ಕಾಫಿನಾಡಿನ ನಾಲ್ವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ
* 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ
* ಚಿಕ್ಕಮಗಳೂರು,ಶೃಂಗೇರಿ,ಕಳಸ ಪೊಲೀಸರಿಗೆ ಲಭಿಸಿದ ಗೌರವ
NAMMUR EXPRESS NEWS
ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ನೀಡುವ ಮುಖ್ಯಮಂತ್ರಿ ಪದಕ ಗೌರವದ 2024ನೇ ಸಾಲಿನ ಪಟ್ಟಿ ಪ್ರಕರಟವಾಗಿದ್ದು ಇದರಲ್ಲಿ ಜಿಲ್ಲೆಯಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಲ್ವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
ರಾಜ್ಯದಲ್ಲಿ ಒಟ್ಟು 219 ಪೊಲೀಸರು ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ಜಿಲ್ಲೆಯಲ್ಲಿ ನಕ್ಸಲ್‌ರನ್ನು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಿದ ಈ ಸಿಬ್ಬಂದಿಗಳು ಮುಖ್ಯಮಂತ್ರಿಗಳ ಪದಕ ಪಡೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಕಛೇರಿಯ ಸಿ.ಬಿ.ಬ್ರಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶೇಷಾದ್ರಿ ಹೆಚ್ ಮತ್ತು ಬಸವರಾಜ್ ಕೆ.ಹೆಚ್ ಎಂಬುವವರಿಗೆ ಹಾಗೂ ಶೃಂಗೇರಿಯ ಗುಪ್ತಚರ ದಳದ ನವೀನ್ ಗೌಡ ಮತ್ತು ಕಳಸದ ಗುಪ್ತಚರ ದಳದ ಗೀರಿಶ್ ಎಂಬ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.






