ಗೃಹಲಕ್ಷ್ಮೀ ಯೋಜನೆ ನೋಂದಣಿ ನಿಲ್ಲಿಸಿದ್ದೇಕೆ?
– ಮತ್ತೆ ಯಾವಾಗ ನೋಂದಣಿ ಶುರುವಾಗಲಿದೆ?
– ಯಜಮಾನಿ ಖಾತೆಗೆ ಯಾವಾಗ ಹಣ ಬರಲಿದೆ..?
NAMMUR EXPRESS NEWS
ಬೆಂಗಳೂರು: ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ನೋಂದಾಯಿತ ಫಲಾನುಭವಿಗಳ ಖಾತೆಗೆ ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ನಡೆಸಲಿದ್ದೇವೆ ಎಂದು ತಿಳಿಸಿದರು. ಇದುವರೆಗೂ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು ಗೊಂದಲವಾಗದಿರಲೆಂದು, ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸದ್ಯ ಈ ಹಿಂದೆಯೇ ನೋಂದಣಿಯಾದ ಎಲ್ಲ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ಮತ್ತೆ ಹೊಸ ನೋಂದಣಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ತಿಳಿಸಿದರು ಈಗಾಗಲೇ 1.28 ಕೋಟಿ ಫಲಾನುಭವಿಗಳ ಪೈಕಿ
1.13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕೆವೈಟಿ ಅಪ್ಲೇಟ್ ಮಾಡಿಸಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.