Categories
ಚಿಕ್ಕಮಗಳೂರು

ಶ್ರೀಶಾರದಾ ಪೀಠದಲ್ಲಿ “ಸ್ತೋತ್ರ ತ್ರಿವೇಣಿಯ ಮಹಾ ಸಂಗಮ”..!!

ಶ್ರೀಶಾರದಾ ಪೀಠದಲ್ಲಿ “ಸ್ತೋತ್ರ ತ್ರಿವೇಣಿಯ ಮಹಾ ಸಂಗಮ”..!!
– ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳು ಸನ್ಯಾಸ ಸ್ವೀಕರಿಸಿ 50 ವರ್ಷಗಳ ಸಂಭ್ರಮ
– ಸುಮಾರು 50000 ಕ್ಕೂ ಅಧಿಕ ಭಕ್ತಾಧಿಗಳಿಂದ ಏಕಕಾಲದಲ್ಲಿ ಸ್ತೋತ್ರ ಪಠಣ
– ಶೃಂಗೇರಿಯಲ್ಲಿ ನಡೆಯಲಿರುವ ಐತಿಹಾಸಿಕ ಬೃಹತ್ ಕಾರ್ಯಕ್ರಮ

NAMMUR EXPRESS NEWS
ಶೃಂಗೇರಿ: ಶ್ರೀಶಾರದಾ ಪೀಠ ಶೃಂಗೇರಿಯಲ್ಲಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಸನ್ಯಾಸ ಸ್ವೀಕರಿಸಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ “ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ” ಎಂಬ ಐತಿಹಾಸಿಕ ಸ್ತೋತ್ರ ಪಠಣ ಕಾರ್ಯಕ್ರಮವು ಜನವರಿ 11 ನೇ ತಾರೀಖಿನ ಶನಿವಾರದಂದು ನಡೆಯಲಿದೆ. ಇದರ ಪೂರ್ವಭಾವಿಯಾಗಿ ಶ್ರೀಮಠದ ಭಕ್ತರ ಸಭೆ ನಡೆಸಿದ ಶ್ರೀಮಠದ ಆಡಳಿತ ಮಂಡಳಿ ಹಲವು ಸಿದ್ಧತಾ ಕಾರ್ಯಗಳ ಬಗ್ಗೆ ಚರ್ಚಿಸಿ,ಮಾಹಿತಿ ನೀಡಿ,ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕಿನಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು,ಮಹಿಳೆಯರು, ಸೇರಿದಂತೆ ಸುಮಾರು 50,000 ಕ್ಕೂ ಅಧಿಕ ಜನ ಭಕ್ತರು ಸ್ತೋತ್ರ ಪಠಣೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಭಕ್ತರ ಆಗಮನಕ್ಕಾಗಿ ವಿವಿಧ ತಾಲೂಕಿನಿಂದ ಸುಮಾರು 700 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀಮಠದ ಸಭೆಯಲ್ಲಿ ಮಾಹಿತಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಆಸ್ತಿಕ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಶಾರದಾ ಚಂದ್ರಮೌಳೇಶ್ವರರು ಹಾಗೂ ಉಭಯ ಜಗದ್ಗುರುಗಳ ಆಶೀರ್ವಾದಕ್ಕೆ ಪಾತ್ರರಾಗುವಂತೆ ಶೃಂಗೇರಿ ಶ್ರೀಶಾರದಾ ಪೀಠದ ಹಿರಿಯ ಅಧಿಕಾರಿಗಳು ಆಹ್ವಾನಿಸಿದ್ದಾರೆ.

Categories
ರಾಜ್ಯ

ಇಂದಿನಿಂದ ಮುಂದಿನ 5 ದಿನ ಮಳೆ!?: ಭಾರೀ ಚಳಿ!

ಇಂದಿನಿಂದ ಮುಂದಿನ 5 ದಿನ ಮಳೆ!?: ಭಾರೀ ಚಳಿ!
– ಡಿಸೆಂಬರ್‌ 28ರವರೆಗೂ ಭಾರೀ ಮಳೆ ಎಂದು ಮುನ್ಸೂಚನೆ
– ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಣೆ

NAMMUR EXPRESS NEWS
ಬೆಂಗಳೂರು: ಇಂದಿನಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್‌ 28ರವರೆಗೂ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳಲಿದ್ದು, ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇಶಾದ್ಯಂತ ಭಾರೀ ಚಳಿ!

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 30ವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ. ಇಂದು ರಾಜ್ಯದ ಆಯ್ದ ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಾಡಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆ ಬೀಳಬಹುದು. ಡಿಸೆಂಬರ್ 27ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Categories
ಚಿಕ್ಕಮಗಳೂರು

ಮೂಡಿಗೆರೆ: ಕೆನರಾ ಬ್ಯಾಂಕ್ ಕಟ್ಟಡಕ್ಕೆ ಬೆಂಕಿ!

ಮೂಡಿಗೆರೆ: ಕೆನರಾ ಬ್ಯಾಂಕ್ ಕಟ್ಟಡಕ್ಕೆ ಬೆಂಕಿ!
– ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಭಸ್ಮ
– ಶಾರ್ಟ್‌ಸರ್ಕ್ಯೂಟ್, ಯುಪಿಎಸ್ ಹೀಟ್ ಆಗಿ ಬೆಂಕಿ ತಗುಲಿರುವ ಶಂಕೆ

NAMMUR EXPRESS NEWS
ಮೂಡಿಗೆರೆ: ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್‌ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಭಸ್ಮವಾಗಿದೆ. ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು ರಾತ್ರಿ ಸಮಯದಲ್ಲಿ ಕಟ್ಟಡದಿಂದ ಶಬ್ದ ಮತ್ತು ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಕಟ್ಟಡದ ಮಾಲೀಕರು ಮತ್ತು ಅಗ್ನಿಶಾಮಕ ಕಛೇರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ವಾಹನ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ನಿರತರಾದರು. ಅಂತಿಮವಾಗಿ ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.
ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿದ್ದು,ಲಾಕರ್‌ನಲ್ಲಿದ್ದ ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.
ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್‌ ಕೆನರಾ ಬ್ಯಾಂಕ್‌ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ.

ಬ್ಯಾಂಕ್ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ನಷ್ಟ!

ಕೆನರಾ ಬ್ಯಾಂಕ್‌ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು. ಸದರಿ ಕಟ್ಟಡವು ಪಟ್ಟಣದ ಶಿವಪ್ರಕಾಶ್ ಎಂಬುವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Categories
ರಾಜ್ಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ಕರ್ನಾಟಕ!

ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ಕರ್ನಾಟಕ!
– ರಾಜ್ಯದ ನಿಲುವು ಸ್ಪಷ್ಟಪಡಿಸಿದ ಸಚಿವ ಈಶ್ವರ್ ಖಂಡ್ರೆ
– ಆತಂಕದಿಂದ ನಿಟ್ಟುಸಿರು ಬಿಟ್ಟ ಪಶ್ಚಿಮಘಟ್ಟ ಜನತೆ?!
– ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ವರದಿ ಸಲ್ಲಿಕೆ

NAMMUR EXPRESS NEWS
ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ. ಕಸ್ತೂರಿರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಣೆ ಮಾಡಿದ್ದು, ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ,” ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಪಶ್ಚಿಮಘಟ್ಟ ಜನತೆ ಆತಂಕದಿಂದ ನಿಟ್ಟುಸಿರು ಬಿಟ್ಟಿದ್ದಾರೆ.
ಶತಮಾನಗಳಿಂದ ಜನರು ಅರಣ್ಯದಂಚಿನಲ್ಲಿ ವಾಸಿಸುತ್ತಿದ್ದು, ಇವರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿಸಿದ್ದೇವೆ,” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದ ನಿಲುವು ಸ್ಪಷ್ಟಪಡಿಸಿದ್ದಾರೆ. ”ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆ ನಡೆಸಲು ಸಮಿತಿಗಳನ್ನು ರಚಿಸಲಾಗಿದೆ. ಅದರಂತೆ ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ವಾಸ್ತವದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಈ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಯಲಿದೆ,” ಎಂದಿದ್ದಾರೆ.

Categories
ರಾಷ್ಟ್ರೀಯ ವಾರ್ತೆ

ದೇಶದೆಲ್ಲೆಡೆ ಸಂಭ್ರಮದ ಕ್ರಿಸ್ಮಸ್‌

ದೇಶದೆಲ್ಲೆಡೆ ಸಂಭ್ರಮದ ಕ್ರಿಸ್ಮಸ್‌
– ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ವಿಶೇಷ ಪ್ರಾರ್ಥನೆ
– ಚರ್ಚ್‌ಗಳಲ್ಲಿ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಭಾಗಿ
– ಡಿ. 25ರಂದು ಚರ್ಚ್‌ಗಳಲ್ಲಿ ಅದ್ದೂರಿ ಕಾರ್ಯಕ್ರಮ

NAMMUR EXPRESS NEWS
ಬೆಂಗಳೂರು/ಮಂಗಳೂರು: ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ಆಚರಿಸುವ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ರಾಜ್ಯದ ಎಲ್ಲೆಡೆ ಸೇರಿ ವಿಶ್ವದ ಮೂಲೆ ಮೂಲೆಯಲ್ಲಿ ಡಿ. 24 ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಡಿ.25ರಂದು ಹಬ್ಬ ನಡೆಯಲಿದೆ. ವಿವಿಧ ಚರ್ಚ್‌ಗಳನ್ನು ವಿದ್ಯುದ್ದೀಪಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ರಾತ್ರಿಯೆಲ್ಲಾ ವಿಶೇಷ ಪೂಜೆ, ಪ್ರಾರ್ಥನೆ, ಅಲಂಕಾರ ನಡೆಯಿತು. ಚರ್ಚ್‌ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ಕ್ರಿಬ್‌ಗಳನ್ನು (ಗೋದಲಿ) ನಿರ್ಮಿಸಲಾಗಿತ್ತು, ನಕ್ಷತ್ರಗಳನ್ನು ಜೋಡಿಸಲಾಗಿತ್ತು. ಚರ್ಚ್‌ಗಳಲ್ಲಿ ರಾತ್ರಿ ವೇಳೆ ಜರಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್‌ ಗೀತೆಗಳನ್ನು (ಕ್ಯಾರಲ್ಸ್‌) ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿ ಯೇಸು ಕಂದನಿಗೆ ನಮಿಸಿದರು. ಕ್ರೈಸ್ತ ಸಮುದಾಯದವರಿಗೆ ಪ್ರಮುಖ ಹಬ್ಬವಾಗಿರುವ ಕ್ರಿಸ್ಮಸ್ ಆಚರಣೆ ನಡೆಯುತ್ತಿದೆ. ಎಲ್ಲಾ ಚರ್ಚ್‌ಗಳಲ್ಲಿ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಡಿ. 25ರಂದು ಚರ್ಚ್‌ ಗಳಲ್ಲಿ ಹಬ್ಬದ ಬಲಿ ಪೂಜೆ, ಇತ್ಯಾದಿ ನಡೆಯುತ್ತಿದೆ. ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ.

ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಯಾವ ರಾಶಿಯವರಿಗೆ ಲಾಭ ? ಯಾವ ರಾಶಿಯವರಿಗೆ ನಷ್ಟ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಇಂದು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ, ಆದರೆ ಅತಿಯಾದ ಖರ್ಚುಗಳಿಂದ ಮನಸ್ಸು ತೊಂದರೆಗೊಳಗಾಗುತ್ತದೆ. ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಸಾಂಸಾರಿಕ ಸೌಕರ್ಯ ಮತ್ತು ಸಂಪತ್ತು ವೃದ್ಧಿಯಾಗಲಿದೆ. ಕುಟುಂಬ ಸದಸ್ಯರಿಂದ ಬೆಂಬಲ ಸಿಗಲಿದೆ. ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.

** ವೃಷಭ ರಾಶಿ :
ಇಂದು ವೃತ್ತಿಪರ ಯಶಸ್ಸು ಸಿಗಲಿದೆ. ಹಣದ ಒಳಹರಿವಿನ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನಿಮ್ಮ ಮಕ್ಕಳ ಆರೋಗ್ಯದ ಕಡೆ ಗಮನ ಕೊಡಿ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಕಛೇರಿಯಲ್ಲಿ ಹೊಸ ಯೋಜನೆಯ ಜವಾಬ್ದಾರಿಯನ್ನು ನೀವು ಪಡೆಯುತ್ತೀರಿ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ. ವ್ಯವಹಾರದಲ್ಲಿ ಪ್ರಗತಿಗೆ ಹೊಸ ಅವಕಾಶಗಳಿವೆ, ಆದರೆ ಮನಸ್ಸು ತೊಂದರೆಗೊಳಗಾಗುತ್ತದೆ.

** ಮಿಥುನ ರಾಶಿ :
ಇಂದು ಕೆಲಸದ ಜವಾಬ್ದಾರಿಗಳು ಹೆಚ್ಚಾಗುತ್ತವೆ. ದೀರ್ಘಕಾಲದ ಸಮಸ್ಯೆಗಳು ದೂರವಾಗುತ್ತವೆ. ಆರೋಗ್ಯದ ಬಗ್ಗೆ ಜಾಗೃತರಾಗಿರಿ. ವೆಚ್ಚಗಳನ್ನು ನಿಯಂತ್ರಿಸಿ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ವ್ಯಾಪಾರ ಪರಿಸ್ಥಿತಿ ಬಲವಾಗಿರುತ್ತದೆ. ಸೌಕರ್ಯಗಳು ಮತ್ತು ಐಷಾರಾಮಿ ಜೀವನವನ್ನು ನಡೆಸುವಿರಿ. ವೃತ್ತಿಪರ ಜೀವನದಲ್ಲಿ ಬಿಡುವಿಲ್ಲದ ವೇಳಾಪಟ್ಟಿ ಇರುತ್ತದೆ.

** ಕರ್ಕಾಟಕ ರಾಶಿ :
ಇಂದು ಆತ್ಮಸ್ಥೈರ್ಯ ಹೆಚ್ಚಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೆಲಸದ ಸ್ಥಳದಲ್ಲಿ ನೀವು ಸವಾಲುಗಳನ್ನು ಎದುರಿಸಬೇಕಾಗಬಹುದು. ಕಚೇರಿಯಲ್ಲಿ ಅನಗತ್ಯ ವಿವಾದಗಳನ್ನು ತಪ್ಪಿಸಿ ಮತ್ತು ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿ. ಇದು ನಿಮ್ಮ ಉದ್ಯೋಗದಲ್ಲಿ ಬಡ್ತಿಯ ಅವಕಾಶಗಳನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕಾರ್ಯಕ್ಷಮತೆಯೂ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.

** ಸಿಂಹ ರಾಶಿ :
ಇಂದು ಹಣಕಾಸಿನ ವಿವಾದಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗಬಹುದು. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಮನಸ್ಸು ಸಂತೋಷದಿಂದ ಕೂಡಿರುತ್ತದೆ, ಆದರೆ ಕೆಲಸದ ಸ್ಥಳದಲ್ಲಿ ಸ್ವಲ್ಪ ಗೊಂದಲವಿರುತ್ತದೆ. ಕೋಪದ ಕ್ಷಣಗಳು ಮತ್ತು ಸಮಾಧಾನದ ಕ್ಷಣಗಳು ಇರುತ್ತವೆ.

** ಕನ್ಯಾ ರಾಶಿ :
ಇಂದು ಹಿರಿಯ ಅಧಿಕಾರಿಗಳಿಂದ ಬೆಂಬಲ ದೊರೆಯಲಿದೆ. ಕೆಲಸ ಕಾರ್ಯಗಳಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತೆ. ಕಚೇರಿಯಲ್ಲಿ ವಾದ ವಿವಾದಗಳಿಂದ ದೂರವಿರಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ಹಣದ ಒಳಹರಿವಿನ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನಿಮ್ಮ ಸಂಗಾತಿಯೊಂದಿಗೆ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಮಾತಿನಲ್ಲಿ ಮಾಧುರ್ಯ ಇರುತ್ತದೆ. ತಂದೆಯ ಆರೋಗ್ಯದ ಕಡೆ ಗಮನ ಕೊಡಿ.

** ತುಲಾ ರಾಶಿ :
ಇಂದು ಮನಸ್ಸು ಸಂತೋಷದಿಂದ ಕೂಡಿರುತ್ತದೆ. ವ್ಯಾಪಾರ ವಿಸ್ತರಣೆಗೆ ಹೊಸ ಅವಕಾಶಗಳು ದೊರೆಯಲಿವೆ. ಹೊಸ ಆದಾಯದ ಮೂಲಗಳಿಂದ ಸಂಪತ್ತು ಹೆಚ್ಚಾಗುತ್ತದೆ. ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಬಹುದು. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ. ವ್ಯಾಪಾರ ಪರಿಸ್ಥಿತಿ ಬಲವಾಗಿರುತ್ತದೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು.

** ವೃಶ್ಚಿಕ ರಾಶಿ :
ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಕಠಿಣ ಪರಿಶ್ರಮದ ನಂತರವೇ ನೀವು ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗ ಬದಲಾವಣೆಗೆ ಹೊಸ ಅವಕಾಶಗಳು ಬರಲಿವೆ. ಭಾವನಾತ್ಮಕತೆಯನ್ನು ತಪ್ಪಿಸಿ. ಕುಟುಂಬ ಜೀವನದಲ್ಲಿ ಶಾಂತಿಯನ್ನು ತರಲು ಪ್ರಯತ್ನಿಸಿ. ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ, ಆದರೆ ವ್ಯಾಪಾರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.

** ಧನಸ್ಸು ರಾಶಿ :
ಇಂದು ಮನಸ್ಸು ಶಾಂತವಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ, ಆದರೆ ಕೋಪ ಮತ್ತು ಅಸಮಾಧಾನದ ಕ್ಷಣಗಳು ಇರುತ್ತದೆ. ಸ್ವಯಂ ನಿಯಂತ್ರಣದಲ್ಲಿರಿ. ವಿಪರೀತ ಖರ್ಚುಗಳಿಂದ ಮನಸ್ಸು ತೊಂದರೆಗೊಳಗಾಗುತ್ತದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಕೌಟುಂಬಿಕ ಜೀವನದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ಸಂಬಂಧಗಳು ಸುಧಾರಿಸುತ್ತವೆ, ಆದರೆ ಮನಸ್ಸು ಮಕ್ಕಳ ಆರೋಗ್ಯದ ಬಗ್ಗೆ ಚಿಂತಿಸುತ್ತಿರುತ್ತದೆ.

** ಮಕರ ರಾಶಿ :
ಇಂದು ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರ ಪರಿಸ್ಥಿತಿ ಬಲವಾಗಿರುತ್ತದೆ. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ಶೈಕ್ಷಣಿಕ ಕೆಲಸದಲ್ಲಿ ನೀವು ಅಡೆತಡೆಗಳನ್ನು ಎದುರಿಸಬಹುದು. ಕೆಲಸದ ಸ್ಥಳದಲ್ಲಿ ಮೌಲ್ಯಮಾಪನದ ಸಾಧ್ಯತೆಗಳು ಹೆಚ್ಚಾಗುತ್ತವೆ. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಿ.

** ಕುಂಭ ರಾಶಿ :
ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ. ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಆರೋಗ್ಯ ಸುಧಾರಿಸಲಿದೆ. ಆಧ್ಯಾತ್ಮದಲ್ಲಿ ಆಸಕ್ತಿ ಇರುತ್ತದೆ. ಸಮಾಜದಲ್ಲಿ ಗೌರವ ಸಿಗಲಿದೆ. ವ್ಯಾಪಾರ ವಿಸ್ತರಣೆಗೆ ಹೊಸ ಅವಕಾಶಗಳು ದೊರೆಯಲಿವೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.

** ಮೀನ ರಾಶಿ :
ಇಂದು ಭೌತಿಕ ಸಂಪತ್ತು ವೃದ್ಧಿಯಾಗಲಿದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ನೀವು ದೇಶೀಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ವಾದವನ್ನು ತಪ್ಪಿಸಿ. ಧಾರ್ಮಿಕ ಕಾರ್ಯಗಳಲ್ಲಿ ನಿರತರಾಗುವಿರಿ. ವಾಹನ ನಿರ್ವಹಣೆಗೆ ಹಣ ವ್ಯಯವಾಗಬಹುದು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬದೊಂದಿಗೆ ಭಾಗವಹಿಸಬಹುದು.

Categories
ಚಿಕ್ಕಮಗಳೂರು

7ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಭಂಡಿಗಡಿ ಶಾಲೆ ವಿದ್ಯಾರ್ಥಿಗಳು!

7ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಭಂಡಿಗಡಿ ಶಾಲೆ ವಿದ್ಯಾರ್ಥಿಗಳು!
– ಪ್ರತಿಭಾ ಕಾರಂಜಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ
– ಶಿಕ್ಷಕ ಅನಿಲ್ ಕುಮಾರ್, ವಿದ್ಯಾರ್ಥಿಗಳ ನಿರಂತರ ಶ್ರಮಕ್ಕೆ ಸಂದ ಜಯ

NAMMUR EXPRESS NEWS
ಕೊಪ್ಪ: ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ವಿಭಾಗದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಕೊಪ್ಪ ತಾಲೂಕು ಭಂಡಿಗಡಿಯ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ವಿದ್ಯಾರ್ಥಿಗಳು ಅದ್ಬುತ ಪ್ರದರ್ಶನ ತೋರಿ ಪ್ರಥಮ ಸ್ಥಾನ ಪಡೆದು 7ನೇ ಬಾರಿಗೆ ರಾಜ್ಯಮಟ್ಟಕ್ಕೆ ಅಯ್ಕೆಯಾಗಿ ಶಾಲೆಗೆ ಹಾಗೂ ಕೊಪ್ಪ ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ಬೀರೂರು ತಾಲೂಕಿನಲ್ಲಿ ಬಳ್ಳಾವರದಲ್ಲಿ ಡಿ.23ರಂದು ನಡೆದ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಗಮನ ಸೆಳೆದಿದ್ದಾರೆ. ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆ ಭಂಡಿಗಡಿಯ ವಿದ್ಯಾರ್ಥಿಗಳ ಈ ನಿರಂತರ ಸಾಧನೆಗೆ ಸಾರ್ವಜನಿಕರಿಂದ ಪ್ರಶಂಸೆಯ ಮಹಾಪೂರ ಹರಿದುಬರುತ್ತಿದೆ, ರಾಜ್ಯಮಟ್ಟದಲ್ಲಿ ವಿಜಯಶಾಲಿಗಳಾಗಿ ಚಿಕ್ಕಮಗಳೂರು ಜಿಲ್ಲೆಗೆ ಹೆಮ್ಮ ತರುವಂತಾಗಲಿ ಎಂಬ ಹಾರೈಕೆ ವ್ಯಕ್ತವಾಗಿದೆ.

ಶಿಕ್ಷಕ ಅನಿಲ್ ಕುಮಾರ್, ವಿದ್ಯಾರ್ಥಿಗಳ ನಿರಂತರ ಶ್ರಮ

ವಿದ್ಯಾರ್ಥಿಗಳಾದ ಸೌಜನ್ಯ, ತ್ರಿಶ, ಕಿಶನ್‌, ಸುಶ್ಮಿತ , ಸಹನ, ಸೌಪರ್ಣಿಕ, ಉಜ್ವಲ್‌, ಸುಫಿಯಾನ್‌, ಮದನ್‌, ಕಿಶೋರ್‌, ಶ್ರೇಯಸ್‌̧ ಉಮಾ ಹಾಗೂ ತರಬೇತಿ ನೀಡಿದ ಶಾಲೆಯ ಇಂಗ್ಲೀಷ್‌ ಶಿಕ್ಷಕರಾದ ಪಿ. ಹೆಚ್‌ ಅನಿಲ್‌ ಕುಮಾರ್‌ ಅವರ ಕಠಿಣ ಪರಿಶ್ರಮಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯ ಎಲ್ಲಾ ಕಾರ್ಯಗಳಿಗೂ ಸದಾ ಪ್ರೋತ್ಸಾಹಿಸಿ ಸಹಕರಿಸುವ ಮುಖ್ಯ ಶಿಕ್ಷಕರಾದ ಎನ್‌ ಎಸ್‌ ಸುರೇಂದ್ರ ಅವರಿಗೂ ಹಾಗು ಸಹಶಿಕ್ಷಕರಿಗೂ , ಸಾಧನೆಗೆ ಸಹಕಾರ ನೀಡುತ್ತಿರುವ ವಿಜ್ಞಾನ ಶಿಕ್ಷಕಿಯಾದ ಆಶಾ, ಶ್ರೀಮತಿ ಗೀತಾ ಅವರಿಗೂ,ಬಿ.ಏನ್. ಭಿಷೇಜ್, ಎಸ್. ಡಿ. ಎಂ. ಸಿ ಅಧ್ಯಕ್ಷ ರಾದ ರಮೇಶ್‌ ಹಾಗೂ ಸದಸ್ಯರು ಹಾಗೂ ಹಿರಿಯ ವಿದ್ಯಾರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಪೋಷಕರು ಸಲ್ಲಿಸಿದ್ದಾರೆ.

Categories
ಅಡಿಕೆ-ದರ

ಅಡಿಕೆ ದರ ಎಷ್ಟಿದೆ?

ಅಡಿಕೆ ದರ ಎಷ್ಟಿದೆ?
– ರಾಶಿ ಎಷ್ಟು? ಬೆಟ್ಟೆ ಎಷ್ಟು?

NAMMUR EXPRESS NEWS

ಬೆಟ್ಟೆ: 45009- 57209

ಸರಕು: 56009- 94652

ಗೊರಬಲು: 18129- 33609

ರಾಶಿ: 27009- 50500

Categories
ತೀರ್ಥಹಳ್ಳಿ

ತೀರ್ಥಹಳ್ಳಿ ಪಟ್ಟಣದ ಜನರಿಗೆ ಪಟ್ಟಣ ಪಂಚಾಯತ್ ಅರೋಗ್ಯ ಭಾಗ್ಯ!

ತೀರ್ಥಹಳ್ಳಿ ಪಟ್ಟಣದ ಜನರಿಗೆ ಪಟ್ಟಣ ಪಂಚಾಯತ್ ಅರೋಗ್ಯ ಭಾಗ್ಯ!
– ರಹಮತುಲ್ಲಾ ಅಸಾದಿ ಉಸ್ತುವಾರಿಯಲ್ಲಿ ನಡೆದ ತಪಾಸಣೆ ಶಿಬಿರ
– ತಜ್ಞ ವೈದ್ಯರ ಉಚಿತ ಆರೋಗ್ಯ ತಪಾಸಣೆ: ಸಾವಿರಾರು ಮಂದಿ ಭೇಟಿ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರ ಪಟ್ಟಣದ ಸಾವಿರಾರು ಜನರಿಗೆ ಅನುಕೂಲವಾಯಿತು.
ತೀರ್ಥಹಳ್ಳಿ, ಡೇ-ನಲ್ಮ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಶಿವಮೊಗ್ಗ ಆದರ್ಶ ಆಸ್ಪತ್ರೆ, ಉಡುಪಿ ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ 22-12-2024 ಬೆಳಿಗ್ಗೆ 8.00ರಿಂದ ಮಧ್ಯಾಹ್ನ 2.00ರ ವರೆಗೆ, ಶಾಂತವೇರಿ ಗೋಪಾಲಗೌಡ ರಂಗ ಮಂದಿರ, ತೀರ್ಥಹಳ್ಳಿಯಲ್ಲಿ ನೆರವೇರಿತು. ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು ರಹಮತುಲ್ಲಾ ಅಸಾದಿ ಇವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ನಾಗರಿಕರ ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯ ಮುಂದಿನ ದಿನಗಳಲ್ಲಿಯೂ ಸಾರ್ವಜನಿಕರಿಗೆ ಉಪಯುಕ್ತವಾಗುವ ಕೆಲಸವನ್ನು ಮಾಡಲು ಶ್ರಮಿಸುತ್ತೇವೆ ಎಂದು ಕಾರ್ಯಕ್ರಮದಲ್ಲಿ ಹೇಳಿದರು. ಬೀದಿ ವ್ಯಾಪಾರಿಗಳಿಗೆ ಈ ಶಿಬಿರ ನಡೆಸಿದ್ದು, ಸುಮಾರು 850ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಭಾಗಿಯಾಗಿದ್ದರು. ಉಚಿತ ಆರೋಗ್ಯ ತಪಾಸಣಾ ಸೌಲಭ್ಯದಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದ್ದು, ತೀರ್ಥಹಳ್ಳಿ ಪಟ್ಟಣ ಮತ್ತು ತಾಲೂಕಿನ ಜನರು ಈ ಸೌಲಭ್ಯ ಬಳಸಿಕೊಂಡಿದ್ದು, ಒಂದೇ ದಿನದಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ನೋಂದಾವಣಿ ಮಾಡಿಕೊಂಡಿದ್ದರು ಎಂದು ತಿಳಿಸಿದರು.ಶಿಬಿರದಲ್ಲಿ ರಕ್ತದೊತ್ತಡ (BP) ಪರೀಕ್ಷೆ, ರಕ್ತದ ಸಕ್ಕರೆಯ ಅಂಶ, ರಕ್ತದ ಕೊಬ್ಬಿನಾಂಶ, ಇ ಸಿ ಜಿ ಸೇರಿದಂತೆ ಅನೇಕ ಅರೋಗ್ಯ ತಪಾಸಣೆ ರೋಗಕ್ಕೆ ತಪಾಸಣೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Categories
ರಾಜ್ಯ

ಕರ್ನಾಟಕ ಟಾಪ್ ನ್ಯೂಸ್

ಕರ್ನಾಟಕ ಟಾಪ್ ನ್ಯೂಸ್
– ಮಧುಗಿರಿ: ಸ್ಫೋಟ ಪ್ರಕರಣ, ಡ್ರೋನ್ ಪ್ರತಾಪ್‌ಗೆ ಜಾಮೀನು ಮಂಜೂರು
– ಮಂಡ್ಯ: ಪುತ್ರನ ಸಾವಿಗೆ ನೊಂದ ಅಮ್ಮನಿಗೆ ಹೃದಯಾಘಾತ
– ಹುಬ್ಬಳ್ಳಿ: ಸಿಲೆಂಡರ್‌ ಸ್ಪೋಟ, 10 ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ!
– ಬೆಂಗಳೂರು: ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು
– ಧಾರವಾಡ: ಟಿಟಿ ವಾಹನ – ಲಾರಿ ನಡುವೆ ಮುಖಾಮುಖಿ ಡಿಕ್ಕಿ, ಮೂವರ ಸಾವು
– ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವವರ ಬಂಧನ
– ಬೆಂಗಳೂರು: ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
– ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬಾಣಂತಿ ಬಲಿ

NAMMUR EXPRESS NEWS
ಮಧುಗಿರಿ: ಇತ್ತೀಚಿಗೆ ಮಧುಗಿರಿ ತಾಲೂಕಿನ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್‌ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಡಿ. 24ಕ್ಕೆ ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಯಿದೆ. ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಅವರಿಗೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಜಾಮೀನು ನೀಡಿದೆ. ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟದ ಪ್ರಯೋಗ ಮಾಡಿದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್‌ ಮಾಡಿದ್ದರು. ಈ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್‌ ಪ್ರತಾಪ್‌ನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದರು.

* ಮಂಡ್ಯ: ಪುತ್ರನ ಸಾವಿನಿಂದ ನೊಂದ ಅಮ್ಮನಿಗೆ ಹೃದಯಾಘಾತ..!

ಮಂಡ್ಯ:ಮಂಡ್ಯದಲ್ಲಿ ಕರುಳು ಹಿಂಡುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲೊಂದು ಕಡೆ ಸಾವಿನಲ್ಲೂ ತಾಯಿ-ಮಗ ಒಂದಾಗಿದ್ದಾರೆ. ಅಪಘಾತವೊಂದರಲ್ಲಿ ಕೃಷ್ಣಮೂರ್ತಿ (20) ಎಂಬ ಯುವಕ ಸಾವನ್ನಪ್ಪಿದ್ದು, ಸುದ್ದಿ ಕೇಳಿ ತಾಯಿ ಮಹದೇವಮ್ಮ ಆಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಈ ಘಟನೆ  ನಡೆದಿದ್ದು, ತಾಯಿ ಮಗ ಇಬ್ಬರನ್ನೂ ಕೂಡ ಗ್ರಾಮಸ್ಥರು ಅಕ್ಕಪಕ್ಕವೇ ಅಂತ್ಯ ಸಂಸ್ಕಾರ ಮಾಡಿದ್ದಾರೆ.

* ಹುಬ್ಬಳ್ಳಿ: ಸಿಲೆಂಡರ್‌ ಸ್ಪೋಟ, 10 ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ!

ಹುಬ್ಬಳ್ಳಿ: ಹುಬ್ಬಳ್ಳಿ ಸಾಯಿ ನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲದ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ, 10 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಗಾಯಾಳು ಮಾಲಾಧಾರಿಗಳನ್ನು ಕೆಎಂಸಿಆರ್‌ಐಗೆ ದಾಖಲಿಸಲಾಗಿದ್ದು, ಎಲ್ಲರ ದೇಹ ಬಹುತೇಕ ಶೇ 90 ಕ್ಕೂ ಹೆಚ್ಚು ಪ್ರಮಾಣದ ಸುಟ್ಟು ಗಾಯಗೊಂಡಿದ್ದಾರೆ. ಗಾಯಾಳು 10 ಜನರಲ್ಲಿ 9 ಜನ ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. 58 ವರ್ಷದ ಅಜ್ಜಾಸ್ವಾಮಿ ಅವರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಸಾಯಿನಗರದ ನಿವಾಸಿಗಳಾದ ರಾಜು ಹರ್ಲಾಪುರ(21), ಸಂಜಯ ಸವದತ್ತಿ(20), ವಿನಾಯಕ ಬಾರಕೇರ(12), ಪ್ರಕಾಶ ಬಾರಕೇರ(42), ಮಂಜು ತೋರದ(22), ಅಜ್ಜಾಸ್ವಾಮಿ(58), ಪ್ರವೀಣ ಚಲವಾದಿ(24), ತೇಜಸ್ ರೆಡ್ಡಿ(26) ಮತ್ತು ಶಂಕರ ರಾಯನಗೌಡ್ರ(29) ಗಾಯಗೊಂಡಿದ್ದಾರೆ.

ನಡೆದದ್ದು ಹೇಗೆ?

ಅಯ್ಯಪ್ಪ ಮಾಲೆ ಧರಿಸಿ ವೃತ ಅಚರಿಸುತ್ತಿದ್ದ ಇವರು, ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಮಾಡುತ್ತಿದ್ದರು. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲೆಂಡರ್‌ಗೆ ತಾಗಿ ಉರುಳಿದೆ. ಪರಿಣಾಮ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

* ಬೆಂಗಳೂರು: ರಾಜ್ಯ, ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ

ಬೆಂಗಳೂರು: ರಾಜ್ಯ, ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಮಹದೇವಪುರದ ಅನಿಲ್ ಕುಮಾರ್ ಅಲಿಯಾಸ್ ಅನಿಲ್ ರೆಡ್ಡಿ (40) ಬಂಧಿತ ಆರೋಪಿ. ಈತ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಆರೋಪಿ ಅನಿಲ್ ಕುಮಾರ್ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿ 4 ಅಪರಾಧ ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುವುದನ್ನು ಮುಂದುವರಿಸಿದ್ದ. ಹೀಗಾಗಿ ಮಹದೇವಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿ ಅನಿಲ್‌ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ನಗರ ಪೊಲೀಸ್ ಆಯುಕ್ತರು ಸಮ್ಮತಿ ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

* ಧಾರವಾಡ: ಟಿಟಿ ವಾಹನ – ಲಾರಿ ನಡುವೆ ಮುಖಾಮುಖಿ ಡಿಕ್ಕಿ, ಮೂವರ ಸಾವು

ಧಾರವಾಡ: ಟಿಟಿ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಅವಘಡ ಅಳ್ನಾವರ ತಾಲೂಕಿನ ಅಡಬಗಟ್ಟಿ ಸಮೀಪ ಮುಂಜಾನೆ ಸಂಭವಿಸಿದೆ. ಮೃತರನ್ನು ಸವದತ್ತಿ ತಾಲೂಕಿನ ಶಿರಸಂಗಿಯ ಹನುಮಂತ ಮಲ್ಲಾಡ್ (36), ಮಹಾಂತೇಶ ಚವಾಣ (37) ಹಾಗೂ ಮಹಾದೇವಪ್ಪ ಹುಲ್ಲಳ್ಳಿ (39) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಂಗಿಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಲಾರಿ, ಗೋವಾದಿಂದ ಚಿತ್ರದುರ್ಗಕ್ಕೆ ಸಂಚರಿಸುತ್ತಿದ್ದ ಟೆಂಪೂಗೆ ಡಿಕ್ಕಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

* ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವವರ ಬಂಧನ

ಬೆಂಗಳೂರು: ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ಮೊಬೈಲ್ ಕ್ಯಾಮೆರಾ ವೀಡಿಯೊಗಳು ಸೆರೆಹಿಡಿದಿದೆ. ಉಸ್ಮಾನಿಯಾ ವಿಶ್ವವಿದ್ಯಾಲಯದ ಸದಸ್ಯರ ಗುಂಪು ಅರ್ಜುನ್ ಅವರ ನಿವಾಸದ ಹೊರಗೆ ಟೊಮೆಟೊ, ಕಲ್ಲುಗಳನ್ನು ಎಸೆದಿರುವುದು ದೃಢವಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕಲ್ಲು ತೂರಿ , ಹೂವಿನ ಕುಂಡಗಳನ್ನು ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದರು. ಅಲ್ಲು ಅರ್ಜುನ್ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಅಲ್ಲು ಅರ್ಜುನ್ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡು ಮನೆಯ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

* ಬೆಂಗಳೂರು: ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಬೆಂಗಳೂರು: ನಗರದ ಕೆಆರ್ ಪುರಂನ ಸೊನ್ನೆನಹಳ್ಳಿಯಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಗುಂಪು ಗುಂಪಾಗಿ ಬೀದಿ ನಾಯಿಗಳು ದಾಳಿ ಮಾಡಿದ ಘಟನೆ ನಡೆದಿದೆ. ನಾಯಿಗಳು ದಾಳಿ ಮಾಡುತ್ತಿದ್ದಂತೆ ತಪ್ಪಿಸಿಕೊಳ್ಳಲು ಬಾಲಕ ಓಡುವ ವೇಳೆ ಬಾಲಕ ನೆಲದ ಮೇಲೆ ಬಿದ್ದಿದ್ದಾನೆ. ಈ ಸಂದರ್ಭ ನಾಯಿಗಳು ಬಾಲಕನ ಮೇಲೆ ಎರಗಿವೆ. ಕೂಡಲೇ ಬಾಲಕ ಕಿರುಚಿಕೊಂಡಿದ್ದು, ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದಾರೆ. ಸ್ಥಳೀಯರು ಬಂದು ನಾಯಿಗಳನ್ನು ಓಡಿಸಿದ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಬಾಲಕನ ಮೇಲೆ ಶ್ವಾನಗಳು ದಾಳಿ ನಡೆಸಿದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

* ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬಾಣಂತಿ ಬಲಿ

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬಾಣಂತಿ ತಾಯಿಯ ನಿಧನ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಮಹಿಳೆಯೊಬ್ಬರು ಸಿ-ಸೆಕ್ಷನ್‌ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೇವಲ ಒಂದೇ ದಿನಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ಡಿ. 22ಕ್ಕೆ ನಿಧನರಾಗಿದ್ದಾರೆ. ವೈದ್ಯಕೀಯ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣವಾಗಿದೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. 28 ವರ್ಷದ ತಾಯಿ ವೈಶಾಲಿ ಕೊಟಬಾಗಿ ಶನಿವಾರ ಬಿಮ್ಸ್‌ನ ಲೇಬರ್‌ ವಾರ್ಡ್‌ಗೆ ದಾಖಲಾಗಿದ್ದು, ಯಶಸ್ವಿಯಾಗಿ ತನ್ನ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಡಿ. 22ರಂದು ಬೆಳಗಿನ ಜಾವದವರೆಗೂ ವೈಶಾಲಿಯ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು ಎಂದು ಆಕೆಯ ಅತ್ತೆ ಈರವ್ವ ತಿಳಿಸಿದ್ದಾರೆ. ಆದಾಗ್ಯೂ, ಬೆಳಿಗ್ಗೆ 7 ಗಂಟೆಯ ಸುಮಾರಿಗೆ, ವೈಶಾಲಿ ಎದೆನೋವು ಎಂದು ತಿಳಿಸಿದ್ದಾರೆ. ತಿಳಿಸಿ ಹಲವು ಹೊತ್ತಾದರೂ ಚಿಕಿತ್ಸೆಗೆ ತಡ ಮಾಡಿದ್ದೇ ಆಕೆಯ ಸಾವಿಗೆ ಕಾರಣ ಎನ್ನಲಾಗಿದೆ.
ಬೆಳಿಗ್ಗೆ 7 ಗಂಟೆಯ ಸುಮಾರಿಗೆ, ವೈಶಾಲಿ ಎದೆನೋವಿನ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು. ಆ ನೋವು ವೇಗವಾಗಿ ಉಲ್ಬಣಗೊಂಡಿದೆ. ಕೆಲವು ಸಮಯದ ನಂತರ ಆಕೆಯನ್ನು ಐಸಿಯುಗೆ ವರ್ಗಾಯಿಸಲಾಯಿತು, ಆದರೆ ಆಕೆಯ ಸ್ಥಿತಿಯು ಹದಗೆಡುತ್ತಲೇ ಇತ್ತು. ಹಾಜರಾದ ವೈದ್ಯರು ಎದೆನೋವಿಗೆ ಚಿಕಿತ್ಸೆ ನೀಡಿ ಆಕೆಯ ಜೀವ ಉಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ದೃಢಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಮ್ಸ್ ನಿರ್ದೇಶಕ ಡಾ.ಅಶೋಕ್ ಕುಮಾರ್ ಶೆಟ್ಟಿ, ಆಕೆಯ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯಕ್ಕಿಂತ ಹೃದಯ ಸಂಬಂಧಿ ತೊಡಕುಗಳೇ ಕಾರಣ ಎಂದು ಹೇಳಿದ್ದಾರೆ. ವೈಶಾಲಿ ಕುಟುಂಬದ ದೂರಿನ ಮೇರೆಗೆ ಆಂತರಿಕ ತನಿಖೆ ನಡೆಸಲಾಗುವುದು ಎಂದು ಡಾ.ಶೆಟ್ಟಿ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ 3,350 ತಾಯಂದಿರ ಸಾವುಗಳು ಸಂಭವಿಸಿವೆ ಎಂದು ಮುಖ್ಯಮಂತ್ರಿಗಳ ಕಚೇರಿ ಸೋಮವಾರ ತಿಳಿಸಿದೆ. ಸರ್ಕಾರ ನೀಡಿದ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ ಸಾವುನೋವುಗಳು ಇಳಿಮುಖವಾಗಿವೆ.