Categories
ರಾಜ್ಯ

ಅತೀ ಹೆಚ್ಚು ಚಳಿ: ಹುಷಾರ್!

ಅತೀ ಹೆಚ್ಚು ಚಳಿ: ಹುಷಾರ್!
– ರಾಜ್ಯದ 15 ಜಿಲ್ಲೆಗಳಿಗೆ ಭಾರೀ ಚಳಿ
– ಮುಂದಿನ 5 ದಿನ ಭಾರೀ ಚಳಿ ಇರುವ ಸಾಧ್ಯತೆ
– ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

NAMMUR EXPRESS NEWS
ರಾಜ್ಯಾದ್ಯಂತ ಒಣಹವೆ ಇದ್ದು, ಬೆಳಗ್ಗೆ ಹಾಗೂ ಸಂಜೆಯ ಬಳಿಕ ಭಾರೀ ಚಳಿಯ ವಾತಾವರಣ ಇದೆ. ರಾಜ್ಯದ 15 ಜಿಲ್ಲೆಗಳಿಗೆ ಈ ವಾರ ಭಾರೀ ಚಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಎಲ್ಲೆಲ್ಲಿ ಭಾರೀ ಚಳಿ?
ಮುಂದಿನ 5 ದಿನ ಹೊನ್ನಾವರ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಹಾವೇರಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ದಾವಣಗೆರೆ, ಚಿಂತಾಮಣಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ° C ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ

ಬೆಂಗಳೂರು ನಗರ ಮತ್ತು ನೆರೆಹೊರೆಯ ಜಿಲ್ಲೆಗಳಿಗೆ ಮುನ್ಸೂಚನೆ

ಬೆಂಗಳೂರಲ್ಲಿ ಕಳೆದ ಎರಡು ದಿನದಿಂದ ಚಳಿ ಹೆಚ್ಚಾಗಿದ್ದು ಬೆಳಗ್ಗೆ ಹಾಗೂ ರಾತ್ರಿ ಸಮಯ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಹಗಲಿನಲ್ಲಿ ಮುಖ್ಯವಾಗಿ ಮೋಡವಿಲ್ಲದ ಆಕಾಶ ಇರುತ್ತದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ಮಂಜು ಇದೆ, ಮುಂದಿನ 48 ಗಂಟೆಗಳ ಕಾಲ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 13 ° C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಭಾರಿ ಶೀತಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಉತ್ತರ ಭಾರತದಲ್ಲಿ ಬೀಸುತ್ತಿರುವ ಶೀತಗಾಳಿ ಪ್ರಭಾವದಿಂದ ನಗರದಲ್ಲಿ ತಾಪಮಾನ ಸಾಕಷ್ಟು ತಗ್ಗಲಿದೆ. ಜನವರಿ ತಿಂಗಳ ಸರಾಸರಿ ಕನಿಷ್ಠ ತಾಪಮಾನವು 15.8 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಈ ವಾರದಲ್ಲಿ ಕನಿಷ್ಠ ತಾಪಮಾನ 10 ರಿಂದ 12 ಡಿ.ಸೆಲ್ಸಿಯಸ್‌ನಷ್ಟು ಇಳಿಕೆಯಾಗಲಿದೆ ಎಂದು ಇಲಾಖೆ ಹೇಳಿದೆ.

Categories
ರಾಜ್ಯ

ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ

ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ
– ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನ
– ಜ.6ಕ್ಕೆ ಸಾಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

NAMMUR EXPRESS NEWS
ಶಿವಮೊಗ್ಗ: ಹಿರಿಯ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 5ರಂದು ಸಂಜೆ 7:30ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೂಜ್ಯ ತಂದೆ ದೈವಾಧೀನರಾಗಿದ್ದಾರೆ.ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ತಿಳಿಸಿದ್ದಾರೆ.

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಪರಶಿವನ ಕೃಪೆಯಿಂದ ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ನಿಮ್ಮ ಅನೇಕ ಯೋಜನೆಗಳು ಇಂದು ನಿಜವಾಗುತ್ತವೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚುತ್ತದೆ ಮತ್ತು ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಾಗುತ್ತದೆ. ಹಣಕಾಸಿನ ಲಾಭ ಮತ್ತು ವೆಚ್ಚಗಳೆರಡೂ ಅಧಿಕವಾಗಿರುತ್ತದೆ. ಹಣದ ವಿಭಜನೆಗೆ ಸಂಬಂಧಿಸಿದ ವಿವಾದಗಳನ್ನು ತಪ್ಪಿಸಿ ಮತ್ತು ಆಕ್ರಮಣಶೀಲತೆಯಿಂದ ದೂರವಿರಿ. ಆರೋಗ್ಯವು ಸಾಮಾನ್ಯವಾಗಿರುತ್ತದೆ, ಆದರೆ ಆಹಾರದ ಬಗ್ಗೆ ಗಮನ ಕೊಡಿ.

** ವೃಷಭ ರಾಶಿ :
ಇಂದು ಕೆಲಸದ ಸ್ಥಳದಲ್ಲಿ ನೀವು ಹೊಸ ಜವಾಬ್ದಾರಿಗಳನ್ನು ಪಡೆಯಬಹುದು, ಅದನ್ನು ನೀವು ಯಶಸ್ವಿಯಾಗಿ ನಿರ್ವಹಿಸುವಿರಿ. ಹಣಕಾಸಿನ ಸ್ಥಿತಿ ಬಲವಾಗಿರುತ್ತದೆ, ಆದರೆ ಅನಗತ್ಯ ವೆಚ್ಚಗಳನ್ನು ತಪ್ಪಿಸಿ. ಕುಟುಂಬದಲ್ಲಿ ಕೆಲವು ಧಾರ್ಮಿಕ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಿದೆ. ಆರೋಗ್ಯ, ವಿಶೇಷವಾಗಿ ಗಂಟಲು ಮತ್ತು ಕುತ್ತಿಗೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜಾಗರೂಕರಾಗಿರಿ.

** ಮಿಥುನ ರಾಶಿ :
ಆರ್ಥಿಕ ದೃಷ್ಟಿಯಿಂದ ಈ ದಿನ ಮಿಶ್ರವಾಗಿರುತ್ತದೆ. ಆದಾಯದ ಮೂಲಗಳು ಹೆಚ್ಚಾಗುತ್ತವೆ, ಆದರೆ ವೆಚ್ಚಗಳ ಮೇಲೆ ನಿಯಂತ್ರಣ ಅಗತ್ಯ. ಉನ್ನತ ಅಧಿಕಾರಿಗಳೊಂದಿಗಿನ ವಿವಾದಗಳನ್ನು ತಪ್ಪಿಸಿ. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಗಮನ ಕೊಡಿ. ಹೊಸ ಅವಕಾಶಗಳಿವೆ, ಆದರೆ ಆಕ್ರಮಣಶೀಲತೆಯನ್ನು ತಪ್ಪಿಸಬೇಕಾಗುತ್ತದೆ.

** ಕರ್ಕಾಟಕ ರಾಶಿ :
ಈ ದಿನದ ಆರಂಭದಲ್ಲಿ ನೀವು ಕೆಲಸದ ಸ್ಥಳದಲ್ಲಿ ಸವಾಲುಗಳನ್ನು ಎದುರಿಸಬಹುದು, ಆದರೆ ಇಂದು ತಾಳ್ಮೆಯಿಂದ ನೀವು ಯಶಸ್ವಿಯಾಗುತ್ತೀರಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಇರಬಹುದು. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸಿ. ಮಾನಸಿಕ ಶಾಂತಿಗಾಗಿ ಧ್ಯಾನ ಅಥವಾ ಯೋಗದ ಸಹಾಯವನ್ನು ತೆಗೆದುಕೊಳ್ಳಿ.

** ಸಿಂಹ ರಾಶಿ :
ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಯತ್ನಗಳನ್ನು ಪ್ರಶಂಸಿಸಲಾಗುತ್ತದೆ ಮತ್ತು ಬಡ್ತಿಯ ಸಾಧ್ಯತೆಗಳಿವೆ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ, ಆದರೆ ವೆಚ್ಚಗಳನ್ನು ನಿಯಂತ್ರಣದಲ್ಲಿಡಿ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ.

** ಕನ್ಯಾ ರಾಶಿ :
ಇಂದು ನೀವು ಕೆಲಸದ ಸ್ಥಳದಲ್ಲಿ ಹೊಸ ಸವಾಲುಗಳನ್ನು ಎದುರಿಸಬೇಕಾಗಬಹುದು, ಆದರೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಯಶಸ್ಸಿಗೆ ಕಾರಣವಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಚಿಂತನಶೀಲ ನಿರ್ಧಾರಗಳನ್ನು ತೆಗೆದುಕೊಳ್ಳಿ ಮತ್ತು ಅನಗತ್ಯ ವೆಚ್ಚಗಳನ್ನು ತಪ್ಪಿಸಿ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು, ಅದನ್ನು ಮಾತುಕತೆಯ ಮೂಲಕ ಪರಿಹರಿಸಬೇಕು.

** ತುಲಾ ರಾಶಿ :
ಈ ದಿನದ ಆರಂಭದಲ್ಲಿ ಕೆಲಸದ ಸ್ಥಳದಲ್ಲಿ ಹೆಚ್ಚಿನ ಕಾರ್ಯನಿರತತೆ ಇರುತ್ತದೆ, ಆದರೆ ನಿಮ್ಮ ಪ್ರಯತ್ನದಿಂದ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ನೀವು ಹಳೆಯ ಹೂಡಿಕೆಗಳಿಂದ ಲಾಭವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ ಮತ್ತು ನೀವು ಕೆಲವು ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತೀರಿ.

** ವೃಶ್ಚಿಕ ರಾಶಿ :
ಇಂದು ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆ ಸುಧಾರಿಸುತ್ತದೆ ಮತ್ತು ನೀವು ಹಿರಿಯ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಹಣಕಾಸಿನ ವಿಷಯಗಳಲ್ಲಿ ಲಾಭದ ಸಾಧ್ಯತೆಗಳಿವೆ, ಆದರೆ ವೆಚ್ಚಗಳ ಮೇಲೆ ನಿಯಂತ್ರಣ ಅಗತ್ಯ. ಕುಟುಂಬದ ಸದಸ್ಯರೊಂದಿಗೆ ವಿವಾದ ಉಂಟಾಗಬಹುದು, ಅದನ್ನು ಬುದ್ಧಿವಂತಿಕೆಯಿಂದ ಪರಿಹರಿಸಿ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ ಮತ್ತು ನಿಯಮಿತ ತಪಾಸಣೆಗಳನ್ನು ಮಾಡಿ.

** ಧನಸ್ಸು ರಾಶಿ :
ಇಂದು ಕೆಲಸದ ಸ್ಥಳದಲ್ಲಿ ನೀವು ಹೊಸ ಜವಾಬ್ದಾರಿಗಳನ್ನು ಪಡೆಯುತ್ತೀರಿ, ಅದನ್ನು ನೀವು ಯಶಸ್ವಿಯಾಗಿ ನಿರ್ವಹಿಸುವಿರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ, ಆದರೆ ವೆಚ್ಚಗಳಿಗೆ ಗಮನ ಕೊಡಿ. ಆರೋಗ್ಯವು ಸಾಮಾನ್ಯವಾಗಿರುತ್ತದೆ, ಆದರೆ ಅಧಿಕ ರಕ್ತದೊತ್ತಡ ಮತ್ತು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳ ಬಗ್ಗೆ ಜಾಗರೂಕರಾಗಿರಿ. ಪ್ರೇಮ ಸಂಬಂಧಗಳಲ್ಲಿ ಏರಿಳಿತಗಳಿರಬಹುದು. ಮುಕ್ತ ಸಂವಹನದ ಮೂಲಕ ಸಂಬಂಧಗಳಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಿ.

** ಮಕರ ರಾಶಿ :
ಇಂದು ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಯತ್ನಗಳನ್ನು ಪ್ರಶಂಸಿಸಲಾಗುತ್ತದೆ ಮತ್ತು ಬಡ್ತಿಯ ಸಾಧ್ಯತೆಗಳಿವೆ. ಹಣಕಾಸಿನ ಸ್ಥಿತಿಯು ಬಲವಾಗಿರುತ್ತದೆ ಮತ್ತು ಹೊಸ ಹೂಡಿಕೆ ಅವಕಾಶಗಳು ಲಭ್ಯವಿರುತ್ತವೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಮತ್ತು ಕೆಲವು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಿದೆ. ಆರೋಗ್ಯವು ಉತ್ತಮವಾಗಿರುತ್ತದೆ.

** ಕುಂಭ ರಾಶಿ :
ಇಂದು ಕೆಲಸದ ಸ್ಥಳದಲ್ಲಿ ಹೊಸ ಯೋಜನೆಗಳಲ್ಲಿ ಹೆಚ್ಚಿನ ಕಾರ್ಯನಿರತತೆ ಇರುತ್ತದೆ. ನಿಮ್ಮ ಆಲೋಚನೆಗಳನ್ನು ಪ್ರಶಂಸಿಸಲಾಗುತ್ತದೆ ಮತ್ತು ತಂಡದೊಂದಿಗೆ ಒಟ್ಟಾಗಿ ಕೆಲಸ ಮಾಡುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಹಣಕಾಸಿನ ವಿಷಯಗಳಲ್ಲಿ ಲಾಭದ ಸಾಧ್ಯತೆಗಳಿವೆ, ಆದರೆ ವೆಚ್ಚಗಳ ಮೇಲೆ ನಿಯಂತ್ರಣ ಅಗತ್ಯ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು, ಅದನ್ನು ಮಾತುಕತೆಯ ಮೂಲಕ ಪರಿಹರಿಸಬೇಕು.

** ಮೀನ ರಾಶಿ :
ಈ ದಿನದ ಆರಂಭದಲ್ಲಿ ನೀವು ಕೆಲಸದ ಸ್ಥಳದಲ್ಲಿ ಸವಾಲುಗಳನ್ನು ಎದುರಿಸಬಹುದು, ಆದರೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಯಶಸ್ಸಿಗೆ ಕಾರಣವಾಗುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ನೀವು ಹಳೆಯ ಹೂಡಿಕೆಗಳಿಂದ ಲಾಭವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ ಮತ್ತು ನೀವು ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶವನ್ನು ಪಡೆಯುತ್ತೀರಿ.

Categories
ರಾಜ್ಯ

ಶರಣಾಗತಿಗೆ ನಿರ್ಧರಿಸಿದ 6 ನಕ್ಸಲರು..!!??

ಶರಣಾಗತಿಗೆ ನಿರ್ಧರಿಸಿದ 6 ನಕ್ಸಲರು..!!??
* ಕರ್ನಾಟಕ,ಕೇರಳ, ಆಂಧ್ರಪ್ರದೇಶ ಮೂರು ರಾಜ್ಯಗಳಿಗೆ ಬೇಕಾದ ಮೋಸ್ಟ್ ವಾಂಟೆಡ್ ನಕ್ಸಲರು
* ಶಾಂತಿಗಾಗಿ ನಾಗರೀಕ ವೇದಿಕೆಗೆ ಪತ್ರ ಬರೆದ ನಕ್ಸಲರು

NAMMUR EXPRESS NEWS
ಚಿಕ್ಕಮಗಳೂರು: ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ಕೂಂಬಿಂಗ್ ನಡೆಸಿದ ಎಎನ್ಎಫ್ ಸಿಬ್ಬಂಧಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ್ದರು. ಈ ಎನ್‌ಕೌಂಟರ್ ಬಳಿಕ ಇದೀಗ 6 ಮಂದಿ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಶರಣಾಗತಿ ಆಗಲು ನಿರ್ಧಾರಿಸಿದ ನಕ್ಸಲರು ಕರ್ನಾಟಕ, ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲರಾಗಿದ್ದು, ಕರ್ನಾಟಕದ ನಕ್ಸಲ್ ತುಂಗಾ ದಳದ ನಕ್ಸಲ್ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ ವಾಂಟೆಡ್ ನಕ್ಸಲ್ ಜೀಶ ಆಂಧ್ರಪ್ರದೇಶದ ಕೆ. ವಸಂತ್, ಮಾರಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದಾರೆ.
ಈ ಬಗ್ಗೆ ಶಾಂತಿಗಾಗಿ ನಕ್ಸಲರು ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಸದಸ್ಯರು ಚರ್ಚಿಸಿದ್ದಾರೆ. ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೂರು ತಿಂಗಳಿನಿಂದ ಚಿಕ್ಕಮಗಳೂರು ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ನಡೆಯುತ್ತಿತ್ತು. ವಿಕ್ರಂ ಎನ್ಕೌಂಟರ್ ಬಳಿಕ ಸರ್ಕಾರ ನಕ್ಸಲರಿಗೆ ಶರಣಾಗತಿಗೆ ಆದ್ಯತೆ ನೀಡಿತ್ತು. ಹಾಗಾಗಿ ಇದೀಗ 6 ನಕ್ಸಲರು ತಾವಾಗಿಯೇ ಶರಣಾಗತಿಗೆ ನಿರ್ಧಾರ ಕೈಗೊಂಡಿದ್ದಾರೆ.

Categories
ಚಿಕ್ಕಮಗಳೂರು

ನಿಲ್ಲದ ಕಾಡು ಪ್ರಾಣಿಗಳ ಹಾವಳಿ..!!

ನಿಲ್ಲದ ಕಾಡು ಪ್ರಾಣಿಗಳ ಹಾವಳಿ..!!
– ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ
– ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ನಡೆದ ಘಟನೆ

NAMMUR EXPRESS NEWS
ಎನ್ ಆರ್ ಪುರ: ತಾಲೂಕಿನ ಮುತ್ತಿನ ಕೊಪ್ಪ ಸಮೀಪದ ತೋಟದ ಕೆರೆ ಎಂಬಲ್ಲಿ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಶನಿವಾರ ರಾತ್ರಿ 7:30 ರ ಸುಮಾರಿಗೆ ಘಟನೆ ನಡೆದಿದ್ದು ಘಟನೆಯಲ್ಲಿ ಶಶಿಧರ್ ಎಂಬವರು ಗಾಯಗೊಂಡಿದ್ದಾರೆ, ಗಾಯಾಳವನ್ನು ಸ್ಥಳೀಯ ಗ್ರಾಮಸ್ಥರು ಉಪಚರಿಸಿ, ಆ ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲಸಕ್ಕೆಂದು ಬೇರೆ ಊರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತೋಟದ ಕೆರೆ ಸಮೀಪ ಶಶಿಧರ್ ರವರಿಗೆ ಅಡ್ಡಲಾಗಿ ಬಂದು ಹುಲಿಯೊಂದು ಬೈಕ್ ಮೇಲೆ ಹಾರಿದ ಅನುಭವ ಆಗಿದೆ. ಮಿಂಚಿನಂತೆ ನಡೆದ ಘಟನೆಯಲ್ಲಿ ಬೈಕ್‌ನಿಂದ ಶಶಿಧ‌ರ್ ಕೆಳಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಅಲ್ಲಿಗೆ ಅಯ್ಯಪ್ಪಸ್ವಾಮಿ ಭಕ್ತರಿದ್ದ ಟಿ ಟಿ ಯೊಂದು ಬಂದಿದ್ದು, ಹೀಗಾಗಿ ಅದರ ಬೆಳಕಿಗೆ ವನ್ಯಜೀವಿ ಕಾಡಿನತ್ತ ಓಡಿದೆ ಎನ್ನಲಾಗಿದೆ.

ಗಾಯಾಳು ಶಶಿಧರ್ ಹೇಳಿದ್ದೇನು..??
ಕಾಡಿನ ದಾರಿಯಲ್ಲಿ ಹೋಗುತ್ತಿದ್ದವೇಳೆ ತುಸು ಭಯವಿರುತ್ತೆ. ಹಾಗಾಗಿ ಸ್ವಲ್ಪ ಸ್ಪೀಡಾಗಿ ಬೈಕ್‌ನಲ್ಲಿ ಹೋಗುತ್ತಿದ್ದೆ. ಈ ವೇಳೆ ಅಲ್ಲಿಯೇ ರಸ್ತೆ ಪಕ್ಕದಲ್ಲಿನ ಟ್ರಂಚ್‌ವೊಂದರ ಬಳಿ ಹುಲಿಯ ರೀತಿಯ ಪ್ರಾಣಿಯೊಂದು ಕಾಣಿಸಿತು ಆದರೆ ವೇಗವಾಗಿದ್ದರಿಂದ ಅದರ ಬಗ್ಗೆ ಗಮನಕೊಡಲಿಲ್ಲ. ಅಷ್ಟೊತ್ತಿಗಾಗಲೇ ಧೀಢೀರ್‌ನೆ ಹಾರಿದ ಪ್ರಾಣಿ ಸೀದಾ ನನ್ನ ಬೈಕ್‌ನ ಬಂಪ‌ರ್ ಮೇಲೆ ಬಿದ್ದಿದೆ. ನಾನು ಆಯತಪ್ಪಿ ಅಲ್ಲಿಯೇ ಬಿದ್ದೆ. ಅಲ್ಲದೇ ಭಯದಿಂದ ಮೇಲಕ್ಕೆ ಏಳಲು ಸಹ ಸಾಧ್ಯವಾಗಲಿಲ್ಲ, ಮೇಲಾಗಿ ವನ್ಯಜೀವಿ ಮತ್ತೆ ದಾಳಿ ಮಾಡುವ ಆತಂಕ ಇತ್ತು. ಅಷ್ಟೊತ್ತಿಗೆ ಅಲ್ಲಿಗೆ ಟಿ ಟಿ ಯೊಂದು ಬಂದಿದೆ. ಅದರ ಬೆಳಕಿಗೆ ಪ್ರಾಣಿ ಕಾಡಿನತ್ತ ಓಡಿದಂತೆ ಕಾಣಿತು. ಆನಂತರ ಮುತ್ತಿನಕೊಪ್ಪದ ಯುವಕನೊಬ್ಬ ನನ್ನ ಸ್ಥಿತಿ ಕಂಡು ನೀರು ಕೊಟ್ಟು ಉಪಚರಿಸಿದ್ದಾರೆ. ಆನಂತರ ಅಲ್ಲಿಯೇ ಹತ್ತಿರ ಇರುವ ಹಳ್ಳಿಗೆ ಕರೆದುಕೊಂಡು ಹೋಗಿದ್ದಾರೆ, ಅಲ್ಲಿನ ಜನರು ತಮ್ಮನ್ನು ಉಪಚರಿಸಿದ್ದು, ಈ ವೇಳೆ ಅಲ್ಲಿನ ಹಳ್ಳಿಯ ಜನರ ಪೈಕಿ ಈ ಭಾಗದ ಕೆರೆಯೊಂದರ ಬಳಿ ಹುಲಿಯಿದ್ದು, ಅದರ ಘರ್ಜನೆ ಕೇಳಿದ್ದಾಗಿ ಹೇಳಿದರು. ಆದರೆ ಮತ್ತೆ ಕೆಲವರು ತಮ್ಮ ಮೇಲೆ ದಾಳಿ ನಡೆಸಿದ್ದು ಹುಲಿಯಲ್ಲ ಚಿರತೆ ಎಂದು ಹೇಳಿದ್ದಾರೆ. ಆದರೆ ನನ್ನ ಕಣ್ಣಿಗೆ ದಾಳಿ ಮಾಡಿದ ಪ್ರಾಣಿ ಹುಲಿಯಂತೆ ಕಂಡಿದೆ. ಗಾಬರಿಯಲ್ಲಿ ಪೂರ್ಣ ರೀತಿಯಲ್ಲಿ ಜಡ್ಜ್ ಮಾಡಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಿಸಿಕೊಳ್ಳುತ್ತಿರುವ ಶಶಿಧರ್ ಹೇಳಿದ್ದಾರೆ.

Categories
ಹಾಸನ

ಹಾಸನ ಟಾಪ್ ನ್ಯೂಸ್

ಹಾಸನ ಟಾಪ್ ನ್ಯೂಸ್

– ಕುಡಿಯಲು ಹಣ ಕೊಡಲಿಲ್ಲ ಎಂದು ತಂದೆ ಕೊಂದ ಪಾಪಿ ಮಗ!
– ಕುಡಿಯಲು ಹಣ ಹಾಗೂ ಬೈಕ್ ಕೀ ಕೊಡಲಿಲ್ಲ ಎಂದು ಕೊಲೆ
– ಜೋಡಿ ಆನೆ ಪ್ರತ್ಯಕ್ಷ: 50ಕ್ಕೂ ಕಾಡಾನೆಗಳ ಉಪಟಳ!

NAMMUR EXPRESS NEWS
ಬೇಲೂರು:
ಕುಡಿಯಲು ಹಣ ಹಾಗೂ ಬೈಕ್ ಕೀ ಕೊಡಲಿಲ್ಲ ಎಂಬ ಕಾರಣಕ್ಕೆ ಮಗನೇ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಶಶಿಧರ್ ಪೂಜಾರಿ(೬೪) ಮೃತರು. ಹಿರಿಯ ಮಗ ದಿನೇಶ(೩೫) ಎಂಬಾತ ಈ ಕೃತ್ಯ ಎಸಗಿದ್ದು, ಹಂತಕನನ್ನು ಅರೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾಗಿರುವ ಶಶಿಧರ್ ಪೂಜಾರಿ-ಕಲ್ಯಾಣಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಮೊದಲನೇ ಮಗ ದಿನೇಶನಿಗೆ ಮದುವೆ ಮಾಡಲಾಗಿತ್ತು. ಆದರೆ ಸಂಸಾರ ಹಳಿತಪ್ಪಿ ವಿಚ್ಚೇದನ ಆಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ. ೨ನೇ ಮಗಳು ಆಶಾ(೩೨), ಮಂಗಳೂರಿನ ಮಾಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ದಿನೇಶ ವಿಪರೀತ ಕುಡಿಯುವ ಚಟ ಹೊಂದಿದ್ದು, ಪ್ರತಿದಿನ ಕುಡಿದು ಬಂದು ತಂದೆ-ತಾಯಿಯೊಂದಿಗೆ ಜಗಳ ಆಡುತ್ತಿದ್ದ. ಮತ್ತಷ್ಟು ಕುಡಿಯಲು ದುಡ್ಡು ಕೊಡುವಂತೆ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಹಣ ಕೊಡದೆ ಇದ್ದರೆ ಹಲ್ಲೆ ಮಾಡಿ ತೊಂದರೆ ಕೊಡುತ್ತಿದ್ದ. ಆರೋಪಿ ದಿನೇಶ್ ತಾಯಿ ಕಲ್ಯಾಣಿ ಅವರು, ಅರೇಹಳ್ಳಿಯ ಸಂತೋಷನಗರದಲ್ಲಿರುವ ಅಣ್ಣ ರಾಜು ಎಂಬುವರಿಗೆ ಸಂಜೆ ೭.೩೦ ರಲ್ಲಿ ದೂರವಾಣಿ ಕರೆ ಮಾಡಿ
ದಿನೇಶ ಕುಡಿದು ಬಂದು ಗಲಾಟೆ ಮಾಡಿ ಕುಡಿಯಲು ಹಣ ನೀಡುವಂತೆ ಹಾಗೂ ಬೈಕ್ ಕೀ ನೀಡುವಂತೆ ಕೇಳಿದ. ನಾವು ಹಣ ಮತ್ತು ಬೈಕ್ ಕೀ ಕೊಡದೇ ಇದ್ದಾಗ ನನ್ನ ಪತಿ ಶಶಿಧರ್ ಪೂಜಾರಿ ಅವರಿಗೆ ವಿಪರೀತ ಹೊಡೆದು, ಎದೆಗೆ ಕಾಲಿನಿಂದ ನಾಲ್ಕೈದು ಬಾರಿ ತುಳಿದಿದ್ದಾರೆ. ಪತಿ ಎದೆ ನೋವು ಎಂದು ಬಿದ್ದು ಒದ್ದಾಡುತ್ತಿದ್ದಾರೆಂದು ತಿಳಿಸಿದರು. ಕೂಡಲೇ ಅಲ್ಲಿಗೆ ದೌಡಾಯಿಸಿದ ರಾಜು ಹಾಗೂ ಇತರರು, ಶಶಿಧರ್ ಅವರನ್ನು ಅರೇಹಳ್ಳಿ ಆಸ್ಪತ್ರೆಗೆ ಕರೆತಂದರು. ಆದರೆ ವೈದ್ಯರು ಚಿಕಿತ್ಸೆ ಕೊಡುತ್ತಿರುವಾಗಲೇ ಶಶಿಧರ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿಯೇ ರಾತ್ರಿ ೮.೩೦ ರ ಸುಮಾರಿಗೆ ಮೃತಪಟ್ಟಿದ್ದಾರೆ.
ಹೃದಯಾಘಾತ ನಾಟಕ:ಆದರೆ ತಂದೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿ, ಎದೆ ಭಾಗಕ್ಕೆ ಬಲವಾಗಿ ಒದ್ದು ಜೀವ ತೆಗೆದ ಪಾಪಿ ಪುತ್ರ, ಹೃದಯಾಘಾತ ತಂದೆ ಮೃತಪಟ್ಟರು ಎಂದು ಬಿಂಬಿಸಲು ನಾಟಕ ಆಡಿದ್ದ. ಕುಡಿದ ಮತ್ತಿನಲ್ಲಿ ಮಾಡಬಾರದ್ದನ್ನು ಮಾಡಿದ ಪಾಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮೃತರ ಸಂಬಂಧಿಕರು ನೀಡಿದ ದೂರಿನ ಮೇಲೆ ಆರೋಪಿಯನ್ನು ಬಂಧಿಸಿ ಅರೇಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜೋಡಿ ಆನೆ ಪ್ರತ್ಯಕ್ಷ: 50ಕ್ಕೂ ಕಾಡಾನೆಗಳ ಉಪಟಳ!

ಬೇಲೂರು ತಾಲ್ಲೂಕಿನ, ಮಲ್ಲಾಪುರ-ಮೊವ್ವಲ ರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಜೋಡಿ ಕಾಡಾನೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದವು.
ರಸ್ತೆಯಲ್ಲಿ ನಿಧಾನವಾಗಿ ನಡೆಯುತ್ತ ಬಂದ ಎರಡು ಸಲಗಗಳನ್ನು ಕಂಡ ವಾಹನ ಸವಾರರು, ಭಯಭೀತರಾಗಿ ರಸ್ತೆಯಲ್ಲಿಯೇ ತಮ್ಮ ತಮ್ಮ ವಾಹನ ನಿಲ್ಲಿಸಿಕೊಂಡು ಕೆಲ ಹೊತ್ತು ನಿಲ್ಲಬೇಕಾಯಿತು. ಯಾರಿಗೂ ಕೇರ್ ಮಾಡದೆ ಕೆಲ ದೂರ ರಸ್ತೆಯಲ್ಲಿ ನಡೆದುಕೊಂಡು ಬಂದು ಆನೆಗಳು, ನಂತರ ಕಾಫಿ ತೋಟದೊಳಗೆ ಹೋದವು.
ಕಾಫಿ ತೋಟಕ್ಕೆ ಕಾಡಾನೆಗಳು ಹೋದ ನಂತರ ವಾಹನ ಸವಾರರು ತೆರಳಿದರು. ಈಗಲೂ ಆನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟಿವೆ. ಬೇಲೂರು ಭಾಗದಲ್ಲಿ ಸುಮಾರು 50ಕ್ಕೂ ಕಾಡಾನೆ ಹಿಂಡು ನೆಲೆಸಿದ್ದು, ಈಗಾಗಲೇ ಕಾಡಾನೆಗಳ ಉಪಟಳದಿಂದ ಜನರು, ರೈತರು ಹಾಗೂ ಕಾಫಿ ಬೆಳೆಗಾರರು ಹೈರಾಣಾಗಿದ್ದಾರೆ.

Categories
ಜಾತಕ

ಈ ದಿನದ ರಾಶಿ ಭವಿಷ್ಯ ಹೇಗಿದೆ?

ಈ ದಿನದ ರಾಶಿ ಭವಿಷ್ಯ ಹೇಗಿದೆ?
– ಯಾವ ರಾಶಿಯವರಿಗೆ ಶುಭ ? ಯಾವ ರಾಶಿಯವರಿಗೆ ಅಶುಭ ?

NAMMUR EXPRESS NEWS
ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು?

** ಮೇಷ ರಾಶಿ :
ಮೇಷ ರಾಶಿಯವರಿಗೆ ಇಂದು ಉತ್ತಮ ಫಲಿತಾಂಶ ತಂದಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ತಾಯಿಯ ಆರೋಗ್ಯ ಮೊದಲಿಗಿಂತ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿರುವವರಿಗೆ ಹೊಸ ಜವಾಬ್ದಾರಿಗಳು ಬರಬಹುದು. ಆದಾಯ ಹೆಚ್ಚಾಗುವ ಲಕ್ಷಣಗಳಿವೆ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ವ್ಯವಹಾರದಲ್ಲಿ ನಿಮ್ಮ ಯಾವುದೇ ಯೋಜನೆಗಳು ದೀರ್ಘಕಾಲದವರೆಗೆ ಅಂಟಿಕೊಂಡಿದ್ದರೆ, ಇಂದು ಅಂತಿಮವಾಗಬಹುದು.

** ವೃಷಭ ರಾಶಿ :
ಇಂದು ನಿಮ್ಮಲ್ಲಿ ಬಹಳಷ್ಟು ಆತ್ಮವಿಶ್ವಾಸ ಇರುತ್ತದೆ, ಆದರೆ ತುಂಬಾ ಉತ್ಸಾಹದಿಂದ ದೂರವಿರಿ. ಸ್ನೇಹಿತರ ಸಹಾಯದಿಂದ ಆದಾಯ ಹೆಚ್ಚಳದ ಮೂಲಗಳು ಅಭಿವೃದ್ಧಿ ಹೊಂದಬಹುದು. ವ್ಯಾಪಾರದಿಂದ ಆದಾಯ ಹೆಚ್ಚಾಗುತ್ತದೆ. ಮನಸ್ಸು ಗೊಂದಲದಲ್ಲಿ ಉಳಿಯುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಆದಾಯದಲ್ಲಿ ಇಳಿಕೆ ಮತ್ತು ವೆಚ್ಚಗಳು ಹೆಚ್ಚಾಗುವ ಪರಿಸ್ಥಿತಿ ಇರಬಹುದು. ತಂದೆಯಿಂದ ಬೆಂಬಲ ಸಿಗಲಿದೆ.

** ಮಿಥುನ ರಾಶಿ :
ಇಂದು ನಿಮ್ಮ ಮಾತಿನ ಪ್ರಭಾವ ಹೆಚ್ಚಾಗುವುದು. ಸ್ನೇಹಿತರ ಸಹಾಯದಿಂದ ನೀವು ವ್ಯಾಪಾರ ಅವಕಾಶಗಳನ್ನು ಪಡೆಯಬಹುದು. ಓಡಾಟ ಹೆಚ್ಚು ಇರುತ್ತದೆ. ನೀವು ನಿಮ್ಮ ತಂದೆಯಿಂದ ಹಣವನ್ನು ಪಡೆಯಬಹುದು. ಮನಸ್ಸಿನಲ್ಲಿ ಕೋಪದ ಕ್ಷಣಗಳು ಮತ್ತು ತೃಪ್ತಿಯ ಕ್ಷಣಗಳು ಇರಬಹುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಖರ್ಚುಗಳು ಹೆಚ್ಚಾಗುತ್ತವೆ, ಆದರೆ ಸ್ವಭಾವದಲ್ಲಿ ಕಿರಿಕಿರಿ ಇರುತ್ತದೆ.

** ಕರ್ಕಾಟಕ ರಾಶಿ :
ಇಂದು ಮನಸ್ಸು ಸಂತೋಷವಾಗುತ್ತದೆ. ಪೂರ್ಣ ವಿಶ್ವಾಸ ಇರುತ್ತದೆ. ದಾಂಪತ್ಯ ಸುಖ ಹೆಚ್ಚಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಬಹುದು. ಕೋಪದ ಕ್ಷಣಗಳು ಮತ್ತು ಸಮಾಧಾನದ ಕ್ಷಣಗಳು ಇರಬಹುದು. ಸಂಭಾಷಣೆಯಲ್ಲಿ ತಾಳ್ಮೆಯಿಂದಿರಿ. ಕುಟುಂಬದಿಂದ ಬೆಂಬಲ ಸಿಗಲಿದೆ. ವ್ಯವಹಾರದಲ್ಲಿ ತೊಂದರೆಗಳಿರಬಹುದು.

** ಸಿಂಹ ರಾಶಿ :
ಇಂದು ಅತಿಯಾದ ಕೋಪವನ್ನು ತಪ್ಪಿಸಿ. ಉದ್ಯೋಗ ಸಂದರ್ಶನ ಇತ್ಯಾದಿಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನೀವು ಸ್ನೇಹಿತರಿಂದ ಬೆಂಬಲವನ್ನು ಸಹ ಪಡೆಯುತ್ತೀರಿ. ರುಚಿಕರವಾದ ಆಹಾರದಲ್ಲಿ ಆಸಕ್ತಿ ಹೆಚ್ಚಾಗಬಹುದು. ಮನಸ್ಸಿನಲ್ಲಿ ನಿರಾಶೆ ಮತ್ತು ಅತೃಪ್ತಿ ಇರಬಹುದು. ತಾಳ್ಮೆಯಿಂದಿರಿ. ಕಾರ್ಯ ಕ್ಷೇತ್ರದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಭರವಸೆ ಮತ್ತು ಹತಾಶೆಯ ಮಿಶ್ರ ಭಾವನೆಗಳು ಮನಸ್ಸಿನಲ್ಲಿ ಉಳಿಯುತ್ತವೆ.

** ಕನ್ಯಾ ರಾಶಿ :
ಇಂದು ಮನಸ್ಸಿನಲ್ಲಿ ಏರಿಳಿತಗಳಿರುತ್ತವೆ. ಸ್ವಯಂ ನಿಯಂತ್ರಣದಲ್ಲಿರಿ. ಕೆಲಸದ ವ್ಯಾಪ್ತಿಯಲ್ಲಿ ಬದಲಾವಣೆಯಾಗಬಹುದು. ಹೆಚ್ಚಿನ ಶ್ರಮ ಇರುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೋಪದ ಕ್ಷಣಗಳು ಮತ್ತು ಸಮಾಧಾನದ ಕ್ಷಣಗಳು ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಜೀವನವು ನೋವಿನಿಂದ ಕೂಡಿರಬಹುದು. ನಕಾರಾತ್ಮಕ ಆಲೋಚನೆಗಳು ಪರಿಣಾಮ ಬೀರಬಹುದು. ಧಾರ್ಮಿಕ ಸಂಗೀತದಲ್ಲಿ ಆಸಕ್ತಿ ಹೆಚ್ಚಾಗುತ್ತದೆ.

** ತುಲಾ ರಾಶಿ :
ಇಂದು ಮಾನಸಿಕ ಶಾಂತಿ ಇರುತ್ತದೆ, ಆದರೆ ಸಂಭಾಷಣೆಯಲ್ಲಿ ಸಂಯಮದಿಂದಿರಿ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಧಾರ್ಮಿಕ ಸಂಗೀತದ ಬಗ್ಗೆ ಆಸಕ್ತಿ ಹೆಚ್ಚಾಗಬಹುದು. ವ್ಯಾಪಾರದಲ್ಲಿ ಲಾಭದಲ್ಲಿ ಹೆಚ್ಚಳ ಕಂಡುಬರಲಿದೆ. ತಾಳ್ಮೆಯಿಂದಿರಿ. ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಪ್ರವಾಸ ಹೋಗಬಹುದು. ಪ್ರಕೃತಿಯಲ್ಲಿ ಕಿರಿಕಿರಿಯೂ ಇರಬಹುದು. ಆದಾಯದಲ್ಲಿ ಇಳಿಕೆ ಮತ್ತು ಖರ್ಚು ಹೆಚ್ಚಾಗುವ ಪರಿಸ್ಥಿತಿ ಇರುತ್ತದೆ.

** ವೃಶ್ಚಿಕ ರಾಶಿ :
ಇಂದು ತಾಳ್ಮೆಯಿಂದಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಸಂಗೀತದ ಬಗ್ಗೆ ಆಸಕ್ತಿ ಹೆಚ್ಚಾಗಬಹುದು. ಕುಟುಂಬದಿಂದ ಬೆಂಬಲ ಸಿಗಲಿದೆ. ನಿಮ್ಮ ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಮನಸ್ಸು ವಿಚಲಿತವಾಗಬಹುದು. ಕೆಲಸದ ಸ್ಥಳದಲ್ಲಿ ನೀವು ತೊಂದರೆಗಳನ್ನು ಎದುರಿಸಬಹುದು. ಶೈಕ್ಷಣಿಕ ಕೆಲಸದಲ್ಲಿ ಎಚ್ಚರವಿರಲಿ. ಮಾನಸಿಕ ಒತ್ತಡ ಇರುತ್ತದೆ.

** ಧನಸ್ಸು ರಾಶಿ :
ಇಂದು ಅನಗತ್ಯ ಕೋಪದಿಂದ ದೂರವಿರಿ. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳಿರಬಹುದು, ಆದರೆ ಸ್ಥಳ ಬದಲಾವಣೆಯ ಸಾಧ್ಯತೆಗಳೂ ಇವೆ. ಆದಾಯ ಹೆಚ್ಚಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕಲೆ ಅಥವಾ ಸಂಗೀತದಲ್ಲಿ ಆಸಕ್ತಿ ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ. ಮಕ್ಕಳ ಜವಾಬ್ದಾರಿಗಳನ್ನು ಪೂರೈಸಲಾಗುವುದು.

** ಮಕರ ರಾಶಿ :
ಇಂದು ಅನಗತ್ಯ ಕೋಪದಿಂದ ದೂರವಿರಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರ ಸಹಾಯದಿಂದ, ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಹೂಡಿಕೆ ಮಾಡಬಹುದು. ಸ್ವಯಂ ನಿಯಂತ್ರಣದಲ್ಲಿರಿ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಬೇರೆ ಸ್ಥಳಕ್ಕೆ ಹೋಗಬೇಕಾಗಬಹುದು. ಬರವಣಿಗೆ ಇತ್ಯಾದಿ ಬೌದ್ಧಿಕ ಕೆಲಸಗಳ ಮೂಲಕ ಹಣ ಗಳಿಸುವುದರ ಜೊತೆಗೆ ಮಾಡಬಹುದು.

** ಕುಂಭ ರಾಶಿ :
ಇಂದು ಅನಾವಶ್ಯಕ ಕೋಪ ಮತ್ತು ವಾದಗಳಿಂದ ದೂರವಿರಿ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಅಧಿಕ ಖರ್ಚು ಇರುತ್ತದೆ. ಯಾವುದೇ ಆಸ್ತಿಯಿಂದ ಆದಾಯ ಹೆಚ್ಚಾಗಬಹುದು. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ. ಆತ್ಮಸ್ಥೈರ್ಯ ತುಂಬುವಿರಿ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಕುಟುಂಬ ಒಟ್ಟಿಗೆ ಇರುತ್ತದೆ. ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ. ಮಾನಸಿಕ ನೆಮ್ಮದಿ ಇರುತ್ತದೆ.

** ಮೀನ ರಾಶಿ :
ಇಂದು ತಾಳ್ಮೆಯ ಕೊರತೆ ಇರುತ್ತದೆ. ಸ್ವಯಂ ನಿಯಂತ್ರಣದಲ್ಲಿರಿ. ಕಟ್ಟಡ ಸೌಕರ್ಯದಲ್ಲಿ ಹೆಚ್ಚಳವಾಗಬಹುದು. ತಂದೆಯಿಂದ ಬೆಂಬಲ ಸಿಗಲಿದೆ. ನಿಮ್ಮ ಮಕ್ಕಳಿಂದ ನೀವು ಒಳ್ಳೆಯ ಸುದ್ದಿ ಪಡೆಯಬಹುದು. ಮಾತಿನಲ್ಲಿ ಮಾಧುರ್ಯ ಇರುತ್ತದೆ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ಬದಲಾವಣೆಗಳಿರಬಹುದು. ಪ್ರಯಾಣ ವೆಚ್ಚ ಹೆಚ್ಚಾಗಬಹುದು.

Categories
ತೀರ್ಥಹಳ್ಳಿ

ತೀರ್ಥಹಳ್ಳಿಯ ಮೇಲಿನಕುರುವಳ್ಳಿಯಲ್ಲೊಂದು ವಿಭಿನ್ನ ಹೊಸ ವರ್ಷ!

ತೀರ್ಥಹಳ್ಳಿಯ ಮೇಲಿನಕುರುವಳ್ಳಿಯಲ್ಲೊಂದು ವಿಭಿನ್ನ ಹೊಸ ವರ್ಷ!
– ಹಿರಿಯ ನಾಗರಿಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
– ಜನತಾ ಬಡಾವಣೆಯಲ್ಲಿ ಮೊಳಗಿದ ಹೊಸ ವರ್ಷದ ಹರ್ಷ..!

NAMMUR EXPRESS NEWS
ತೀರ್ಥಹಳ್ಳಿ :
ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಜನತಾ ಕಾಲೋನಿ ಇದೀಗ ಹೊಸ ವರ್ಷದಿಂದ ಜನತಾ ಬಡಾವಣೆಯಾಗಿ ಮಾರ್ಪಟ್ಟಿದ್ದು ಬಡಾವಣೆಯ ಜನರೆಲ್ಲಾ ಸೇರಿ ಹೊಸ ವರ್ಷವನ್ನ ಸ್ವಾಗತಿಸಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಗಮನ ಸೆಳೆದರು. ರಾಘವೇಂದ್ರ ಎಸ್ ಅವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಎಸ್ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ರಾಘವೇಂದ್ರ ಎಲ್ ಅವರು ಕಾರ್ಯಕ್ರಮದ ಸಾರಥ್ಯವನ್ನು ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬಹುತೇಕ ಜನತಾ ಬಡಾವಣೆಯ ಎಲ್ಲಾ ಮನೆಯ ಜನತೆ ಭಾಗವಹಿಸಿದ್ದು ಈ ಬಡಾವಣೆಯ ಹಿರಿಯ ನಾಗರಿಕರಿಗೆ ಸನ್ಮಾನ ಮಾಡಲಾಯಿತು. ವಿವಿಧ ಆಟೋಟಗಳನ್ನು ನಡೆಸಲಾಯಿತು. ಹಾಗೆ ಪಟಾಕಿಗಳನ್ನ ಸಿಡಿಸಿ,ಕೇಕ್ ಕತ್ತರಿಸಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದರು. ಜೊತೆಗೆ ಇಡೀ ಬಡಾವಣೆಯ ಬೀದಿಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಈ ಬಡಾವಣೆಯ ಎಲ್ಲರೂ ಸೇರಿ ಹೊಸ ವರ್ಷ ಆಚರಣೆ ಮಾಡಿರುವುದು ಗಮನ ಸೆಳೆಯಿತು. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ಕೂಡ ವ್ಯಕ್ತವಾಯಿತು.

Categories
ಚಿಕ್ಕಮಗಳೂರು

ಶೃಂಗೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ..

ಶೃಂಗೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ..
* ಜಗದ್ಗುರ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸ್ವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಿರುವ ಶಿಬಿರ
* ಕಾರ್ಮಿಕ ಮಿತ್ರಬಳಗ ಮತ್ತು ರಕ್ತದಾನಿಗಳು ವಾಟ್ಸ್ ಆಪ್ ಗ್ರೂಪ್ ಇವರ ಸಹಯೋಗದಲ್ಲಿ ಆಯೋಜನೆ

NAMMUR EXPRESS NEWS
ಶೃಂಗೇರಿ:
ನಾಳೆ ದಿನಾಂಕ 05/01/2024 ರ ಭಾನುವಾರದಂದು ತಾಲೂಕಿನ ಕಾರ್ಮಿಕ ಮಿತ್ರ ವೃಂದ,ರಕ್ತದಾನಿಗಳು ವಾಟ್ಸ್ ಆಪ್ ಗ್ರೂಪ್,ಶ್ರೀಅಭಿನವ ವಿದ್ಯಾತೀರ್ಥ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್,ಶ್ರೀಭಾರತೀ ತೀರ್ಥ ಸದ್ಬಕ್ತ ಸಂಘ,ಜೆಸಿಐ ಘಟಕ,ಶೃಂಗಗಿರಿ ಖಾಸಗಿ ಕಟ್ಟಡ ಗುತ್ತಿಗೆದಾರರ ಸಂಘ,ಕ.ಸಾ.ಪ ಮಹಿಳಾ ಘಟಕ,ಆಟೋ ಚಾಲಕರು ಮತ್ತು ಮಾಲೀಕರ ಸಂಘ ಇವರುಗಳ ಸಹಯೋಗದಲ್ಲಿ ಶೃಂಗೇರಿ ಶ್ರೀಶಾರದಾ ಪೀಠದ ಜಗದ್ಗರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಸನ್ಯಾಸ ಸ್ವೀಕಾರದ ಸ್ವರ್ಣ ಮಹೋತ್ಸವದ ಸಂದರ್ಭದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಶ್ರೀಮಠದ ಶಾರದಾ ಕೃಪಾ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಎಲ್ಲಾ ರಕ್ತದಾನಿಗಳು,ಶ್ರೀಮಠದ ಭಕ್ತರು ಆಗಮಿಸಿ ರಕ್ತದಾನ ಮಾಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಬೆಳಿಗ್ಗೆ 9:30 ಕ್ಕೆ ಶ್ರೀಮಠದ ಶಾರದಾ ಕೃಪಾದಲ್ಲಿ ಜಗದ್ಗರುಗಳ ಆಪ್ತ ಸಹಾಯಕರಾದ ವೇದಬ್ರಹ್ಮ ಶ್ರೀ ಶಂ ನ ಕೃಷ್ಣಮೂರ್ತಿಗಳವರು ಶಿಬಿರ ಉದ್ಘಾಟಿಸಲಿದ್ದಾರೆ.

Categories
ಚಿಕ್ಕಮಗಳೂರು

ವಿವಾದಿತ ದರ್ಗಾದಲ್ಲಿ ಕಾಮಗಾರಿ ಹಿಂದೂ ಸಂಘಟನೆಗಳ ಆಕ್ರೋಶ..!!

ವಿವಾದಿತ ದರ್ಗಾದಲ್ಲಿ ಕಾಮಗಾರಿ ಹಿಂದೂ ಸಂಘಟನೆಗಳ ಆಕ್ರೋಶ..!!
* ನಗರದ ಕೋಟೆಯಲ್ಲಿನ ಹಜರತ್ ಸೈಯದ್ ಮೌಲಾನಾ ರೋಂ ಶಾಖಾದ್ರಿ ದರ್ಗಾ
* ಸ್ಥಳದಲ್ಲಿ ಬಿಗುವಿನ ವಾತಾವರಣ,ಪೋಲೀಸರಿಂದ ಬಿಗಿಬಂದೋಬಸ್ಥ್

NAMMUR EXPRESS NEWS
ಚಿಕ್ಕಮಗಳೂರು:
ನಗರದ ವಿವಾದಿತ ಕೋಟೆ ದರ್ಗಾದಲ್ಲಿ ಕಾಮಗಾರಿಗೆ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು ನೂರಾರು ಪೋಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಈ ದರ್ಗಾ ನಿರ್ಮಾಣ ಅಕ್ರಮವಾಗಿದ್ದು ದರ್ಗಾ ಕಾಮಗಾರಿ ನಡೆಸದಂತೆ ಸ್ಥಳೀಯರು,ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಈ ವಿವಾದಿತ ಸ್ಥಳದಲ್ಲಿ ಈ ಹಿಂದೆ ಕೂಡ ಹಿಂದೂ ಮುಸ್ಲಿಂ ನಡುವೆ ವಿವಾದ ಸೃಷ್ಟಿಯಾಗಿತ್ತು.