ನಾಡಿಗೆ ಬಂದ 7 ಕಾಡಾನೆ ಹಿಂಡು!
– ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿ ಮಧ್ಯ ಕಾಡಾನೆ
– ಮಲೆನಾಡಲ್ಲಿ ಶುರುವಾಯ್ತಾ ಕಾಡಾನೆ ಕಾಟ?!
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಅಲ್ಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ.
ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ 7 ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷವಾಗಿವೆ. ಮಾರ್ಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶೃಂಗೇರಿಗೆ ಪ್ರವಾಸಿಗರು ಪ್ರಯಾಣಿಸುತ್ತಾರೆ. ಹಾಗಾಗಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಆಗುಂಬೆ ಬಳಿಯೂ ಎರಡು ಆನೆ ಪತ್ತೆ!
ಕರಾವಳಿ ಮತ್ತು ತೀರ್ಥಹಳ್ಳಿ ಸಂಪರ್ಕ ಬೆಸೆಯುವ ಘಾಟಿ ಬಳಿ ಎರಡು ಆನೆ ಪತ್ತೆಯಾಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಒಂದು ಸಲಗ ಈ ಭಾಗದಲ್ಲಿ ಓಡಾಡುತ್ತಿರುವ ನಡುವೆಯೇ ಈ ಆನೆಗಳು ಎಲ್ಲಿಂದ ಬಂದವು ಎಂಬ ಪ್ರಶ್ನೆ ಎದುರಾಗಿದೆ.