ಕಡೂರು: ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವು
– ಕೊಪ್ಪ: ನಾಯಿ ಕಾಟ: ಹಲವರಿಗೆ ಕಚ್ಚಿದ ನಾಯಿಗಳು!
-ಅಜ್ಜಂಪುರ: ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು
NAMMUR EXPRESS NEWS
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಚೇರಿ ಕೋಡಿಹಳ್ಳಿಯಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಲಚ್ಚಾನಾಯ್ಕ (80) ಸಾವನ್ನಪ್ಪಿದ ವೃದ್ಧ, ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ನಿನ್ನೆ ಏಕಾಏಕಿಯಾಗಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಹಲವೆಡೆ ಮಳೆಯಾಗಿದ್ದು, ಅಕಾಲಿಕ ಮಳೆಗೆ ರೈತರು ಕಷ್ಟಪಟ್ಟು ಬೆಳೆದ ಭತ್ತ ಮೆಣಸಿನಕಾಯಿ ಬೆಳೆಗಳಿಗೆ ಹಾನಿಯಾಗಿವೆ.ಆದರೆ ರಾತ್ರಿ ಸುರಿದ ಮಳೆಗೆ ಸಂಪೂರ್ಣವಾಗಿ ಬೆಳೆಗಳು ನೆಲಕಚ್ಚಿವೆ. ಬರಗಾಲದ ಮಧ್ಯೆ ಅಲ್ಪಸ್ವಲ್ಪ ಬೆಳೆ ಬೆಳೆದಿದ್ದ ರೈತರಿಗೆ ಸಂಕ ಷ್ಟ ಎದುರಾಗಿದೆ.
ಕೊಪ್ಪ ಪಟ್ಟಣದಲ್ಲಿ ಬೀದಿ ನಾಯಿ ಭಯ!
ಕೊಪ್ಪ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಅದನ್ನು ತಡೆಗಟ್ಟಲು ಪಟ್ಟಣ ಪಂಚಾಯಿತಿಯವರು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಬೆಳಿಗ್ಗೆ, ಸಂಜೆ ಹೊತ್ತಿಗೆ ವಾಯು ವಿಹಾರ ಸಂದರ್ಭದಲ್ಲಿ ಬೀದಿ ನಾಯಿಗಳು ವೃದ್ಧರ ಮೇಲೆ ಎರಗುತ್ತವೆ. ಬೈಕ್ ಸವಾರರನ್ನು ಅಟ್ಟಿಸಿಕೊಂಡು ಬರುತ್ತವೆ. ಇದರಿಂದ ತೀವ್ರ ಸಮಸ್ಯೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಹಲವೆಡೆ ಬೀದಿನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಕ್ಕಳು ಓಡಾಡಲು ಭಯಪಡುತ್ತಿದ್ದಾರೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು
ಅಜ್ಜಂಪುರ: 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಉಷಾ (13) ಮೃತ ಪಟ್ಟ ವಿದ್ಯಾರ್ಥಿನಿ.ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಉಷಾ, ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಕೆಯನ್ನ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಸಾವಿಗೀಡಾಗಿದ್ದಾಳೆ. ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ ಪ್ರಾಂಶುಪಾಲ ಶಿವರಾಜ್ ಸ್ಪಷ್ಟಪಡಿಸಿದ್ದು.