17 ವರ್ಷದ ಅಪ್ರಾಪ್ತ ವಯಸ್ಕ ಬಾಲಕಿ ವಿವಾಹಕ್ಕೆ ಪ್ಲಾನ್!
– ಮದುವೆಗೆ ಬ್ರೇಕ್ ಹಾಕಿ,ಎಚ್ಚರಿಕೆ ನೀಡಿದ ಅಧಿಕಾರಿಗಳು
– ಮಂಗಳೂರಿನ ಬಂಟ್ವಾಳದಲ್ಲಿ ನಡೆದ ಘಟನೆ
NAMMUR EXPRESS NEWS
ಬಂಟ್ವಾಳ: ಅಪ್ರಾಪ್ತ ವಯಸ್ಕ ಬಾಲಕಿಗೆ ಬಾಲ್ಯ ವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಎಂಬಲ್ಲಿ ಘಟನೆ ನಡೆದಿದೆ. ವಿಟ್ಲ ಸಿಡಿಪಿಓ ಇಲಾಖೆ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಯುವಕನೊಬ್ಬನಿಗೆ ಮದುವೆ ನಡೆಸುವ ಉದ್ದೇಶ ದಿಂದ ನಿಶ್ಚಿತಾರ್ಥ ನಡೆದು ಮದುವೆಗಾಗಿ ಹಾಲ್ ಬುಕ್ ಆಗಿತ್ತು. ಬಾಲಕಿಯ ಮನೆಯಲ್ಲಿ ಶನಿವಾರದಂದು ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿಡಿಪಿಒ ಇಲಾಖೆಯ ಹಿರಿಯ ಮೇಲ್ವಿಚಾರಕ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಅಧಿಕಾರಿಗಳು, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೊಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ವಯಸ್ಕ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡರು. ಆ ಬಳಿಕ ಮದುವೆ ನಿಘಂಟು ಮಾಡಿದ್ದ ವರನ ಕಡೆಯವರಿಗೆ ಮತ್ತು ಮದುವೆ ಹಾಲ್ ಮಾಲೀಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ. ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.