ಸರ್ಕಾರಿ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನೀರು ಬಾಟಲಿ ಬಳಸೋ ಹಾಗಿಲ್ಲ..!
– ಸರ್ಕಾರದ ಆದೇಶ: ಏನಿದು ಹೊಸ ಆದೇಶ…?
– ಆಸ್ತಿ ಖರೀದಿ, ಮಾರಾಟಗಾರರಿಗೆ ಸರ್ಕಾರದ ಬಿಗ್ ಶಾಕ್
NAMMUR EXPRESS NEWS
ಬೆಂಗಳೂರು: ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಮಿಕ್ ನೀರಿನ ಬಾಟಲ್ ಗಳ ಬಳಕೆ ಸರಬರಾಜು ನಿಷೇಧಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ರಾಜಾದ್ಯಂತ ಸರ್ಕಾರಿ ಹಾಗೂ ಸರ್ಕಾರ ಸ್ವಾಮ್ಯದ ಮಂಡಳಿ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು. ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ರ ರೀತಿಯಲ್ಲಿ ಗ್ರಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಹಾಗೂ ಆದೇಶಕ್ಕೆ ಲಗತ್ತಾದ ಅನುಬಂಧ-1ರಲ್ಲಿರುವಂತೆ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು ಏರ್ಪಡಿಸತಕ್ಕದೆಂದು ಸೂಚಿಸಲಾಗಿತ್ತು ಸದರಿ ಆದೇಶ ಮತ್ತು ಅದಕ್ಕೆ ಲಗತ್ತಾದ ಅನುಬಂದ-1ನ್ನು ಲಗತ್ತಿಸಿದೆ.
ಇತ್ತೀಚಿನ ದಿನಗಳಲ್ಲಿ, ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ ನಿಗಮ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು, ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಆದೇಶ ಹೇಳಿದೆ.
ಆಸ್ತಿ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್
– ಅ.1ರಿಂದ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ
ಆಸ್ತಿ ಖರೀದಿ, ಮಾರಾಟಗಾರರಿಗೆ ಶಾಕ್ ಎದುರಾಗಿದ್ದು, ಅ.1 ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳವಾಗಲಿದೆ. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಕಂದಾಯ ಇಲಾಖೆಯ ನಿಯಮಾವಳಿ ಪ್ರಕಾರ ಪ್ರತಿವರ್ಷ ಆಸ್ತಿ ನೋಂದಣಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಬೇಕು ಎಂದು ಇದೆ.
ಆದರೆ, ಹಲವು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಹಾಗಾಗಿ ಅ.1 ರಿಂದ ಮಾರ್ಗಸೂಚಿ ದರ ಹೆಚ್ಚಳ ಮಾಡಲಿದ್ದೇವೆ ಎಂದರು. ಇನ್ನು ರಾಜ್ಯದಲ್ಲಿ ಮಾರ್ಗಸೂಚಿ ದರ ಏರಿಕೆಯಾದರೆ ವರ್ಷಕ್ಕೆ 2000 ಕೋಟಿ ರೂ ಆದಾಯ ಬರುತ್ತೆ ಎಂದು ಹೇಳಿದರು. ರಾಜ್ಯದಲ್ಲಿ ಎಲ್ಲಾ ಕಡೆ ಮಾರ್ಗಸೂಚಿ ದರ ಏರಿಕೆ ಆಗಲ್ಲ. ಕೆಲವು ಕಡೆ ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಳ ಇದ್ದರೆ, ಅಂತಹ ಪ್ರದೇಶಗಳಲ್ಲಿ ದರ ಹೆಚ್ಚಳವಾಗುವುದಿಲ್ಲ ಎಂದರು. ಈ ಬಗ್ಗೆ ಆಕ್ಷೇಪ ಸಲ್ಲಿಸಲು ಅವಕಾಶ ಇದೆ. ಆಕ್ಷೇಪ ಗಮನಿಸಿ ಅಧಿಸೂಚನೆ ನಂತರ ಪ್ರಕಟ ಆಗಲಿದೆ ಎಂದು ಹೇಳಿದರು.