ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ.!
– ರಾಜ್ಯಾದ್ಯಂತ ಸೂಪರ್ ಮಾರ್ಕೆಟ್, ಮಾಲ್ ಗಳಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ
NAMMUR EXPRESS NEWS
ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡಿ ಆರ್ಥಿಕ ಹೊರೆಯಾಗಿರುವುದರಿಂದ ಆದಾಯ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಅಬಕಾರಿ ಮೂಲದಿಂದ ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಾಲ್ ಗಳು, ಸೂಪರ್ ಮಾರ್ಕೆಟ್ ಗಳಲ್ಲಿಯೂ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಪರವಾನಿಗೆ ನೀಡಲು ಚಿಂತನೆ ನಡೆಸಿದೆ.
ಸನ್ನದು ಶುಲ್ಕ ಹೆಚ್ಚಳ, ಹೊಸ ಸನ್ನದು ನೀಡುವುದು ಸೇರಿದಂತೆ ಹಲವು ಕ್ರಮಗಳ ಮೂಲಕ ಅಬಕಾರಿ ಇಲಾಖೆ ಆದಾಯ ವೃದ್ಧಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಇಲಾಖಾ ಮಟ್ಟದಲ್ಲಿ ಈ ಕುರಿತಾಗಿ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ.
ಹೊಸ ಪಬ್ ಗಳಿಗೆ ಲೈಸೆನ್ಸ್ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಬಜೆಟ್ ನಲ್ಲಿ ಅಬಕಾರಿ ಇಲಾಖೆ 36,000 ಕೋಟಿ ಆದಾಯ ಸಂಗ್ರಹ ಗುರಿ ಹೊಂದಿದ್ದು, ಹೆಚ್ಚುವರಿ 4,000 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ. ಆದಾಯ ವೃದ್ಧಿಗಾಗಿ ಪ್ಲಾನ್ ಮಾಡಿಕೊಳ್ಳಲಾಗಿದ್ದು, ಮಾಲ್ ಗಳು, ಸೂಪರ್ ಮಾರ್ಕೆಟ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.