Categories
ರಾಜಕೀಯ

ಸಚಿವ ಜಮೀರ್‌ ವಿರುದ್ಧ ಕಾಂಗ್ರೇಸ್‌ನಲ್ಲೇ ಅಸಮಾಧಾನ..!!?

ಸಚಿವ ಜಮೀರ್‌ ವಿರುದ್ಧ ಕಾಂಗ್ರೇಸ್‌ನಲ್ಲೇ ಅಸಮಾಧಾನ..!!?
* ಎಐಸಿಸಿಗೆ ಪತ್ರ ಬರೆದರಾ ಕಾಂಗ್ರೇಸ್‌ನ ಶಾಸಕರು
* ಯಾಕೆ ಅಸಮಾಧಾನ,ಪತ್ರದಲ್ಲೇನಿದೆ

NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಸರ್ಕಾರದ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸ್ವಪಕ್ಷೀಯರೇ ಪತ್ರ ಬರೆದು ದೂರು ಸಲ್ಲಿಸಿದ್ದಾರೆ.

ವಕ್ಫ್ ವಿಚಾರದಲ್ಲಿ ಜಮೀರ್ ಅವರ ಹೇಳಿಕೆಗಳು ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಈ ಮೂಲಕ ಜಮೀರ್ ಅಹ್ಮದ್ ಸ್ವಪಕ್ಷ, ಪ್ರತಿಕ್ಷಗಳ ಕೆಂಗಣ್ಣಿಗೆ ಗುರಿಯಾದಂತಾಗಿದೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇದೀಗ ಕಾಂಗ್ರೆಸ್ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಸಮಾಧಾನ ಹೊರಹಾಕಿ ಪತ್ರ ಬರೆದಿದ್ದಾರೆ.
ಈಗಾಗಲೇ ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್ ಅವರನ್ನೇ ಗುರಿಯಾಗಿಸಿಕೊಂಡಿದ್ದಾರೆ.
ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪತ್ರದಲ್ಲೇನಿದೆ…!!?

ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ.ಶಿಗ್ಗಾವಿ ಉಪಚುನಾವಣೆ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ ಗೊಂದಲ ಸೃಷ್ಟಿ ಮಾಡಿದ್ದರು. ನಮ್ಮಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಶಾಸಕರಿದ್ದಾರೆ, ಆದರೆ ಜಮೀರ್ ಮಾತ್ರ ವಿಶೇಷವಾಗಿ ನಡೆದುಕೊಳ್ಳುತ್ತಿದ್ದಾರೆ. ತಾವು ಮಧ್ಯಪ್ರವೇಶಿಸಿ ಜಮೀರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಖರ್ಗೆಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಶಾಸಕರು ಬರೆದಿರವುದು ಎನ್ನಲಾದ ಪತ್ರದ ಪ್ರತಿಯೊಂದು ಸದ್ಯ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

Categories
ರಾಜ್ಯ

ಹಣ್ಣು ಈಗ ರಾಸಾಯನಿಕ ಮುಕ್ತ ಅಲ್ಲ!

ಹಣ್ಣು ಈಗ ರಾಸಾಯನಿಕ ಮುಕ್ತ ಅಲ್ಲ!
* ಯಥೇಚ್ಛವಾಗಿ ಬಳಕೆಯಾಗುತ್ತಿದೆ ರಾಸಾಯನಿಕ
* ಆರೋಗ್ಯದ ಮೇಲೆ ಪರಿಣಾಮ ಗ್ಯಾರಂಟಿ

NAMMUR EXPRESS NEWS
ಬೆಂಗಳೂರು: ಬಣ್ಣಬಣ್ಣದ ಆಕರ್ಷಕ ಹಣ್ಣುಗಳು, ಕಣ್ಣಿಗೆ ಖುಷಿ ಕಾಣುತ್ತದೆ, ಹೊಟ್ಟೆಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹಣ ಕೊಟ್ಟು ಖರೀದಿಸಿ ಮನೆಗೆ ತಂದು ತಿನ್ನುತ್ತೇವೆ. ಬೆಂಗಳೂರಿನಂತಹ ನಗರದ ಮಾರುಕಟ್ಟೆಗಳಲ್ಲಿ ಆಕರ್ಷಕವಾದ ಹಣ್ಣುಗಳು ಜನರನ್ನು ಆಕರ್ಷಿಸುವುದು ಹೆಚ್ಚು. ಕಾಯಿಲೆ ಬಂದಾಗ ವೈದ್ಯರು ಚೆನ್ನಾಗಿ ಹಣ್ಣು-ತರಕಾರಿ ತಿನ್ನಿ ಎಂದು ಹೇಳುತ್ತಾರೆ ಎಂದು ದಿನಕ್ಕೊಂದು ಬಗೆಯ ಹಣ್ಣನ್ನು ಖರೀದಿಸಿ ತರುತ್ತೇವೆ. ಆದರೆ ಇವುಗಳಲ್ಲಿ ಹಲವು ಹಣ್ಣುಗಳು ಸ್ವಾಭಾವಿಕವಾಗಿ ಹಣ್ಣಾಗಿರುವುದಿಲ್ಲ, ಕೃತಕವಾಗಿ ಹಣ್ಣು ಮಾಡಲಾಗುತ್ತದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಎಚ್ಚರಿಸಿದ್ದಾರೆ. ರಾಜ್ಯದಾದ್ಯಂತ ಎಫ್‌ಎಸ್‌ಎಸ್‌ಎಐ ಅನುಮತಿಸಿದ ಸಸ್ಯ ಬೆಳವಣಿಗೆ ನಿಯಂತ್ರಕವಾದ ‘ಎಥೆಫೋನ್’ ನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಇದನ್ನು ಪುಡಿ ರೂಪದಲ್ಲಿ ಬಳಸಿ ಕಾಯಿ ಹಣ್ಣಾಗಲು ಎಥಿಲೀನ್ ಅನಿಲ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ನಗರಗಳಲ್ಲಿ ಅನೇಕ ವ್ಯಾಪಾರಿಗಳು, ಎಥೆಫೋನ್ ಪುಡಿ ರೂಪದಲ್ಲಿ ಬಳಸುವ ಬದಲು, ಈ ರಾಸಾಯನಿಕಗಳ ದ್ರಾವಣಗಳಲ್ಲಿ ಹಣ್ಣುಗಳನ್ನು ನೆನೆಸಿ, ಮೃದುವಾಗಿ, ಸುಂದರವಾಗಿ ಹಣ್ಣಾದಂತೆ ಪ್ರಕಾಶಮಾನವಾಗಿ ಕಾಣುವಂತೆ ಮಾಡುತ್ತಿದ್ದಾರೆ. ಈ ದುರುಪಯೋಗದಿಂದ ಹಣ್ಣುಗಳಲ್ಲಿ ಅಪಾಯಕಾರಿ ಅಂಶ ಸೇರಿ ಮನುಷ್ಯರ ಆರೋಗ್ಯಕ್ಕೆ ಹಾನಿಕಾರವಾಗಿದೆ. ಕಳೆದ ವರ್ಷ ಕ್ಯಾಲ್ಸಿಯಂ ಕಾರ್ಬೈಡ್‌ನ ನಿಷೇಧವನ್ನು ಅನುಸರಿಸಿ ಎಥೆಫೋನ್‌ಗೆ ಅನುಮೋದನೆ ನೀಡಲಾಯಿತು.
ತೋಟಗಾರಿಕಾ ಇಲಾಖೆಯ ಮೂಲಗಳು ಎಥೆಫೋನ್‌ನ ದುರುಪಯೋಗ ಇತ್ತೀಚೆಗೆ ಹೆಚ್ಚಾಗಿದೆ. ರಾಜ್ಯದಲ್ಲಿ ಅದನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ತಂತ್ರಜ್ಞಾನ ಮತ್ತು ಸಂಪನ್ಮೂಲಗಳ ಕೊರತೆಯಿದೆ. ಈ ಹಣ್ಣುಗಳನ್ನು ಸರಿಯಾಗಿ ತೊಳೆಯದೆ ಅಥವಾ ಸ್ವಚ್ಛಗೊಳಿಸದೆ ಸೇವಿಸುವವರಿಗೆ ನಿಧಾನವಾಗಿ ಹಲವು ಕಾಯಿಲೆಗಳು ಬರುತ್ತಿವೆ ಎಂದಿದ್ದಾರೆ.

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಇಂದು ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬಹುದು. ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಇಂದು ನಿಮ್ಮ ಹೊಸ ಆಲೋಚನೆಗಳಿಂದ ನಿಮಗೆ ಯಶಸ್ಸು ಸಿಗಬಹುದು. ಉದ್ಯಮಿಗಳಿಗೆ ಪಾಲುದಾರಿಕೆಯಲ್ಲಿ ಲಾಭವಿದೆ. ನಿಮ್ಮ ಸಂಗಾತಿಯೊಂದಿಗೆ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಪ್ರಯತ್ನಿಸಿ. ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿ. ಇಂದು ನಿಮಗೆ ಹಣಕಾಸಿನ ಸಮಸ್ಯೆಗಳಿರುವುದಿಲ್ಲ.

** ವೃಷಭ ರಾಶಿ :
ಇಂದು ವೃಷಭ ರಾಶಿಯವರಿಗೆ ಉತ್ತಮ ದಿನವಾಗಿರುತ್ತದೆ. ಇಂದು ನೀವು ವಿವಿಧ ಮೂಲಗಳಿಂದ ಹಣವನ್ನು ಪಡೆಯಬಹುದು. ಪ್ರೇಮ ಜೀವನವು ತುಂಬಾ ಸುಖಮಯವಾಗಿರುತ್ತದೆ. ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಕಾರಾತ್ಮಕ ವ್ಯಕ್ತಿಗಳಿಂದ ದೂರವಿರುವುದು ಉತ್ತಮ. ಕೆಲಸದ ಸ್ಥಳದಲ್ಲಿ ಒತ್ತಡದ ಪರಿಸ್ಥಿತಿ ಎದುರಾಗಬಹುದು. ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

** ಮಿಥುನ ರಾಶಿ :
ಇಂದು ಮಿಥುನ ರಾಶಿಯವರಿಗೆ ತುಂಬಾ ಶುಭ ದಿನ. ಉದ್ಯೋಗದಲ್ಲಿರುವವರು ಅಧಿಕಾರಿಗಳ ಬೆಂಬಲ ಪಡೆಯಬಹುದು. ಇಂದು, ಸಣ್ಣ ಪುಟ್ಟ ಅಡೆತಡೆಗಳ ಹೊರತಾಗಿಯೂ, ನಿಮ್ಮ ಕೆಲಸಗಳನ್ನು ಪೂರೈಸುವಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಸರಳ ಸ್ವಭಾವದಿಂದಾಗಿ, ನಿಮ್ಮ ಗೌರವವು ಮತ್ತಷ್ಟು ಹೆಚ್ಚಾಗಬಹುದು. ಇಂದು ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ನಿಮ್ಮ ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ.

** ಕರ್ಕಾಟಕ ರಾಶಿ :
ಇಂದು ನಿಮಗೆ ಪ್ರಗತಿಯ ದಿನವಾಗಲಿದೆ. ಉದ್ಯೋಗಿಗಳು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಹಣ ಹೂಡಿಕೆಯ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಇಂದು ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ದಾಂಪತ್ಯ ಜೀವನದಲ್ಲಿ ಸಮಸ್ಯೆ ಎದುರಾಗಬಹುದು. ಮಾತಿನ ಮೂಲಕ ಸಂಬಂಧಗಳಲ್ಲಿನ ತಪ್ಪು ತಿಳುವಳಿಕೆಯನ್ನು ನಿವಾರಿಸಲು ಪ್ರಯತ್ನಿಸಿ.

** ಸಿಂಹ ರಾಶಿ :
ಇಂದು ಸಿಂಹ ರಾಶಿಯವರಿಗೆ ಅನೇಕ ಆದಾಯದ ಮೂಲಗಳಿಂದ ಧನ ಲಾಭವಿದೆ. ವ್ಯಾಪಾರದ ಯಶಸ್ಸು ನಿಮ್ಮ ಪರವಾಗಿರಲಿದೆ. ಆದರೆ ಇಂದು ಯಾರಿಗೂ ದೊಡ್ಡ ಮೊತ್ತದ ಸಾಲ ನೀಡದಿರುವುದು ಒಳಿತು. ವೃತ್ತಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. ಇಂದು, ಹೂಡಿಕೆ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಅವಿವಾಹಿತರು ಇಂದು ವಿಶೇಷ ವ್ಯಕ್ತಿಯನ್ನು ಭೇಟಿಯಾಗಬಹುದು.

** ಕನ್ಯಾ ರಾಶಿ :
ಈ ದಿನ ನಿಮಗೆ ಅದೃಷ್ಟ ಕೈ ಕೊಡಬಹುದು. ನಿಮ್ಮ ವೃತ್ತಿಜೀವನದಲ್ಲಿ ಅನೇಕ ದೊಡ್ಡ ಬದಲಾವಣೆಗಳಿಗೆ ಸಿದ್ಧರಾಗಿರಿ. ಇಂದು ಯಾವುದೇ ವಿವಾದಗಳು ಉದ್ಭವಿಸಿದರೆ, ತಾಳ್ಮೆ ಮತ್ತು ಸಂಯಮದಿಂದ ಸಮಸ್ಯೆಗಳನ್ನು ನಿಭಾಯಿಸಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಅತಿಯಾದ ಖರ್ಚಿನಿಂದ ಅಪಾಯವಿದೆ ಅಪಾಯವನ್ನು ಎದುರಿಸುವಿರಿ. ಇಂದು ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಕಡಿಮೆಯಾಗಬಹುದು.

** ತುಲಾ ರಾಶಿ :
ಇಂದು ನಿಮ್ಮಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು. ಪ್ರೇಮ ಸಂಬಂಧಗಳಲ್ಲಿ ಮಧುರತೆ ಇರುತ್ತದೆ. ಹೂಡಿಕೆ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಇಂದು ನಿಮ್ಮ ಖರ್ಚಿನ ಮೇಲೆ ನಿಗಾ ಇರಿಸಿ. ಅನುಪಯುಕ್ತ ವಸ್ತುಗಳಿಗೆ ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸಿ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ.

** ವೃಶ್ಚಿಕ ರಾಶಿ :
ಇಂದು ನಿಮಗೆ ಅದೃಷ್ಟ ಹೆಚ್ಚಾಗುವ ದಿನ. ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ, ಆದರೆ ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಪರಿಸ್ಥಿತಿಗೆ ತಕ್ಕಂತೆ ಮಾತ್ರ ಖರ್ಚು ಮಾಡಿ. ಕಷ್ಟದ ಸಮಯವನ್ನು ಎದುರಿಸುವುದಕ್ಕಾಗಿ ಹಣವನ್ನು ಉಳಿಸಲು ಮರೆಯದಿರಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ.

** ಧನಸ್ಸು ರಾಶಿ :
ಈ ದಿನವು ನಿಮಗೆ ಸಾಮಾನ್ಯವಾಗಿರುತ್ತದೆ. ಇಂದು ಹಣಕಾಸಿನ ವ್ಯವಹಾರದಲ್ಲಿ ಅತ್ಯಂತ ಎಚ್ಚರಿಕೆ ಅಗತ್ಯ. ಉದ್ಯೋಗವನ್ನು ಹುಡುಕುತ್ತಿರುವ ಜನರು ಒಳ್ಳೆಯ ಸುದ್ದಿ ಪಡೆಯಬಹುದು. ಜೀವನದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುವಿರಿ. ಕೆಲಸದ ಸ್ಥಳದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯಬಹುದು. ಉದ್ಯೋಗದ ರಾಜಕೀಯದಿಂದ ದೂರವಿರಿ. ನಿಮ್ಮ ಜೀವನದ ಗುರಿಗಳನ್ನು ಸಾಧಿಸಲು ಹೊಸ ಪ್ರಯತ್ನಗಳನ್ನು ಮಾಡಿ.

** ಮಕರ ರಾಶಿ :
ಇಂದು ಮಕರ ರಾಶಿಯವರ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಕೆಲವು ಏರಿಳಿತಗಳಿರಬಹುದು. ದಂಪತಿಗಳ ನಡುವೆ ಇರುವ ಕೆಲವು ಸಮಸ್ಯೆಗಳು ಇಂದು ಪರಿಹಾರವಾಗಬಹುದು. ವೃತ್ತಿಪರ ಜೀವನದಲ್ಲಿ ಕೆಲವು ಏರಿಳಿತಗಳು ಕಂಡುಬರಬಹುದು. ನಿಮಗೆ ಇಂದು ಹಣಕಾಸಿನ ಲಾಭವಿದೆ. ಆದರೆ ನೀವು ನಿಮ್ಮ ಹಣವನ್ನು ವ್ಯರ್ಥವಾಗಿ ಖರ್ಚು ಮಾಡುವುದನ್ನು ತಪ್ಪಿಸಬೇಕು.

** ಕುಂಭ ರಾಶಿ :
ಇಂದು ನಿಮ್ಮ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗಬಹುದು. ಧನ ಲಾಭವಿದೆ, ಆದರೆ ವಾಹನಕ್ಕಾಗಿ ಹಣವನ್ನು ಖರ್ಚು ಮಾಡಬೇಕಾಗಬಹುದು. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಕೆಲಸದಲ್ಲಿ ನೀವು ಶುಭ ಫಲಿತಾಂಶಗಳನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಲಭ್ಯವಿದೆ. ಇಂದು, ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಎದುರಾಗಬಹುದು. ಅನಗತ್ಯ ವಾದಗಳನ್ನು ತಪ್ಪಿಸಿ.

** ಮೀನ ರಾಶಿ :
ಇಂದು ನಿಮಗೆ ಬಹಳ ಶುಭ ದಿನವಾಗಲಿದೆ. ಹಳೆಯ ಸ್ನೇಹಿತರನ್ನು ಭೇಟಿ ಮಾಡಬಹುದು. ನಿಮ್ಮ ಕೆಲಸದಲ್ಲಿನ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ಇಂದು ನಿಮ್ಮ ಮನಸ್ಸು ಕೆಲವು ಅನಗತ್ಯ ಭಯದಿಂದ ತೊಂದರೆಗೊಳಗಾಗಬಹುದು. ಸಕಾರಾತ್ಮಕ ಮನಸ್ಥಿತಿಯೊಂದಿಗೆ ಎಲ್ಲಾ ಕಾರ್ಯಗಳನ್ನು ಪೂರ್ಣಗೊಳಿಸಿ ಮತ್ತು ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಶ್ರಮಿಸಿ.

Categories
ತೀರ್ಥಹಳ್ಳಿ

ನ.10ಕ್ಕೆ ತೀರ್ಥಹಳ್ಳಿಯಲ್ಲಿ ಡಾನ್ಸ್ ಹಬ್ಬ!

ನ.10ಕ್ಕೆ ತೀರ್ಥಹಳ್ಳಿಯಲ್ಲಿ ಡಾನ್ಸ್ ಹಬ್ಬ!
– ಡ್ಯಾನ್ಸ್ ಪ್ಯಾಲೇಸ್ ತೀರ್ಥಹಳ್ಳಿ ವತಿಯಿಂದ ಆಯೋಜನೆ.
– ವರ್ಲ್ಡ್ ಡ್ಯಾನ್ಸ್ ಸೆಲೆಬ್ರೇಶನ್ 2024-25
– ದೇಶ ವಿದೇಶದ ಪ್ರಸಿದ್ಧ ಡ್ಯಾನ್ಸ್ ಕಲಾವಿದರ ಸಮಾಗಮ
– ಮಲೆನಾಡಲ್ಲಿ ಮೊದಲ ಬಾರಿಗೆ ಪ್ರಯೋಗ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಡ್ಯಾನ್ಸ್ ಪ್ಯಾಲೇಸ್ ಅಕಾಡೆಮಿ ಇವರ ಸಹಯೋಗದಲ್ಲಿ ವರ್ಲ್ಡ್ ಡ್ಯಾನ್ಸ್ ಸೆಲೆಬ್ರೇಶನ್ ನವೆಂಬರ್ 10ನೇ ತಾರೀಕು ಭಾನುವಾರ ಸಂಜೆ 6.00ಕ್ಕೆ ಯು.ಆರ್.ಅನಂತಮೂರ್ತಿ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ.
ಡ್ಯಾನ್ಸ್ ಪ್ಯಾಲೇಸ್ ಅಕಾಡೆಮಿ ಮುಖ್ಯಸ್ಥ ಭರತ್ ಅವರ ಕನಸಿನ ಕೂಸು ಈ ಕಾರ್ಯಕ್ರಮ. ಜತೆಗೆ ರಾಜ್ಯದಲ್ಲೇ ಇಂತಹ ಕಾರ್ಯಕ್ರಮ ಎಲ್ಲೂ ನಡೆದಿಲ್ಲ. ದೇಶ ವಿದೇಶದ ನೃತ್ಯಗಳು, ದೇಶದ ಪ್ರಸಿದ್ಧ ಡ್ಯಾನ್ಸ್ ತಾರೆಯರು ಈ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಲಿದ್ದಾರೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗರ್ತಿಕೆರೆ ರಾಘಣ್ಣ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಭರತ್ ವಡೆಗದ್ದೆ ಡ್ಯಾನ್ಸ್ ಪ್ಯಾಲೇಸ್ ಅಕಾಡೆಮಿ ಮಾಲೀಕರು ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ ಗೌಡರು, ವಿ.ಟಿ ರತ್ನಾಕರ್, ರೆಹಮತ್ ಉಲ್ಲಾ ಅಸಾದಿ, ಸಿರಿಬೈಲ್ ಧರ್ಮೇಶ್, ಸುರೇಶ್ ಕಂಪನಗದ್ದೆ, ಇಬ್ರಾಹಿಂ ಶರೀಫ್, ಗಜಾನನ ವಾಮನ ಸುತಾರ, ಪ್ರದೀಪ್ ಕುಮಾರ್ ಮತ್ತು ಕಟ್ಟೆ ಕರುಣ್ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದಾರೆ. ವರ್ಡ್ ಡ್ಯಾನ್ಸ್ ಸೆಲೆಬ್ರೇಶನ್ ಸೆಲೆಬ್ರಿಟಿಯಲ್ಲಿ ನೃತ್ಯ ನಿರ್ದೇಶಕರು ಮತ್ತು ಪ್ರಸಿದ್ಧ ನಟರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರುದ್ರ ಮಾಸ್ಟರ್, ಪವನ್ ಮಾಸ್ಟರ್, ತಾರಕ್ ಮಾಸ್ಟರ್, ಹುಲಿ ಕಾರ್ತಿಕ್, ವಿಕಾಸ್ ಉತಯ್ಯ, ರಾಧಾ ಭಗವತಿ, ಅಭಿಜಿತ್ ತೀರ್ಥಹಳ್ಳಿ ಇವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 20 ವಿಶಿಷ್ಟ ನೃತ್ಯ ಪ್ರದರ್ಶನ ಹಾಗೂ ಲೈವ್ ಬ್ಯಾಂಡ್ ಇನ್ಸ್ಟ್ರುಮೆಂಟಲ್ ಮ್ಯೂಸಿಕ್ ನೊಂದಿಗೆ ಜನರನ್ನ ಮನರಂಜನೆ ನೀಡಲಿದ್ದಾರೆ. ಇದು ಅದ್ದೂರಿ ಡ್ಯಾನ್ಸ್ ಕಾರ್ಯಕ್ರಮ ಆಗಿದ್ದು ಪ್ರವೇಶ ಉಚಿತವಾಗಿರಲಿದೆ. ಸರ್ವರನ್ನು ಅಯೋಜಕರು ಸ್ವಾಗತಿಸಿದ್ದಾರೆ.

Categories
ಉಡುಪಿ

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಮಾದರಿ ದೀಪಾವಳಿ!

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಮಾದರಿ ದೀಪಾವಳಿ!
– ಹೊಸ ಬೆಳಕು ಆಶ್ರಮವಾಸಿಗಳೊಂದಿಗೆ ದೀಪಾವಳಿ ಆಚರಣೆ
– ಆಶ್ರಮ ವಾಸಿಗಳ ಜತೆಗೆ ಪಟಾಕಿ ಸಿಡಿಸಿ ಸಂಭ್ರಮ

NAMMUR EXPRESS NEWS
ಕಾರ್ಕಳ: ದೀಪಾವಳಿ ಬೆಳಕಿನ ಹಬ್ಬ. ಎಲ್ಲರ ಮನೆಯಲ್ಲಿ ಹಬ್ಬ ಆಚರಣೆಯಂತೆ ಕಾರ್ಕಳದ ಹೊಸ ಬೆಳಕು ಆಶ್ರಮವಾಸಿಗಳೊಂದಿಗೆ ಬಿಜೆಪಿ ಮಹಿಳಾ ಪ್ರಮುಖರು ದೀಪಾವಳಿ ಆಚರಣೆ ಮೂಲಕ ಮಾದರಿಯಾದರು.
ದೀಪಾವಳಿ ಹಬ್ಬದ ಪ್ರಯುಕ್ತ ಹಬ್ಬದ ವಿಶೇಷ ಖಾದ್ಯ ಅರಿಶಿನ ಎಲೆ ಸಿಹಿ ಕಡುಬನ್ನು ಮಹಿಳಾ ಮೋರ್ಚಾ ಸದಸ್ಯರು ಮನೆಮನೆಗಳಲ್ಲಿ ತಯಾರಿಸಿ ಆಶ್ರಮ ವಾಸಿಗಳಿಗೆ ನೀಡಿ ಸಹಭೋಜನದಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಕತೆ, ಕವನ, ಬರಹಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಆಶ್ರಮವಾಸಿ ಆಗಿರುವ ಪ್ರಕಾಶ್ ಪಡಿಯಾರ್ ಅವರನ್ನು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಹಿಳಾ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು. ಕ್ಷೇತ್ರಧ್ಯಕ್ಷರಾದ ನವೀನ್ ನಾಯಕ್, ರವೀಂದ್ರ ಕುಮಾರ್, ವಿಕ್ರಂ ಹೆಗ್ಡೆ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಮಹಿಳಾ ಮೋರ್ಚಾ ಕಾರ್ಕಳದ ಅಧ್ಯಕ್ಷರಾದ ವಿನಯ ಡಿ ಬಂಗೇರ, ಜಿಲ್ಲಾ ಉಪಾಧ್ಯಕ್ಷರಾದ ಮಾಲಿನಿ ಜೆ ಶೆಟ್ಟಿ , ಕಾರ್ಕಳ ಮಹಿಳಾ ಮೋರ್ಚಾಪ್ರಧಾನ ಕಾರ್ಯದರ್ಶಿ ವಿನುತ ಆಚಾರ್ಯ , ಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ಮಮತಾ ಸುವರ್ಣ, ವಾಣಿ ಶೆಟ್ಟಿ, ಪದಾಧಿಕಾರಿಗಳಾದ ಅಮೃತ ಪ್ರಭು, ಪ್ರಮೀಳಾ ದಿನೇಶ್, ಶೋಭಾ ಶ್ರೀಧರ್ ಹಾಗೂ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

 

Categories
ಅಡಿಕೆ-ದರ

ಅಡಿಕೆ ದರ ಎಷ್ಟಿದೆ?

ಅಡಿಕೆ ದರ ಎಷ್ಟಿದೆ?
– ಅಡಿಕೆ ಬೆಲೆ ಏರಿಕೆಯೋ? ಇಳಿಕೆಯೋ?

NAMMUR EXPRESS NEWS

ಬೆಟ್ಟೆ – 49000 – 56 479

ಗೊರಬಲು – 19829- 33009

ರಾಶಿ- 37669 – 50121

ಸರಕು – 53366- 57619

Categories
ಚಿಕ್ಕಮಗಳೂರು

ಕಾಫಿನಾಡು ಪ್ರವಾಸಿ ತಾಣಗಳು 3 ದಿನ ಬಂದ್

ಕಾಫಿನಾಡು ಪ್ರವಾಸಿ ತಾಣಗಳು 3 ದಿನ ಬಂದ್
– ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ 3 ದಿನ ನಿರ್ಬಂಧ
– ನ. 9ರ ಬೆಳಿಗ್ಗೆ 6ಗಂಟೆಯಿಂದ ನ.11ರ ಬೆಳಿಗ್ಗೆ 6 ಗಂಟೆಯವರೆಗೆ ಬಂದ್

NAMMUR EXPRESS NEWS
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಇದೀಗ ಆರಂಭವಾಗಿದೆ. ದತ್ತಮಾಲಾಧಾರಿಗಳು 7 ದಿನಗಳ ಕಾಲ ವ್ರತದಲ್ಲಿದ್ದು, ನವೆಂಬರ್ 10ರಂದು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಚಿಕ್ಕಮಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಿದೆ. ನವೆಂಬರ್ 10 ರಂದು ದತ್ತಪೀಠದಲ್ಲಿ ಹೋಮ-ಹವನ, ವಿಶೇಷ ಪೂಜೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ನವೆಂಬರ್ 9ರ ಬೆಳಿಗ್ಗೆ 6ಗಂಟೆಯಿಂದ ನವೆಂಬರ್ 11ರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ನವೆಂಬರ್ 10ರಂದು ದತ್ತಾಮಾಲಾಧಾರಿಗಳು ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನಿಡಲಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಲಾಧಾರಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕರಿ ಮೀನಾ ನಾಗರಾಜ್ ಪ್ರವಾಸಿ ತಾಣಗಳ ಭೇಟಿಗೆ ನಿರ್ಬಂಧ ವಿಧಿಸಿದ್ದಾರೆ.

Categories
ಮಲ್ನಾಡ್

ಟಾಪ್ ನ್ಯೂಸ್ ಮಲ್ನಾಡ್

ಟಾಪ್ ನ್ಯೂಸ್ ಮಲ್ನಾಡ್

– ತೀರ್ಥಹಳ್ಳಿ ತುಂಗಾ ನದಿಯಲ್ಲಿ ತೇಲಿ ಬಂದ ಶವ!
– ಸಾಗರ: ಮನೆ ಮೇಲೆ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಹಾನಿ
– ಶಿವಮೊಗ್ಗ : 4 ಕೆ.ಜಿಗೂ ಹೆಚ್ಚು ಗಾಂಜಾ ವಶ: ಆರೋಪಿಗಳು ಅರೆಸ್ಟ್
– ತೀರ್ಥಹಳ್ಳಿ : ವೈದ್ಯರು ಮಾಡಿದ ಎಡವಟ್ಟಿನಿಂದ ರೋಗಿಗೆ ಕುತ್ತು
– ತೀರ್ಥಹಳ್ಳಿ: ಟರ್ಪನ್ ಟಯಿಲ್ ಕುಡಿದ ಮಗು: ಅಪಾಯದಿಂದ ಪಾರು

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯಲ್ಲಿ ಮಂಗಳವಾರ ಮಧ್ಯಾಹ್ನ 3:30 ರ ಸಮಯದಲ್ಲಿ ಮೃತದೇಹವೊಂದು ತೇಲಿ ಬಂದಿದ್ದು ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದ ಸ್ಥಳೀಯರು ನೋಡಿ ವಿಷಯ ತಿಳಿಸಿದ್ದಾರೆ. ಮೃತದೇಹವನ್ನು ಅಪರಿಚಿತ ಶವ ಎಂದು ಹೇಳಲಾಗಿದ್ದು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

– ಸಾಗರ: ಮನೆ ಮೇಲೆ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಹಾನಿ

ಸಾಗರ : ತಾಲೂಕು ತುಮರಿ ಸಮೀಪದ ಕುದರೂರು ಗ್ರಾಮದ ಬೆಳಮಕ್ಕಿ ಯಲ್ಲಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ರೈತರೊಬ್ಬರ ಮನೆ ಮೇಲೆ ಮರ ಬಿದ್ದು ಸಾಕಷ್ಟು ಹಾನಿಯಾಗಿದೆ. ಚೌಡ ನಾಯ್ಕ ಅವರ ಮನೆಯ ಮೇಲೆ ಬೃಹತ್ ಗಾತ್ರದ ತೆಂಗಿನಮರ ಬಿದ್ದು ಮನೆಯ ಹೆಂಚುಗಳು ಪುಡಿಯಾಗಿವೆ. ಮರದ ನಾಟ ಮುರಿದಿವೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಕುಟುಂಬ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಮರವನ್ನು ತೆರವು ಮಾಡಲಾಗಿದೆ. ಕುದರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಗಣಪತಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

– ಶಿವಮೊಗ್ಗ : 4 ಕೆ.ಜಿಗೂ ಹೆಚ್ಚು ಗಾಂಜಾ ವಶಕ್ಕೆ ಆರೋಪಿಗಳ ಬಂಧನ

ಶಿವಮೊಗ್ಗ : ಭದ್ರಾವತಿ ಬಿಳಕಿ ಕ್ರಾಸ್ ಹತ್ತಿರ ಟ್ರೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಅವರಿಂದ 4 ಕೆ.ಜಿ 461 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಆರೋಪಿತರಾದ ಮೊಹಮ್ಮದ್ ಅಕ್ರಂ ಮತ್ತು ಅಬ್ದುಲ್ ರಜಾಕ್ ಅವರೇ ಬಂಧಿತ ಆರೋಪಿಗಳಾಗಿದ್ದು, ಅವರಿಂದ 1,40,000 ರೂಗಳ 4 ಕೆಜಿ 461 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆದಿದ್ದಾರೆ.

– ಟರ್ಪನ್ ಟಯಿಲ್ ಕುಡಿದ ಮಗು: ಅಪಾಯದಿಂದ ಪಾರು

ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ನಿವಾಸಿ ಒಬ್ಬರ 5 ವರ್ಷದ ಮಗು ನೀರು ಎಂದು ಭಾವಿಸಿ ಹಬ್ಬದ ಬಣ್ಣಕ್ಕೆ ಮಿಕ್ಸ್ ಮಾಡಲು ತಂದಿದ್ದ ಟರ್ಪನ್ ಟಯಿಲ್ ಆಕಸ್ಮಿಕವಾಗಿ‌ ಕುಡಿದು ತಕ್ಷಣಕ್ಕೆ ಚಿಕಿತ್ಸೆ ಸಿಕ್ಕ ಕಾರಣ ಮಗು ಅಪಾಯದಿಂದ ಪಾರಾಗಿದ್ದಾರೆ. ಜೆಸಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿ ಶಿವಮೊಗ್ಗ ಸರ್ಜಿ ಆಸ್ಪತ್ರೆಯಲ್ಲಿ ಈಗ ಮಗು ಆರೋಗ್ಯವಾಗಿದೆ. ಪೋಷಕರು ಹಬ್ಬದ ಸಂದರ್ಭದಲ್ಲಿ ಟರ್ಪನ್ ಟಯಿಲ್ ತಂದಿದ್ದರು ಎನ್ನಲಾಗಿದೆ. ಕುರುವಳ್ಳಿ ನಾಗರಾಜ್ ಮತ್ತು ಸ್ನೇಹಿತರು ಚಿಕಿತ್ಸೆಗಾಗಿ ಸಹಾಯ ಮಾಡಿದ್ದರು.

Categories
ಕರಾವಳಿ

ಹೆಬ್ರಿ ಅಮೃತ ಭಾರತಿಯಲ್ಲಿ ರಾಜ್ಯೋತ್ಸವ ಸಂಭ್ರಮ

ಹೆಬ್ರಿ ಅಮೃತ ಭಾರತಿಯಲ್ಲಿ ರಾಜ್ಯೋತ್ಸವ ಸಂಭ್ರಮ
– ಪುಟಾಣಿಗಳಿಂದ ಕನ್ನಡ ನಾಡು ನುಡಿಯ ನೃತ್ಯ ಪ್ರದರ್ಶನ
– ಶಿಕ್ಷಕರು, ಮಕ್ಕಳಿಂದ ಕನ್ನದಾಂಬೆಗೆ ನಮನ

NAMMUR EXPRESS NEWS
ಹೆಬ್ರಿ: ಹೆಬ್ರಿ ಪಾಂಡುರಂಗ ರಮಣ ನಾಯಕ್ ಸೇವಾಸಂಗಮ ಅಮೃತಭಾರತಿ ಶಿಶುಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಮೃತಭಾರತಿ ವಿದ್ಯಾಲಯದ ಕನ್ನಡ ಶಿಕ್ಷಕ ಮಹೇಶ್ ಹೈಕಾಡಿ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯ , ಸಂಸ್ಕೃತಿ , ಕಲೆಯೊಂದಿಗೆ ಸಮೃದ್ಧವಾಗಿದೆ ಎಂದು ನುಡಿದರು. ಅಮೃತ ಭಾರತಿ ಸೇವಾಸಂಗಮ ಶಿಶುಮಂದಿರದ ಸಭಾಗೃಹದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತಮಾತೆ ಮತ್ತು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಶಿಶು ಮಂದಿರದ ಮುಖ್ಯ ಶಿಕ್ಷಕಿ ಪ್ರತಿಮಾ ಹಾಗೂ 41 ಪುಟಾಣಿಗಳು ಉಪಸ್ಥಿತರಿದ್ದರು. ಪುಟಾಣಿಗಳಿಂದ ಕನ್ನಡ ನಾಡು ನುಡಿಯ ಕುರಿತಾದ ನೃತ್ಯ ಪ್ರದರ್ಶನ ನಡೆಯಿತು. ಮಾತಾಜಿಯವರಾದ ಅನಿತಾ ಸ್ವಾಗತಿಸಿ, ಮಲ್ಲಿಕಾ ವಂದಿಸಿದರು.

Categories
ರಾಜ್ಯ

ಕುಮಾರಸ್ವಾಮಿ, ನಿಖಿಲ್ ವಿರುದ್ದ ಕೇಸ್!

ಕುಮಾರಸ್ವಾಮಿ, ನಿಖಿಲ್ ವಿರುದ್ದ ಕೇಸ್!
– ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು
– ಯಾದಗಿರಿ : ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕವಾಗಿರುವ ರೌಡಿಶೀಟರ್

NAMMUR EXPRESS NEWS
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ಚನ್ನಪಟ್ಟಣ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ತಮಗೆ ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಹೆಚ್‌.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು. ಈ ಬಗ್ಗೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ತನಿಖೆ ವಿಚಾರಣೆ ನಂತರ ಪತ್ರಿಕಾಗೋಷ್ಠಿ ನಡೆಸಿ ಎಡಿಜಿಪಿ ವಿರುದ್ದ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು. ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದರು. ಹೀಗಾಗಿ ಎಡಿಜಿಪಿ ಚಂದ್ರಶೇಖರ್ ಕೋರ್ಟ್‌ನ ಮೊರೆ ಹೋಗಿದ್ದರು. ಕೋರ್ಟ್ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲಾಗಿದೆ

– ಯಾದಗಿರಿ : ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ರೌಡಿಶೀಟರ್

ಯಾದಗಿರಿ: ರೌಡಿಶೀಟರ್ ಓರ್ವ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಸರ್ಕಾರಿ ಶಾಲೆ ಅತಿಥಿ ಶಿಕ್ಷಕನಾಗಿ ರೌಡಿಶೀಟರ್ ಭಾಗಪ್ಪ ಎಂಬಾತ ನೇಮಕಗೊಂಡಿದ್ದು, ಕಳೆದ 5 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾನೆ. ಹಿಂದಿ ಭಾಷೆ ಶಿಕ್ಷಕನಾಗಿದ್ದಾನೆ. ರೌಡಿಶೀಟರ್ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿದ್ದರೂ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ರೌಡಿಶೀಟರ್ ಶಿಕ್ಷಕನ ಉಪಟಳಕ್ಕೆ ಬೇಸತ್ತು ಉಳಿದ ಶಿಕ್ಷಕರು ಬೇರೆಡೆ ವರ್ಗಾವಣೆ ಮಾಡಿಸಿಕೊಂಡು ಹೋಗುತ್ತಿದ್ದಾರೆ. 2017ರಲ್ಲಿ ಭಾಗಪ್ಪ ವಿರುದ್ಧ ರೌಡಿಶೀಟರ್ ಓಪನ್ ಆಗಿದೆ. ಆದರೂ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾನೆ. ಶಾಲೆಗೆ ಕುಡಿದು ಬಂದು ವಿದ್ಯಾರ್ಥಿಗಳು, ಶಿಕ್ಷಕರ ಜೊತೆ ಜಗಳ ಮಾಡುವುದು, ಅಸಭ್ಯವಾಗಿ ವರ್ತಿಸುವುದು ಮಾಡುತ್ತಿದ್ದಾನೆ. ಈ ಬಗ್ಗೆ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕ ಶಿವಪ್ಪ ಎಂಬುವವರು ಯಾದಗಿರಿ ಡಿಸಿಗೆ ದೂರು ನೀಡಿದ್ದು, ಭಾಗಪ್ಪನನ್ನು ವಜಾಗೊಳಿಸುವಂತೆ ಮನವಿ ಮಾಡಿದ್ದಾರೆ.

– ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು

ಬೆಳಗಾವಿ: ಬೆಳಗಾವಿ ತಾಲ್ಲೂಕು ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ತಿಳಿದಿದ್ದೆ.
ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಸಿ ಆಗಿದ್ದ ರುದ್ರೇಶ ಯಾದಣ್ಣವರ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಸೋಮವಾರ ರಾತ್ರಿ ಆಗಿರಬಹುದು. ಮಂಗಳವಾರ ಬೆಳಿಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಬಂದ ಮೇಲೆಯೇ ವಿಷಯ ಗೊತ್ತಾಗಿದೆ. ಮೇಲಧಿಕಾರಿಗಳ ಕಿರುಕುಳ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಆರೋಪಿಸಿ ತಮ್ಮ ಮೊಬೈಲ್ನಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.