Categories
ಚಿಕ್ಕಮಗಳೂರು

ಡಿ.28 ರಂದು ಚಿಕ್ಕಮಗಳೂರಲ್ಲಿ ಕರೆಂಟ್ ಇರಲ್ಲ..

ಡಿ.28 ರಂದು ಚಿಕ್ಕಮಗಳೂರಲ್ಲಿ ಕರೆಂಟ್ ಇರಲ್ಲ..
– ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರೆಂಟ್ ಇಲ್ಲ
– ಪ್ರಕಟಣೆ ಹೊರಡಿಸಿದ ಚಿಕ್ಕಮಗಳೂರು ಮೆಸ್ಕಾಂ

NAMMUR EXPRESS NEWS
ಚಿಕ್ಕಮಗಳೂರು: ವಿದ್ಯುತ್ ಪರಿವರ್ತಕ ಕೇಂದ್ರವನ್ನು ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಹಲವೆಡೆ ಡಿ.28ರಂದು ವಿದ್ಯುತ್‌ ವ್ಯತ್ಯಯವಾಗಲಿದೆ.
ನಗರ ಉಪವಿಭಾಗದ ಘಟಕ-1, 2, 3 ಮತ್ತು ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಗೌರಿಕಾಲುವೆ, ಉಪ್ಪಳ್ಳಿ, ವಿಜಯಪುರ, ಐ.ಜಿ. ರಸ್ತೆ, ಬಾರ್‌ಲೈನ್ ರಸ್ತೆ, ಮಧುವನ ಲೇಔಟ್, ಕಲ್ಲುದೊಡ್ಡಿ, ನೆಹರು ನಗರ, ಮೂಗ್ತಿಹಳ್ಳಿ, ಮಲ್ಲಂದೂರು, ಡಿಸಿ, ಎಸ್‌ಪಿ ಕಚೇರಿ, ಬೋಳರಾಮೇಶ್ವರ ದೇವಸ್ಥಾನ, ಶಿರವಾಸೆ, ಇಂದಾವರ, ಜೋಳ್‌ದಾಳ್‌, ಆವತಿ, ಬಸವನಹಳ್ಳಿ ಮುಖ್ಯ ರಸ್ತೆ, ಆರ್‌ಜಿ ರಸ್ತೆ, ಕೆಎಂ. ರಸ್ತೆ ಸುತ್ತ ಮುತ್ತಲಿನ ಪ್ರದೇಶಗಳಿಗೆ ಡಿ.28ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Categories
ಚಿಕ್ಕಮಗಳೂರು

ಅಂತರ್ ಜಿಲ್ಲಾ ಕಳ್ಳರ ಬಂಧನ..

ಅಂತರ್ ಜಿಲ್ಲಾ ಕಳ್ಳರ ಬಂಧನ..
– ಬಾಳೆಹೊನ್ನೂರು ಪೋಲೀಸರ ಕಾರ್ಯಾಚರಣೆ
– ಬಾಳೆಹೊನ್ನೂರಿನಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣ
– ಬಂಧಿತರಿಂದ 4,10,985/- ರೂ. ಮೌಲ್ಯದ ವಸ್ತುಗಳು ವಶ

NAMMUR EXPRESS NEWS
ಬಾಳೆಹೊನ್ನೂರು: ಡಿ.18 ರಂದು ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದ್ದ ಅಂಗಡಿಗಳ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಬಾಳೆಹೊನ್ನೂರು ಪೋಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡಿ.18 ರ ರಾತ್ರಿ ಸಮಯದಲ್ಲಿ ನಡೆದಿದ್ದ ಕಳ್ಳತನದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೋಲೀಸರು ಆರೋಪಿಗಳಾದ ಕರುಣ ಆರ್ ಅರ್ಮನ್ ಮಾಲಿಕ್(25),ಹಸೈನ್ (22) ಎಂಬುವವರನ್ನು ಬಂಧಿಸಿದ್ದು ಇವರ ತನಿಖೆಯ ನಂತರ ಇವರು ಅಂತರ್ ಜಿಲ್ಲಾ ಕಳ್ಳರೆಂದು ತಿಳಿದಿದೆ. ಬಂಧಿತರಿದ
1] Vinsta ಕಂಪನಿಯ ಬಿಳಿ ಬಣ್ಣದ electric bater Heater ( ಅಂದಾಜು ಬೆಲೆ 5295 ರೂಗಳು)
2] Pigeon ಕಂಪನಿಯ ಸಿಮೆಂಟ್ ಬಣ್ಣದ Titan Iron Box ( ಅಂದಾಜು ಬೆಲೆ 1995 ರೂಗಳು)
3] Pigeon ಕಂಪನಿಯ Induction Cook Stove ( ಅಂದಾಜು ಬೆಲೆ 3195 ರೂಗಳು)
4] Samsong ಕಂಪನಿಯ ಹೋಂ ಥಿಯೇಟರ್ ( ಅಂದಾಜು ಬೆಲೆ 6500ರೂ ಗಳು)
5] LG ಕಂಪನಿಯ 32 ಇಂಚಿನ ಕಪ್ಪು ಬಣ್ಣದ ಟಿವಿ ( ಅಂದಾಜು ಬೆಲೆ 20000 ರೂಗಳು)
6] 500 ರೂ ಮುಖ ಬೆಲೆಯ 30 ನೋಟುಗಳು ಒಟ್ಟು 15000 ರೂಗಳು
7] Casio ಕಂಪನಿಯ ಕಪ್ಪು ಬಣ್ಣದ ಒಂದು ವಾಚ್ ( ಅಂದಾಜು ಬೆಲೆ 9000ರೂಗಳು).
8] ಕೆಎ-51 ಎಂ 3476 ನಂಬರಿನ ಮಾರುತಿ ಸುಜುಕಿ ಕಂಪನಿಯ ಸ್ಕ್ರಿಫ್ಟ್ ಕಾರು ( ಅಂದಾಜು ಬೆಲೆ 3,50,000 ರೂಗಳು)
ಒಟ್ಟು 4,10,985 /- ರೂ ಬೆಲೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣ ಭೇಧಿಸಿ ಆರೋಪಿಗಳನ್ನು ಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ರವರು ಇವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತಾರೆ.

Categories
ಉಡುಪಿ

ಹಾಸ್ಯನಟ ನವೀನ್ ಪಡೀಲ್‌ಗೆ ವಿಶ್ವಪ್ರತಿಭಾ ಪುರಸ್ಕಾರ-2025..!

ಹಾಸ್ಯನಟ ನವೀನ್ ಪಡೀಲ್‌ಗೆ ವಿಶ್ವಪ್ರತಿಭಾ ಪುರಸ್ಕಾರ-2025..!
– ಕರಾವಳಿಯ ಹೆಮ್ಮೆಯ ಹಾಸ್ಯ ನಟ
– ತುಳು,ಕನ್ನಡ ಚಲನಚಿತ್ರ,ರಿಯಾಲಿಟಿ ಶೋ‌ಗಳಲ್ಲಿ ಅಭಿನಯ

NAMMUR EXPRESS NEWS
ಉಡುಪಿ: ಕರಾವಳಿಯ ಹೆಮ್ಮೆಯ ಕಲಾವಿದ ನವೀನ್ ಡಿ ಪಡೀಲ್‌ರವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025 ಪ್ರಶಸ್ತಿ ಲಭಿಸಿದೆ. ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ಈ ಪ್ರಶಸ್ತಿ ಲಭಿಸಿದ್ದು, ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಇದೇ ಬರುವ ಫೆಬ್ರವರಿಯಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರಧಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿದ್ದಾರೆ.

Categories
ಕರಾವಳಿ

ಕಾಡಿನ ದಾರಿ ಹಿಡಿದ ಕಾಡಾನೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!!?

ಕಾಡಿನ ದಾರಿ ಹಿಡಿದ ಕಾಡಾನೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!!?
– ಹಲವು ದಿನಗಳಿಂದ ಜನರು ನಿದ್ದೆಗೆಡಿಸಿದ್ದ ಕಾಡಾನೆ
– ಪರಿಶೀಲನೆ ನಡೆಸಿ ಧೈರ್ಯ ತುಂಬಿದ ಅಧಿಕಾರಿಗಳು

NAMMUR EXPRESS NEWS
ಪುತ್ತೂರು: ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಕಾಡಾನೆ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಕಾಡನೆಯ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.
ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಕೃಷಿ ಬೆಳೆ ಹಾನಿಯುಂಟು ಮಾಡುವ ಮೂಲಕ ಕೃಷಿಕರ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಒಂಟಿ ಸಲಗ ನಿನ್ನೆ ಸಂಜೆ ವೇಳೆ ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡು ಪರಿಸರದಲ್ಲಿ ಕಾಣಿಸಿಕೊಂಡಿದೆ. ಪಾಲ್ತಾಡು ಶಾಲೆ ಬಳಿಯಿಂದಾಗಿ ಆನೆ ಉಪ್ಪಳಿಗೆ ಭಾಗಕ್ಕೆ ತನ್ನ ಪ್ರಯಾಣ ಬೆಳೆಸಿದೆ ಎಂದು ಈ ಭಾಗದ ಗ್ರಾಮಸ್ಥರು ತಿಳಿಸಿದ್ದಾರೆ. ಆನೆ ಇರುವ ಪ್ರದೇಶಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

Categories
ರಾಜ್ಯ

ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ಏರ್ಪೋರ್ಟ್!

ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ಏರ್ಪೋರ್ಟ್!
– ತುರ್ತು ಸ್ಪಂದನೆ ಉದ್ದೇಶದಿಂದ ಸರ್ಕಾರ ಮಹತ್ವದ ಯೋಜನೆ
– ಮಲೆನಾಡು, ಕರಾವಳಿ ಪ್ರವಾಸೋದ್ಯಮಕ್ಕೆ ಅನುಕೂಲ

NAMMUR EXPRESS NEWS
ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ ನಿಲ್ದಾಣಗಳು ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಏ‌ರ್ ಸ್ಟ್ರಿಪ್ ನಿರ್ಮಾಣಕ್ಕೆ ಕ್ರಮ ಕೈಗೊಂಡಿದೆ.ರಾಜ್ಯದ ಮೂರು ಕಡೆ ಏರ್ ಸ್ಟ್ರಿಪ್ ಸ್ಥಾಪಿಸಲು ಯೋಜನೆ ರೂಪಿಸಿದೆ. ಸಾರ್ವಜನಿಕ ವಾಯು ಸೇವೆಯನ್ನು ಬಳಸದೆ ಖಾಸಗಿ ಅಥವಾ ಸರ್ಕಾರಿ ವಿಮಾನಗಳನ್ನು ಇಳಿಸುವಿಕೆ ಮತ್ತು ಹಾರಾಟಕ್ಕೆ ಬಳಕೆಯಾಗುವಂತೆ ರಾಜ್ಯದ ಮೂರು ಕಡೆಯ ಏರ್ ಸ್ಟ್ರಿಪ್ ನಿರ್ಮಾಣ ಮಾಡಲು 2023 -24ನೇ ರಾಜ್ಯ ಸಾಲಿನ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದೇ ಚಿಕ್ಕಮಗಳೂರು, ಕೊಡಗಿನಲ್ಲಿ ಏರ್ ಸ್ಟ್ರಿಪ್ ಜಾಗ ಗುರುತಿಸಲಾಗಿದೆ, ಧರ್ಮಸ್ಥಳದಲ್ಲಿ ಜಾಗ ಗುರುತಿಸಲಾಗಿದೆ.

Categories
ತೀರ್ಥಹಳ್ಳಿ

ಡಿ. 29ರಂದು ಕುಪ್ಪಳ್ಳಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ!

ಡಿ. 29ರಂದು ಕುಪ್ಪಳ್ಳಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ!
– ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನದ ಕಾರಣ ಶೋಕ ಆಚರಣೆ: ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರದ್ದು
– ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಭೇಟಿ ಕೂಡ ರದ್ದು
– ಕುವೆಂಪು ಸಮಾಧಿಗೆ ನಮನ: ಪ್ರತಿಷ್ಠಾನದ ಮಾಹಿತಿ

NAMMUR EXPRESS NEWS
ತೀರ್ಥಹಳ್ಳಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ರಾಷ್ಟಕವಿ ಕುವೆಂಪು ಪ್ರತಿಷ್ಟಾನ ಕುಪ್ಪಳಿ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಅಂಗವಾಗಿ ಡಿ. 29 ರಂದು ಬೆಳಗ್ಗೆ 10 ಗಂಟೆಗೆ ಕವಿಶೈಲದಲ್ಲಿ ಕವಿನಮನ ಹಾಗೂ ಬೆಳಗ್ಗೆ 11 ಗಂಟೆಗೆ ಕುಪ್ಪಳಿಯ ಹೇಮಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನದ ಕಾರಣ ಶೋಕ ಆಚರಣೆ ಇರುವುದರಿಂದ ಸಾಂಸ್ಕೃತಿಕ ಹಾಗು ಸಭಾ ಕಾರ್ಯಕ್ರಮ ರದ್ದಾಗಿದೆ. ಉಪಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಭೇಟಿ ಕೂಡ ನಿಗದಿಯಾಗಿತ್ತು ಅದು ಕೂಡ ರದ್ದಾಗಿದೆ. ಕಾರ್ಯಕ್ರಮಗಳು ಯಾವುದು ಇರುವುದಿಲ್ಲ ಕುಪ್ಪಳ್ಳಿಯಲ್ಲಿ ಕುವೆಂಪು ಅವರ ಸಮಾಧಿಗೆ ನಮನ ಸಲ್ಲಿಸುವ ಕಾರ್ಯಕ್ರಮ ಇರುತ್ತದೆ ಎಂದು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.

Categories
ತೀರ್ಥಹಳ್ಳಿ

ಯಡೇಹಳ್ಳಿ, ಕುಡುಮಲ್ಲಿಗೆ ಸೊಸೈಟಿ ಚುನಾವಣೆ: ದೇವರ ಎದುರು ಪ್ರಮಾಣ!

ಯಡೇಹಳ್ಳಿ, ಕುಡುಮಲ್ಲಿಗೆ ಸೊಸೈಟಿ ಚುನಾವಣೆ: ದೇವರ ಎದುರು ಪ್ರಮಾಣ!
– ಆಮಿಷ ಒಡ್ಡಲ್ಲ ಎಂದು ಯಡೇಹಳ್ಳಿ ಸೊಸೈಟಿ ಅಭ್ಯರ್ಥಿಗಳಿಂದ ಮಾರಿಕಾಂಬೆ ಮುಂದೆ ಪ್ರಮಾಣ
– ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಬೆಂಬಲದೊಂದಿಗೆ ಎರಡು ತಂಡಗಳ 22 ಮಂದಿ ಸ್ಪರ್ಧೆ

NAMMUR EXPRESS NEWS
ತೀರ್ಥಹಳ್ಳಿ: ಯಡೇಹಳ್ಳಿ ಸೊಸೈಟಿಯ ಆಡಳಿತ ಮಂಡಳಿಗೆ ಇದೇ ಡಿಸೆಂಬರ್ 29ರಂದು ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಬೆಂಬಲದೊಂದಿಗೆ ಎರಡು ತಂಡಗಳ 22 ಮಂದಿ ಸ್ಪರ್ಧಿಸಿದ್ದಾರೆ. ಎಲ್ಲಾ 22 ಮಂದಿ ಅಭ್ಯರ್ಥಿಗಳೂ ಡಿಸೆಂಬರ್ 26ರಂದು ತೀರ್ಥಹಳ್ಳಿ ಮಾರಿಕಾಂಬೆ ಹಾಗೂ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ಸನ್ನಿಧಿಯಲ್ಲಿ ನಾವ್ಯಾರೂ ಚುನಾವಣೆಯಲ್ಲಿ ಯಾರಿಗೂ ಹಣ-ಹೆಂಡ ಇನ್ನಿತರೆ ಯಾವುದೇ ಆಮಿಷಗಳನ್ನು ಒಡ್ಡದೆ ಚುನಾವಣೆ ನಡೆಸುವುದಾಗಿ ಪ್ರಮಾಣ ಮಾಡಿದರು. ಅಭ್ಯರ್ಥಿಗಳಾದ ಇಂದಾವರ ದಯಾನಂದ, ಇಕ್ಕೇರಿ ದಿನೇಶ್, ಬಿ.ಕೆ.ವಾದಿರಾಜ್, ನಾಡ್ತಿ ಸತೀಶ್, ಹೊನ್ನು ಕುಡಿಗೆ ಸುಂದರೇಶ್, ಇಂದಾವರ ತಮ್ಮನಾಯ್ಕ, ಕಿತ್ತನಗದ್ದೆ ಗುಂಡೂರಾವ್, ರಾಘವೇಂದ್ರ ಶೆಟ್ಟಿ ಸರೋಜ, ಬೊಬ್ಬಸರೋಜಮ್ಮ, ಗಿರೀಶ್ ಅತ್ತಿಕೊಡಿಗೆ, ಅತ್ತಿಕೊಡಿಗೆ ಕೃಷ್ಣಮೂರ್ತಿ, ನಾಗರಾಜ ಉಡುಪ, ನಾಗರಾಜ್ ಡಿ, ಪ್ರಭಾಕರ ಕೆ.ಎಲ್. ಶೇಷಾದ್ರಿ ಬಿ.ವಿ., ರಾಮಚಂದ್ರ ನಾಯ್ಕ, ರಾಜಶೇಖರ್ ಬಿ.ಜಿ., ಮಂಜಪ್ಪ ಎಸ್.ಟಿ., ಕಲಾವತಿ ಹೆಚ್.ಕೆ, ಶೈಲಶ್ರೀ ಕೆ.ಎಸ್. ಪ್ರದೀಪ್ ಪಿ.ನಾಯಕ್, ಕಾಂಗ್ರೆಸ್ ಮುಖಂಡ ತುಪ್ಪದ ಮನೆ ವಿನಾಯಕ, ಬಿಜೆಪಿ ಮುಖಂಡ ಭಾರತೀಪುರ ಮಂಜುನಾಥ್ ಹಾಜರಿದ್ದರು.

ಕುಡುಮಲ್ಲಿಗೆ ಸೊಸೈಟಿಯಲ್ಲೂ ದೇವರ ಎದುರು ಪ್ರಮಾಣ!

ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ ಸೊಸೈಟಿಯಲ್ಲೂ ಕೂಡ ಎಲ್ಲಾ ಅಭ್ಯರ್ಥಿಗಳು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚುನಾವಣೆಯಲ್ಲಿ ಹಣ ಹೆಂಡ ಹಂಚಲ್ಲ ಎಂದು ಪ್ರಮಾಣ ಮಾಡಿದರು. ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಜರಿದ್ದರು.

Categories
ರಾಷ್ಟ್ರೀಯ ವಾರ್ತೆ

ದೇಶದ ಆರ್ಥಿಕ ತಜ್ಞ, ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ!

ದೇಶದ ಆರ್ಥಿಕ ತಜ್ಞ, ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ!
– ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ
– ಎಲ್ಲೆಡೆ ಸಂತಾಪ: ಮರೆಯಾದ ದೇಶದ ಹಿರಿಯ ನಾಯಕ..!

NAMMUR EXPRESS NEWS
ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಮೂಲಕ ದೇಶದ ಮಹಾನ್ ಚೇತನ ಮರೆಯಾಗಿದೆ. ವಿಶ್ವ ಮಟ್ಟದಲ್ಲಿ ಭಾರತದ ಆರ್ಥಿಕತೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ನಾಯಕ, ಮಾಜಿ ಪ್ರಧಾನಿ ಸಿಂಗ್ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದಾಗಿದೆ.
ಎಲ್ಲೆಡೆ ಸಂತಾಪ: ಕಾಂಗ್ರೆಸ್ ನಾಯಕರು, ದೇಶದ ಮಾಜಿ ಪ್ರಧಾನಿ ನಿಧನಕ್ಕೆ ಎಲ್ಲೆಡೆ ಸಂತಾಪ ವ್ಯಕ್ತವಾಗುತ್ತಿದೆ.

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಲಕ್ಷ್ಮಿ ಕೃಪೆಯಿಂದ ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ? 

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಮೇಷ ರಾಶಿಯವರಿಗೆ ಇಂದು ಏರಿಳಿತಗಳಿಂದ ಕೂಡಿದ ದಿನವಾಗಿರುತ್ತದೆ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಅತಿಯಾದ ಕೋಪವನ್ನು ತಪ್ಪಿಸಿ. ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಮನೆಯಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ವಿಪರೀತ ಖರ್ಚುಗಳಿಂದ ಮನಸ್ಸು ತೊಂದರೆಗೊಳಗಾಗುತ್ತದೆ. ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ.

** ವೃಷಭ ರಾಶಿ :
ಇಂದು ದಿನವು ಸಾಮಾನ್ಯ ದಿನವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಕೆಲವು ಭಿನ್ನಾಭಿಪ್ರಾಯಗಳ ಲಕ್ಷಣಗಳು ಇವೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ, ಆದರೆ ವೆಚ್ಚಗಳು ಸಹ ಹೆಚ್ಚಾಗುತ್ತವೆ. ಶೈಕ್ಷಣಿಕ ಕೆಲಸದಲ್ಲಿ ಅಡಚಣೆ ಉಂಟಾಗಬಹುದು. ಬುದ್ಧಿವಂತಿಕೆಯಿಂದ ಹಣವನ್ನು ಖರ್ಚು ಮಾಡಿ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಕುಟುಂಬದಲ್ಲಿ ಅನಗತ್ಯ ವಾದ ವಿವಾದಗಳನ್ನು ತಪ್ಪಿಸಿ.

** ಮಿಥುನ ರಾಶಿ :
ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ನಿಮ್ಮ ತಾಯಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಸ್ನೇಹಿತರ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಕಠಿಣ ಪರಿಶ್ರಮದ ನಂತರವೇ ಯಶಸ್ಸು ಸಿಗುತ್ತದೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರುತ್ತದೆ. ನಿಮ್ಮ ಹೆತ್ತವರ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

** ಕರ್ಕಾಟಕ ರಾಶಿ :
ಇಂದು ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಲಭವಾಗಲಿದೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಸಂಪತ್ತಿನಲ್ಲಿ ಸಮೃದ್ಧಿ ಇರುತ್ತದೆ. ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಅಧಿಕಾರಿಗಳ ಸಹಕಾರದಿಂದ ವೃತ್ತಿ ಜೀವನದಲ್ಲಿನ ಸಮಸ್ಯೆಗಳು ಬಗೆಹರಿಯಲಿವೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

** ಸಿಂಹ ರಾಶಿ :
ಉದ್ಯೋಗದ ನಿರೀಕ್ಷೆಯಲ್ಲಿರುವ ಜನರು ಇಂದು ಸಂದರ್ಶನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ನಿಮ್ಮ ಜೀವನ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಕೋಪವನ್ನು ನಿಯಂತ್ರಿಸುವುದರಿಂದ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ನೀವು ಪೂರ್ವಜರ ಆಸ್ತಿಯನ್ನು ಪಡೆಯಬಹುದು, ಅದು ನಿಮ್ಮ ಸಂಪತ್ತನ್ನು ಹೆಚ್ಚಿಸುತ್ತದೆ. ತಂದೆಯ ಆರೋಗ್ಯದ ಕಡೆ ಗಮನ ಕೊಡಿ. ಇಂದು ನೀವು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು.

** ಕನ್ಯಾ ರಾಶಿ :
ಇಂದು ಕೆಲಸಕ್ಕಾಗಿ ಹೆಚ್ಚುವರಿ ಜವಾಬ್ದಾರಿಗಳನ್ನು ಪಡೆಯುತ್ತೀರಿ. ಕಚೇರಿಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ. ವ್ಯವಹಾರದಲ್ಲಿ ವಿಸ್ತರಣೆಯ ಪರಿಣಾಮಗಳು ಕಂಡುಬರುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಕುಟುಂಬ ಮತ್ತು ಸ್ನೇಹಿತರ ಬೆಂಬಲದಿಂದ, ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಹಳೆ ಮಿತ್ರರೊಡನೆ ಸಭೆ ನಡೆಯಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

** ತುಲಾ ರಾಶಿ :
ಇಂದು ನೀವು ಶೈಕ್ಷಣಿಕ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ. ಉದ್ಯೋಗದಲ್ಲಿರುವ ಜನರು ಮೌಲ್ಯಮಾಪನ ಅಥವಾ ಬಡ್ತಿಯನ್ನು ಪಡೆಯಬಹುದು, ಆದರೆ ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ವಿಪರೀತ ಖರ್ಚು ಇರುತ್ತದೆ. ಆದ್ದರಿಂದ, ನಿಮ್ಮ ಹಣವನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡಿ.

** ವೃಶ್ಚಿಕ ರಾಶಿ :
ಇಂದು ಸಂಪತ್ತು ವೃದ್ಧಿಯಾಗಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ. ಸ್ನೇಹಿತರ ನೆರವಿನಿಂದ ವ್ಯಾಪಾರದಲ್ಲಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿದ್ದು, ಹಣದ ಒಳಹರಿವು ಹೆಚ್ಚಾಗಲಿದೆ. ಮಾತಿನಲ್ಲಿ ಮಾಧುರ್ಯ ಇರುತ್ತದೆ. ಇಂದು ಹೆಚ್ಚುವರಿ ಖರ್ಚುಗಳು ಇರುತ್ತವೆ, ಆದ್ದರಿಂದ ಹಣವನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡಿ.

** ಧನಸ್ಸು ರಾಶಿ :
ಇಂದು ಮನಸ್ಸು ಶಾಂತವಾಗಿರುತ್ತದೆ. ನೀವು ಶೈಕ್ಷಣಿಕ ಅಥವಾ ಬೌದ್ಧಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಮಾತಿನಲ್ಲಿ ಮಾಧುರ್ಯವಿರುತ್ತದೆ, ಆದರೆ ನಿಮ್ಮ ಭಾವನೆಗಳನ್ನು ನಿಯಂತ್ರಿಸಿ ಮತ್ತು ಭಾವನಾತ್ಮಕವಾಗಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ ಮತ್ತು ನೀವು ಕುಟುಂಬದೊಂದಿಗೆ ಕೆಲವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜಿಸಬಹುದು.

** ಮಕರ ರಾಶಿ :
ಇಂದು ಉದ್ಯೋಗ ಮತ್ತು ವ್ಯಾಪಾರದಲ್ಲಿ ವಾತಾವರಣವು ಅನುಕೂಲಕರವಾಗಿರುತ್ತದೆ. ವ್ಯಾಪಾರ ವಿಸ್ತರಣೆಗೆ ಹೊಸ ಅವಕಾಶಗಳು ದೊರೆಯಲಿವೆ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆದಾಗ್ಯೂ, ಶೈಕ್ಷಣಿಕ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಸಂಭಾಷಣೆಯಲ್ಲಿ ಮಿತವಾಗಿರಿ ಮತ್ತು ಅತಿಯಾದ ಕೋಪವನ್ನು ತಪ್ಪಿಸಿ.

** ಕುಂಭ ರಾಶಿ :
ಇಂದು ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಮಾತಿನಲ್ಲಿ ಮಾಧುರ್ಯ ಇರುತ್ತದೆ. ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಆದಾಯವನ್ನು ಹೆಚ್ಚಿಸಲು ಹೊಸ ಅವಕಾಶಗಳಿವೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಆತ್ಮವಿಶ್ವಾಸ ಹೆಚ್ಚಲಿದೆ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ, ಆದರೆ ಜೀವನಶೈಲಿ ಅಸ್ತವ್ಯಸ್ತವಾಗಬಹುದು. ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ.

** ಮೀನ ರಾಶಿ :
ಇಂದು ಮಾನಸಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ಸ್ನೇಹಿತರ ಸಹಾಯದಿಂದ ಉದ್ಯೋಗದಲ್ಲಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಪೂರ್ವಿಕರ ಆಸ್ತಿಯಿಂದ ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ ಮತ್ತು ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ದೂರವಾಗುತ್ತವೆ.

Categories
ರಾಜ್ಯ

ದೇಶದ ಆರ್ಥಿಕ ತಜ್ಞ, ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ!

ದೇಶದ ಆರ್ಥಿಕ ತಜ್ಞ, ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ!
– ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ
– ಎಲ್ಲೆಡೆ ಸಂತಾಪ: ಮರೆಯಾದ ದೇಶದ ಹಿರಿಯ ನಾಯಕ..!

NAMMUR EXPRESS NEWS
ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಮೂಲಕ ದೇಶದ ಮಹಾನ್ ಚೇತನ ಮರೆಯಾಗಿದೆ.
ವಿಶ್ವ ಮಟ್ಟದಲ್ಲಿ ಭಾರತದ ಆರ್ಥಿಕತೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ನಾಯಕ, ಮಾಜಿ ಪ್ರಧಾನಿ ಸಿಂಗ್ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದಾಗಿದೆ.
ಎಲ್ಲೆಡೆ ಸಂತಾಪ: ಕಾಂಗ್ರೆಸ್ ನಾಯಕರು, ದೇಶದ ಮಾಜಿ ಪ್ರಧಾನಿ ನಿಧನಕ್ಕೆ ಎಲ್ಲೆಡೆ ಸಂತಾಪ ವ್ಯಕ್ತವಾಗುತ್ತಿದೆ.