ಒಕ್ಕಲಿಗ ಸಮುದಾಯಕ್ಕೆ ಸಾಲ ಸಿಗುತ್ತೆ!
– ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
– ಸ್ವ ಉದ್ಯೋಗ, ಶಿಕ್ಷಣ, ಕೃಷಿಗೆ ಸಾಲ ಸೌಲಭ್ಯ
NAMMUR EXPRESS NEWS
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾ ಒಕ್ಕಲಿಗ, ದಾಸ್ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಯಾವ ಯಾವ ಸಾಲ?
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಬಯಸುವವರು.
ಶೈಕ್ಷಣಿಕ ಯೋಜನೆಗೆ ಯಾವುದೇ ಅಂತಿಮ ದಿನಾಂಕ ಇಲ್ಲ.
ಸೇವಾಸಿಂಧು ಪೋರ್ಟಲ್
(https://www.sevasindhu.karnataka.gov.in),
2 (https://gramaone.karnataka.gov.in)
ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಕೌಶಲ್ಯ ತಂತ್ರಾಂಶ
(https://www.kaushalkar.com) anewo
ಅ.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.