ಮೊದಲ ಬಾರಿಗೆ ಕಾಫಿ ನಾಡಿಗೆ ಆಗಮಿಸಿದ ಸಚಿವ ಖಂಡ್ರೆ!
– ರಾಜೇಗೌಡ ಸೇರಿ ಶಾಸಕರಿಂದ ಸ್ವಾಗತ
– ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆ ಅಭಿವೃದ್ಧಿ ಚರ್ಚೆ
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು. ಇನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸನ್ಮಾನ್ಯ ಅರಣ್ಯ ಸಚಿವರಾದ ಶಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.