ನರೇಗಾ ದಿನಗೂಲಿ ನೌಕರರಿಗೆ ವೇತನ ವಿಳಂಬ!
– ಜಿಪಂ ಕಚೇರಿ ಎದುರು ಪ್ರತಿಭಟನೆ
– ವೇತನ ಬಿಡುಗಡೆಗೊಳಿಸುವಂತೆ ಆಗ್ರಹ
NAMMUR EXPRESS NEWS
ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ವೇತನ ವಿಳಂಬವಾಗುತ್ತಿರುವ ಬಗ್ಗೆ ಜಿಪಂ ಕಚೇರಿಯಲ್ಲಿ ಪ್ರತಿಭಟನೆ ನಡೆದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಜಿಲ್ಲಾ ಎಮ್.ಐ.ಎಸ್, ಸಂಯೋಜಕರು, ಜಿಲ್ಲಾ ಐಇಸಿ ಸಂಯೋಜಕರು, ಜಿಲ್ಲಾ ಅಕೌಂಟ್ ಮ್ಯಾನೇಜರ್, ತಾಲ್ಲೂಕು ಎಮ್.ಐ.ಎಸ್. ಸಂಯೋಜಕರು, ತಾಲ್ಲೂಕು ಸಂಯೋಜಕರು, ತಾಲ್ಲೂಕು ಆಡಳಿತ ಸಹಾಯಕರು, ತಾಂತ್ರಿಕ ಸಂಯೋಜಕರು (ಸಿವಿಲ್ ಮತ್ತು ಕೃಷಿ/ತೊಟಗಾರಿಕೆ), ತಾಂತ್ರಿಕ ಸಹಾಯಕರು (ಸಿಎಲ್, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಹಾಗೂ ಡಾಟ ಎಂಟ್ರಿ ಆಪರೇಟರ್ಗಳು ಸೇವೆ ಸಲ್ಲಿಸುತ್ತಿದ್ದು, ಇವರಿಗೆ ಎಪ್ರಿಲ್ 2023 ರಿಂದ ಇಲ್ಲಿಯವರೆಗೆ ವೇತನ ಪಾವತಿ ಆಗಿರುವುದಿಲ್ಲ ಎಂದು ಆರೋಪಿಸಲಾಗಿದೆ.
ಪ್ರತಿಭಟನಾಕಾರರು ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜಿಪಂ ಆವರಣದ ಮುಂದೆ ಧರಣಿ ಕುಳಿತಿದ್ದಾರೆ. ರಾಜ್ಯದಲ್ಲಿ 2500 ಜನ ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದು ಜಿಲ್ಲೆಯಲ್ಲಿ 115 ಜನ ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.