ಪಂಚಾಯಿತಿಗೊಂದು ಬಾರ್..? ಏನಿದು ವಿವಾದ!
– ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ವಿಚಾಕ್ಕೆ ಸಿಎಂ ಹೇಳಿದ್ದೇನು?
NAMMUR EXPRESS NEWS
ಗ್ಯಾರಂಟಿ ಯೋಜನೆಗಳ ಆರ್ಥಿಕ ಭಾರದಿಂದ ನಲುಗುತ್ತಿರುವ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆ ಮೂಲದಿಂದ ಹೆಚ್ಚಿನ ಆದಾಯ ಗಳಿಸಲು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿದೆ ಎನ್ನುವ ಸುದ್ದಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ನಮ್ಮ ಸರ್ಕಾರ ಮದ್ಯದ ಅಂಗಡಿ ತೆಗೆಯಲ್ಲ, ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಎಲ್ಲಾಗೊಂದಲಗಳಿಗೆ ತೆರೆ ಎಳೆದರು.
ಮತ್ತೊಂದೆಡೆ ಇದೇ ವಿಚಾರವಾಗಿ ರಾಮನಗರದ ಕುದೂರಿನಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ. ಹಳ್ಳಿಯಲ್ಲಿ ನಾವು ಬಾ ರ್ ತೆಗೆಯುವುದಿಲ್ಲ. ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾ ಗಳನ್ನು ತೆರೆಯಲಾಗುವುದು. ಕುಡಿಯುವುದನ್ನು ಯಾರೂ ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.