– ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!
– ಕಾರ್ಕಳ : ಕಾರ್ಕಳದಲ್ಲಿ ಬ್ಯಾನರ್ ವಾರ್
– ಮಂಗಳೂರು : ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ; ಇಬ್ಬರಿಗೆ ಗಾಯ
– ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದರು: ದೂರು ದಾಖಲು
NAMMUR EXPRESS NEWS
ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೋರ್ಟ್ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೋಕ್ಯಬೆಟ್ಟು ನಿವಾಸಿ ಮಹಮ್ಮದ್ ಶಾಫಿ ಬಂಧಿತ ಆರೋಪಿ. ಈಗ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದರು: ದೂರು ದಾಖಲು
ಕಡಬ: ರಾತ್ರಿ ವೇಳೆ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆಬೈಕಿನಲ್ಲಿ ಬಂದ ಇಬ್ಬರು ಮಸೀದಿಯ ವರಾಂಡದಲ್ಲಿ ಬೈಕನ್ನು ಹಿಂತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕಾರ್ಕಳದಲ್ಲಿ ಬ್ಯಾನರ್ ಸಂಘರ್ಷ!
ಕಾರ್ಕಳ : ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ನಡೆದ ಕು. ಸೌಜನ್ಯ ಪರ ಪ್ರತಿಭಟನೆ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪುರಸಭಾ ವ್ಯಾಪ್ತಿಯಲ್ಲಿ ಅನುಮತಿ ರಹಿತ ಬ್ಯಾನರ್ ಅಳವಡಿಕೆ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಆನೆಕೆರೆ ಉದ್ಯಾನವನ ಬದಿ, ದಾನಶಾಲೆ, ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದ ಬಳಿ ಪುರಸಭೆಯಿಂದ ಅನುಮತಿ ಪಡೆಯದೇ ಸೆ. 23ರ ರಾತ್ರಿ ಪ್ಲೆಕ್ಸ್ಗಳನ್ನು ಅಳವಡಿಸಿ ಸಾರ್ವಜನಿಕ ಸ್ಥಳ ವಿರೂಪಗೊಳಿಸಲಾಗಿದೆ ಎಂದು ಪುರಸಭಾ ಹಿರಿಯ ಆರೋಗ್ಯ ನಿರೀಕ್ಷಕಿ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ!
ಮಂಗಳೂರು ನಗರದ ಬಿಕರ್ಣಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಾರಿ, ಎರಡು ಕಾರು, ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಲಾರಿ ನಿಯಂತ್ರಣ ಕಳೆದುಕೊಂಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ. ಅದರ ನಡುವೆ ಬೈಕ್ ಗಳು ಸಿಲುಕಿ ಕೊಂಡಿದೆ ಎಂದು ವರದಿಯಾಗಿದೆ.