ಮತ್ತೆ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಆರ್.ಎಂ.ಎಂ!
– ಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿಯುವ ಸಾಧ್ಯತೆ ಹೆಚ್ಚು
– ಆರ್.ಎಂ.ಅಭಿಮಾನಿಗಳಲ್ಲಿ ಸಂತಸ
NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯಿಂದ ವಜಾಗೊಂಡಿದ್ದ ಡಾ.ಆರ್.ಎಂ ಮಂಜುನಾಥ್ ಗೌಡ ಅವರನ್ನು ಸರ್ಕಾರ ಕೃಷಿಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಈ ತನಕ ಕೃಷಿಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿದ್ದ ದುಗ್ಗಪ್ಪ ಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಆರ್ ಎಂ ಮಂಜುನಾಥ್ ಗೌಡ ನೇಮಕಗೊಂಡಿದ್ದಾರೆ. ಈ ಮೂಲಕ ಮತ್ತೆ ಮಂಜುನಾಥ ಗೌಡರು ಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿಯುವ ಸಾಧ್ಯತೆ ಹೆಚ್ಚಿದೆ.
ಬ್ಯಾಂಕ್ ಅವ್ಯವಹಾರ ಪ್ರಕರಣದಲ್ಲಿ ಆರ್ ಎಂ ಮಂಜುನಾಥ ಗೌಡರನ್ನ ಸಹಕಾರ ಕ್ಷೇತ್ರದಿಂದ 2021 ರಲ್ಲಿ ವಜಾಗೊಳಿಸಲಾಗಿತ್ತು. ಮೂರು ವರ್ಷಗಳ ನಂತರ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ಮೇಲೆ ಗೌಡರು ಮತ್ತೊಮ್ಮೆ ಹಿಡಿತ ಸಾಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿದರೂ ಅಚ್ಚರಿ ಇಲ್ಲ.