ತೀರ್ಥಹಳ್ಳಿ ಬಸ್ ಸ್ಟಾಂಡ್ ಗಣೇಶ ಅದ್ದೂರಿ ವಿಸರ್ಜನೆ
– ವಿವಿಧ ಕಲಾ ತಂಡಗಳ ಮೆರವಣಿಗೆ: ಸೌಂಡ್ಸ್ ಜತೆ ಹೆಜ್ಜೆ ಹಾಕಿದ ಯುವಕರು
– ಸರಳ ಜ್ಞಾನೇಂದ್ರ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ಪ್ರತಿಷ್ಠಿತ ಗಣೇಶೋತ್ಸವಗಳಲ್ಲಿ ಒಂದಾಗಿರುವ ಮುಖ್ಯ ಬಸ್ ನಿಲ್ದಾಣದ ಗಣೇಶನ ವಿಸರ್ಜನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಇಂದು ಅದ್ದೂರಿಯಾಗಿ ನಡೆಯಲಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಹುಲಿವೇಷ, ನಾಸಿಕ್ ಬ್ಯಾಂಡ್, ಕೀಲುಕುದುರೆ, ಡಿಜೆ ಸೇರಿದಂತೆ ಹಲವು ವೈವಿಧ್ಯಗಳ ಜೊತೆಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಹೆಜ್ಜೆ ಹಾಕಲಾಯಿತು. ಬಳಿಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಸರಳ ಜ್ಞಾನೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು ನೂರಾರು ಯುವಕರು ಮಳೆಯಲ್ಲೇ ಹೆಜ್ಜೆ ಹಾಕಿದರು.