- ನವೆಂಬರ್ ತಿಂಗಳಲ್ಲಿ ಚುನಾವಣೆಗೆ ತಯಾರಿ
- ಅಡಕತ್ತರಿಯಲ್ಲಿ ಸಿಲುಕಿದ ರಾಜ್ಯ ಸರ್ಕಾರ
ಬೆಂಗಳೂರು: ಕರೋನಾ, ಮಳೆ, ಜನರ ಆತಂಕದ ನಡುವೆ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರ ಈಗ ಚುನಾವಣೆ ಬೇಡ ಎಂದು ಮನವಿ ಮಾಡಿದ್ದರೂ ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಚುನಾವಣೆ ನಡೆಸುವಂತೆ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ವಿಭಾಗೀಯ ಪೀಠಕ್ಕೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಈ ಮಾಹಿತಿ ನೀಡಿದರು. ಚುನಾವಣಾ ಆಯೋಗ ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದೆ. ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಬಹುದು ಎಂಬ ನಿಲುವು ತಿಳಿಸಿದ್ದಾರೆ. ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ಯೋಜಿಸಲಾಗಿದೆ ಎಂದು ಆಯೋಗದ ಪರ ನ್ಯಾಯಪೀಠಕ್ಕೆ ತಿಳಿಸಿದರು.