ಬಿರಿಯಾನಿ ತಿಂದವರು ಆಸ್ಪತ್ರೆಗೆ!
– ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥರಾದರು
– ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಘಟನೆ
NAMMUR EXPRESS NEWS
ಕಡೂರು: ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿ 17ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದ್ದು, ಅಸ್ವಸ್ಥರಾದವರನ್ನು ಕಡೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರವಂಜಿ ಗ್ರಾಮದಲ್ಲಿ ಭಾನುವಾರ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿ ಸೇವಿಸಿದ ಕೆಲವರಲ್ಲಿ ಸೋಮವಾರ ವಾಂತಿ- ಭೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡರು. ಕೂಡಲೇ ಗ್ರಾಮಸ್ಥರು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಡೂರು ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದಾರೆ.