50 ಬಸ್ ಮಾಲೀಕ ನೇಣು ಬಿಗಿದುಕೊಂಡು ಅತ್ಮಹತ್ಯೆ!
– ಕರಾವಳಿಗೆ ತಮ್ಮದೇ ಸೇವೆ ನೀಡಿದ್ದ ಉದ್ಯಮಿ
– ಕುಂದಾಪುರ: ಹಳೆಯ ದ್ವೇಷ, ಚೂರಿ ಇರಿದು ಪರಾರಿ!
– ಯುವ ಉದ್ಯಮಿ ಕೆರೆಗೆ ಹಾರಿ ಆತ್ಮಹತ್ಯೆ
NAMMUR EXPRESS NEWS
ಮಂಗಳೂರು: ಕರಾವಳಿಯಲ್ಲಿ ತಮ್ಮ ಬಸ್ ಸೇವೆ ಮೂಲಕ ಪ್ರಸಿದ್ದಿಯಾಗಿರುವ, ಸುಮಾರು 50ಕ್ಕೂ ಹೆಚ್ಚು ಬಸ್ಸುಗಳನ್ನು ಹೊಂದಿದ್ದು ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಕಳೆದ ಹಲವಾರು ವರ್ಷಗಳಿಂದ ಉತ್ತಮ ಸೇವೆ ಒದಗಿಸುತ್ತಿದ್ದ ಮಹೇಶ್ ಟ್ರಾವೆಲ್ಸ್ ಮಾಲಕ ಪ್ರಕಾಶ್ ಶೇಖ (40) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹೇಶ್ ಅವರು ತಮ್ಮ ಕದ್ರಿ ಕಂಬಳದಲ್ಲಿರುವ ಪ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಇದೀಗ ಮರಣೋತ್ತರ ಪರೀಕ್ಷೆಗಾಗಿ ಪ್ರಕಾಶ್ ಅವರ ಶವವನ್ನು ಎ ಜೆ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್ಗೆ ಸೇರಿದ ಅನೇಕ ಸಿಟಿ ಬಸ್ಗಳು ಪ್ರತಿದಿನ ಸಂಚರಿಸುತ್ತಿದ್ದು ಜನಪ್ರಿಯವಾಗಿದೆ. ಪ್ರಕಾಶ್ ಅವರು ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘದ ಸದಸ್ಯರಾಗಿದ್ದರು ಮತ್ತು ಹಿಂದೆ ಅದರ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಹಳೆಯ ದ್ವೇಷಕ್ಕೆ ವ್ಯಕ್ತಿಗೆ ಚೂರಿ ಇರಿದು ಪರಾರಿ!
ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಎಂಬುವರಿಗೆ ಹಳೆಯ ದ್ವೇಷಕ್ಕಾಗಿ ಚೂರಿ ಇರಿದು ಪರಾರಿಯಾದ ಘಟನೆ ಭಾನುವಾರ ರಾತ್ರಿ 8 ಗಂಟೆಯ ವೇಳೆ ನಡೆದಿದೆ. ಆರೋಪಿಯ ಇರಿತಕ್ಕೊಳಗಾದ ರಾಘವೇಂದ್ರ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಕುಂದಾಪುರದ ಹೃದಯ ಭಾಗದ ಚಿಕ್ಕನ್ ಸ್ಟಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ಸ್ವಲ್ಪ ಹೊತ್ತು ಪರಸ್ಪರ ಜಗಳವಾಡಿದ್ದಾರೆ ಎನ್ನಲಾಗುತ್ತಿದೆ,
ಭಾನುವಾರ ಆದ ಕಾರಣ ನ್ಯೂ ಡೆಲ್ಲಿ ಬಜಾರ್ ಸ್ವಲ್ಪ ಬೇಗನೆ ಅಂಗಡಿಯ ಬಾಗಿಲು ಹಾಕುತ್ತಿದ್ದು ಅಂಗಡಿ ಅರ್ಧಂಬರ್ಧ ಓಪನ್ ಇದೆಯೆಂದು ಹೇಳಲಾಗುತ್ತಿದೆ, ಬನ್ಸ್ ರಾಘು ಹಾಗೂ ಆರೋಪಿ ಸ್ವಲ್ಪ ಹೊತ್ತು ಅಂಗಡಿಯ ಎದುರು ಜಗಳ ಮಾಡಿಕೊಂಡಿದ್ದಾರೆ ಆರೋಪಿ ಚೂರಿಯಿಂದ ಇರಿದು ರಾಘವೇಂದ್ರ ಅವರ ತೊಡೆಗೆ ಹಾಕಿ ಕಾರಿನಲ್ಲಿ ಪರಾರಿಯಾಗಿದ್ದಾನೆಂದು ತಿಳಿದು ಬಂದಿದೆ.
ಯುವ ಉದ್ಯಮಿ ಕೆರೆಗೆ ಹಾರಿ ಆತ್ಮಹತ್ಯೆ
ಬಂಟ್ವಾಳ: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ ಐ ಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ 5ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಸಿದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.