ಮಾಧ್ಯಮಗಳ ಬಹಿಷ್ಕಾರದಿಂದ ದರ್ಶನ್ ಮುಕ್ತ
– ವರಮಹಾಲಕ್ಷ್ಮೀ ಹಬ್ಬದ ದಿನವೇ ‘ಕ್ಷಮೆ’ಕೇಳಿದ ನಟ
– ಏನಿದು ವಿವಾದ… ದರ್ಶನ್ ಹೇಳಿದ್ದೇನು…?
NAMMUR EXPRESS NEWS
ಬೆಂಗಳೂರು: ನಟ ದರ್ಶನ್ ಅವರಿಗೆ ದೃಶ್ಯ ಮಾಧ್ಯಮಗಳು ಹಾಕಿದ್ದ ಬಹಿಷ್ಕಾರ ಕೊನೆಗೂ ತೆರವಾಗಿದ್ದು, ವರಮಹಾಲಕ್ಷ್ಮೀ ಹಬ್ಬದ ದಿನವೇ ୧ ಕನ್ನಡ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ನಡೆದ ಮಾತುಕತೆಯ ಬಳಿಕ ನಟ ದರ್ಶನ್ ಗೆ ಹಾಕಲಾಗಿದ್ದ ಬಹಿಷ್ಕಾರ ತೆರವಾಗಿದೆ. ಈ ಬಗ್ಗೆ ನಟ ದರ್ಶನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ನಾನು ಪ್ರತಿಕ್ರಿಯೆ ನೀಡಿದ್ದೆ ಅಷ್ಟೆ.. ಇತರ ಮಾಧ್ಯಮಗಳ ಬಗ್ಗೆ ನಾನು ಆಡಿರೋ ಮಾತು ಅದಾಗಿರಲಿಲ್ಲ ಅಂತ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.ನನ್ನ ಮಾತಿನಿಂದ ನೋವುಂಟಾಗಿದ್ದರೆ ಅಂತಹ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ರಂಗದ ಕ್ಷಮೆ ಇರಲಿ. ಉತ್ತಮ ಸಮಾಜಕ್ಕೆ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ನನ್ನ ಬೆಳವಣಿಗೆಗೆ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟು ಇದೆ ಅಂತ ದರ್ಶನ್ ಹೇಳಿದ್ದಾರೆ.
ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು pic.twitter.com/8I1weYojCX
— Darshan Thoogudeepa (@dasadarshan) August 25, 2023
ಮಾಧ್ಯಮಗಳ ಬಗ್ಗೆ ದರ್ಶನ್ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ದೃಶ್ಯ ಮಾಧ್ಯಮಗಳು ದರ್ಶನ್ ಗೆ ಬಹಿಷ್ಕಾರ ಹಾಕಿದ್ದು.. ಮಾಧ್ಯಮಗಳ ಬಹಿಷ್ಕಾರದ ನಡುವೆಯೇ ನಟ ದರ್ಶನ್ ತಮ್ಮ ಅಭಿಮಾನಿಗಳ ಮೂಲಕ ಸಾಮಾಜಿಕ ಮಾಧ್ಯಮಗಳ ಬಗ್ಗೆ ದರ್ಶನ್ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ದೃಶ್ಯ ಮಾಧ್ಯಮಗಳು ದರ್ಶನ್ ಗೆ ಬಹಿಷ್ಕಾರ ಹಾಕಿದ್ದವು. ಮಾಧ್ಯಮಗಳ ಬಹಿಷ್ಕಾರದ ನಡುವೆಯೇ ನಟ ದರ್ಶನ್ ತಮ್ಮ ಅಭಿಮಾನಿಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲೇ ತಮ್ಮ ಚಿತ್ರದ ಪ್ರಚಾರ ಮಾಡಿಸಿದ್ದರು. ಆದ್ರೆ ಇದೀಗ ಕೊನೆಗೂ ನಟನೋರ್ವನಿಂದ ಕ್ಷಮೆ ಕೇಳಿಸುವ ಪ್ರಯತ್ನ ಯಶಸ್ವಿಯಾಗಿದೆ.