ಮಲೆನಾಡಿನಲಿ ಚಳಿ ಚಳಿ…!
– ದೀಪಾವಳಿ ಹಬ್ಬ ಸಂಭ್ರಮದ ನಡುವೆ ಚಳಿ ಕಾಟ
– ಚಳಿಗಾಲದ ಅರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು?
NAMMUR EXPRESS NEWS
ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಚಳಿಯ ಅಬ್ಬರ ಜೋರಾಗಿದೆ. ಪ್ರತಿವರ್ಷದ ವಾಡಿಕೆ ಪ್ರಮಾಣ ಕ್ಕಿಂತಲೂ ಈ ಬಾರಿ ಹೆಚ್ಚು ಚಳಿ ಅಬ್ಬರಿಸುತ್ತಿದ್ದು ಮುಂದಿನ ಹಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.ಇದರ ಮಧ್ಯ ಶೀತಗಾಳಿಯ ಎಚ್ಚರಿಕೆ ಸಹ ನೀಡಲಾಗಿದ್ದು ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಮತ್ತಷ್ಟು ಚಳಿ ಹೆಚ್ಚಾಗುವ ಸಾಧ್ಯತೆ ಇದೆ. 6 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ.
ವಾಡಿಕೆಯಂತೆ ನವೆಂಬರ್ ಅಂತ್ಯ ದಿಂದಲೇ ಚಳಿಗಾಲ ಶುರುವಾಗುತ್ತದೆ. ಆದರೆ ವಾತಾವರಣದಲ್ಲಿನ ಏರುಪೇರು ಕಾರಣದಿಂದಾಗಿ ಇಷ್ಟುದಿನ ಚಳಿಯೇ ಇರಲಿಲ್ಲ. ಆದರೆ, ಇದೀಗ, ಮುಂಜಾನೆ ಚಳಿಯ ತೀವ್ರತೆ ಹೆಚ್ಚುತ್ತಿದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಸಾಕಷ್ಟು ಏರಿಳಿತ ಉಂಟಾಗುತ್ತಿದೆ. ಬೆಳಗ್ಗಿನ ಹೊತ್ತು ಬಿಸಿಲು ಇದ್ದರೂ ಮಧ್ಯಾಹ್ನದವರೆಗೆ ವಾತಾವರಣ ಸ್ವಲ್ಪ ಮಟ್ಟಿಗೆ ತಣ್ಣಗಿರುತ್ತದೆ. ಇನ್ನು ರಾತ್ರಿ ಹೊತ್ತಿನಲ್ಲಿ ಇಬ್ಬನಿ ಬೀಳಲು ಶುರುವಾಗಿದ್ದು, ಜ್ವರ, ಶೀತ-ಕೆಮ್ಮು ಮುಂತಾದ ಸಾಂಕ್ರಾಮಿಕ ರೋಗಬಾಧೆಯ ಭೀತಿ ಎದುರಾಗಿದೆ.
ಚಳಿಗಾಲದಲ್ಲಿ ತಾಪಮಾನ ವೈಪರೀತ್ಯ ಉಂಟಾಗುವುದರಿಂದ ಬ್ಯಾಕ್ಟಿರಿಯಾ, ವೈರಸ್ಗಳ ಬೆಳವಣಿಗೆ ಹೆಚ್ಚಾಗಿ ರೋಗನಿರೋಧಕ ಶಕ್ತಿ ಕುಂದುವ ಅಪಾಯವಿರುತ್ತದೆ. ಇದರಿಂದಾಗಿ, ನಮಗೆ ನೆಗಡಿ, ಕೆಮ್ಮು ಗಂಟಲು ನೋವು, ಉಸಿರಾಟದ ಸಮಸ್ಯೆ, ಮೂಗು ಕಟ್ಟುವಿಕೆ, ಎದೆಬಿಗಿತ, ಚರ್ಮ ಒಣಗುವಿಕೆ, ಅಲರ್ಜಿ, ಅಸ್ತಮಾ ಹೀಗೆ ವಿವಿಧ ಸಮಸ್ಯೆಗಳು ಉದ್ಭವಿಸಬಹುದು. ಚಳಿಗಾಲದಲ್ಲಿ ದೊಡ್ಡವರಿಗಿಂತ ಮಕ್ಕಳಿಗೆ ವೈರಾಣು ಸೋಂಕು, ನೆಗಡಿ, ಶೀತ, ನ್ಯೂಮೋ ನಿಯಾ ಸಮಸ್ಯೆ ಹೆಚ್ಚು. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅನುಸರಿಸುವುದು ಮುಖ್ಯ.
ಚಳಿಗಾಲದಲ್ಲಿ ಸೇವಿಸಬೇಕಾದ ಆಹಾರ ಏನು?
ನಾರಿನ ಅಂಶ ಇರುವ ಆಹಾರ ಒಳ್ಳೆಯದು ಚಳಿಗಾಲದಲ್ಲಿ ಹಸಿವು ಹೆಚ್ಚು. ಈ ವೇಳೆ ಹುಳಿಯಿರುವ ತರಕಾರಿ, ಸೌತೆಕಾಯಿ, ಕುಂಬಳಕಾಯಿ, ಸೊರೆಕಾಯಿ ಒಳ್ಳೆಯದು.ನಾರಿನ ಅಂಶ ಇರುವ ಆಹಾರಕ್ಕೆ ಆದ್ಯತೆ ನೀಡಬೇಕು. ಮಾಂಸ, ಮೊಟ್ಟೆ ಕೂಡ ಉತ್ತಮ. ಹಣ್ಣುಗಳಲ್ಲಿ ದ್ರಾಕ್ಷಿ, ಕಿತ್ತಳೆ, ಮುಸುಂಬಿ, ನೆಲ್ಲಿಕಾಯಿ ಆಹಾರ ಬೇಗ ಜೀರ್ಣವಾಗುತ್ತದೆ. ಚಳಿ ವೇಳೆ ದೇಹದ ಉಷ್ಣತೆ ದೇಹದೊಳಗೇ ಇರುತ್ತದೆ. ಬೆಳಗ್ಗೆ ಎದ್ದ ಕೂಡಲೇ ಮತ್ತು ರಾತ್ರಿ ಮಲಗುವ ವೇಳೆ 4ರಿಂದ 5 ಲೋಟ ಬಿಸಿ ನೀರು ಕುಡಿಯಿರಿ. ಶುಂಠಿ, ಕಾಳುಮೆಣಸು ಜೀರ್ಣ ಕ್ರಿಯೆ ಸರಾಗ ಮಾಡಿ ದೇಹವನ್ನು ರಕ್ಷಿಸುತ್ತದೆ. ಬಾದಾಮಿ, ಆಕ್ರೂಟ್, ಬ್ಲ್ಯಾಕ್ ಚೆರಿ ಒಳ್ಳೆಯದು. ಇದರಲ್ಲಿ ಪ್ರೊಟೀನ್, ವಿಟಮಿನ್ ಇರುತ್ತದೆ.