ಕಾಡಾನೆ ದಾಳಿಗೆ ಕಾಫಿ, ಅಡಿಕೆ ಬೆಳೆ ನಾಶ…!
– ಅಕ್ರಮವಾಗಿ ಬಳಸುತ್ತಿದ್ದ ಬಂದೂಕು ಪೊಲೀಸರ ವಶಕ್ಕೆ..!
– ವಿದ್ಯಾರ್ಥಿನಿ ಸಾವಿಗೆ ಕಾರಣನಾದ ಬಸ್ ಚಾಲಕ ಪೊಲೀಸರ ಸೆರೆ..!
NAMMUR EXPRESS NEWS
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ಕಳೆದ 1 ವಾರದಿಂದ ಬೀಡುಬಿಟ್ಟಿರುವ ಕಾಡಾನೆ ಹಿಂಡು ನಿರಂತರವಾಗಿ ಬೆಳೆ ನಾಶ ಮಾಡುತ್ತಿವೆ. ಗುರುವಾರ ಕೂಡ ಕೃಷಿ ಜಮೀನುಗಳಿಗೆ ನುಗ್ಗಿ ಕಾಫಿ, ಬಾಳೆ, ಅಡಕೆ, ಮೆಣಸು ಬೆಳೆ ನಾಶಗೊಳಿಸಿವೆ.ಕಳೆದ ಭಾನುವಾರ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಕಾಡಾನೆ ದಾಳಿಯ ಭಯದಲ್ಲಿರುವಾಗಲೇ ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಗೊಳಿಸಿವೆ
ಅಕ್ರಮವಾಗಿ ಬಳಸುತ್ತಿದ್ದ ಬಂದೂಕು ವಶಕ್ಕೆ..!
ಬಾಳೆಹೊನ್ನೂರು: ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಡವಂತಿ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಎಸ್.ಬಿ.ಎಂ.ಎಲ್. ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯ ಬಂಧನ ಮಾಡಲಾಗಿದೆ. ವ್ಯಕ್ತಿಯನ್ನು ಬಾಳೆಹೊನ್ನೂರು ಪಿಎಸ್ಐ ಮತ್ತು ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡು, 10 ಸಾವಿರ ರೂ. ಬೆಲೆ ಬಾಳುವ ಒಂದು ಎಸ್.ಬಿ.ಎಂ.ಎಲ್. ಬಂದೂಕು ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿ ಸಾವಿಗೆ ಕಾರಣನಾದ ಬಸ್ ಚಾಲಕ ಅರೆಸ್ಟ್!
ತರೀಕೆರೆ: ದುಗ್ಲಾಪುರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಜಿತೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸ್ಥಳಕ್ಕೆ ಎಸ್ಪಿ ವಿಕ್ರಮ್ ಅಮಟೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪೊಲೀಸರು ಪಡೆಯುತ್ತಿದ್ದಾರೆ.ಚಾಲಕನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.