- ರೋಗ ನಿರೋಧಕ ಶಕ್ತಿ ಯಾವುದರಲ್ಲಿ ಹೆಚ್ಚು..?
- ಹಾಗಿದ್ರೆ ಈ ಸುದ್ದಿ ಪೂರ್ಣ ಓದಿ…
ಬೆಂಗಳೂರು: ಕರೋನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ಹೆಚ್ಚಾಗಿ ಸೇವಿಸಲು ಸಲಹೆ ನೀಡಿದೆ. ಈಗಾಗಲೇ ಜನತೆ ಕರೋನಾ ಭಯದಿಂದ ಆಯುರ್ವೇದ, ನೈಸರ್ಗಿಕ ಆಹಾರ ಪದ್ಧತಿಗೆ ಒಗ್ಗಿಕೊಂಡಿದ್ದಾರೆ. ಈ ನಡುವೆ ಸರ್ಕಾರ ಈ ಸಲಹೆ ನೀಡಿದೆ.
ದ್ರಾಕ್ಷಿ ಹಣ್ಣು, ಕಿತ್ತಳೆ ಹಣ್ಣು,ಮೋಸಂಬಿ ಹಣ್ಣು, ನಿಂಬೆ ಹಣ್ಣುಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ವೃದ್ದಿಸಲಿದೆ. ಜೊತೆಗೆ ಕೆಂಪು ದೊಣ್ಣೆ ಮೆಣಸಿನ ಕಾಯಿ, ಗೆಡ್ಡೆ ಕೋಸು, ಬೆಳ್ಳುಳ್ಳಿ, ಶುಂಠಿ ಕೂಡಾ ಆರೋಗ್ಯದಾಯಕ ಆಹಾರಗಳಾಗಿವೆ. ಅದೇ ರೀತಿಯಲ್ಲಿ ಮೊಸರು, ಬಾದಾಮಿ, ಸೂರ್ಯಕಾಂತಿ ಬೀಜ, ನಿಂಬೆ ಕಾಯಿ, ಅರಿಶಿಣ, ಗ್ರೀನ್ ಟೀ, ಪಪ್ಪಾಯಿ ಮತ್ತು ಕಿವಿಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಈಗಾಗಲೇ ಈ ಎಲ್ಲಾ ವಸ್ತುಗಳನ್ನು ಜನತೆ ಸೇವಿಸುತ್ತಿದ್ದಾರೆ.