Categories
ಚಿಕ್ಕಮಗಳೂರು

ಶೃಂಗೇರಿ ಸರ್ಕಾರಿ ಶಾಲೆಗಳಿಗೆ ನೋಟ್ ಪುಸ್ತಕ ವಿತರಣೆ

ಶೃಂಗೇರಿ ಸರ್ಕಾರಿ ಶಾಲೆಗಳಿಗೆ ನೋಟ್ ಪುಸ್ತಕ ವಿತರಣೆ
– ನವಚೇತನ ಚಾರಿಟೆಬಲ್ ಟ್ರಸ್ಟ್‌ನಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್ : ಶೃಂಗೇರಿ ಸಹಾಯ ಹಸ್ತ ತಂಡದ ಸಾಥ್

NAMMUR EXPRESS NEWS
ಶೃಂಗೇರಿ: ನವಚೇತನ ಚಾರಿಟೆಬಲ್ ಟ್ರಸ್ಟ್ (ರಿ) ರಾಮನಗರ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮ ತಾಲೂಕಿನಾದ್ಯಂತ ನಡೆಯುತ್ತಿದ್ದು, ಈ ಕಾರ್ಯಕ್ಕೆ ಶೃಂಗೇರಿ ಸಹಾಯ ಹಸ್ತ ತಂಡದ ಸದಸ್ಯರು ಕೈಜೋಡಿಸಿದರು.
ಸರ್ಕಾರಿ ಶಾಲೆಗಳ ಉಳಿವಿಗಾಗಿ ನವಚೇತನ ಚಾರಿಟೆಬಲ್ ಟ್ರಸ್ಟ್ ಈ ಕಾರ್ಯ ನಡೆಸುತ್ತಿದ್ದು ಸರ್ಕಾರಿ ಶಾಲೆಯನ್ನು ಗುರುತಿಸಿ ಸಹಾಯ ಮಾಡುತ್ತಿದೆ. ತಾಲೂಕಿನ ಅಂತಹ ಶಾಲೆಗಳನ್ನು ಗುರುತಿಸಿ ಟ್ರಸ್ಟ್‌‌ನಿಂದ ನೀಡುವ ನೋಟ್ ಬುಕ್‌ಗಳನ್ನು ಶೃಂಗೇರಿ ಸಹಾಯ ಹಸ್ತ ತಂಡದ ಸದಸ್ಯರುಗಳು ತಲುಪಿಸಿ ಟ್ರಸ್ಟ್ ಬಗ್ಗೆ ಹಾಗೂ ತಮ್ಮ ಶೃಂಗೇರಿ ಸಹಾಯ ಹಸ್ತ ತಂಡದ ಕಾರ್ಯ ಚಟುವಟಿಕೆ ಬಗ್ಗೆ ಮಕ್ಕಳಿಗೆ,ಪೋಷಕರಿಗೆ ತಿಳಿಸುತ್ತಿದ್ದಾರೆ.
ಶೃಂಗೇರಿ ತಾಲೂಕಿನ ಹನುಮಂತ ನಗರ, ಪಟ್ಟಣದ ಬಾಲಕರ ಶಾಲೆ, ಮಸಿಗೆ,ಗೋವಳ್ಳಿ,ಬಾಲಕಿಯರ ಶಾಲೆಗಳಲ್ಲಿ ಸುಮಾರು 150ಕ್ಕೂ ಅಧಿಕ ಮಕ್ಕಳಿಗೆ ನೋಟ್‌ ಬುಕ್ ವಿತರಿಸಿದ್ದಾರೆ. ಸಹಾಯ ಹಸ್ತ ತಂಡದ ಪ್ರಮುಖರಾದ ಪ್ರಶಾಂತ್ ಶೃಂಗೇರಿ,ಸಚಿನ್ ಗುಬ್ಬಗೋಡು,ಆಶೀಶ್ ದೇವಾಡಿಗ,ಮಹೇಶ್,ನಿತ್ಯಾನಂದ,ರೇವಂತ್,ಜೋಯಲ್, ನಮ್ಮೂರ್ ಎಕ್ಸ್‌ಪ್ರೆಸ್ ಮೀಡಿಯಾದ ಮುಖ್ಯಸ್ಥರಾದ ರಾಘವೇಂದ್ರ‌ ತೀರ್ಥಹಳ್ಳಿ ಭಾಗವಹಿಸಿದ್ದರು.

Categories
ಕರಾವಳಿ

ಪುತ್ತೂರು ಬಿಜೆಪಿ ನಾಯಕನ ವಿರುದ್ಧ ರೇಪ್ ಕೇಸ್

ಕರಾವಳಿ ಟಾಪ್ ನ್ಯೂಸ್

ಪುತ್ತೂರು ಬಿಜೆಪಿ ನಾಯಕನ ವಿರುದ್ಧ ರೇಪ್ ಕೇಸ್
– 47 ವರ್ಷದ ಮಹಿಳೆಯಿಂದ ದೂರು ದಾಖಲು

– ಬೆಳ್ತಂಗಡಿ: ಕೋಳಿ ಇಟ್ಟ ಬೋನಿಗೆ ಬಿದ್ದ ಚಿರತೆ!
– ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ರೂ.ಚಿನ್ನಾಭರಣ ಕಳವು

NAMMUR EXPRESS NEWS
ಪುತ್ತೂರು: ಕರಾವಳಿ ಹಿಂದೂ ಫೈರ್ ಬ್ರಾಂಡ್ ಖ್ಯಾತಿಯ ಪುತ್ತೂರು ನಾಯಕರೊಬ್ಬರ ವಿರುದ್ಧ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ನಂಬಿಕೆ ದ್ರೋಹ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಸಾಮೆತ್ತಡ್ಕದ ನಿವಾಸಿ 47 ವರ್ಷದ ಮಹಿಳೆ ದೂರು ನೀಡಿದ್ದಾರೆ.
2023ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು ದೂರಿದ್ದಾರೆ. ಎಂದು ಮಹಿಳೆತನಗೆ ಹಾಗೂ ತನ್ನ ಪುತ್ರಿಗೆ ಜೀವನ ಪೂರ್ತಿ ಯಾವುದೇ ಕುಂದು ನೋಡಿಕೊಳ್ಳುವುದಾಗಿ ದೈಹಿಕ ಹಾಗೂ ಬಳಿಕೊ್ಳುತ್ತಿದ್ದರು. ಕೊರತೆಯಾಗದಂತೆ ನಂಬಿಸಿ ಮಾನಸಿಕವಾಗಿ ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ, ಸೆಲ್ಸಿ, ಆಡಿಯೋ, ವಿಡಿಯೋಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ ಎನ್ನಲಾದ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಆದರೆ 2024ರ ಲೋಕಸಭಾ ಚುನಾವಣೆಯ ಬಳಿಕ ಮಾತುಕತೆ ಕಡಿಮೆ ಮಾಡಿದ್ದು, ಭಯಗೊಂಡು ನಾನು ಪುತ್ತೂರಿಗೆ ವಾಸ ಬದಲಾವಣೆ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಉದ್ಯೋಗ ಹಾಗೂ ವರಮಾನವಿಲ್ಲದೆ ಬಾಡಿಗೆ ಮನೆಯಲ್ಲಿದ್ದುಕೊಂಡು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಾಗಿದೆ.
ಪ್ರಭಾವಿ ಗುಂಪು ರಾಜಕೀಯವಾಗಿ ಹಣಿಯಲು ಕಾರ್ಯಾಚರಣೆ ನಡೆಸುತ್ತಿದ್ದು, ಅದರ ಕೃಪಾಕಟಾಕ್ಷದಿಂದಲೇ ಈ ದೂರು ದಾಖಲಾಗಿರುವ ಸಾಧ್ಯತೆ ಇದೆ ಎಂದು ಆ ಬಣದ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಬೆಳ್ತಂಗಡಿ: ಕೋಳಿ ಇಟ್ಟ ಬೋನಿಗೆ ಬಿದ್ದ ಚಿರತೆ!

ಬೆಳ್ತಂಗಡಿ: ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿನಡೆದಿದೆ. ಕಳೆದ 2 ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು.ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಸಮೀಪ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇರಿಸಲಾಗಿತ್ತು. ಕಳೆದ ಮಧ್ಯರಾತ್ರಿ ಚಿರತೆ ಕೋಳಿಯನ್ನು ಹಿಡಿಯಲು ಬೋನಿನೊಳಗೆ ಹೋಗಿ ಸೆರೆಗೆ ಬಿದ್ದಿದೆ.
ಚಿರತೆ ಬೋನಿನೊಳಗೆ ಬಿದ್ದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನು ಚಿರತೆ ಸೆರೆ ಸಿಕ್ಕಿರುವುದರಿಂದ ಸ್ಥಳೀಯರಲ್ಲಿ ಆತಂಕ ಸ್ಪಲ್ಪ ದೂರಗಿದೆ.

ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ರೂ.ಚಿನ್ನಾಭರಣ ಕಳವು

ಕಾರ್ಕಳ: ಮಹಿಳೆಯೋರ್ವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಮುಡಾರು ಗ್ರಾಮದ ಬಜಗೋಳಿ ಸಮೀಪದ ಗುರ್ಗಾಲ್‌ಗುಡ್ಡೆ ಎಂಬಲ್ಲಿ ನಡೆದಿದೆ.
ಗುರ್ಗಾಲ್‌ಗುಡ್ಡೆಯ ನಿವಾಸಿ ಪ್ರಭಾ(42) ಎಂಬವರ ಮನೆಯ ಹೊರಗಡೆ ಡಬ್ಬಿಯಲ್ಲಿ ಇರಿಸಿದ ಕೀ ಸಹಾಯದಿಂದ ಒಳಗೆ ನುಗ್ಗಿದ ಕಳ್ಳರು, ಬೆಡ್ ರೂಮ್‌ನ ಕಾಪಾಟಿನಲ್ಲಿದ್ದ ಸುಮಾರು 33 ಪವನ್ ತೂಕದ 10,05,00. ಮೌಲ್ಯದ ವಿವಿಧ ರೀತಿಯ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Categories
ಚಿಕ್ಕಮಗಳೂರು

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮೋಜು ಮಸ್ತಿಗೆ ಬ್ರೇಕ್!

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮೋಜು ಮಸ್ತಿಗೆ ಬ್ರೇಕ್!
* ಮೋಟಾರ್ ರ‍್ಯಾಲಿ ನಡೆಸಿದವರ ವಿರುದ್ಧ ಕೇಸ್?
* ಅರಣ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಈಶ್ವರ್ ಖಂಡ್ರೆ

NAMMUR EXPRESS NEWS
ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಭೂ ಒತ್ತುವರಿ ತೆರವು ಬೆನ್ನಲ್ಲೇ ಇದೀಗ ಮೋಜು ಮಸ್ತಿಗೂ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಮೂಡಿಗೆರೆಯಲ್ಲಿ ನಡೆದ ಫೋರ್ ವ್ಹೀಲ್ ರ್ಯಾಲಿ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದಾರೆ.
ಈ ಬಗ್ಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಪಶ್ಚಿಮಘಟ್ಟ ಮತ್ತು ಅರಣ್ಯ ಮೋಜು, ಮಸ್ತಿಯ ತಾಣಗಳಲ್ಲ. ಈ ಪ್ರದೇಶದಲ್ಲಿ ನೂರಾರು ಪ್ರಭೇದದ ಖಗ, ಮೃಗ, ಕೀಟ, ಸಸ್ಯ ಸಂಕುಲ ಇರುತ್ತದೆ. ಇವುಗಳೆಲ್ಲದರ ಸಂರಕ್ಷಣೆಯ ಹೊಣೆ ಅರಣ್ಯ ಇಲಾಖೆಯ ಮೇಲಿದೆ. ಆದರೆ, ಆ. 31/2024ರಂದು ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಬೈರಾಪುರ ಹೊಸಕೆರೆಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಆನೆ ಕಾರಿಡಾ‌ರ್ ಇರುವ ಕಾಡಿನೊಳಗೆ ಅಕ್ಮವಾಿ ಪ್ರವೇಶಿಸಿ, ಫೋರ್ ವೀಲ್ ಡ್ರೈವ್ ವಾಹನಗಳ ರ್ಯಾಲಿ ನಡೆಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ.
ಈ ರ‍್ಯಾಲಿ ಯಲ್ಲಿ ಸುಮಾರು 52 ವಾಹನಗಳು ಭಾಗಿಯಾಗಿದ್ದವು ಎಂಬ ಮಾಹಿತಿ ಇದ್ದು, ಈ ರ‍್ಯಾಲಿಯಿಂದ ಪರಿಸರದ ಹಾನಿಯ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಪರಿಶೀಲನೆ ನಡೆಸಿ, ಅರಣ್ಯದೊಳಗೆ ರ‍್ಯಾಲಿ ನಡೆದಿದ್ದಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಲು ಮತ್ತು ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಸಾರ್ವಜನಿಕರ ನೆಮ್ಮದಿ ಭಂಗ ಪ್ರಕರಣ ದಾಖಲಿಸಲು ತುರ್ತು ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಅವರು ಸೂಚನೆ ಪತ್ರದ ಮೂಲಕ ತಿಳಿಸಿದ್ದಾರೆ.

Categories
ಜ್ಯೋತಿಷ್ಯ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಇಂದು ನಿಮ್ಮಲ್ಲಿ ಪೂರ್ಣ ವಿಶ್ವಾಸ ಇರುತ್ತದೆ. ಅನಗತ್ಯ ಕೋಪ ಮತ್ತು ಚರ್ಚೆಯನ್ನು ತಪ್ಪಿಸಿ. ವ್ಯಾಪಾರ-ವ್ಯವಹಾರದಲ್ಲಿ ಹೆಚ್ಚಿನ ಜಂಜಾಟವಿರುತ್ತದೆ. ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯಬಹುದು. ಮಾನಸಿಕ ಶಾಂತಿ ಇರುತ್ತದೆ, ಆದರೆ ಅಧಿಕ ಖರ್ಚುಗಳಿಂದ ನೀವು ಚಿಂತಿತರಾಗುತ್ತೀರಿ. ನಕಾರಾತ್ಮಕ ಆಲೋಚನೆಗಳ ಪ್ರಭಾವವನ್ನು ತಪ್ಪಿಸಿ.

** ವೃಷಭ ರಾಶಿ :
ಇಂದು ನೀವು ಆತ್ಮವಿಶ್ವಾಸದಿಂದ ಕೂಡಿರುತ್ತೀರಿ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ಸಂಭಾಷಣೆಯಲ್ಲಿ ತಾಳ್ಮೆಯಿಂದಿರಿ. ತಂದೆಯ ಆರೋಗ್ಯ ಸುಧಾರಿಸಲಿದೆ. ಮನಸ್ಸಿನಲ್ಲಿ ನಿರಾಶೆ ಮತ್ತು ಅತೃಪ್ತಿಯ ಭಾವನೆ ಇರುತ್ತದೆ. ಕುಟುಬಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಬಟ್ಟೆಗಳನ್ನು ಉಡುಗೊರೆಯಾಗಿ ಸ್ವೀಕರಿಸಬಹುದು.

** ಮಿಥುನ ರಾಶಿ
ಇಂದು ವೈವಾಹಿಕ ಸುಖ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಮತ್ತು ಆಸ್ತಿ ನಿರ್ವಹಣೆಗೆ ಖರ್ಚು ಹೆಚ್ಚಾಗುತ್ತದೆ. ಓಡಾಟ ಹೆಚ್ಚು ಇರುತ್ತದೆ. ಉತ್ತಮ ಸ್ಥಿತಿಯಲ್ಲಿರಿ. ಕೋಪದ ಕ್ಷಣಗಳು ಮತ್ತು ಸಮಾಧಾನದ ಕ್ಷಣಗಳು ಇರುತ್ತವೆ. ತಂದೆ ಆರೋಗ್ಯ ಸಮಸ್ಯೆಗಳಿಂದ ಬಳಲಬಹುದು. ಕುಟುಂಬ ಸಮೇತ ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಪ್ರವಾಸ ಹೋಗಬಹುದು. ಅನಗತ್ಯ ಕೋಪವನ್ನು ನಿಯಂತ್ರಿಸಿ.

** ಕರ್ಕಾಟಕ ರಾಶಿ :
ಇಂದು ಮಾನಸಿಕ ನೆಮ್ಮದಿ ಇರುತ್ತದೆ. ತಾಳ್ಮೆಯಿಂದಿರಿ. ಸಂಭಾಷಣೆಯಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಿಮ್ಮ ಪೋಷಕರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಖರ್ಚು ಹೆಚ್ಚಾಗಲಿದೆ. ಕಲೆ ಮತ್ತು ಸಂಗೀತದ ಕಡೆಗೆ ಒಲವು ಇರುತ್ತದೆ. ಮಾತಿನಲ್ಲಿ ಸೌಮ್ಯತೆ ಇರುತ್ತದೆ. ಮಕ್ಕಳು ಆರೋಗ್ಯ ಸಮಸ್ಯೆಗಳಿಂದ ಬಳಲಬಹುದು. ನಿಮ್ಮ ಸಂಗಾತಿಗೆ ಆರೋಗ್ಯ ಸಮಸ್ಯೆಗಳಿರಬಹುದು.

** ಸಿಂಹ ರಾಶಿ :
ಇಂದು ನೀವು ಆತ್ಮವಿಶ್ವಾಸದಿಂದ ತುಂಬಿರುತ್ತೀರಿ, ಆದರೆ ನಿಮ್ಮ ಮನಸ್ಸು ತೊಂದರೆಗೊಳಗಾಗಬಹುದು. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕುಟುಂಬದಿಂದ ಬೆಂಬಲ ಸಿಗಲಿದೆ. ವಿಪರೀತ ಖರ್ಚು ಇರುತ್ತದೆ. ಮಕ್ಕಳು ಆರೋಗ್ಯ ಸಮಸ್ಯೆಗಳಿಂದ ಬಳಲಬಹುದು. ಬಟ್ಟೆ ಮತ್ತು ಆಭರಣಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ನೀವು ಶೈಕ್ಷಣಿಕ ಮತ್ತು ಬೌದ್ಧಿಕ ಕೆಲಸದಲ್ಲಿ ತೊಂದರೆಗಳನ್ನು ಎದುರಿಸಬಹುದು.

** ಕನ್ಯಾ ರಾಶಿ :
ಇಂದು ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕತೆಯ ಪ್ರಭಾವವನ್ನು ತಪ್ಪಿಸಿ. ಕುಟುಂಬದಿಂದ ಬೆಂಬಲ ಸಿಗಲಿದೆ. ನೀವು ಕೆಲಸದಲ್ಲಿ ಕೆಲವು ಹೆಚ್ಚುವರಿ ಜವಾಬ್ದಾರಿಯನ್ನು ಪಡೆಯಬಹುದು. ಹೆಚ್ಚಿನ ಶ್ರಮ ಇರುತ್ತದೆ. ವಾಹನ ಸೌಕರ್ಯ ಹೆಚ್ಚಲಿದೆ. ಖರ್ಚು ಅಧಿಕವಾಗಿ ಉಳಿಯುತ್ತದೆ. ಸ್ವಯಂ ನಿಯಂತ್ರಣದಲ್ಲಿರಿ. ಅನಗತ್ಯ ವಿವಾದಗಳನ್ನು ತಪ್ಪಿಸಿ. ಕೆಲಸದ ಸ್ಥಳದಲ್ಲಿ ಸಾಕಷ್ಟು ಕಠಿಣ ಪರಿಶ್ರಮ ಇರುತ್ತದೆ.

** ತುಲಾ ರಾಶಿ :
ಇಂದು ಮನಸ್ಸಿನಲ್ಲಿ ನಕಾರಾತ್ಮಕತೆಯ ಪ್ರಭಾವವಿರಬಹುದು. ಅನಗತ್ಯ ಕೋಪವನ್ನು ತಪ್ಪಿಸಿ. ಸಂದರ್ಶನಗಳು ಮುಂತಾದ ಕೆಲಸಗಳಿಂದ ನೀವು ಆಹ್ಲಾದಕರ ಫಲಿತಾಂಶಗಳನ್ನು ಪಡೆಯುತ್ತೀರಿ. ಆದಾಯ ಹೆಚ್ಚಲಿದೆ. ಕೆಲಸದಲ್ಲಿ ಉತ್ಸಾಹ ಇರುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ರಕ್ತ ಸಂಬಂಧಿ ಅಸ್ವಸ್ಥತೆಗಳು ಉಂಟಾಗಹುದು. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಸ್ನೇಹಿತರಿಂದ ಸಹಾಯ ಪಡೆಯಬಹುದು.

** ವೃಶ್ಚಿಕ ರಾಶಿ :
ಇಂದು ನೀವು ಸ್ವಯಂ ನಿಯಂತ್ರಣದಲ್ಲಿರಿ. ಅತಿಯಾದ ಕೋಪವನ್ನು ತಪ್ಪಿಸಿ. ಶೈಕ್ಷಣಿಕ ಕೆಲಸವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ಬಟ್ಟೆ ಮತ್ತು ವಾಹನ ನಿರ್ವಹಣೆಗೆ ಖರ್ಚು ಹೆಚ್ಚಾಗಬಹುದು. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ. ಇಂದು ಕೋಪದ ಕ್ಷಣಗಳು ಮತ್ತು ಸಮಾಧಾನದ ಕ್ಷಣಗಳು ಎರಡೂ ಇರುತ್ತವೆ. ಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಇರಬಹುದು. ಕೌಟುಂಬಿಕ ಸಮಸ್ಯೆಗಳು ನಿಮ್ಮನ್ನು ಕಾಡಬಹುದು.

** ಧನಸ್ಸು ರಾಶಿ :
ಇಂದು ನೀವು ಆತ್ಮವಿಶ್ವಾಸದಿಂದ ಕೂಡಿರುತ್ತೀರಿ. ಕಲೆ ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಾಗಬಹುದು. ನೀವು ಕೆಲಸದಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು. ಮಿತ್ರರ ನೆರವಿನಿಂದ ಆದಾಯ ಹೆಚ್ಚಾಗಬಹುದು. ವ್ಯಾಪಾರವೂ ಹೆಚ್ಚುತ್ತದೆ. ಕೋಪದ ಕ್ಷಣಗಳು ಮತ್ತು ಸಮಾಧಾನದ ಕ್ಷಣಗಳು ಇರುತ್ತವೆ. ಮಾತಿನಲ್ಲಿ ಕಠೋರತೆಯ ಪರಿಣಾಮವಿರಬಹುದು. ತಾಳ್ಮೆ ಹೆಚ್ಚಲಿದೆ.

** ಮಕರ ರಾಶಿ :
ಇಂದು ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಕೆಲಸದ ವ್ಯಾಪ್ತಿ ಹೆಚ್ಚಾಗಲಿದೆ. ವಾಹನ ಸುಖ ಪ್ರಾಪ್ತಿಯಾಗಬಹುದು. ಖರ್ಚು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಇರುತ್ತದೆ. ಕೆಲವು ಕುಟುಂಬದ ಆಸ್ತಿಯಿಂದ ಆರ್ಥಿಕ ಲಾಭದ ಸಾಧ್ಯತೆಗಳಿವೆ. ಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೆಚ್ಚಾಗಬಹುದು. ಮಕ್ಕಳ ಸಂತಸದಲ್ಲಿ ಹೆಚ್ಚಳವಾಗಲಿದೆ. ಕೆಲವು ಪೂರ್ವಜರ ಆಸ್ತಿಯಿಂದ ಆದಾಯದ ಮೂಲಗಳು ಬೆಳೆಯಬಹುದು.

** ಕುಂಭ ರಾಶಿ :
ಇಂದು ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ನೀವು ಕುಟುಂಬದಿಂದ ದೂರ ಉಳಿಯಬೇಕಾಗಬಹುದು. ನಿಮ್ಮ ಜೀವನವು ಅಸ್ತವ್ಯಸ್ತವಾಗಬಹುದು. ಸಂಭಾಷಣೆಯಲ್ಲಿ ತಾಳ್ಮೆಯಿಂದಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ತಾಳ್ಮೆ ಕಡಿಮೆಯಾಗಲಿದೆ. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ. ಸಹೋದರರ ಸಹಕಾರದಿಂದ ವ್ಯಾಪಾರದಲ್ಲಿ ಯಶಸ್ಸು ಕಾಣುವಿರಿ.

** ಮೀನ ರಾಶಿ :
ಇಂದು ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಕೆಲವು ಪೂರ್ವಜರ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ಯೋಜನೇತರ ವೆಚ್ಚಗಳು ಹೆಚ್ಚಾಗಲಿವೆ. ಅನಗತ್ಯ ಕೋಪ ಮತ್ತು ಚರ್ಚೆಯನ್ನು ತಪ್ಪಿಸಿ. ಹೆಚ್ಚಿನ ಶ್ರಮ ಇರುತ್ತದೆ. ಪೂರ್ಣ ವಿಶ್ವಾಸ ಇರುತ್ತದೆ. ಕೋಪ ಹೆಚ್ಚಾಗಬಹುದು. ಜೀವನವು ನೋವಿನಿಂದ ಕೂಡಿರಬಹುದು. ಕೆಲಸದ ಕಡೆಗೆ ಉತ್ಸಾಹ ಮತ್ತು ಉತ್ಸಾಹ ಇರುತ್ತದೆ.