ನ.8ಕ್ಕೆ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ
– 50ಕ್ಕೂ ಹೆಚ್ಚಿನ ಕಂಪನಿಗಳಿಂದ 5000ಕ್ಕೂ ಅಧಿಕ ಯುವಜನರಿಗೆ ಉದ್ಯೋಗಾವಕಾಶ
– ಯಾರಿಗೆಲ್ಲ ಉದ್ಯೋಗ..ಇಲ್ಲಿದೆ ಮಾಹಿತಿ
NAMMUR EXPRESS NEWS
ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ನವೆಂಬರ್ 8ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ರಾಜ್ಯದ 50 ಕ್ಕೂಹೆಚ್ಚಿನ ಬೃಹತ್ ಕಂಪನಿಗಳು ಭಾಗವಹಿಸುತ್ತಿವೆ. 5000ಕ್ಕೂ ಹೆಚ್ಚಿನ ವಿದ್ಯಾವಂತ ಯುವಕರಿಗೆ ಉದ್ಯೋಗಾವಕಾಶ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಆರ್.ಸೆಲ್ವಮಣಿ ಹೇಳಿದ್ದಾರೆ. ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವ ನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹ ಯೋಗದಲ್ಲಿ ಬೃಹತ್ ಉದ್ಯೋಗ ಮೇಳದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾ ದವರು, ಐಟಿಐ, ಡಿಪ್ಲೋಮಾ ಸೇರಿದಂತೆ ಎಲ್ಲ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ.
ಆನ್ಲೈನ್ ಮೂಲಕ ಹೆಸರು ನೋಂದಾಯಿಸಬಹುದು. ಅಲ್ಲದೇ ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಂಡು ಭಾಗವಹಿಸಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದರು. ಈ ಮೇಳದಿ೦ದಾಗಿ ಭವಿಷ್ಯದ ದಿನಗಳಲ್ಲಿ ಪ್ರತಿಭಾವಂತ ಪದವೀಧರ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಅದರ ಪ್ರಾಥಮಿಕ ಪರಿಚಯವಾಗಲಿದೆ. ಅನೇಕ ವಿಷಯಗಳಲ್ಲಿ ಅಲ್ಪಾ ವಧಿ ಮತ್ತು ದೀರ್ಘಾವಧಿ ತರಬೇತಿಗಳ ಮಾಹಿತಿಗಳು ದೊರೆಯಲಿವೆ. ಸ್ವಯಂ ಉದ್ಯೋಗ ಆರಂಭಿಸಲಿಚ್ಛಿಸು ವವರಿಗೆ ಸೂಕ್ತ ಮಾರ್ಗದರ್ಶನ ದೊರೆಯಲಿದೆ ಎಂದು ಹೇಳಿದರು.
ಸಾಫ್ಟ್ವೇರ್, ಆಟೋಮೊಬೈಲ್, ಫೌಂಡ್ರಿ ರಿಟೇಲ್ ಫಾರ್ಮಸಿ, ಹಣಕಾಸು ವಿಮೆ, ಗಾರ್ಮಂಟ್ಸ್ ಸೇರಿದಂತೆ 50ಕ್ಕೂ ಹೆಚ್ಚಿನ ಸ್ಥಳೀಯ ಮತ್ತು ರಾಜ್ಯ, ರಾಷ್ಟ್ರ ಮಟ್ಟದ ಬೃಹತ್ ಕಂಪನಿಗಳು ಭಾಗವಹಿಸಲಿವೆ.
ರಾಜ್ಯ ಈ ಮೇಳದಲ್ಲಿ ಅಪ್ರೆಂಟಿಸ್ಶಿಪ್ ತರಬೇತಿ ಪಡೆ ಯಲಿಚ್ಛಿಸುವವರು, ಕೌಶಲ್ಯ ತರಬೇತಿ ಪಡೆಯುವವರು, ಆಯ್ಕೆಗೊಂಡ ನಂತರ ನಿಗದಿಪಡಿಸಿದ ವಿಷಯದಲ್ಲಿ ತರಬೇತಿ ಪಡೆಯಲಿಚ್ಚಿಸುವವರು ಸ್ವಉದ್ಯೋಗ ಆರಂಭಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು. ಇದೇ ಸಂದರ್ಭದಲ್ಲಿ ಆಸಕ್ತರಿಗೆ ಬ್ಯಾಂಕುಗಳ ಸಾಲ ಸೌಲಭ್ಯ ಮುಂತಾದ ಮಾಹಿತಿಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಉದ್ಯೋಗ ಮೇಳದಲ್ಲಿ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಭಾಗವಹಿಸುವ ಉದ್ಯೋಗಾ ಕಾಂಕ್ಷಿಗಳು, ಕೈಗಾರಿಕೋದ್ಯಮಿಗಳು ಮುಂಚಿತವಾಗಿ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.