ಶಬರಿಮಲೆ ಯಾತ್ರೆ ಶುರು!
– ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಓಪನ್
– ಮಾಲೆ ಹಾಕುವ ಭಕ್ತರು ಸಜ್ಜು: ಎರಡು ತಿಂಗಳು ಅವಕಾಶ
NAMMUR EXPRESS NEWS
ತಿರುವನಂತಪುರ: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಇನ್ನು ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಕರ್ನಾಟಕ, ಕೇರಳ ಸೇರಿದಂತೆ ದೇಶದ ವಿವಿಧ ಕಡೆ ಅಯ್ಯಪ್ಪ ಮಾಲೆ ಧರಿಸಿ ವೃತ ಆಚರಿಸಿ ಶಬರಿಮಲೆ ಹೋಗುತ್ತಾರೆ. ಇದು ಹಿಂದೂ ಧರ್ಮದಲ್ಲಿ ಪವಿತ್ರ ಯಾತ್ರೆಯಾಗಿದೆ.
ಮೋದಿ ಮತ್ತೆ ಪ್ರಧಾನಿಯಾಗಲು ಕರಂದ್ಲಾಜೆ ಅಯ್ಯಪ್ಪ ಯಾತ್ರೆ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.