ಗಾಂಜಾ ಅಮಲಲ್ಲಿ ತಾಯಿ ಮೇಲೆ ರೇಪ್, ಕೊಲೆ!
– ಛೇ… ಇದೆಂತಾ ಕ್ರೂರ ಕೃತ್ಯ: ಕಟೀಲು ಸಮೀಪ ಘಟನೆ
– ವಾಟ್ಸಾಪ್ ಮೆಸೇಜ್ ಮಾಡಿ ಹಣ ದೋಚಿದ ಕಳ್ಳರು
– ಫೇಸ್ಬುಕ್ ಮೂಲಕ ಮಹಿಳೆಗೆ ವಂಚನೆ
– ಗುಡ್ಡ ಕುಸಿದು ಮೂವರ ದುರ್ಮರಣ
NAMMUR EXPRESS NEWS
ಮಂಗಳೂರು: ಗಾಂಜಾ ಅಮಲಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಯತ್ನ ಮಾಡಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ನಡೆದಿದೆ. ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಚ್ಚೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ. ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಜೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ವಾಟ್ಸಾಪ್ ಮೆಸೇಜ್ ಮಾಡಿ ಹಣ ದೋಚಿದ ಕಳ್ಳರು!
ಕುಂದಾಪುರ : ಅರೆಕಾಲಿಕ ಕೆಲಸ ಇದೆ ಎಂದು ವಾಟ್ಸಾಪ್ನಲ್ಲಿ ಮೆಸೇಜ್ ಮಾಡಿ 1.6 ಲಕ್ಷ ರೂ. ವಂಚನೆ ಮಾಡಿದ ಘಟನೆ ಕುಂದಾಪುರದಲ್ಲಿ ನಡೆದಿದೆ ಶ್ವೇತಾ (35) ಕುಂದಾಪುರ ಅವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಗಳು ವಾಟ್ಸಪ್ ಮೆಸೆಜ್ ಮಾಡಿ ಪಾರ್ಟ್ ಟೈಮ್ ಜಾಬ್ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಬೇರೆ ಬೇರೆ ಲಿಂಕ್ಗಳನ್ನು ಕಳುಹಿಸಿ ಟಾಸ್ಕ್ಗಳನ್ನು ನೀಡಿ ಟಾಸ್ಕ್ಗಳಿಗಾಗಿ ಹಣ ಪಾವತಿಸುವಂತೆ ಹೇಳಿ ಹಂತ ಹಂತವಾಗಿ 1.63 ಲಕ್ಷರೂ. ಪಡೆದು ಉದ್ಯೋಗ ನೀಡದೇ ಪಡೆದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ ಮೂಲಕ ಮಹಿಳೆಗೆ ಲಕ್ಷ ವಂಚನೆ!
ಬೆಳ್ತಂಗಡಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ವ್ಯಕ್ತಿಯೋರ್ವ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಉಜಿರೆ ಸಮೀಪ ಗುರಿಪಳ್ಳದಲ್ಲಿ ಸಂಭವಿಸಿದ್ದೆ ಸತೀಶ್ ಗೌಡ ಹಣ ಕಳೆದುಕೊಂಡ ವ್ಯಕ್ತಿ. ಇವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಫೇಸ್ಬುಕ್ ಮೂಲಕ ಮಹಿಳೆಯೊಬ್ಬರ ಪರಿಚಯವಾಗಿದ್ದು, ಚಾಟಿಂಗ್ ಮೂಲಕ ಅವರ ವಿಶ್ವಾಸ ಗಳಿಸಿ ವಿವಿಧ ಕಾರಣಗಳನ್ನು ನೀಡಿ ಬೇರೆ ಬೇರೆ ಖಾತೆಗಳಿಗೆ ಒಟ್ಟು 6,96,500 ರೂ. ಹಣ ವರ್ಗಾಯಿಸಿಕೊಂಡು ಬಳಿಕ ವಂಚಿಸಿರುವುದಾಗಿ ದ.ಕ. ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುಡ್ಡ ಕುಸಿದು ಮೂವರ ದುರ್ಮರಣ
ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.