ಇನ್ಮುಂದೆ ವಿ.ಎಗಳು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು!
– ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ
– ಗ್ರಾಮ ಲೆಕ್ಕಿಗರಿಗೆ ಒಂದು ಕೊಠಡಿ ಸೌಲಭ್ಯ?
NAMMUR EXPRESS NEWS
ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ ಎಂಬ ಬಹುದಿನದ ಆರೋಪಕ್ಕೆ ಇದೀಗ ಮುಕ್ತಿ ಸಿಗಲಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು. ಅವರಿಗೆ ಅಗತ್ಯ ಸೌಲಭ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ ಅವರು ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.