– ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ಮಗು ಸಾವು!
– ಟಾಟಾ ಎಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ದುರ್ಮರಣ!
– ದೇವನಹಳ್ಳಿ: ಬೈಕ್ಗಳ ನಡುವೆ ಡಿಕ್ಕಿ, ವ್ಯಕ್ತಿ ಸಾವು..!
– ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ದುರ್ಮರಣ!
– ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್: ಪ್ರಾಂಶುಪಾಲ ಸಸ್ಪೆಂಡ್
NAMMUR EXPRESS NEWS
ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ 4 ವರ್ಷದ ಮಗು ಸ್ಥಳದಲ್ಲೇ ದುರ್ಮರಣಹೊಂದಿದ ಘಟನೆ ತಾಲೂಕಿನ ಶ್ರೀನಿವಾಸ ಸಾಗರ ಕ್ರಾಸ್ ಬಳಿ ನಡೆದಿದೆ. ಕೆಪಿಸಿ ಗೋಣಿಚೀಲ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಮನೋಜ್, ಸಂತನ್ ದೇವಿ ಅವರ ಪುತ್ರಿ ಅಂಕುಶ್ (4) ಮೃತಪಟ್ಟ ಮಗು. ಸ್ಥಳದಲ್ಲಿ ಮೃತ ಅಂಕುಶ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಂತರ ಚಾಲಕ ಕಾರು ಸಹಿತ ಪರಾರಿಯಾಗಿದ್ದಾನೆ.
ಟಾಟಾ ಎಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ದುರ್ಮರಣ!
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೆವಾಡಿ ಗ್ರಾಮದ ಬಳಿ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಅನಿಲ್ ಪಾಟೀಲ್ (45) ಮತ್ತು ಅನಿತಾ ಪಾಟೀಲ್ (40) ಮೃತಪಟ್ಟಿದ್ದಾರೆ. ಇವರು ಮಹಾರಾಷ್ಟ್ರದ ಜತ್ತ ತಾಲೂಕಿನ ಶಿಗನಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಅಥಣಿಯಿಂದ ಶಿಗನಾಪುರಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತ ಇದಾಗಿದೆ.
ಬೈಕ್ಗಳ ನಡುವೆ ಡಿಕ್ಕಿ, ವ್ಯಕ್ತಿ ಸಾವು!
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ಎರಡು ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ದರ್ಶನ್ (25) ಮೃತ ವ್ಯಕ್ತಿ. ಘಟನೆಯಲ್ಲಿ ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋಲಾರದಿಂದ ಬೆಂಗಳೂರಿನತ್ತ ಚಲಿಸುತ್ತಿದ್ದ ಬೈಕ್ಗಳ ನಡುವೆ ಡಿಕ್ಕಿ ಹೊಡೆದಿದ್ದು, ಈ ವೇಳೆ ದರ್ಶನ್ ಟಿಪ್ಪರ್ ಅಡಿಕೆ ಬಿದ್ದ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ದುರ್ಮರಣ
2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು – ಹಾಸನ ಹೆದ್ದಾರಿಯ ಸೋಲೂರು ಗ್ರಾಮದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್: ಪ್ರಾಂಶುಪಾಲ ಸಸ್ಪೆಂಡ್ :
ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪ ಮತ್ತು ಎರಡನೇ ಮದುವೆಯಾದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.
ಎರಡನೇ ಪತ್ನಿಯೊಂದಿಗೆ ಸಿದ್ದಪ್ಪ ಇರುವ ಫೋಟೋ ಜಾಲತಾಣಗಳಲ್ಲಿ ಹರಿದಾಡಿವೆ. ಅಲ್ಲದೇ ಸಿದ್ದಪ್ಪ ವಿದ್ಯಾರ್ಥಿನಿಯರೊಂದಿಗೆ ಇರುವ ಫೋಟೋ, ವಿಡಿಯೋ, ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಡಿಡಿಪಿಯು ಸೋಮಶೇಖರ ಹೊಕ್ರಾಣಿ ನೇತೃತ್ವದ ತ್ರಿಸದಸ್ಯ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಲಾಗಿತ್ತು. ಈ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿ ರಾಜ್ಯ ನಿರ್ದೇಶಕರಿಗೆ ಪ್ರಾಥಮಿಕ ವರದಿ ನೀಡಿದ್ದು, ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರು ಲೈಂಗಿಕ ಕಿರುಕುಳ ನೀಡಿದ ಮತ್ತು ಎರಡನೇ ಮದುವೆಯಾದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ಕಾಯ್ದಿರಿಸಿ ಅವರನ್ನು ಅಮಾನತು ಮಾಡಲಾಗಿದೆ.