ವಿಷದ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು!
ಮಂಗಳೂರು : ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ಜಾರಿ
ಉಪ್ಪಿನಂಗಡಿ: ಯುವಕ ನಾಪತ್ತೆ
ಕಾರ್ಕಳ: ಅಪ್ರಾಪ್ತಳ ಅತ್ಯಾಚಾರಕ್ಕೆ ಯತ್ನ
NAMMUR EXPRESS NEWS
ಸುಳ್ಯ: ವಿಷಕಾರಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.
ಮೃತರನ್ನು ಜಗನ್ನಾಥ ನಾಯ್ಕ ದೊಡೇರಿ ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು, ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು. ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಮಗಳು ಮೂರು ಮಕ್ಕಳ ತಾಯಿಯಾಗಿರುವ ಲೀಲಾವತಿಯವರಿಗೆ ವಾಂತಿ, ಭೇದಿ ಆರಂಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊಂಡು ಅ. 2ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಯುವಕರಿಗೆ ನೋಟಿಸ್ ಜಾರಿ
ಮಂಗಳೂರು : ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್ ಜಾರಿ ಮಾಡಲಾಗಿದೆ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ಉಳ್ಳಾಲದಲ್ಲಿ ಜಾಥಾ ನಡೆಸಿದ್ದ ಮುಸ್ಲಿಂ ಯುವಕರು ನಿಷೇಧಿತ ಸೈಲೆನ್ಸರ್ ಮತ್ತು ಹಾರ್ನ್ಗಳನ್ನು ಬಳಸಿ ಇಡೀ ರಸ್ತೆಯನ್ನು ಬಂದ್ ಮಾಡಿದ್ದರು. ಅಲ್ಲದೆ, ಉಳ್ಳಾಲದ ಅಬ್ಬಕ್ಕ ರಾಣಿಯ ಸರ್ಕಲ್ ಮೇಲೇರಿ ಹಸಿರು ಬಾವುಟ ಹಾರಿಸುತ್ತ ಚೀರಾಡುತ್ತಾ ಪುಂಡಾಟ ಮೆರೆದಿದ್ದರು. ಪೊಲೀಸರ ಎದುರಲ್ಲೇ ನಡೆದಿದ್ದ ಆ ಘಟನೆಯ ಬಗ್ಗೆ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಕೇಳಿಬಂದಿತ್ತು.
ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಗಮನಿಸಿದ ಉಳ್ಳಾಲ ಠಾಣಾ ಪೊಲೀಸರು ಆಲರ್ಟ್ ಆಗಿದ್ದು, ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿದ್ದಾರೆ. ಪುಂಡಾಟ ಮೆರೆದವರು ಮಂಜನಾಡಿ, ಮದಕ,ಕೋಟೆಕಾರು, ಬಂಟ್ವಾಳ, ಬೆಳ್ತಂಗಡಿ, ದೇರಳಕಟ್ಟೆ, ಕೊಣಾಜೆ ಹಾಗೂ ಉಳ್ಳಾಲ ಭಾಗದ ಯುವಕರು ಎಂದು ತಿಳಿದುಬಂದಿದೆ. ಸದ್ಯ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಯುವಕರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿತ್ತು.
ಯುವಕ ನಾಪತ್ತೆ
ಉಪ್ಪಿನಂಗಡಿ: ಯುವಕನೋರ್ವ ಕೆಲಸಕ್ಕೆಂದು ತೆರಳಿದ್ದ ನಾಪತ್ತೆಯಾಗಿರುವ ಇಚ್ಚಂಪಾಡಿ ಗ್ರಾಮದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉರಜಾಲು ನಿವಾಸಿ ಜೋಜು ಜೋಸೆಫ್35. ಎಂಬವರು ಕಾಣೆಯಾಗಿರುವ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು.
ಇವರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್ರವರಿಗೆ ರಾತ್ರಿ 9 ಗಂಟೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿರುವುದಿಲ್ಲ ಸಂಜೆ ಆತ ಹಣ ಬೇಕೆಂದು ಕೇಳಿದಾಗ ನಾನು ಆತನಿಗೆ ನೆಲ್ಯಾಡಿಗೆ ಬರ ಹೇಳಿದ್ದು ಅವನು ಸಂಜೆ 6 ಗಂಟೆಗೆ ನೆಲ್ಯಾಡಿಗೆ ಬಂದು ಹಣ ಪಡೆದು ಹೋಗಿರುವುದಾಗಿ ಮೇಸ್ತ್ರಿ ತಿಳಿಸಿರುತ್ತಾರೆ.
ಬಳಿಕ ಮಗನ ಬಗ್ಗೆ ಸಂಬಂಧಿಕರ ಮನೆಯಲ್ಲಿ ಹಾಗೂ ಇತರ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ. ಆದುದರಿಂದ ಕಾಣೆಯಾದ ಮಗನನ್ನು ಪತ್ತೆ ಹಚ್ಚಿ ಕೊಡುವಂತೆ ಜೋಜು ಜೋಸೆಫ್ ಅವರ ತಂದೆ ಟಿ.ವಿ.ಜೋಸೆಫ್ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅತ್ಯಾಚಾರಕ್ಕೆ ಯತ್ನ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸೆಪ್ಟೆಂಬರ್ 28 ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತಯ ಮೇಲೆ ನಿಂಜೂರು ಗ್ರಾಮದ ಬೋಪಾಡಿ ಸಮೀಪ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ದೂರು ನೀಡಿದ್ದಾರೆ.ಪ್ರಕರಣದಲ್ಲಿ ಎಂಜೂರಿನ ಸುಜಿತ್ ಪೂಜಾರಿ ಮತ್ತು ಅಭಿನಂದನೆ ಶೆಟ್ಟಿ ಆರೋಪಿಗಳಾಗಿದ್ದಾರೆ, ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಗಳು ತಲೆಮರೆಸಿಕೊಂಡಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.