Categories
ತೀರ್ಥಹಳ್ಳಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ
– ಅಧ್ಯಕ್ಷರಾಗಿ ಯುವ ಮುಂದಾಳು ಪಣತ ಶ್ರೀಕಾಂತ್ ಉಪಾಧ್ಯಕ್ಷರಾಗಿ ಶ್ವೇತ ನವೀನ್ ಆಯ್ಕೆ
– ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರಾಗಿ ಆಯ್ಕೆಯಾಗಿರುವವರಿಗೆ ಅಜಿತ್ ಅಣ್ಣುವಳ್ಳಿ ಶುಭ ಹಾರೈಕೆ

NAMMUR EXPRESS NEWS
ತೀರ್ಥಹಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಯುವ ಮುಂದಾಳು ಪಣತ ಶ್ರೀಕಾಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ವೇತ ನವೀನ್, ಹಾಗೆಯೇ ಸದಸ್ಯರಾಗಿ ಮನೋಹರ್ ತೋಟದ ಮನೆ, ರಂಜಿತಾ ನವೀನ್, ಸಂಗೀತ ಅಜಿತ್ ಅಣ್ಣುವಳ್ಳಿ, ರಾಘವೇಂದ್ರ ಶಿರೂರು, ಮಂಜುನಾಥ್ ಕೋಳಿಗೆ, ಸುಕನ್ಯಾ ಪ್ರವೀಣ್, ಶಬ್ಬೀರ್, ಕಿಶೋರ್ ದೊಡ್ಡಿನ್ ಮನೆ, ಮಹೇಶ್, ಆಶಾ, ಸಾನಿಯಾ, ರೇವತಿ, ಸುಮಾ ವಿಜಯ್, ಯೋಗೇಂದ್ರ ಪಡುವಳ್ಳಿ, ಸುದರ್ಶಿನಿ ರಾಘವೇಂದ್ರ ಹಲಗೇರಿ, ಇವರುಗಳು ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ, ಆಯ್ಕೆಯಾದ ಎಲ್ಲರಿಗೂ ಮುಖ್ಯೋಪಾಧ್ಯಾಯರಾದ ಸುಮಾ ಹಾಗೂ ಎಲ್ಲ ಶಿಕ್ಷಕರು ಪೋಷಕರು ಹಾಗೂ ಮೇಗರವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಅಜಿತ್ ಅಣ್ಣುವಳ್ಳಿ ಶುಭಹಾರೈಸಿದ್ದಾರೆ.

Categories
ಕರಾವಳಿ

ಕರಾವಳಿ ನ್ಯೂಸ್

ಕರಾವಳಿ ನ್ಯೂಸ್

– ಮಂಗಳೂರು: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು
– ಕುಂದಾಪುರ : ಮಗುವಿನ ಮೇಲೆ ಹಲ್ಲೆ; ತಾಯಿ,ಪ್ರಿಯಕರನಿಗೆ ನ್ಯಾಯಾಂಗ ಬಂಧನ!
– ಅಜೆಕಾರ್: ಪತಿಯ ಹತ್ಯೆ, ಪ್ರಕರಣ:ಪೊಲೀಸರ ತಂಡದಿಂದ ಸಾಕ್ಷ್ಯಗಳ ಹುಡುಕಾಟ

NAMMUR EXPRESS NEWS
ಮಂಗಳೂರು: ಮಂಗಳೂರು ತಾಲೂಕು ತಿರುವೈಲು ಗ್ರಾಮದಲ್ಲಿ ನಿರ್ಮಿಸಿದ್ದ ಮೊಬೈಲ್‌ ಟವರ್‌ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್‌. ಇನ್‌ಫ್ರಾಸ್ಟ್ರಕ್ಚರ್‌ ಕಂಪೆನಿ ಲಿ.ನವರು ಮೊಬೈಲ್‌ ಟವರ್‌ ನಿರ್ಮಾಣ ಮಾಡಿದ್ದರು.
ಇತ್ತೀಚೆಗೆ ಟವರ್‌ನ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನೀಷಿಯನ್‌ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್‌ ಟವರ್‌ ಮತ್ತು ಟವರ್‌ನ ಉಪಕರಣಗಳು ಸೇರಿದಂತೆ ಒಟ್ಟು ಸುಮಾರು 19 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ತನಿಖೆ ನಡೆಯುತ್ತಿದೆ.

* ಕುಂದಾಪುರ : ಮಗುವಿನ ಮೇಲೆ ಹಲ್ಲೆ; ತಾಯಿ,ಪ್ರಿಯಕರನಿಗೆ ನ್ಯಾಯಾಂಗ ಬಂಧನ!

ಕುಂದಾಪುರ: ಅಮಾಸೆಬೈಲಿನಲ್ಲಿ ಮೂರೂವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನ ಜಾಮೀನು ಅರ್ಜಿಯನ್ನು ಮಂಗಳವಾರ ನ್ಯಾಯಾಲಯ ತಿರಸ್ಕರಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಸೆ.13ರಂದು ತಾಯಿ, ಅನಾರೋಗ್ಯದ ಕಾರಣ ನೀಡಿ ಗಾಯಗೊಂಡ ಮಗುವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತಂದಿದ್ದ ವೇಳೆ ಮಗುವಿನ ದೇಹದಲ್ಲಿ ತೀವ್ರ ಗಾಯಗಳು ಪತ್ತೆಯಾಗಿತ್ತು. ಗಾಯಗಳ ಬಗ್ಗೆ ತಾಯಿ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡದೇ, ಅದನ್ನು ನೋಡಿ ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಕಳುಹಿಸಿದ್ದರು. ಅಲ್ಲಿ ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದ ಮಗು ಚೇತರಿಸಿದೆ.

ಮಗು ಮಂಚದಲ್ಲಿ ಮಲಗಬಾರದು ಎಂದು ತಂದೆಯನ್ನು ಕಳಕೊಂಡ ಮಗುವಿನ ತಾಯಿ ಹಾಗೂ ಆಕೆಯ ಪ್ರಿಯಕರ ಸುಹೇಲ್‌ ಮಗುವಿನ ಖಾಸಗಿ ಅಂಗ ಸಹಿತ ಮೈಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಅ.24ರಂದು ಜಾಮೀನಿಗೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿಗಳಿಗೆ ನ್ಯಾಯಾಲಯ ಮಧ್ಯಾಂತರ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ಗಂಭೀರತೆಯನ್ನು ಮನಗಂಡ ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್‌, ಜಾಮೀನು ರದ್ದು ಮಾಡಲು ಮನವಿ ಮಾಡಿದರು. ಅದರಂತೆ ಮಂಗಳವಾರ ವಿಚಾರಣೆ ನಡೆದು ಎರಡನೆ ಹೆಚ್ಚುವರಿ ಸಿವಿಲ್‌ ಕೋರ್ಟ್‌ ಜೆಎಂಎಫ್‌ಸಿಯಲ್ಲಿ ಇಬ್ಬರ ಮಧ್ಯಾಂತರ ಜಾಮೀನು ಅರ್ಜಿ ವಜಾ ಮಾಡಿ, ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

* ಅಜೆಕಾರ್: ಪತಿಯ ಹತ್ಯೆ, ಪ್ರಕರಣ:ಪೊಲೀಸರ ತಂಡದಿಂದ ಸಾಕ್ಷ್ಯಗಳ ಹುಡುಕಾಟ

ಅಜೆಕಾರು: ಅಜೆಕಾರು ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ (44) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪತ್ನಿ ಪ್ರತಿಮಾ ತನ್ನ ಪ್ರಿಯಕರ ಕೊಲೆ ಆರೋಪಿ ದಿಲೀಪ್‌ ಹೆಗ್ಡೆ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ಸಾಕ್ಷ್ಯಗಳ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಅ.19ರ ಮಧ್ಯರಾತ್ರಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಪತಿಯ ಊಟದಲ್ಲಿ ನಿರಂತರವಾಗಿ ವಿಷ ಪದಾರ್ಥವನ್ನು ಸ್ವಲ್ಪ-ಸ್ವಲ್ಪವೇ ಬೆರೆಸಿ ಕೊಲೆಗೆ ಯತ್ನಿಸಿದ್ದರು. ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಾಲಕೃಷ್ಣ ಅವರು ಮನೆಗೆ ಬಂದಿದ್ದರು.

ಪತ್ನಿ ಅ. 19ರ ರಾತ್ರಿ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಕರೆದು ಇಬ್ಬರೂ ಸೇರಿ ಬೆಡ್‌ಶೀಟ್‌ನಿಂದ ಮುಖಕ್ಕೆ ಒತ್ತಿ ಇಟ್ಟು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಸಿಸಿ ಕೆಮರಾಗಳ ಪರಿಶೀಲನೆ ಆರೋಪಿ ದಿಲೀಪ್‌ ಹೆಗ್ಡೆ ರಾತ್ರಿ ವೇಳೆ ಅಜೆಕಾರಿನ ದೆಪ್ಪುತ್ತೆಗೆ ವಾಹನದಲ್ಲಿ ಬಂದಿದ್ದ. ಆತ ಬಂದು ಹೋಗಿರುವ ರಸ್ತೆ ಬದಿಗಳಲ್ಲಿನ ಸಿಸಿ ಕೆಮರಾಗಳ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.ಪ್ರತಿಮಾಳಿಗೆ ವಿಷ ವಸ್ತು ಪೂರೈಕೆ ಮಾಡಿದ್ದ ಸ್ಥಳಗಳಲ್ಲಿನ ಸಿಸಿ ಕೆಮರಾಗಳಲ್ಲೂ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಪ್ರಬಲ ಸಾಕ್ಷ್ಯಗಳ ಸಂಗ್ರಹದಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.

Categories
ರಾಜ್ಯ

ದೀಪಾವಳಿಗೆ ಮಳೆ ಅಡ್ಡಿ!

ದೀಪಾವಳಿಗೆ ಮಳೆ ಅಡ್ಡಿ!
* ದೀಪಾವಳಿ ಅವಧಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ!
* ಮುಂದಿನ ಏಳು ದಿನ ನಿರಂತರ ಮಳೆ?

NAMMUR EXPRESS NEWS
ಬೆಂಗಳೂರು: ದೀಪಾವಳಿ ಅವಧಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ ಬಂದರೂ ಚಳಿಗಾಲ ಸದ್ಯಕ್ಕೆ ಇಲ್ಲ. ಕೆಲವು ರಾಜ್ಯಗಳಲ್ಲಿ ರಾತ್ರಿ ವೇಳೆ ವಾತಾವರಣ ತಂಪಾಗಿದ್ದರೂ, ಬಿಸಿಲಿನ ಅಬ್ಬರ ಜೋರಾಗಿರಲಿದೆ. ಅನೇಕ ರಾಜ್ಯಗಳಲ್ಲಿ ಮಳೆ ಎಚ್ಚರಿಕೆಯಿದ್ದು ದೀಪಾವಳಿ ಹಬ್ಬಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಹವಾಮಾನ ಸದ್ಯ ಯೋಗ್ಯವಾಗಿದೆ. ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ. ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದದಲ್ಲೂ ಚಂಡಮಾರುತ ಇದೆ.

* ಯಾವೆಲ್ಲ ರಾಜ್ಯದಲ್ಲಿ ಮಳೆ?

ಅಕ್ಟೋಬರ್ 31ರಿಂದ ನವೆಂಬರ್ 1ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಕರಾವಳಿ ಲಕ್ಷದ್ವೀಪ ಮತ್ತು ದಕ್ಷಿಣ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

* ಮುಂದಿನ ಏಳು ದಿನ ಮಳೆ

ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಅಕ್ಟೋಬರ್ 30 ರಿಂದ ನವೆಂಬರ್ 2 ರವರೆಗೆ ಕರ್ನಾಟಕದ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 3 ರವರೆಗೆ ಕೇರಳ, ಮಾಹಿ ಮತ್ತು ಲಕ್ಷದ್ವೀಪಗಳಲ್ಲಿ ತುಂತುರು ಮಳೆಯಾಗಬಹುದು. ನವೆಂಬರ್ 1 ರಿಂದ 3 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

Categories
ಸಿನಿಮಾ

ದರ್ಶನ್ ಅವರಿಗೆ ಕೊನೆಗೂ ಸಿಕ್ತು ಜಾಮೀನು

ದರ್ಶನ್ ಅವರಿಗೆ ಕೊನೆಗೂ ಸಿಕ್ತು ಜಾಮೀನು
– ಬೇಲ್‌ ಸಿಕ್ರು ಬೆಂಗಳೂರಿಗೆ ಬರಲ್ಲ ದರ್ಶನ್‌..?
– ನಟ ದರ್ಶನ್‌ ಗೆ ಅನಾರೋಗ್ಯದ ಹಿನ್ನೆಲೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು

NAMMUR EXPRESS NEWS
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಬಳ್ಳಾರಿ ಜೈಲಿನಲ್ಲಿ ವಿಲವಿಲ ಎನ್ನುವಂತಾಗಿದೆ. ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆದ ಮೇಲೆ ನಟ ದರ್ಶನ್‌ಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿದ್ದು, ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾದಂತಹ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಿತು. ನಟ ದರ್ಶನ್ ಅವರ ಆರೋಗ್ಯದ ಕುರಿತು ದರ್ಶನ್‌ ಪರ ವಕೀಲರಾದ ಸಿ ವಿ ನಾಗೇಶ್ ಅವರು ವಾದ ಮಂಡಿಸಿದ್ದು, ಅನಾರೋಗ್ಯದ ಕಾರಣದಿಂದಾಗಿ ಮಧ್ಯಂತರ ಜಮೀನು ನೀಡುವಂತೆ ದರ್ಶನ್‌ ಪರ ವಕೀಲರಾದ ಸಿ ವಿ ನಾಗೇಶ್ ಕೇಳಿಕೊಂಡಿದ್ದು, ಮಧ್ಯಂತರ ಜಮೀನು ನೀಡಿದ್ರೆ, ದರ್ಶನ್‌ ಅವರು ಮೈಸೂರಿನಲ್ಲಿರುವ ರೀಗ್‌ ರಸ್ತೆ ಸಮೀಪದ ಅಪೋಲೋ ಆಸ್ಪತ್ರೆಯಲ್ಲಿ ದರ್ಶನ್‌ ಅವರು ಚಿಕಿತ್ಸೆ ಪಡೆಯಲಿದ್ದಾರೆ ಎಂದು ಸಿ ವಿ ನಾಗೇಶ್‌ ಅವರು ವಾದವನ್ನ ಮಂಡಿಸಿದ್ದಾರೆ.

ಮಧ್ಯಂತರ ಜಮೀನು ನೀಡುವ ಮೊದಲು ಮೆಡಿಕಲ್‌ ಬೋರ್ಡ್‌ ಅಭಿಪ್ರಾಯವನ್ನ ಪಡೆಯಬೇಕು ಎಂದು ಸುಪ್ರೀಕೋರ್ಟ್‌ ವಾದವನ್ನ ಉಲ್ಲೇಖಿಸಿ ಎಸ್‌ ಪಿಪಿ ಪ್ರಸಾದ್‌ ಕುಮಾರ್‌ ಅವರು ವಾದವನ್ನ ಮಂಡಿಸಿದ್ದಾರೆ. ದರ್ಶನ್‌ ಪರ ವಕೀಲರು ಮಧ್ಯಂತರ ಜಮೀನು ನೀಡಿ. ಅಲ್ಲದೇ ಮೂರು ತಿಂಗಳ ಕಾಲ ಮಧ್ಯಂತರ ಜಮೀನು ನೀಡುವಂತೆ ವಾದ ಮಂಡಿಸಿದ್ದಾರೆ. ಕೆಲವು ಹಳೆಯ ಪ್ರಕರಣಗಳು ಹಾಗೂ ಸುಪ್ರೀಂಕೋರ್ಟ್​ನ ಕೆಲ ಆದೇಶಗಳನ್ನು ಸಹ ಉಲ್ಲೇಖ ಮಾಡಿದ ಸಿವಿ ನಾಗೇಶ್ ಅವರು, ಆರೋಗ್ಯ ಪ್ರತಿಯೊಬ್ಬರ ಹಕ್ಕು. ಅವರು ಎಂಥಹಾ ಕಠಿಣ ಪ್ರಕರಣದಲ್ಲಿ ಸಿಲುಕಿದ್ದರೂ ಸಹ ಮೆರಿಟ್​ಗಳನ್ನು ನೋಡದೆ ಜಾಮೀನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಹಿಂದೆ ಇಂಥಹಾ ಹಲವು ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದೆ ಎಂದು ದರ್ಶನ್‌ ಪರ ವಕೀಲರು ವಾದವನ್ನ ಮಂಡಿಸಿದ್ದಾರೆ.

ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್​ ಅವರಿಗೆ ಮೊದಲಿನಿಂದಲೂ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಆದರೆ ಎಸ್​ಪಿಪಿ ಅವರು ದರ್ಶನ್​ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಅಲ್ಲದೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ಎಸ್‌ ಪಿಪಿ ಅವರು ಪ್ರತಿವಾದ ಮಾಡಿದ್ದಾರೆ. ಇಬ್ಬರ ವಾದ-ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ. ಒಂದು ವೇಳೆ ನಟ ದರ್ಶನ್‌ ಅವರಿಗೆ ಮಧ್ಯಂತರ ಜಮೀನು ಸಿಕ್ಕರೂ, ನಟ ದರ್ಶನ್‌ ಅವರು ಬೆಂಗಳೂರಿಗೆ ಬರುವುದಿಲ್ಲ. ಏಕೆಂದರೆ, ಮಂಗಳವಾರ ವಾದ ಮಂಡಿಸುವ ವೇಳೆ ನಟ ದರ್ಶನ್‌ ಅವರಿಗೆ ಆರೋಗ್ಯ ಸಮಸ್ಯೆ ಇರುವ ಕಾರಣ, ದರ್ಶನ್‌ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂದು ತಿಳಿಸಿದ್ದಾರೆ . ಹೀಗಾಗಿ ಅಕ್ಟೋಬರ್‌ 30 ತೀರ್ಪು ಹೊರಬರಲಿದ್ದು, ಒಂದು ವೇಳೆ ಮಧ್ಯಂತರ ಜಾಮೀನು ನೀಡಿದ್ರೆ, ನಟ ದರ್ಶನ್‌ ಮೈಸೂರಿಗೆ ತೆರಳಲಿದ್ದಾರೆ. ನಟ ದರ್ಶನ್‌ ಗೆ ಅನಾರೋಗ್ಯದ ಹಿನ್ನೆಲೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದ್ದು, ಷರತ್ತುಬದ್ಧವಾಗಿ ನಟ ದರ್ಶನ್‌ ಗೆ ಬೆಲ್‌ ನೀಡಲಾಗಿದೆ. ನ್ಯಾಯಾಧೀಶರು ಪಾಸ್‌ ಪೋರ್ಟ್‌ ಸರೆಂಡರ್‌ ಮಾಡುವಂತೆ ಷರತ್ತು ಹಾಕಲಾಗಿದೆ.

Categories
Uncategorized

ಅಯೋಧ್ಯಾ ರಾಮಜನ್ಮಭೂಮಿಯಲ್ಲಿ ಮೊದಲ ವರ್ಷದ ದೀಪಾವಳಿಯ ಸಂಭ್ರಮ!!

ಅಯೋಧ್ಯಾ ರಾಮಜನ್ಮಭೂಮಿಯಲ್ಲಿ ಮೊದಲ ವರ್ಷದ ದೀಪಾವಳಿಯ ಸಂಭ್ರಮ!!

– ಎಷ್ಟು ಲಕ್ಷ ದೀಪಗಳು ಬೆಳಗಲಿವೆ ಗೊತ್ತಾ?
– ಲಕ್ಷ ದೀಪೋತ್ಸವ ಆಚರಣೆಗೆ ಯೋಗಿ ಸರ್ಕಾರ ಸಿದ್ಧ!

NAMMUR EXPRESS NEWS
ದೆಹಲಿ: ಅಯೋಧ್ಯಾ ರಾಮಜನ್ಮಭೂಮಿಯಲ್ಲಿ ಮೊದಲ ವರ್ಷದ ದೀಪಾವಳಿಯ ಸಂಭ್ರಮ ಕಳೆಗಟ್ಟಿದೆ. ಸಿದ್ಧತೆಗಳು ಕೂಡ ಜೋರಾಗಿಯೇ ನಡೆದಿವೆ. ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗಾಗಿ ಐನೂರು ವರ್ಷಗಳ ಕಾಲ ಕಾಯ್ದಿದ್ದ ರಾಮಭಕ್ತರಿಗೀಗ ಸಂಭ್ರಮದ ಕಾಲ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾದ ಮೇಲೆ ಮೊದಲ ಬಾರಿ ರಾಮಮಂದಿರದಲ್ಲಿ ಆಚರಿಸಲಾಗುತ್ತಿರುವ ದೀಪಾವಳಿಯನ್ನು ಬೇರೆಯದ್ದೇ ಸಂಭ್ರಮದಲ್ಲಿ ಆಚರಿಸಲು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧಿರಿಸಿದೆ.ಉತ್ತರಪ್ರದೇಶ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ದೀಪಾವಳಿಯಂದು ಸರಯೂ ನದಿ ತೀರದಲ್ಲಿ ಹಿಂದೆಂದೂ ಕಾಣದ ದೀಪಗಳ ಬೆಳಕು ಹೊಮ್ಮಲಿದೆಯಂತೆ.

ಯೋಗಿ ಸರ್ಕಾರ ಹೇಳುವ ಪ್ರಕಾರ ದೀಪಾವಳಿಯಂದು ಹೊಸ ಜಗತ್ತೇ ರಾಮಮಂದಿರದ ಅಂಗಳದಲ್ಲಿ ಹಾಗೂ ಸರಯೂ ನದಿ ತೀರದಲ್ಲಿ ಸೃಷ್ಟಿಯಾಗಲಿದೆಯಂತೆ ಸುಮಾರು 25 ರಿಂದ 28 ಲಕ್ಷ ದೀಪಗಳನ್ನು ಬೆಳಗಿ ಹೊಸ ದಾಖಲೆಯ ಲಕ್ಷ ದೀಪೋತ್ಸವ ಆಚರಣೆಗೆ ಯೋಗಿ ಸರ್ಕಾರ ಸಿದ್ಧವಾಗಿದೆ.

ಇನ್ನು ಲಕ್ಷ ದೀಪೋತ್ಸವದ ವೇಳೆ ಪರಿಸರ ಸ್ನೇಹಿ ಹಣತೆಗಳನ್ನು ಬೆಳಗಿಸಲಾಗುವುದು ಎಂದು ಹೇಳಲಾಗಿದೆ. ಈ ದೀಪಗಳಿಂದ ರಾಮಮಂದಿರದ ಗೋಡೆಗಳಿಗಾಗಲಿ, ಅಂಗಳದಲ್ಲಾಗಲಿ ಕಲೆ ಅಥವಾ ಮಸಿ ಅಂಟುವುದಿಲ್ಲ ಎಂದು ಹೇಳಲಾಗಿದೆ. ಈಗಾಗಲೇ ಅಂದುಕೊಂಡಂತೆ ಲಕ್ಷ ದೀಪೋತ್ಸವ ನಡೆಸುವ ಕಾರ್ಯವು ಶೇಕಡಾ 95 ರಷ್ಟು ಮುಗಿದಿದ್ದು. ಈ ಒಂದು ಲಕ್ಷದೀಪೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಸುಮಾರು 10 ಸಾವಿರ ಭಕ್ತರಿಗೆ ಅವಕಾಶ ನೀಡಲಾಗಿದೆ.
ರಾಮ್​ ಕಿ ಪೈಡಿಯಲ್ಲಿ ವೀಕ್ಷಕರ ಗ್ಯಾಲರಿ ನಿರ್ಮಾಣ ಮಾಡಲಾಗುವುದು ಎಂದು ಹೇಳಲಾಗಿದ್ದು. ದೀಪಾವಳಿ ಹಬ್ಬದ ಮುಂಚೆಯೇ ಅದು ಕೂಡ ಸಿದ್ಧಗೊಳ್ಳಿದೆ. ಕಳೆದ ಬಾರಿ ಉತ್ತರಪ್ರದೇಶದಲ್ಲಿ ಒಟ್ಟು 51 ಘಾಟ್​ಗಳಲ್ಲಿ ದೀಪೋತ್ಸವ ಆಚರಿಸಲಾಗಿತ್ತು. ಈ ಬಾರಿ 55 ಘಾಟ್​ಗಳಲ್ಲಿ ದೀಪೋತ್ಸವ ಆಚರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

Categories
Uncategorized

ಆನ್ಲೈನ್ ಹೊಡೆತಕ್ಕೆ ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್‌!

ಆನ್ಲೈನ್ ಹೊಡೆತಕ್ಕೆ ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್‌!
– ಆನ್ಸೆನ್ ಶಾಪಿಂಗ್, ರಿಯಾಯಿತಿಗಳಿಗೆ ಜನ ಮರುಳು
– ಸಣ್ಣ ವ್ಯಾಪಾರಿಗಳ ಮರೆಯಿತೇ ಸರ್ಕಾರ?

NAMMUR EXPRESS NEWS
ನವದೆಹಲಿ : ದೇಶದಲ್ಲಿ ಇ-ಕಾಮರ್ಸ್‌ ಸಂಸ್ಕೃತಿ ವೃದ್ಧಿಯಾಗಿ ಜನತೆ ಆನ್‌ಲೈನ್‌ ಶಾಪಿಂಗ್‌ ಕಡೆ ಮುಖ ಮಾಡುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನವೊಂದರಿಂದ ತಿಳಿದು ಬಂದಿದೆ.4 ಲಕ್ಷಕ್ಕೂ ಅಧಿಕ ವಿತರಕರ ಸಂಘಟನೆಯಾಗಿರುವ ‘ಅಖಿಲ ಭಾರತ ಗ್ರಾಹಕ ವಸ್ತುಗಳ ಪೂರೈಕೆದಾರರ ಸಂಘಟನೆ’ ನಡೆಸಿದ ಈ ಅಧ್ಯಯನ ದೇಶದಲ್ಲಿ ಇ-ಕಾಮರ್ಸ್‌ ಉದ್ಯಮ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿಗೊಂಡ ಬಳಿಕ ನಡೆದ ಮೊದಲ ಸಮಗ್ರ ಅಧ್ಯಯನ ಎನ್ನಲಾಗಿದೆ.
ಅಧ್ಯಯನ ವರದಿ ಅನ್ವಯ, ಮಹಾನಗರಗಳಲ್ಲಿ ಮಾಸಿಕ ಸರಾಸರಿ 5.5 ಲಕ್ಷ ರೂಪಾಯಿ ವಹಿವಾಟು ನಡೆಸುವ 17 ಲಕ್ಷ ಅಂಗಡಿಗಳಿದ್ದು, ಇವುಗಳಲ್ಲಿ ಶೇ.45ರಷ್ಟು ಮುಚ್ಚಿವೆ. ಅತ್ತ ಮಾಸಿಕ ಸರಾಸರಿ 3.5 ಲಕ್ಷ ರು.ನಷ್ಟು ವ್ಯಾಪಾರ ನಡೆಸುವ 12 ಲಕ್ಷ ಅಂಗಡಿಗಳಿರುವ ಟೈರ್‌ 1 ನಗರಗಳಲ್ಲಿ ಶೇ.30 ಅಂಗಡಿಗಳು ಮುಚ್ಚಿದ್ದು, ಟೈರ್‌ 2 ನಗರಗಳಲ್ಲಿ ಶೇ.25 ಅಂಗಡಿಗಳು ಬಾಗಿಲು ಹಾಕಿವೆ. ದೇಶದಲ್ಲಿ ಒಟ್ಟು 1.3 ಕೋಟಿ ಕಿರಾಣಿ ಅಂಗಡಿಗಳಿವೆ. ಈ ಪೈಕಿ ಟೈರ್‌ 1 ಸಿಟಿಗಳು ಅಂದರೆ ದೊಡ್ಡ ನಗರಗಳು 12 ಲಕ್ಷ ಅಂಗಡಿಗಳನ್ನು ಹೊಂದಿದ್ದರೆ, ಟೈರ್‌ 2 ಮತ್ತು ಟೈರ್‌ 3 ನಗರಗಳು ಉಳಿದ 1 ಕೋಟಿಗಿಂತ ಹೆಚ್ಚಿನ ಕಿರಾಣಿ ಅಂಗಡಿಗಳನ್ನು ಹೊಂದಿವೆ.

ಅಧ್ಯಯನ ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ವಿತರಕರ ಒಕ್ಕೂಟದ ಅಧ್ಯಕ್ಷ ಧೈರ್ಯಶಾಲಿ ಪಾಟೀಲ್‌, ‘ಸೂಪರ್‌ ಮಾರ್ಕೆಟ್‌ಗಳಿಗೂ ಸಡ್ಡು ಹೊಡೆದಿದ್ದ ಕಿರಾಣಿ ಅಂಗಡಿಗಳು ಇದೀಗ ಇ-ಕಾಮರ್ಸ್‌ ಹಾಗೂ ಆರ್ಥಿಕ ಹಿಂಜರಿತದ ಕಾರಣ ಅಪಾಯದಲ್ಲಿವೆ. ಜನರನ್ನು ಸೆಳೆಯುವ ಸಲುವಾಗಿ ಕಡಿಮೆ ಅಥವಾ ರಿಯಾಯಿತಿ ದರದಲ್ಲಿ ವಸ್ತುಗಳನ್ನು ಮಾರುತ್ತಿರುವ ಆನ್‌ಲೈನ್‌ ವಾಣಿಜ್ಯ ಸಂಸ್ಥೆಗಳು ಕಿರಾಣಿ ಅಂಗಡಿಗಳ ಗ್ರಾಹಕರನ್ನು ಕಸಿಯುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸಣ್ಣ ವ್ಯಾಪಾರಿಗಳ ರಕ್ಷಣೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಲುವ ಬಗ್ಗೆ ಚಿಂತನೆ ನಡೆಸಿದೆ ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದರು.

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಲಕ್ಷ್ಮಿ ನಾರಾಯಣ ಯೋಗದಿಂದ ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳ ಪ್ರಭಾವವನ್ನು ತಪ್ಪಿಸಿ. ಕುಟುಂಬದಿಂದ ಬೆಂಬಲ ಸಿಗಲಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಗಳು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತವೆ. ಇಂದು ಆರ್ಥಿಕ ಲಾಭದ ಸಾಧ್ಯತೆಗಳಿವೆ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ವ್ಯಾಪಾರ ಸುಧಾರಣೆಯಾಗಲಿದೆ. ಆದಾಯವೂ ಹೆಚ್ಚಲಿದೆ.

** ವೃಷಭ ರಾಶಿ :
ಇಂದು ನಿಮ್ಮ ಮಾತಿನಲ್ಲಿ ಮಾಧುರ್ಯವಿರುತ್ತದೆ, ಆದರೆ ಮನಸ್ಸು ಚಂಚಲವಾಗಬಹುದು. ತಾಳ್ಮೆಯಿಂದಿರಿ. ಶೈಕ್ಷಣಿಕ ಕೆಲಸಗಳತ್ತ ಗಮನ ಹರಿಸಿ. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ಬಗ್ಗೆ ಶಾಂತಿ ಮತ್ತು ಸಂತೋಷದ ಭಾವನೆ ಇರುತ್ತದೆ. ಇಂದು ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಲಾಭದ ಅವಕಾಶವಿರುತ್ತದೆ.

** ಮಿಥುನ ರಾಶಿ :
ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ನೀವು ಸರ್ಕಾರದಿಂದ ಬೆಂಬಲವನ್ನು ಪಡೆಯುತ್ತೀರಿ, ಆದರೆ ಸ್ಥಳ ಬದಲಾವಣೆಯೂ ಇರಬಹುದು. ಕೆಲಸದ ವ್ಯಾಪ್ತಿ ಹೆಚ್ಚಾಗಲಿದೆ. ಮಾತಿನಲ್ಲಿ ಮಾಧುರ್ಯ ಇರುತ್ತದೆ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಗೌರವ ಸಿಗಲಿದೆ. ಇಂದು ನಿಮಗೆ ಸರ್ಕಾರದಿಂದ ಬೆಂಬಲವೂ ಸಿಗುತ್ತದೆ.

** ಕರ್ಕಾಟಕ ರಾಶಿ :
ಇಂದು ನಿಮಗೆ ಆತ್ಮವಿಶ್ವಾಸದ ಕೊರತೆ ಇರುತ್ತದೆ. ಮಾನಸಿಕ ಶಾಂತಿಗಾಗಿ, ನೀವು ನಿಮ್ಮ ಕುಟುಂಬದೊಂದಿಗೆ ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಹೋಗಬಹುದು. ಖರ್ಚು ಹೆಚ್ಚಾಗಲಿದೆ. ಉತ್ತಮ ಸ್ಥಿತಿಯಲ್ಲಿರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇಂದು ಅನಗತ್ಯ ಚರ್ಚೆಗಳನ್ನು ತಪ್ಪಿಸಲು ಪ್ರಯತ್ನಿಸಿ. ಶೈಕ್ಷಣಿಕ ಕೆಲಸದಲ್ಲಿ ಅಪೇಕ್ಷಿತ ಯಶಸ್ಸಿನ ಸಾಧ್ಯತೆಗಳಿವೆ.

** ಸಿಂಹ ರಾಶಿ :
ಇಂದು ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಹೆಚ್ಚಿನ ಶ್ರಮ ಇರುತ್ತದೆ. ಉತ್ತಮ ಸ್ಥಿತಿಯಲ್ಲಿರಿ. ಪ್ರಯಾಣವು ನೋವಿನಿಂದ ಕೂಡಿರಬಹುದು. ಶೈಕ್ಷಣಿಕ ಕೆಲಸಗಳತ್ತ ಗಮನ ಹರಿಸಿ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ಸ್ನೇಹಿತರ ಸಹಾಯದಿಂದ ನೀವು ಉದ್ಯೋಗಾವಕಾಶಗಳನ್ನು ಪಡೆಯಬಹುದು. ಆದರೆ ನೀವು ಬೇರೆ ಸ್ಥಳಕ್ಕೆ ಹೋಗಬೇಕಾಗಬಹುದು.

** ಕನ್ಯಾ ರಾಶಿ :
ಇಂದು ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ಕೆಲಸದ ವ್ಯಾಪ್ತಿ ವಿಸ್ತಾರವಾಗಲಿದೆ. ಆರೋಗ್ಯದ ಬಗ್ಗೆ ಗಮನ ಕೊಡಿ. ಆತ್ಮವಿಶ್ವಾಸ ಕಡಿಮೆಯಾಗಲಿದೆ. ತಾಳ್ಮೆಯಿಂದಿರಿ. ಅತಿಯಾದ ಕೋಪವನ್ನು ತಪ್ಪಿಸಿ. ಸಂಭಾಷಣೆಯಲ್ಲಿ ತಾಳ್ಮೆಯಿಂದಿರಿ. ವ್ಯಾಪಾರದ ಕೆಲಸದ ಆಹ್ಲಾದಕರ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ.

** ತುಲಾ ರಾಶಿ :
ಇಂದು ನಿಮ್ಮ ಮನಸ್ಸು ಚಂಚಲವಾಗಿರುತ್ತದೆ. ನಿಮ್ಮ ಪೋಷಕರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಮಿತ್ರರ ನೆರವಿನಿಂದ ವ್ಯಾಪಾರ ಸುಧಾರಿಸಲಿದೆ. ನಿಮ್ಮ ಉದ್ಯೋಗದಲ್ಲಿ ವಿದೇಶ ಪ್ರವಾಸಕ್ಕೆ ಅವಕಾಶ ಸಿಗಬಹುದು. ಪ್ರಯಾಣ ಲಾಭದಾಯಕವಾಗಲಿದೆ. ತಾಯಿಯ ಆರೋಗ್ಯ ಸುಧಾರಿಸಲಿದೆ. ಬಟ್ಟೆಯ ಬಗ್ಗೆ ಆಸಕ್ತಿ ಹೆಚ್ಚಾಗಬಹುದು. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು.

** ವೃಶ್ಚಿಕ ರಾಶಿ :
ಇಂದು ನಿಮ್ಮ ಮನಸ್ಸಿನಲ್ಲಿ ಏರಿಳಿತಗಳಿರಬಹುದು. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶೈಕ್ಷಣಿಕ ಕೆಲಸಗಳತ್ತ ಗಮನ ಹರಿಸಿ. ತೊಂದರೆಗಳು ಉಂಟಾಗಬಹುದು. ರುಚಿಕರವಾದ ಆಹಾರದಲ್ಲಿ ಆಸಕ್ತಿ ಹೆಚ್ಚಾಗಬಹುದು. ಸಂಬಂಧಗಳಲ್ಲಿ ನಿಕಟತೆ ಇರುತ್ತದೆ. ಆತ್ಮವಿಶ್ವಾಸ ತುಂಬಿದಂತಾಗುತ್ತದೆ. ಕಟ್ಟಡ ಸೌಕರ್ಯದಲ್ಲಿ ಹೆಚ್ಚಳವಾಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಚಿಂತಿಸುವಿರಿ. ದೈನಂದಿನ ಜೀವನ ಜೀವನ ಅಸ್ತವ್ಯಸ್ತವಾಗುತ್ತದೆ.

** ಧನಸ್ಸು ರಾಶಿ :
ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ. ದಾಂಪತ್ಯ ಸುಖ ಹೆಚ್ಚಲಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಶೈಕ್ಷಣಿಕ ಕೆಲಸಕ್ಕಾಗಿ ವಿದೇಶಕ್ಕೂ ಹೋಗಬಹುದು. ನೀವು ಕೆಲಸದಲ್ಲಿ ಕೆಲವು ಹೆಚ್ಚುವರಿ ಜವಾಬ್ದಾರಿಯನ್ನು ಪಡೆಯಬಹುದು. ಹೆಚ್ಚಿನ ಶ್ರಮ ಇರುತ್ತದೆ. ಉತ್ತಮ ಸ್ಥಿತಿಯಲ್ಲಿರಿ. ಖರ್ಚು ಹೆಚ್ಚಾಗಲಿದೆ. ಕುಟುಂಬದಿಂದ ಬೆಂಬಲ ಸಿಗಲಿದೆ. ನಿಮ್ಮ ತಾಯಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ.

** ಮಕರ ರಾಶಿ :
ಇಂದು ನಿಮಗೆ ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ನೀವು ಕುಟುಂಬದಿಂದ ದೂರ ಉಳಿಯಬೇಕಾಗಬಹುದು. ಆರೋಗ್ಯದ ಬಗ್ಗೆ ಗಮನ ಕೊಡಿ. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ನೀವು ನಿಮ್ಮ ತಾಯಿಯ ಸಹವಾಸವನ್ನು ಪಡೆಯುತ್ತೀರಿ. ನಿಮ್ಮ ಕೆಲಸದಲ್ಲಿ ಅಧಿಕಾರಿಗಳೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ಖರ್ಚು ಹೆಚ್ಚಾಗಲಿದೆ.

** ಕುಂಭ ರಾಶಿ :
ಇಂದು ಅನಾವಶ್ಯಕ ಕೋಪ ಮತ್ತು ವಾದಗಳಿಂದ ದೂರವಿರಿ. ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ಸ್ನೇಹಿತರ ಸಹಾಯದಿಂದ ವ್ಯಾಪಾರವನ್ನು ವಿಸ್ತರಿಸಬಹುದು. ಮನಸ್ಸು ವ್ಯಗ್ರವಾಗಿ ಉಳಿಯುತ್ತದೆ. ಸ್ವಯಂ ನಿಯಂತ್ರಣದಲ್ಲಿರಿ. ತಾಳ್ಮೆಯ ಕೊರತೆ ಇರುತ್ತದೆ. ನೀವು ವ್ಯವಹಾರದಲ್ಲಿ ತೊಂದರೆಗಳನ್ನು ಎದುರಿಸಬಹುದು. ಇಂದು ಅನಾವಶ್ಯಕ ಓಡಾಟವೂ ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಕೊಡಿ.

** ಮೀನ ರಾಶಿ :
ಇಂದು ನಿಮ್ಮ ಮನಸ್ಸಿನಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ, ಆದರೆ ತಾಳ್ಮೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಸ್ವಂತ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ವೈದ್ಯಕೀಯ ವೆಚ್ಚಗಳು ಹೆಚ್ಚಾಗಬಹುದು. ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ. ತಾಳ್ಮೆಯಿಂದಿರಿ. ಅತಿಯಾದ ಕೋಪವನ್ನು ತಪ್ಪಿಸಿ. ವ್ಯಾಪಾರ ಸುಧಾರಣೆಯಾಗಲಿದೆ. ಆದಾಯ ಹೆಚ್ಚಲಿದೆ. ಕುಟುಂಬದೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗಬಹುದು.

Categories
ತೀರ್ಥಹಳ್ಳಿ

ನ್ಯಾಷನಲ್ ಗೋಲ್ಡ್ ಮಾಸಿಕ ಡ್ರಾ

ನ್ಯಾಷನಲ್ ಗೋಲ್ಡ್ ಮಾಸಿಕ ಡ್ರಾ
– ಬೆಂಗಳೂರು ನವ್ಯ ನಾಯ್ಕಗೆ 1 ಲಕ್ಷ ಬಹುಮಾನ
– ಅನೇಕ ಗ್ರಾಹಕರಿಗೆ ವಿಶೇಷ ಬಹುಮಾನ

NAMMUR EXPRESS NEWS
ತೀರ್ಥಹಳ್ಳಿ:
ನ್ಯಾಷನಲ್‌ ಗೋಲ್ಡ್ ಅಂಡ್ ಡೈಮಂಡ್ಸ್‌ನ 15 ನೇ ವಾರ್ಷಿಕಾಚರಣೆಯ ಮಾಸಿಕ ಡ್ರಾ ಅಕ್ಟೋಬರ್ 25ರಂದು ಸಂಸ್ಥೆಯ ಶೋರೂಂನಲ್ಲಿ ಗ್ರಾಹಕರಾದ ರಂಜನ್, ಅಂಕಿತ ಶೆಟ್ಟಿ, ಅಲೀಮ್, ಹಬೀಬ್ ಅವರ ಸಮ್ಮುಖದಲ್ಲಿ ನೆರವೇರಿತು. ಸಂಸ್ಥೆಯ ಪಾಲುದಾರರಾದ ಮೊಯಿದ್ದೀನ್ ಕಬೀರ್, ಯೂಸುಫ್ ಹೈದರ್ ಇದ್ದರು.

ಡ್ರಾ ವಿಜೇತರು:

– ಪ್ರಥಮ ಬಹುಮಾನ: 1,00,000-ನಂ: 052185 ನವ್ಯ ಎಸ್.ನಾಯ್ಕ ಬೆಂಗಳೂರು
– ದ್ವಿತೀಯ ಬಹುಮಾನ: 75,000 ನಂ: 045327 ಮೀರಾ, ಕೋಣಂದೂರು
– ತೃತೀಯ ಬಹುಮಾನ : 50,000 ನಂ: 046476 ಆರೀಫಾ, ಚಿತ್ರದುರ್ಗ
– 4ನೇ ಬಹುಮಾನ: 25,000 ನಂ: 053770 ಅರವಿಂದ್, ಕೊಪ್ಪ

 

 

Categories
ಕರಾವಳಿ

ಕರಾವಳಿ ನ್ಯೂಸ್

ಕರಾವಳಿ ನ್ಯೂಸ್

– ಕಾಸರಗೋಡು: ದೀಪಾವಳಿ ಹಬ್ಬ ಮುನ್ನ,ಪಟಾಕಿ ಕಿಡಿಯಿಂದ 150ಕ್ಕೂ ಹೆಚ್ಚು ಮಂದಿ ಗಾಯ!
– ಪುತ್ತೂರು: ಲವ್ ಜಿಹಾದ್ – ಸಮೀರ್’ಗೆ ಶಿಕ್ಷೆ ನೀಡುವಂತೆ, ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!
– ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

NAMMUR EXPRESS NEWS
ಕಾಸರಗೋಡು:
ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

* ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್’ಗೆ ಶಿಕ್ಷೆ ನೀಡುವಂತೆ, ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!

ಪುತ್ತೂರು: ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪುತ್ತೂರಿನಲ್ಲಿ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ತೆರೆಯುವ ಸಂದರ್ಭ ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಯೋರ್ವಳು ದೇವರಿಗೆ ಬರೆದ ಪತ್ರವೊಂದು ಸಿಕ್ಕಿದ್ದು ಹೊಸ ಸಂಚಲನ ಸೃಷ್ಟಿ ಮಾಡಿದೆ.

ಕಾಣಿಕೆ ಹುಂಡಿ ಲೆಕ್ಕಾಚಾರದ ವೇಳೆ ಸಿಕ್ಕಿದ ಚೀಟಿಯಲ್ಲಿ “ಸಮೀರ್ ಅನ್ನುವವನು ನನ್ನ ಜೀವನ ಹಾಳು ಮಾಡಿದ್ದಾನೆ. ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ.. ಅವನ ಜೀವನ ಕೂಡ ಹಾಳಗಬೇಕು ಅವನಿಗೆ ಮದುವೆಯಾಗಲು ಹುಡುಗಿ ಸಿಗಬಾರದು – ಓ ದೇವರೆ ಇದು ನನ್ನ ಪ್ರಾರ್ಥನೆ ” ಎಂದು ಬರೆಯಲಾಗಿದೆ.

ಇತಿಹಾಸ ಪ್ರಸಿದ್ಧವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಅನೇಕ ಕಾರಣಿಕದ ಸಂಗತಿಯನ್ನು ಒಳಗೊಂಡಿದ್ದು, ಹತ್ತೂರ ಒಡೆಯನಲ್ಲಿ ತಮ್ಮ ಮನದಾಳದ ಮಾತನ್ನು ಚೀಟಿ ಮೂಲಕ ತಿಳಿಸಿದ್ದಾರೆ. ಸದ್ಯ ಈ ಪ್ರಕರಣದ ಮೂಲಕ ಮತ್ತೊಂದು ಲವ್ ಜಿಹಾದ್ ಘಟನೆ ಬೆಳಕಿಗೆ ಬಂದ0ತಾಗಿದೆ. ಈ ಪತ್ರದ ವಿಷಯ ತಿಳಿದು ಪುತ್ತೂರಿನ ಹಿಂದೂ ಸಮಾಜ, ದೇವರೇ ನ್ಯಾಯ ಒದಗಿಸಲಿ ಎಂದು ಮನವಿ ಮಾಡಿದೆ.

* ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್’ಗೆ ಶಿಕ್ಷೆ ನೀಡುವಂತೆ, ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ.!!

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಅ. 29ರಂದು ತುಂಬೆಯಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಬೋಜ ಮೂಲ್ಯ (62) ಮೃತಪಟ್ಟ ವ್ಯಕ್ತಿ. ಅ.11 ರಂದು ರಾತ್ರಿ 7 ರ ಸುಮಾರಿಗೆ ಬೋಜ ಮೂಲ್ಯ ಅವರು ಮನೆಗೆ ಕೋಳಿ ಮಾಂಸ ಖರೀದಿ ಮಾಡಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ತಲಪಾಡಿಯ ಚಿಕನ್ ಸ್ಟಾಲ್ ಗೆ ತೆರಳಲು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಘಟನೆಯಲ್ಲಿ ಅವರಿಗೆ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೀಗ 19 ದಿನಗಳ ಬಳಿಕ ಮನೆಯಲ್ಲಿ ಇವರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅ. 29ರಂದು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Categories
ಕರಾವಳಿ

ಕರಾವಳಿ ಟಾಪ್ ನ್ಯೂಸ್

ಕರಾವಳಿ ಟಾಪ್ ನ್ಯೂಸ್

– ರೈಲಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು!!
– ಬಂಟ್ವಾಳ: ಬಸ್ಸಿನಲ್ಲಿ ಚಿನ್ನದ ಸರ ಕಳವು, ಮೂವರು ಕಳ್ಳಿಯರು ಅಂದರ್
– ಮಂಗಳೂರು: ಮಾದಕ ವಸ್ತು ಮಾರಾಟ – ಆರು ಮಂದಿ ಆರೋಪಿಗಳು ಅರೆಸ್ಟ್!!

NAMMUR EXPRESS NEWS
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಅ. 28ರಂದು ತೀರ್ಪು ನೀಡಿದ್ದಾರೆ. ಬಂಟ್ವಾಳ ಬಿ. ಕಸಬಾ ಗ್ರಾಮ ನೆಹರೂ ನಗರದ ಅಬುತಾಹಿರ್‌ ಆಲಿಯಾಸ್‌ ಶಾಝಿಲ್‌(20) ಶಿಕ್ಷೆಗೊಳಗಾದ ಆರೋಪಿ.

* ಬಂಟ್ವಾಳ: ಬಸ್ಸಿನಲ್ಲಿ ಚಿನ್ನದ ಸರ ಕಳವು, ಮೂವರು ಕಳ್ಳಿಯರು ಅಂದರ್

ಹರಿಪಾಡ್: ಬಸ್ ಹತ್ತುವಾಗ ಮಹಿಳೆಯ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮನ್ನರಸಲ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದ ಮಹಿಳೆಯೊಬ್ಬರ ಚಿನ್ನ ಸರ ಕದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. ಬಂಟ್ವಾಳ ನಿವಾಸಿಗಳಾದ ಚೋಟಮ್ಮ(52), ಲಕ್ಷ್ಮಿ(37) ಮತ್ತು ಕೆಂಡಮ್ಮ(47) ಎಂಬುವರನ್ನು ಹರಿಪಾಡ್ ಪೊಲೀಸರು ಬಂಧಿಸಿದ್ದಾರೆ.

ಮನ್ನಾರಸಾಲ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಕೊಲ್ಲಂ ಮೂಲದ ರಾಜಮ್ಮ ಎಂಬುವರ ಒಂದು ಮುಕ್ಕಾಲು ಪವನ್ ಚಿನ್ನದ ಸರವನ್ನು ಕದ್ದೊಯ್ದ ಘಟನೆ ಹರಿಪಾಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿತ್ತು.
ಬಸ್ ಹತ್ತುವಾಗ ಮೂವರು ಮಹಿಳೆಯರು ಕೈಚಳಕ ತೋರಿಸಿದ್ದಾರೆ. ಇದನ್ನು ಗಮನಿಸಿದ ರಾಜಮ್ಮ ಗಲಾಟೆ ಮಾಡಿದ್ದು, ಇತರೆ ಪ್ರಯಾಣಿಕರು ಯುವತಿಯರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತಪಾಸಣೆ ವೇಳೆ ಬ್ಯಾಗ್‌ನೊಳಗೆ ಕಳ್ಳತನವಾದ ಸರ ಪತ್ತೆಯಾಗಿದೆ.

* ಮಂಗಳೂರು: ಮಾದಕ ವಸ್ತು ಮಾರಾಟ – ಆರು ಮಂದಿ ಆರೋಪಿಗಳು ಅರೆಸ್ಟ್!!

ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಇತರ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್‌ ಬಾಲಾಜಿ ಮತ್ತು ಮುಖೇಶ್‌ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. 11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್‌ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.