ಕನ್ನಡ ರಾಜ್ಯೋತ್ಸವ ಆಚರಣೆ: ನಿಯಮಗಳೇನು?
– ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸಬೇಕು
– ಕೆಂಪು, ಹಳದಿ ಬಣ್ಣದ ರಂಗೋಲಿ ಹಾಕೋದು ಕಡ್ಡಾಯ
NAMMUR EXPRESS NEWS
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ದಪಡಿಸಲಾಗಿದೆ. ನ.1 ರಂದು ಎಲ್ಲಾ ಜಿಲ್ಲಾಧ್ಯಂತ ಎಲ್ಲ ಮನೆಗಳ ಮುಂದ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯ ಜೊತೆಗೆ ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯದ ರಂಗೋಲಿ ಬಿಡಿಸುವುದು. ನ.1 ರ ಬೆಳಗ್ಗೆ 9 ಕ್ಕೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರವಾಗಲಿದ್ದು ಆ ಸಮಯದಲ್ಲಿ ಜಿಲ್ಲೆಯ ಎಲ್ಲ ನಾಗರಿಕರು ಎದ್ದು ನಿಂತು ಗೌರವ ಸಲ್ಲಿಸಬೇಕು. ಸಂಜೆ ಐದಕ್ಕೆ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟಗಳನ್ನು ಹಾರಿಸುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು.
ನ.1ರ ಸಂಜೆ ಏಳಕ್ಕೆ ಎಲ್ಲ ಮನೆಗಳು, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸಬೇಕು. ನಾಗರಿಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ನಾಡು ನುಡಿಯ ಅಭಿಮಾನದೊಂದಿಗೆ ಪ್ರತಿಯೊಬ್ಬರೂ ಇದಕ್ಕೆ ಕೈಜೋಡಿಸಬೇಕೆಂದು ಸರ್ಕಾರದ ಪ್ರಕಟಣೆ ತಿಳಿಸಿದೆ.