ.

** ಕುಂಭ ರಾಶಿ :
ಇಂದು ನೀವು ಸೋಮಾರಿತನದಿಂದ ದೂರವಿರಿ. ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ. ಕೌಟುಂಬಿಕ ಜೀವನದ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ಪರಿಹರಿಸಲು ಪ್ರಯತ್ನಿಸಿ. ವೃತ್ತಿ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೊಳಗಾಗಬಹುದು. ಅಗತ್ಯವಿದ್ದರೆ ಹಿರಿಯರ ಸಹಾಯ ಪಡೆಯಲು ಹಿಂಜರಿಯಬೇಡಿ.

** ಮೀನ ರಾಶಿ :
ಇಂದು ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ. ಉ್ಯಮಿಗಳಿಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇಂದು ಶುಭ ದಿನವಾಗಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಅಖಂಡವಾಗಿ ಉಳಿಯುತ್ತದೆ. ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.

Categories
ಮಲ್ನಾಡ್

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ಇನ್ನಿಲ್ಲ!

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ಇನ್ನಿಲ್ಲ!
– ಶಿಕಾರಿಪುರ: ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ
– ಹೊಸನಗರ: ಬೈಕ್, ಕಾರು ನಡುವೆ ಮುಖಾಮುಖಿ ಡಿಕ್ಕಿ
– ತೀರ್ಥಹಳ್ಳಿ: ಮಾಕೋಡು ಬಳಿ ಹಿಟ್ ಅಂಡ್ ರನ್!

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ ಶ್ರೀನಿವಾಸ್ ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು.
ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಕರೂ ಆಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಬೆಂಗಳೂರನಲ್ಲಿಯೇ ನೆಲೆಸಿದ್ದರು. ಕೆ ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್‌ ಮಾಹಿತಿ ನೀಡಿದ್ದಾರೆ. ರಾಜಕೀಯ ವಲಯ ಸೇರಿ ಎಲ್ಲಾ ವಲಯದಿಂದಲೂ ಕಂಬನಿ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರ: ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಕಾರಿಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.
ಡೆಕೋರೇಷನ್ ಕೆಲಸ ಮಾಡಿಕೊಂಡಿದ್ದ ಗಿರೀಶ್ (30)ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ಕೂಡ ದೊರೆತಿದ್ದು, ಆದರೆ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಯಾರೂ ಕಾರಣವಲ್ಲವೆಂದು ಬರೆದಿರುವುದು ಪತ್ತೆಯಾಗಿದೆ.
ತಂದೆ ಪಿಡಬ್ಲೂಡಿ ಕಚೇರಿಯಲ್ಲಿ ಡಿ.ದರ್ಜೆ ನೌಕರರಾಗಿದ್ದು, ತಂದೆ ಮತ್ತು ತಾಯಿ ಇಬ್ಬರೂ ಕೂಡ ಮಗಳ ಮನೆಗೆ ಎಂದು ಮೈಸೂರಿಗೆ ತೆರಳಿದ್ದರು.
ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್, ಕಾರು ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಹೊಸನಗರ: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ.
ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ಆದಿತ್ಯ ಎಂಬಾತನಿಗೆ ತಲೆಗೆ ತೀವ್ರವಾದ ಪೆಟ್ಟಾಗಿದೆ ಮತ್ತು ಯಶವಂತ್ ಎಂಬಾತನ ಕೈ ಮುರಿತವಾಗಿದೆ. ಕಾರಿನಲ್ಲಿದ್ದ ಕಲ್ಲೂರು ಗ್ರಾಮದ ಅಭಿಷೇ್ ಎಂಬಾತನಿಗೆ ಸಣಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ತೀರ್ಥಹಳ್ಳಿ: ಮಾಕೋಡು ಬಳಿ ಹಿಟ್ ಅಂಡ್ ರನ್!

ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಕೊಪ್ಪ ಗಡಿ ಭಾಗದ ಕಮ್ಮರಡಿ ಬಳಿ ಕಾರೊಂದು ಹಾಲು ಕೊಡಲು ಹೋಗಿದ್ದ ಕೇಳೂರು ಪ್ರಮೋದ್ ಎಂಬುವರ ಬೈಕಿಗೆ ಡಿಕ್ಕಿ ಹೊಡೆದು ಅವರು ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Categories
ಚಿಕ್ಕಮಗಳೂರು

ಅರಣ್ಯ ಒತ್ತುವರಿ ತೆರವು ವಿರೋಧ: ಸಭೆ

ಅರಣ್ಯ ಒತ್ತುವರಿ ತೆರವು ವಿರೋಧ: ಸಭೆ
– ಮಲೆನಾಡು-ಕರಾವಳಿ ಜನಪರ ಒಕ್ಕೂಟದಿಂದ ಬಾಳೆಹೊನ್ನೂರಲ್ಲಿ ಮಹತ್ವದ ಸಭೆ.

NAMMUR EXPRESS NEWS
ಬಾಳೆಹೊನ್ನೂರು: ಅರಣ್ಯ ಒತ್ತುವರಿ ತೆರವನ್ನು ವಿರೋಧಿಸಿ ಮಲೆನಾಡು-ಕರಾವಳಿ ಜನಪರ ಒಕ್ಕೂಟದಿಂದ ಇದೇ ಸೆಪ್ಟೆಂಬರ್ 01ಕ್ಕೆ ಮಹತ್ವದ ಸಭೆ ಕರೆದಿದೆ.
1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಾಹಾಭಗವತ್ಪಾಂದಗಳವರ ಸಲಹೆ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ, ಅರಣ್ಯ ಒತ್ತುವರಿ ತೆರವಿನಿಂದ ಮಲೆನಾಡಿಗರ ಬದುಕು ಮುಂದೇನು,? ಕಾನೂನಾತ್ಮಕ ಪರಿಹಾರಗಳೇನು? ಎಂಬುದರ ಕುರಿತು ಮಲೆನಾಡಿಗರ ಮಹತ್ವದ ಸಭೆಯನ್ನು ಬಾಳೆಹೊನ್ನೂರಿನ ರಂಭಾಪುರಿ ಮಠದ ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಸೆಪ್ಟೆಂಬರ್ 01 ಭಾನುವಾರದಂದು ಕರೆಯಲಾಗಿದ್ದು, ವಿಶೇಷ ಆಹ್ವಾನಿತರಾಗಿ ನ್ಯಾಯವಾದಿಗಳು ಹಾಗೂ ಜನಪರ ಹೋರಾಟಗಾರರಾದ ರವೀಂದ್ರನಾಥ್ ನಾಯಕ್ ಆಗಮಿಸಲಿದ್ದಾರೆ ಎಂದು ಮಲೆನಾಡು ಕರಾವಳಿ ಒಕ್ಕೂಟದ ಪ್ರಧಾನ ಸಂಚಾಲಕರಾದ ಅನಿಲ್‌ ಹೊಸಕೊಪ್ಪ ತಿಳಿಸಿದ್ದಾರೆ.

Categories
ಕರಾವಳಿ

ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ ಕಿರಿಕ್!

ಕರಾವಳಿ ಟಾಪ್ ನ್ಯೂಸ್

ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ ಕಿರಿಕ್!

– ಕಾರ್ಕಳ: ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಪರಾರಿ!
– ಪುತ್ತೂರು: ತಡೆಯಾಜ್ಞೆ ತಂದ ಅರುಣ್ ಕುಮಾ‌ರ್ ಪುತ್ತಿಲ

NAMMUR EXPRESS NEWS
ಕುಂದಾಪುರ: ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ಪೊಲೀಸರು ಅಡ್ಡಿಪಡಿಸಿದ್ದಕ್ಕೆ ಮಾಡೆಲ್‌ವೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಬಟ್ಟೆ ಬದಲಿಸಿ ಇಲ್ಲದಿದ್ದರೆ, ಸ್ಥಳೀಯರು ರೊಚ್ಚಿಗೆದ್ದು ಹಲ್ಲೆ ಮಾಡುತ್ತಾರೆ ಎಂದು ಬೆದರಿಸಿದ್ದರಂತೆ. ಸದ್ಯ ಈ ಸಂಬಂಧ ಮಾಡೆಲ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಪ್ರಶ್ನೆ ಮಾಡಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಮಾಡೆಲ್‌ವೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್ ಮಾಡಿದ
ಫೋಟೋಗಳ ಸಹಿತ ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವವನ್ನು ಮಾಡೆಲ್ ಹಂಚಿಕೊಂಡಿದ್ದಾರೆ. ಬೀಚ್‌ನಲ್ಲಿ ನನ್ನ ಪತಿ ಬಿಕಿನಿ ಫೋಟೊಶೂಟ್ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರುಅಡ್ಡಿ ಪಡಿಸಿದ್ದಾರೆ ಎಂದು ದೂರಿದರು. ಪ್ರತಿಕ್ರಿಯಿಸಿ ಬೀಚ್‌ನಲ್ಲಿ ಬಿಕಿನಿ ರಿಸವುದು ಯಾವುದೇ ಅಪರಾಧವಲ್ಲ. ಸಾರ್ವಜನಿಕ ಸ್ಥಳದಲ್ಲಿ ಫೋಟ್‌ಶೂಟ್ ಮಾಡಲು ಯಾವುದೇ ಲೈಸೆನ್ಸ್‌ ಪಡೆಯುವ ಅಗತ್ಯವಿಲ್ಲ ಎಂದಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರು ಎಂದು ಮಾಡೆಲ್ ಪ್ರಶ್ನೆ ಮಾಡಿದ್ದಾರೆ. ಬೀಚ್ ಸಾರ್ವಜನಿಕ ಪ್ರದೇಶ ಅಲ್ಲಿ ಫೋಟೋಶೂಟ್ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್ ಮಾಡುವುದು ಕಾನೂನು ಉಲ್ಲಂಘನೆಯೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಪೊಲೀಸರಿಗೆ ಮಾಡೆಲ್ ಪ್ರಶ್ನೆ ಮಾಡಿದ್ದಾಳೆ.

ಕಾರ್ಕಳ: ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಪರಾರಿ!

ಕಾರ್ಕಳ: ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ಹಣ ನೀಡಿದೇ ವಾಹನದೊಂದಿಗೆ ಪರಾರಿಯಾದ ಘಟನೆ ಕಾರ್ಕಳ ತಾಲೂಕು ಜಂಕ್ಷನ್ ಬಳಿಯ ಪೆಟ್ರೋಲ್ ಬಂಕ್ ವೊಂದರಲ್ಲಿ ಆ.29ರ ನಸುಕಿನ ಜಾವದಲ್ಲಿ ನಡೆದಿದೆ.
ಕಾರ್ಕಳದ ‘ಅನು ಪ್ಯೂಯೆಲ್ ಪಂಪ್’ ಎಂಆರ್‌ಪಿಎಲ್ ದಿನದ 24 ಘಂಟೆ ಕಾರ್ಯ ನಿರ್ವಹಿಸುತ್ತದೆ. ಇದನ್ನು ದುರುಪಯೋಗ ಮಾಡಿದ ವ್ಯಕ್ತಿಯೊಬ್ಬ ಈ ದಿನ ಬೆಳಗ್ಗಿನ ಜಾವ 2.50ಕ್ಕೆ ಬಿಳಿ ಬಣ್ಣದ ಕಾರಿನಲ್ಲಿ ಕಾರ್ಕಳ ಬೈಪಾಸ್ ರಸ್ತೆಯ ಕಡೆಯಿಂದ ಬಂದಂತಹ ವ್ಯಕ್ತಿಯೊಬ್ಬ ಪುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾನೆ.
ಗ್ರಾಹಕನ ಸೂಚನೆಯಂತೆ 4253.88 ಮೊತ್ತದಷ್ಟು ಟ್ಯಾಂಕ್ ಪೂರ್ತಿ ಪೆಟ್ರೋಲ್ ತುಂಬಿಸಿ, ಟ್ಯಾಂಕ್ ನಿಂದ ಪೈಪ್ಬ ಬೇರ್ಪಡಿಸುತ್ತಿದ್ದಾಗ ಗ್ರಾಹಕ ತನ್ನ ವಾಹನವನ್ನು ಚಲಾಯಿಸಿ ಹೊರಟು ಹೋಗಿದ್ದಾನೆ. ವಾಹನವು ಬೈಲೂರು-ಉಡುಪಿ ರಸ್ತೆಯಲ್ಲಿ ಹೋಗಿದ್ದು. ವಂಚಕ ಗ್ರಾಹಕ ತುಳುವಿನಲ್ಲಿ ಮಾತನಾಡುತ್ತಿದ್ದನು. ಗ್ಯಾರೇಜ್ ಎಲ್ಲಿಯಾದರೂ ಓಪನ್ ಇದೆಯಾ ಅಂತ ಮೊದಲಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯಲ್ಲಿ ವಿಚಾರಿಸಿ ನಂತರ ಮಂಕುಬೂದಿ ಎರಚಿದ್ದಾನೆ ಎಂದು ತಿಳಿದುಬಂದಿದೆ.
ವಾಹನದ ಕುರಿತು ಮಾಹಿತಿ ಲಭಿಸಿದರೆ, 9964070507 ಮೊಬೈಲ್ ಸಂಖ್ಯೆಗೆ ಕರೆಯನ್ನು ಮಾಡಿ ತಿಳಿಸಿ ಇಲ್ಲದಿದ್ದರೆ ಪೋಲಿಸರ ಗಮನಕ್ಕೆ ತರುವಂತೆ ಪೆಟ್ರೋಲ್ ಬಂಕ್ ಮಾಲಕ ಮಿಯ್ಯಾರು ರೋಹಿತಿ ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡೆಯಾಜ್ಞೆ ತಂದ ಅರುಣ್ ಕುಮಾ‌ರ್ ಪುತ್ತಿಲ

ಪುತ್ತೂರು :ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ
ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ
ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ
ಅರುಣ್ ಕುಮಾ‌ರ್ ಪುತ್ತಿಲ ಹೈಕೋರ್ಟ್ ನಿಂದ ತಡೆಯಾಜ್ಞೆ
ತಂದಿದ್ದಾರೆ.ರಾಜಕೀಯವಾಗಿ ಸಂಚು ಮಾಡುಲಾಗುತ್ತಿದೆ
ಎಂಬ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ
ಮೊರೆ ಹೋಗಿದ್ದಾರೆ.

Categories
ದಕ್ಷಿಣ ಕನ್ನಡ

ಸೌಜನ್ಯ ಕೇಸ್ ಮರು ತನಿಖೆ ಇಲ್ಲ!?

ಸೌಜನ್ಯ ಕೇಸ್ ಮರು ತನಿಖೆ ಇಲ್ಲ!?
– ಸೌಜನ್ಯ ಪೋಷಕರು ಸಲ್ಲಿಸಿದ ಅರ್ಜಿ ವಜಾ ಮಾಡಿದ ಕೋರ್ಟ್
– ಸೌಜನ್ಯ ಪರ ಹೋರಾಟಗಾರರಿಗೆ ತುಸು ನಿರಾಸೆ

NAMMUR EXPRESS NEWS
ಬೆಂಗಳೂರು: ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದೆ.
ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು ನೀಡಿದೆ.
ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎಂದು ಹೇಳಿದೆ ಹೈಕೋರ್ಟ್. ಈ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿ ವಜಾ ಆಗಿದೆ.
ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಪೊಲೀಸರುಗಳು ವೈದ್ಯರುಗಳು ರಾಜಕಾರಣಿಗಳು ಮತ್ತು ಡೀ ್ಯವಸ್ಥೆ ತನಿಖೆ ಆಗದಂತೆ ನೋಡಿಕೊಂಡಿತ್ತು. ಎಲ್ಲರೂ ಸೇರಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಆರೋಪಿಸಿ ಕಳೆದ 12 ವರ್ಷಗಳಿಂದಲೂ ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಲು ಸೌಜನ್ಯಾಳ ತಾಯಿ ಕುಸುಮಾವತಿ ಹೋರಾಟ ಮಾಡುತ್ತಿದ್ದಾರೆ.
ಸೌಜನ್ಯ ಪ್ರಕರಣದ ಪ್ರಾರಂಭದಿಂದಲೂ ಮಹೇಶ್ ಶೆಟ್ಟಿ ತಿಮರೋಡಿ, ಸಂತಸ್ಥ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಕಾಲದಿಂದ ಕಾಲಕ್ಕೆ ಹೊಸ ಹೊಸ ಹೋರಾಟಗಾರರು ಸೌಜನ್ಯ ಪರ ಹೋರಾಟದ ಉದ್ದೇಶಕ್ಕೆ ಬಲ ತುಂಬಿದ್ದು, ಮಾಜಿ ಪೊಲೀಸ್‌ ಅಧಿಕಾರಿ ಗಿರೀಶ್ ಮಟ್ಟಣ್ಣನವ‌ರ್ ಈ ಪೈಕಿ ಪ್ರಮುಖ ಹೆಸರು. ಇವರೆಲ್ಲರ ಪ್ರಯತ್ನದ ಫಲವಾಗಿ ಸೌಜನ್ಯ ಪ್ರಕರಣ ಮರು ತನಿಖೆಗೆ ಹೋಗಬೇಕು ಎಂದು ಕೋರ್ಟ್ ಮೆಟ್ಟಲು ಹತ್ತಿದ್ದರು. ಆದರೆ ಕೋರ್ಟ್ ಇದೀಗ ಸೌಜನ್ಯ ಹೋರಾಟಗಾರರಿಗೆ ತುಸು ನಿರಾಸೆ ಮೂಡಿಸಿದೆ.

Categories
ಕಾರ್ಕಳ

ಕಾರ್ಕಳ ಪುರಸಭೆಗೆ ನೂತನ ಸಾರಥಿಗಳು!

ಕಾರ್ಕಳ ಪುರಸಭೆಗೆ ನೂತನ ಸಾರಥಿಗಳು!
– ಅಧ್ಯಕ್ಷರಾಗಿ ಯೋಗೀಶ್‌ ದೇವಾಡಿಗ , ಉಪಾಧ್ಯಕ್ಷರಾಗಿ ಪ್ರಶಾಂತ್‌ ಕೋಟ್ಯಾನ್‌ ಆಯ್ಕೆ
– ಬಿಜೆಪಿ ಆಡಳಿತ ಪಡೆದ ಕಾರ್ಕಳ ಪುರಸಭೆ: ಅಭಿನಂದನೆಗಳು

NAMMUR EXPRESS NEWS
ಕಾರ್ಕಳ: ಕಾರ್ಕಳ ಪುರಸಭೆಯ ನೂತನ ಅಧ್ಯಕ್ಷರಾಗಿ ಯೋಗೀಶ್‌ ದೇವಾಡಿಗ, ಉಪಾಧ್ಯಕ್ಷರಾಗಿ ಪ್ರಶಾಂತ್‌ ಕೋಟ್ಯಾನ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಅಧಿಕಾರವನ್ನು ಮತ್ತೆ ಬಿಜೆಪಿ ಉಳಿಸಿಕೊಂಡಿದೆ.
ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆ. 30ರಂದು ಚುನಾವಣೆ ನಡೆದಿದ್ದು,
23 ಸದಸ್ಯರನ್ನು ಹೊಂದಿರುವ ಕಾರ್ಕಳ ಪುರಸಭೆಯಲ್ಲಿ ಈ ಬಾರಿ ಅಧ್ಯಕ್ಷ ಹಾಗೂ ಉಪಾ‍ಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. 11 ಮಂದಿ ಬಿಜೆಪಿ, 11 ಮಂದಿ ಕಾಂಗ್ರೆಸ್‌ ಹಾಗೂ ಒರ್ವರು ಪಕ್ಷೇತರ ಸದಸ್ಯರಿದ್ದಾರೆ.

ಯಾರು ಯಾರು ನಾಮಪತ್ರ ಸಲ್ಲಿಸಿದ್ದರು?

ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಯೋಗೀಶ್‌ ದೇವಾಡಿಗ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್‌ ಕೋಟ್ಯಾನ್‌ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ಶುಭದ ರಾವ್, ಉಪಾಧ್ಯಕ್ಷ ಸ್ಥಾನಕ್ಕೆ ವಿನ್ನಿ ಬೋಲ್ಡ್‌ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ, ಕಾಂಗ್ರೆಸ್‌ ಸಮ ಬಲದ ಸ್ಥಾನ ಹೊಂದಿರುವ ಕಾರಣ ಪಕ್ಷೇತರ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ ಕಿಂಗ್‌ ಮೇಕರ್‌ ಆಗಬೇಕಿತ್ತು. ಆದರೆ, ಅವರು ಮತ ಚಲಾವಣೆ ಮಾಡಲಿಲ್ಲ.
ಇನ್ನು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಶಾಸಕ, ಸಂಸದರ ಮತ ಪರಿಗಣನೆಗೆ ಇರುವುದರಿಂದ ಅವರ ಮತವೇ ನಿರ್ಣಾಯಕವಾಗಿತ್ತು. ಹೀಗಾಗಿ 13 ಮತಗಳೊಂದಿಗೆ ಬಿಜೆಪಿ ಸದಸ್ಯರೇ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ತಹಶೀಲ್ದಾರ್‌ ಪ್ರತಿಭಾ ಆರ್‌. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

Categories
ರಾಜ್ಯ

ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ!

ಕರ್ನಾಟಕ ಟಾಪ್ ನ್ಯೂಸ್

* ಗದಗ:ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ!
– ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡ!

* ದಾವಣಗೆರೆ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ: ಒಂದು ಸಾವು
* ಕೊಡಗು: ಆನೆ ದಾಳಿಗೆ ಮಹಿಳೆ ಬಲಿ: ಇನ್ನೊಂದು ಕಡೆ ಆನೆ ಸಾವು
* ಕಾರ್ಕಳ ರೇಪ್: ಡ್ರಗ್ಸ್ ನೀಡಿದ್ದ ಇಬ್ಬರು ಅರೆಸ್ಟ್!
* – ಕಾರವಾರ ಕಾರಾಗೃಹದಲ್ಲಿ ನಾಲ್ವರು ಕೈದಿಗಳ ನಡುವೆ ಮಾರಾಮಾರಿ

NAMMUR EXPRESS NEWS
ಗದಗ: ನಸುಕಿನ ಜಾವ ಮನೆ ಮುಂದೆ ಕೆಲಸ ಮಾಡುತ್ತಿದ್ದ ನವವಿವಾಹಿತೆಯನ್ನು ಹಿಂದಿನಿಂದ ಲಾಕ್‌ ಮಾಡಿದ ಅಪರಿಚಿತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದಾಳೆ. ಬಳಿಕ ಮನೆಯಿಂದ ಹೊಲಕ್ಕೆ ಎಳೆದೊಯ್ದು ನೀರಿಲ್ಲದ ಹಳೇ ಬಾವಿಗೆ ಬಿಸಾಡಿದ್ದಾಳೆ.
ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ವಿಚಿತ್ರ ಘಟನೆ ಗದಗ ಜಿಲ್ಲೆ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡವಾಗಿದೆ. ಘಟನೆ ಬಳಿಕ ೋಟಗಂಟಿ ಗ್ರಾಮಸ್ಥರು ಬಚ್ಚಿಬಿದ್ದಿದ್ದಾರೆ.
ಕಾಣೆಯಾಗಿದ್ದ ವಿವಾಹಿತೆಯೊಬ್ಬಳು ಅದೇ ಗ್ರಾಮದ ಹೊಲವೊಂದರಲ್ಲಿನ ನೀರಿಲ್ಲದ ಹಳೇ ಬಾವಿಯಲ್ಲಿ ಮೂರು ದಿನಗಳ ನಂತರ ಸಿಕ್ಕಿದ್ದಾಳೆ. ಅಸ್ವಸ್ಥಳಾಗಿದ್ದ ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಇಲ್ಲಿ ವಿಚಿತ್ರ ಅಂದರೆ ಮಹಿಳೆ ಬಾವಿಗೆ‌ ಬಿದ್ದಿದ್ದು ಹೇಗೆ ಎಂಬ ಮಾಹಿತಿ ಕೇಳಿ ಗ್ರಾಮದ ಜನರೇ ಶಾಕ್‌ ಆಗಿದ್ದಾರೆ.
ಯಾಕೆಂದರೆ ಯಾರೋ ನನ್ನ ಎಳೆದುಕೊಂಡು ಹೋದರು ಅಂತ ಹೇಳಿದ್ದಾಳೆ. ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆಗಸ್ಟ್‌ 20 ರಂದು ನಸುಕಿನ ಜಾವ ಮನೆಯ ಅಂಗಳದಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ನವವಿವಾಹಿತೆಯನ್ನು ಕಿಡ್ನಾಪ್ ಮಾಡಿದ್ದರಂತೆ.

* ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡ!

ನವವಿವಾಹಿತೆಯ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದ್ದು,ಮಾತ್ರವಲ್ಲದೇ ನನ್ನ ಕೈಬಳೆ, ಕಾಲುಂಗರ ನೀಡುವಂತೆ ಅಪರಿಚಿತ ಮಹಿಳೆ ಒತ್ತಾಯ ಮಾಡಿದ್ದಳು. ನನ್ನ ಕಣ್ಣಿಗೆ ಕಾಣದಂತೆ ಮರೆ ಮಾಡಿ ಕುತ್ತಿಗೆ ಹಿಡಿದು ಭಯಪಡಿಸಿದ್ದಾಳೆ.
ಗೋವಿ‌ನ ಜೋಳ ಹೊಲದ ಮೂಲಕ ನನ್ನನ್ನು ಎಳೆದುಕೊಂಡು ಹೋಗಿ ನಂತರ ತಾಳಿ ಕೇಳಿ ನನ್ನನ್ನು ಬಾವಿಗೆ ತಳ್ಳಿದ್ದಳು. ಬಾವಿಗೆ ಬಿದ್ದ ಮಾರನೆ ದಿನ ನನಗೆ ಪ್ರಜ್ಞೆ ಬಂದಿತ್ತು. ಆಗ ಎಷ್ಟೇ ಕಿರುಚಿದರೂ ಸಹಾಯಕ್ಕೆ ಯಾರೂ ಬರಲಿಲ್ಲ. ಆ. 22 ರಂದು ಧ್ವನಿ ಕೇಳಿದ ಜನರು ನನ್ನನ್ನು ಕಾಪಾಡಿದ್ದಾರೆ. ಆದರೆ ಯಾರು ನನ್ನನ್ನ ಎಳೆದುಕೊಂಡು ಹೋದರು ಎನ್ನುವ ನಿಖರ ಮಾಹಿತಿ ಇಲ್ಲ ಎಂದಿದ್ದಾಳೆ. ಈ ವಿಚಿತ್ರ ರೀತಿಯ ಘಟನೆಗೆ ಗ್ರಾಮದ ಇತರೆ ಮಹಿಳೆಯರು ಆತಂಕಗೊಂಡಿದ್ದಾರೆ. ನಸುಕಿನ ಜಾವ ಓಡಾಡಲು ಹೆದರುವಂತಾಗಿದೆ. ಸದ್ಯ ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕ ಮಾಡಿರುವ ಬಗ್ಗೆ ಮಾಹಿತಿ ದೊರಕಿಲ್ಲ.

* ದಾವಣಗೆರೆ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ!!

ದಾವಣಗೆರೆ: ಇತ್ತೀಚಿಗೆ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದ ವೃದ್ಧೆ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಚನ್ನಿರ ತಾಲೂಕಿನ ಜೋಳದಾಳ ಗ್ರಾಮದ ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಗ್ರಾಮದಲ್ಲಿ ವೈದ್ಯರು ಬೀಡು ಬಿಟ್ಟಿದ್ದಾರೆ. ಗ್ರಾಮಸ್ಥರಿಗೆ ಸೂಚನೆಗಳನ್ನು ನೀಡುತ್ತಿದ್ದಾರೆ.
ಕಲುಷಿತ ನೀರು ಸೇವಿಸಿ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐದು ಜನರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆ.28ರಂದು ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ 25 ಜನರು ವಾತಿ-ಭೇದಿಯಿಂದ ಬಳಲಿದ್ದಾರೆ.

• ಕಲುಷಿತ ನೀರು ಸೇವಿಸಿ ಸಾವು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ ಏಳು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಏಳು ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಗಸ್ಟ್​ 21 ರಂದು ಆಸ್ಪಸ್ಥರಾಗಿ ಮೆಗ್ಗನ್ ಆಸ್ಪತ್ರೆಗೆ ಚಂದ್ರಮ್ಮ ದಾಖಲಾಗಿದ್ದರು. ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅವರು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.

– 15 ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಉಬ್ಬಲಗಂಡಿ ಗ್ರಾಮದಲ್ಲಿ ನೀರು ಸೇವನೆ ಬಳಿಕ‌ 15ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಘಟನಾ ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವಾಂತಿ, ಭೇದಿ ಕಾಣಿಸಿಕೊಂಡ ಗ್ರಾಮಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಯಾವುದೇ ರೀತಿ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ಮಾಹಿತಿ ದೊರಕಿದೆ.

ಕಾಡಾನೆ ದಾಳಿಗೆ ಮಹಿಳೆ ಬಲಿ

ಕೊಡಗು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕೊಡಗಿನ ಸಿದ್ದಾಪುರ ಸಮೀಪದ ಚನ್ನಯ್ಯನಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ಸಮೀಪವೇ ಮಹಿಳೆ ಮೇಲೆ ದಾಳಿ ನಡೆಸಿ ಹಿಳೆ ಸಾವಣ್ಣಪ್ಪಿದ್ದಾರೆ. ಚನ್ನಯ್ಯನಕೋಟೆ ನಿವಾಸಿ ಕಾತಯಿ (72) ಮೃತ ದುರ್ದೈವಿ. ಮಗನ ಮನೆಯಿಂದ ಹೊರ ಬರುತ್ತಿದ್ದ ವೇಳೆ ರೊಚ್ಚಿಗೆದ್ದ ಕಾಡಾನೆಯೂ ದಾಳಿ ಮಾಡಿದೆ.ವೃದ್ಧೆಯಾಗಿರುವುದರಿಂದ ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಮೃತಪಟ್ಟ ಘಟನೆ ನಡೆದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚನ್ನಯ್ಯನಕೋಟೆ ಘಟನೆ ನಡೆದಿದ್ದು,ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ‌ ಸಂಕೇತ್ ಪೂವಯ್ಯ ಭೇಟಿ ನೀಡಿ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

• ಕೆಸರಿನಲ್ಲಿ ಸಿಲುಕಿ ಕಾಡಾನೆ ಸಾವು

ಕೆರೆಯ‌ ಕೆಸರಿನಲ್ಲಿ ಸಿಲುಕಿ ಕಾಡಾನೆಯೊಂದು ಮೃತಪಟ್ಟಿದೆ. ಕೊಡಗು ಜಿಲ್ಲೆಯ ಅಮ್ಮತ್ತಿ ಬಳಿ‌ ಘಟನೆ ನಡೆದಿದೆ. ಕನ್ನಡ‌ ಮಠಕ್ಕೆ ಸೇರಿದ ಕೆರೆಯಲ್ಲಿ ಹತ್ತು ವರ್ಷದ ಆನೆ ಮೃತಪಟ್ಟಿದ್ದು,ಅರಣ್ಯ ಇಲಾಖೆಯು ಜೆಸಿಬಿ ಬಳಸಿ ಆನೆಯನ್ನು ಮೇಲೆತ್ತಿ ಅದೇ ಸ್ಥಳದಲ್ಲಿಯೇ ಅಂತ್ಯಕ್ರಿಯೆ ನಡೆಸಿದೆ. ಡಾ. ಚಿಟ್ಟಿಯಪ್ಪ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕಾಡಾನೆಯು ನೀರು ಕುಡಿಯಲು ಬಂದಾಗ ಸಿಲುಕಿಕೊಂಡಿದೆ ಎಂಬುಹುದಾಗಿ ಮಾಹಿತಿ ದೊರಕಿದೆ.

ಕಾರ್ಕಳ ರೇಪ್: ಡ್ರಗ್ಸ್ ನೀಡಿದ್ದ ಇಬ್ಬರು ಅರೆಸ್ಟ್!

ಕಾರ್ಕಳ:ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್ ನೊರೋನ್ಹಾ (30) ಎಂಬ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್ ವಶಕ್ಕೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಷೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದದರು. ಈ ಪ್ರಕರಣಲ್ಲಿ ಈಗ ಐವರ ಬಂಧನವಾಗಿದೆ.

– ಕಾರವಾರ ಕಾರಾಗೃಹದಲ್ಲಿ ನಾಲ್ವರು ಕೈದಿಗಳ ನಡುವೆ ಮಾರಾಮಾರಿ

ಕಾರವಾರ: ಉತ್ತರ ಕನ್ನಡದ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆಯಾಗಿದೆ. ನಾಲ್ವರು ಕೈದಿಗಳು ಹೊಡೆದಾಡಿಕೊಂಡಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ.
ನಾಲ್ವರು ಕೈದಿಗಳ ನಡುವಿನ ಗಲಾಟೆಯಲ್ಲಿ ಓರ್ವ ಕೈದಿಯ ತೆಲೆಗೆ ಗಂಭೀರ ಗಾಯವಾಗಿದ್ದು, ರಕ್ತಸ್ತಾವ ಉಂಟಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಈ ವಿಷಯ ತಿಳಿದು ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಎಎಸ್ ಪಿ ಜಯಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.