ಮುರುಘಾಶ್ರೀಗೆ ಸಿಕ್ತು ಜಾಮೀನು ಭಾಗ್ಯ!
– 14 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ
– ದಾವಣಗೆರೆ ಶಿವಯೋಗಿ ಮಂದಿರದ ಕಡೆ ಪಯಣ ಬೆಳೆಸಿದ ಸ್ವಾಮೀಜಿ
NAMMUR EXPRESS NEWS
ಚಿತ್ರದುರ್ಗ : ಪೋಕಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಮುರುಘಾಶ್ರೀಗೆ ಜಾಮೀನು ದೊರೆತಿದ್ದು, ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ. ಮಠದ ಹಾಸ್ಟೆಲ್ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿ, ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು ಜೈಲು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ನ, 8ರಂದು ಜಾಮೀನು ನೀಡಿತ್ತು. ಹೀಗಾಗಿ ಇಂದು(ನ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ನೇರವಾಗಿ ದಾವಣಗೆರೆ ಕಡೆ ಹೊರಟಿದ್ದಾರೆ. ದಾವಣಗೆರೆ ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗಿ ಮಂದಿರಕ್ಕೆ ತೆರಳಿ ಜಯದೇವ ಸ್ವಾಮೀಜಿ ಗದ್ದುಗೆಗೆ ನಮಸ್ಕರಿಸಲಿದ್ದಾರೆ. ಚಿತ್ರದುರ್ಗ ಪ್ರವೇಶ ಇಲ್ಲದಿರುವುದರಿಂದ ಮುರುಘಾಶ್ರೀಗಳು ಶಿವಯೋಗಿ ಮಂದಿರದಲ್ಲೇ ಉಳಿದುಕೊಳ್ಳುವ ಸಾಧ್ಯತೆಗಳಿವೆ.