ಥರಗುಟ್ಟುವ ಚಳಿ ಶುರು..!
– ಸಂಜೆಯಾಗುತ್ತಲೇ ಹೆಚ್ಚಾದ ಚಳಿ
– ಅ.29ರಿಂದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಾರಿ ಮಳೆ?
– ಬೆಳಿಗ್ಗೆಯಿಂದ ಸಂಜೆವರೆಗೂ ಉರಿ ಬಿಸಿಲು..!
NAMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ಒಣಹವೆ ಮುಂದುವರಿದಿದ್ದು, ಜತೆ ಜತೆಗೆ ಕೆಲವೆಡೆ ಥರಗುಟ್ಟುವ ಚಳಿ ಆರಂಭಗೊಂಡಿದೆ.
ರಾಜಧಾನಿ ಸೇರಿ ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ. ಇನ್ನೂ ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಉಷ್ಣಾಂಶ 1-2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಅಷ್ಟೇ ಅಲ್ಲದೇ ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಿಕ್ಕನಹಳ್ಳಿಯಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ.
ಅ.29 ರಿಂದ ನ.1ರವರೆಗೆ ಭಾರೀ ಮಳೆ :
ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.