ಜಾನುವಾರು ಕದ್ದು ಸಾಗಾಟ: ಅರೆಸ್ಟ್!
– ಹೆಬ್ರಿಯಲ್ಲಿ ಘಟನೆ: ಇಬ್ಬರು ಪೊಲೀಸ್ ವಶಕ್ಕೆ
– ಕಡಬ:ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
– ಮಂಗಳೂರು: 70 ಲಕ್ಷ ರೂ ಅಕ್ರಮ ಚಿನ್ನ ವಶ
– ಉಡುಪಿ ಕೊಲೆ: ವ್ಯಕ್ತಿ ವಿರುದ್ಧ ಸುಮೋಟೋ ಕೇಸ್
NAMMUR EXPRESS NEWS
ಹೆಬ್ರಿ : ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಳವುಗೈದು ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಹೆಬ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ.18ರ ಮುಂಜಾನೆ 3 ಗಂಟೆಗೆ ಬೇಳಾರ್ ಬಳಿ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್ ಠಾಣೆಯ ತನಿಖೆ ವಿಭಾಗದ ಎಸ್ಐ ಮಹಾಂತೇಶ್ ನೇತೃತ್ವದ ತಂಡ ಆರೀಫ್ ಮತ್ತು ಮೊಹಮ್ಮದ್ ಮುಜಾಮಿರ್ ಎಂಬವರನ್ನು ವಶಕ್ಕೆ ಪಡೆದಿದೆ.
ನಾಡ್ತಾಲು ಗ್ರಾಮದ ನೆಲ್ಲಿಕಟ್ಟೆ ಬಸ್ ನಿಲ್ದಾಣದ ಬಳಿ ಮಲಗಿದ್ದ ಜಾನುವಾರುಗಳನ್ನು ಕಳವುಗೈದು ಆರೀಶ ಮತ್ತು ಹಸನಬ್ಬ ರಫೀದ್ ಸಫಾನ್ ಎಂಬುವವರು ಗೂಡ್ಸ್ನಲ್ಲಿ ಸಾಗಾಟ ಮಾಡುತ್ತಿದ್ದರು. ಪೊಲೀಸರು ಗೂಡ್ಸ್ ಅನ್ನು ತಡೆದು ನಿಲ್ಲಿಸುವಾಗ ಆರೋಪಿಗಳು ಗೂಡ್ಸ್ ಬಿಟ್ಟು ಪರಾರಿಯಾಗಿರುತ್ತಾರೆ. ಆಪಾದಿತರಿಗೆ ಸ್ಕೂಟಿಯಲ್ಲಿ ಎಸ್ಕಾರ್ಟ್ ಮಾಡುತ್ತಿದ್ದ ಆರೀಫ್ ಮತ್ತು ಮೊಹಮ್ಮದ್ ಮುಜಾಮಿರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಇವರು ಜನರ ಮತ್ತು ಪೊಲೀಸರ ಇರುವಿಕೆಯ ಬಗ್ಗೆ ಖಾತರಿ ಮಾಡಿಕೊಂಡು ಫೋನ್ ಕರೆಯ ಮೂಲಕ ಮಾಹಿತಿ ನೀಡುತ್ತಿದ್ದರು. ಗೂಡ್ಸ್ ವಾಹನದಲ್ಲಿ ಒಟ್ಟು 17 ಜಾನುವಾರುಗಳಿದ್ದು ಒಂದು ಜಾನುವಾರು ಮೃತಪಟ್ಟಿರುತ್ತದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
ಕಡಬ: ಬೊಲೆರೋ ಕಾರೊಂದು ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ. ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಅವರು ಮನೆಯವರ ಜೊತೆಗೆ ಕಾರ್ಯಕ್ರಮದ ನಿಮಿತ್ತ ವಾಹನದಲ್ಲಿ ಧರ್ಮಸ್ಥಳದತ್ತ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ವಾಹನದಲ್ಲಿ ಮಗು ಸಹಿತ ಮೂರು ಮೂರು ಮಂದಿ ಪ್ರಯಾಣಿಸುತ್ತಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ 70 ಲಕ್ಷ ರೂ ಚಿನ್ನ ವಶ
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರು ಚಿನ್ನವನ್ನು ಟ್ರಾಲಿ ಬ್ಯಾಗ್ನಲ್ಲಿ ರಾಡ್ಗಳ ರೂಪದಲ್ಲಿ ಮರೆಮಾಡಿರುವುದು ಮತ್ತು ಗಡಿಯಾರ, ಬಾಲ್-ಪಾಯಿಂಟ್ ಪೆನ್, ಹೇರ್ ಟ್ರಿಮ್ಮರ್ಗಳಲ್ಲಿ ಮರೆ ಮಾಡಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇವರಿಂದ 322 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಅದರ ಮೌಲ್ಯ ರೂ. 18,17,718/- ಎಂದು ಅಂದಾಜಿಸಲಾಗಿದೆ.
ಉಡುಪಿ ಕೊಲೆ: ಪೋಸ್ಟ್ ಮಾಡಿದವನ ಮೇಲೆ ಕೇಸ್
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾನೆ. ಈ ಶಿವಮೊಗ್ಗ ಹಿನ್ನೆಲೆ ಮೂಲದ ಹಫೀಜ್ ಮೊಹದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾನೆ