ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗಿಲ್ಲ ಜಾಮೀನು!
– ಅರ್ಜಿ ನಿರಾಕರಿಸಿದ ಹೈಕೋರ್ಟ್
– ಮಹೇಶ್ ತಿಮರೋಡಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ
NAMMUR EXPRESS NEWS
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ್ ಶಾಸ್ತ್ರಿ ನ್ಯಾ. ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್ ನೆಟ್ಟಾರುಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಟ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ.
ಏನಿದು ಘಟನೆ?:
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು ಈ ಪ್ರಕರಣ ಸಂಬಂಧ ಪ್ರಮುಖ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ.
ಮಹೇಶ್ ಶೆಟ್ಟಿಯ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ
ಬೆಂಗಳೂರು : ನ್ಯಾಯಾಲಯದ ಆದೇಶದ ಉಲ್ಲಂಘಿಸಿ, ನಿರಂತರ ನ್ಯಾಯಲಯದ ತೀರ್ಪಿನ ವಿರುದ್ಧ ಭಾಷಣ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಹೈಕೋರ್ಟ್ ಹಾಗೂ ಸಿಟಿ ಸಿವಿಲ್ ಕೋರ್ಟ್ ಈ ಮೊದಲೇ ಎಚ್ಚರಿಕೆ ನೀಡಿತ್ತು, ಆದರೆ, ಅದನ್ನೂ ಮೀರಿ ಭಾಷಣ ಮಾಡುತ್ತಿರುವ ತಿಮರೋಡಿ ಆಂಡ್ ಗ್ಯಾಂಗ್ ಗೆ ಇದೀಗ ಬಹುದೊಡ್ಡ ಸಂಕಷ್ಟ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನ್ಯಾಯಾಂಗ ನಿಂದನೆ ಮಾಡುತ್ತಿರುವುದರ ವಿರುದ್ಧ ಕ್ರಮದ ಕುರಿತು ಡಿ.ಜಿ. ಹಾಗೂ ಐಜಿಪಿ ) ಉನ್ನತ ಪೋಲೀಸ್ ಅಧಿಕಾರಿಗಳಿಗೆ ಸೂಚನೆಗೆ ಅರ್ಜಿ ದಾಖಲಾಗಿದ್ದು, ಭಾರೀ ಸಂಕಷ್ಟ ಎದುರಾಗಿದೆ. ಅಕ್ಟೋಬರ್ 09 ರಂದು ಈ ಕುರಿತುಆಕ್ಷೇಪಣೆ ಸಲ್ಲಿಸಲು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಸೂಚಿಸಿದೆ. ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ವಿಠಲ ಗೌಡ, ಸೋಮನಾಥ ನಾಯಕ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆಯೂ ಉತ್ತರ ನೀಡುವಂತೆ ನ್ಯಾಯಲಯ ಸೂಚಿಸಿದೆ