ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆ!
-ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ.
– ಯೆಲ್ಲೋ ಅಲರ್ಟ್ ಘೋಷಣೆ.
NAMMUR EXPRESS NEWS
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ವೇಳೆ ಗಾಳಿಯ ವೇಗವು ಗಂಟೆಗೆ 30, 40 ಕಿ.ಮೀ ವೇಗದಲ್ಲಿ ಬೀಸಲಿದೆ.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದರಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಜೋರಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಅಲ್ಲೂ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.